ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ(Neeraj Chopra) ಅವರ ಬ್ರಾಂಡ್ ಮೌಲ್ಯ ಬರೋಬ್ಬರಿ 330 ಕೋಟಿ ರೂ.ಗೆ ಜಿಗಿತ ಕಂಡಿದೆ. ಜತೆಗೆ ಶೂಟಿಂಗ್ನಲ್ಲಿ ಅವಳಿ ಪದಕ ಗೆದ್ದ ಮನು ಭಾಕರ್(Manu Bhaker) ಮೌಲ್ಯ ಕೂಡ ಕೋಟಿಗೆ ಏರಿಕೆಯಾಗಿದೆ ಎಂದು ವರದಿಯಾಗಿದೆ.
ಎಕನಾಮಿಕ್ ಟೈಮ್ಸ್ ಪ್ರಕಾರ, ಹಣಕಾಸು ಸಲಹಾ ಸಂಸ್ಥೆ ಕ್ರೋಲ್‌ನ ಅಂಕಿಅಂಶಗಳ ವರದಿಯ ಪ್ರಕಾರ ನೀರಜ್ ಚೋಪ್ರಾ ಅವರ ಬ್ರ್ಯಾಂಡ್ ಮೌಲ್ಯ 29.6 ದಶಲಕ್ಷ ಡಾಲರ್ ನಿಂದ 40 ದಶಲಕ್ಷ ಡಾಲರ್ಗೆ ಏರಿಕೆಯಾಗಿದೆ. ಅಂದರೆ ಭಾರತೀಯ ರೂಪಾಯಿ ಪ್ರಕಾರ ಅವರ ಬ್ರ್ಯಾಂಡ್ ಮೌಲ್ಯ 330 ಕೋಟಿ ರೂ. ಆಗಿದೆ. ಇದು ಭಾರತೀಯ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ(hardik pandya) ಬ್ರ್ಯಾಂಡ್ ಮೌಲ್ಯಕ್ಕಿಂತ ಹೆಚ್ಚಾಗಿದೆ. ನೀರಜ್ ಭಾರತೀಯ ಕ್ರೀಡಾಪಟುಗಳಲ್ಲಿ ಅತ್ಯುನ್ನತ ಮೌಲ್ಯಯುತ ಕ್ರಿಕೆಟಿಗರಲ್ಲದ ಕ್ರೀಡಾಪಟು ಎನಿಸಿಕೊಂಡಿದ್ದಾರೆ.
ನೀರಜ್ ಪ್ರಸ್ತುತ 24 ವಿವಿಧ ವರ್ಗಗಳಲ್ಲಿ 21 ಬ್ರ್ಯಾಂಡ್‌ಗಳನ್ನು ಅನುಮೋದಿಸಿದ್ದಾರೆ. ಮನಿ ಕಂಟ್ರೋಲ್ ವರದಿಯ ಪ್ರಕಾರ, ಹಾರ್ದಿಕ್ ಪಾಂಡ್ಯ 20 ಬ್ರಾಂಡ್‌ಗಳನ್ನು ಮಾತ್ರ ಹೊಂದಿದ್ದಾರೆ ಎನ್ನಲಾಗಿದೆ. ಪಾಂಡ್ಯಗಿಂತ ಶೇ.50ರಷ್ಟು ಬ್ರ್ಯಾಂಡ್ ಮೌಲ್ಯ ಹೆಚ್ಚಳವಾಗಿದೆ ಎಂದು ವರದಿಯಾಗಿದೆ.
