ಬೆಂಗಳೂರು: 2007ರ ಚೊಚ್ಚಲ ವಿಶ್ವಕಪ್ ಗೆಲುವಿನ ಬಳಿಕ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಎಂದೂ ಮರೆಯದ ಪಂದ್ಯವೆಂದರೆ ಅದು, 2016ರ ಟಿ20 ವಿಶ್ವಕಪ್. ಭಾರತ(India vs Bangladesh ICC World T20 2016) ತಂಡ ಬಾಂಗ್ಲಾದೇಶ(MS Dhoni’s last-ball HeroicsMS Dhoni’s last-ball Heroics) ವಿರುದ್ಧ ಅತ್ಯಂತ ರೋಚಕವಾಗಿ 1 ರನ್‌ಗಳಿಂದ ಜಯ ಸಾಧಿಸಿತ್ತು. ಇದನ್ನು ಮರೆಯಲು ಸಾಧ್ಯವೇ ಇಲ್ಲ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 7 ವಿಕೆಟ್ಗೆ 146 ರನ್ ಬಾರಿಸಿತು. ಸಾಮಾನ್ಯ ಮೊತ್ತದ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 19.3 ಓವರ್‌ಗಳಲ್ಲಿ 145 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡು ಆರಾಮಾಗಿತ್ತು. ಆದರೆ ಮುಂದಿನೆರಡು ಎಸೆತಗಳಲ್ಲಿ ಹಾರ್ದಿಕ್ ಪಾಂಡ್ಯ ಬಾಂಗ್ಲಾದ ಸತತ 2 ವಿಕೆಟ್ ಎಗರಿಸಿದರು. ಕೊನೆಯ ಎಸೆತದಲ್ಲಿ ಬಾಂಗ್ಲಾಕ್ಕೆ ಗೆಲುವಿಗೆ ಎರಡು ರನ್ ಗಳಿಸಬೇಕಾದ ಒತ್ತಡ ಎದುರಾಗಿತ್ತು.
ಒಂದು ರನ್ ಗಳಿಸುತ್ತಿದ್ದರೂ ಪಂದ್ಯವನ್ನು ಟೈ ಮಾಡಬಹುದಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಕೊನೆಯ ಎಸೆತವನ್ನು ಶುವಗತಗೆ ಬಾರಿಸಲು ಆಗಲಿಲ್ಲ. ಚೆಂಡು ಕೀಪರ್ ಕೈ ಸೇರಿತು. ಆದರೂ ಇನ್ನೊಂದು ತುದಿಯಲ್ಲಿದ್ದ ಮುಸ್ತಫಿಜುರ್ ರೆಹಮಾನ್ ರನ್ ಗಳಿಸಲು ಓಡಿದರು. ಈ ಸಂದರ್ಭದಲ್ಲಿ ಧೋನಿ ತೆಗೆದುಕೊಂಡ ನಿರ್ಧಾರ ಅತ್ಯಂತ ಅಚ್ಚರಿಯದ್ದಾಗಿತ್ತು. ಅವರು ದೂರದಿಂದಲೇ ಚೆಂಡನ್ನು ವಿಕೆಟ್‌ನತ್ತ ಎಸೆಯದೇ, ಅತಿ ವೇಗವಾಗಿ ಓಡಿಬಂದು ನೇರವಾಗಿ ಬೇಲ್ಸ್ ಎಗರಿಸಿದರು. ಕೂದಲೆಳೆ ಅಂತರದಲ್ಲಿ ಮುಸ್ತಫಿಜುರ್ ರನೌಟಾದರು. ಭಾರತಕ್ಕೆ 1 ರನ್ ಜಯ ಲಭಿಸಿತು. ಧೋನಿ ಜತೆಗೆ ಪಾಂಡ್ಯ ಕೂಡ ಗೆಲುವಿನ ಹೀರೊ ಎನಿಸಿಕೊಂಡರು. ಅಂದಿನ ಈ ರನೌಟ್ ವಿಡಿಯೊವನ್ನು ಈ ಬಾರಿಯ ಟೂರ್ನಿಗೂ ಮುನ್ನ ಐಸಿಸಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಮಾಧ್ಯಮಗಳಲ್ಲಿ ಹಂಚಿಕೊಂಡಿದೆ.
ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?
ಶ್ರೀಶಾಂತ್ ಕ್ಯಾಚ್; ಭಾರತಕ್ಕೆ ವಿಶ್ವಕಪ್
2007ರ ಟಿ20 ವಿಶ್ವಕಪ್ ಫೈನಲ್ ಸೆ.24ರಂದು ಜೊಹಾನ್ಸ್‌ಬರ್ಗ್‌ನಲ್ಲಿ ನಡೆದಿತ್ತು. ಅಲ್ಲಿ ಭಾರತ ರೋಚಕವಾಗಿ 5 ರನ್‌ಗಳಿಂದ ಗೆದ್ದಿದ್ದು ಮಾತ್ರವಲ್ಲ, ಟಿ20 ಇತಿಹಾಸದ ಮೊದಲ ವಿಶ್ವಕಪ್ಪನ್ನು ಜೈಸಿತು. ಕೊನೆಯ ಓವರ್‌ನಲ್ಲಿ ಪಾಕಿಸ್ತಾನಕ್ಕೆ 13 ರನ್ ಬೇಕಿತ್ತು. ಜೋಗಿಂದರ್ ಶರ್ಮ ಈ ಓವರ್ ಎಸೆದಿದ್ದರು. ಪಾಕ್ ಕೈಯಲ್ಲಿ ಇದ್ದಿದ್ದು ಒಂದು ವಿಕೆಟ್. ಜೋಗಿಂದರ್ ಶರ್ಮಾರ ಎರಡನೇ ಎಸೆತವನ್ನು ಸಿಕ್ಸರ್ಗೆ ಅಟ್ಟಿದ ಮಿಸ್ಬಾ ಮೂರನೇ ಎಸೆತವನ್ನು ಫೈನ್ ಲೆಗ್ಗೆ ಸ್ಕೂಪ್ ಮಾಡಿದ್ದರು. ಆದರೆ ಚೆಂಡು ಶ್ರೀಶಾಂತ್ ಕೈ ಸೇರಿತ್ತು. ಪಾಕಿಸ್ತಾನ ಆಲ್ಔಟ್ ಆಯಿತು. ಭಾರತ ಕೇವಲ 5 ರನ್ ಅಂತರದಿಂದ ಗೆದ್ದು ಟ್ರೋಫಿ ಎತ್ತಿ ಹಿಡಿಯಿತು. ಇಲ್ಲಿಂದ ಧೋನಿ ಯುಗ ಕೂಡ ಆರಂಭವಾಯಿತು. ಭಾರತ ಪರ ಬೌಲಿಂಗ್ನಲ್ಲಿ ಇರ್ಫಾನ್ ಪಠಾಣ್ (16 ಕ್ಕೆ 3), ಆರ್.ಪಿ ಸಿಂಗ್(24ಕ್ಕೆ 3), ಜೋಗಿಂದರ್ ಶರ್ಮಾ(20ಕ್ಕೆ 2) ವಿಕೆಟ್ ಕಿತ್ತು ಮಿಂಚಿದ್ದರು.