ಹಿಂದೆ ಭಾರತದಲ್ಲಿ ಕ್ರಿಕೆಟಿಗರು ಮಾತ್ರ ಬ್ರಾಂಡ್ ಮೌಲ್ಯ ಹೊಂದಿದ್ದರು. ಇದೀಗ ಇತರ ಕ್ರೀಡೆಗಳಲ್ಲಿಯೂ ಕ್ರೀಡಾಪಟುಗಳು ಬ್ರಾಂಡ್ ಮೌಲ್ಯ ಗಳಿಸುವಲ್ಲಿ ಯಶಸ್ಸು ಸಾಧಿಸುತ್ತಿದ್ದಾರೆ. ಅಲ್ಲದೆ ಕ್ರಿಕೆಟಿಗರನ್ನು ಹಿಂದಿಕ್ಕಿ ಮುಂದಕ್ಕೆ ಸಾಗುತ್ತಿರುವುದು ನಿಜಕ್ಕೂ ಖುಷಿಯ ವಿಚಾರ. ಟೊಕಿಯೊ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಬರೆದಿದ್ದ ನೀರಜ್ ಚೋಪ್ರಾ ಈ ಬಾರಿ ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದ್ದರು.
ಇದನ್ನೂ ಓದಿ Neeraj Chopra: ಲಾಸಾನ್ನೆ ಡೈಮಂಡ್ ಲೀಗ್‌ನಲ್ಲಿ ನೀರಜ್ ಸ್ಪರ್ಧೆ; ಆಗಸ್ಟ್ 22ಕ್ಕೆ ಟೂರ್ನಿ
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 2 ಕಂಚಿನ ಪದಕ ಗೆದ್ದು ಇತಿಹಾಸ ಬರೆದ 22 ವರ್ಷದ ಮನು ಭಾಕರ್ ಬ್ರ್ಯಾಂಡ್ ಮೌಲ್ಯ 1.5 ಕೋಟಿ ರೂ.ಗೆ ಏರಿಕೆಯಾಗಿದೆ. ಮನು ಬಾಕರ್ ಥಂಬ್ಸಪ್ ಕಂಪನಿಯ ಜಾಹಿರಾತಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಪ್ಯಾರಿಸ್ ಒಲಿಂಪಿಕ್ಸ್ಗೂ ಮುನ್ನ ಮನು ಬಾಕರ್ ಬ್ರ್ಯಾಂಡ್ ಮೌಲ್ಯ 25 ಲಕ್ಷ ರೂ. ಆಗಿತ್ತು. ಇದೀಗ ಅವರ ಜಾಹಿರಾತುಗಳಲ್ಲಿ ಪಡೆಯುವ ಸಂಭಾವನೆ ಮೊತ್ತ ಕೋಟಿಗೆ ಏರಿಕೆಯಾಗಿದೆ.
ಮನು ಅವರ ಬ್ರ್ಯಾಂಡ್ ಮೌಲ್ಯ ಈಗ 1.5 ರೂ. ಆಗಿದೆ. ಅವರು ಪ್ರತಿ ಡಿಜಿಟಲ್ ಜಾಹೀರಾತಿಗೂ 30 ಲಕ್ಷ ರೂ. ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ. ಪ್ರಮುಖವಾಗಿ ತಂಪು ಪಾನೀಯ, ಸ್ಕಿನ್ ಕೇರ್, ನ್ಯೂಟ್ರೀಷಿಯನ್ ಕಂಪನಿಗಳು ಮನು ಅವರನ್ನು ಸಂಪರ್ಕಿಸಿವೆ ಎಂದು ತಿಳಿದುಬಂದಿದೆ.
ನಿಗದಿತ ತೂಕಕ್ಕಿಂದ ಅಧಿಕ ತೂಕ ಹೊಂದಿದ್ದ ಕಾರಣ ಕುಸ್ತಿ ಫೈನಲ್ನಿಂದ ಅನರ್ಹಗೊಂಡ ವಿನೇಶ್ ಫೋಗಟ್ ಅವರ ಬ್ರ್ಯಾಂಡ್ ಮೌಲ್ಯ ಕೂಡ ಅಚ್ಚರಿ ಎಂಬಂತೆ ಹೆಚ್ಚಳವಾಗಿದೆ. ಕ್ರೀಡಾಕೂಟಕ್ಕೂ ಮುನ್ನ ಅವರ ಬ್ರ್ಯಾಂಡ್ ಮೌಲ್ಯ 25 ಲಕ್ಷ ರೂ. ಆಗಿದ್ದು, ಇದೀಗ 1 ಕೋಟಿ ರೂ.ಗೆ ಏರಿಕೆಯಾಗಿದೆ.