ಮುಂಬೈ: ಮಹಾರಾಷ್ಟ್ರದ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ (ಏಪ್ರಿಲ್ 14) ಮುಂಬೈ ಇಂಡಿಯನ್ಸ್ (Mumbai Indians) ವಿರುದ್ಧ ನಡೆದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡವು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಆಡಿದ 6 ಪಂದ್ಯಗಳಲ್ಲಿ 4 ಪಂದ್ಯ ಗೆಲ್ಲುವ ಮೂಲಕ ಋತುರಾಜ್ ಗಾಯಕ್ವಾಡ್ (Ruturaj Gaikwad) ನೇತೃತ್ವದಲ್ಲಿ ಸಿಎಸ್‌ಕೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಭದ್ರವಾಗಿದೆ. ಇನ್ನು, ಮುಂಬೈ ವಿರುದ್ಧದ ಪಂದ್ಯದಲ್ಲಿ ಅಮೋಘ 69 ರನ್ ಬಾರಿಸಿದ ಋತುರಾಜ್ ಗಾಯಕ್ವಾಡ್, ಐಪಿಎಲ್‌ನಲ್ಲಿ ಅತಿ ಕಡಿಮೆ ಪಂದ್ಯಗಳಲ್ಲಿ 2 ಸಾವಿರ ರನ್ ಗಳಿಸಿದ ಭಾರತದ ಮೊದಲ ಆಟಗಾರ ಎಂಬ ಖ್ಯಾತಿಗೆ ಭಾಜನರಾದರು.
ಋತುರಾಜ್ ಗಾಯಕ್ವಾಡ್ ಅವರು 57 ಇನ್ನಿಂಗ್ಸ್‌ಗಳಲ್ಲಿಯೇ 2 ಸಾವಿರ ರನ್ ಪೂರೈಸಿದ್ದು, ಭಾರತದಲ್ಲಿಯೇ ವೇಗವಾಗಿ ಇಷ್ಟು ರನ್ ಗಳಿಸಿದ ಮೊದಲ ಆಟಗಾರ ಎನಿಸಿದ್ದಾರೆ. ಇದುವರೆಗೆ ಕಡಿಮೆ ಪಂದ್ಯಗಳಲ್ಲಿ 2 ಸಾವಿರ ರನ್ ಗಳಿಸಿದ ದಾಖಲೆಯು ಕನ್ನಡಿಗ, ಲಕ್ನೋ ಸೂಪರ್ ಜೈಂಟ್ಸ್ ಕ್ಯಾಪ್ಟನ್ ಕೆ.ಎಲ್.ರಾಹುಲ್ ಹೆಸರಲ್ಲಿತ್ತು. ರಾಹುಲ್ ಅವರು 60 ಇನ್ನಿಂಗ್ಸ್‌ಗಳಲ್ಲಿ 2 ಸಾವಿರ ರನ್ ಗಳಿಸಿದ ಸಾಧನೆ ಮಾಡಿದ್ದರು.
ಮುಂಬೈ ವಿರುದ್ಧ ಋತುರಾಜ್ ಗಾಯಕ್ವಾಡ್ 40 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಐದು ಸಿಕ್ಸರ್ ಸಮೇತ 69 ರನ್ ಗಳಿಸಿದರು. ಶಿವಂ ದುಬೆ ಕೂಡ 38 ಎಸೆತಗಳಲ್ಲಿ 66 ರನ್ ಗಳಿಸಿದ್ದು ಸಿಎಸ್‌ಕೆ 206 ರನ್‌ಗಳ ಬೃಹತ್ ಮೊತ್ತ ದಾಖಲಿಸಲು ಸಾಧ್ಯವಾಯಿತು. ಈ ಮೊತ್ತ ಬೆನ್ನತ್ತಿದ ಮುಂಬೈ 20 ಓವರ್‌ಗಳಲ್ಲಿ 186 ರನ್ ಅಷ್ಟೇ ಕಲೆಹಾಕಲು ಸಾಧ್ಯವಾಯಿತು.
Ruturaj Gaikwad 69(40) Match Winning knock
— 🕉 (@WhyyySoMuch) April 15, 2024
Part 1 pic.twitter.com/UtxuK4UujG
Ruturaj Gaikwad becomes fastest Indian to 2000 IPL runs during 69-run knock vs MI
ರೋಹಿತ್ ಶರ್ಮಾ ರೆಕಾರ್ಡ್
ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿಯೇ ಮುಂಬೈ ಇಂಡಿಯನ್ಸ್ ತಂಡದ ರೋಹಿತ್ ಶರ್ಮಾ ಕೂಡ ಮತ್ತೊಂದು ದಾಖಲೆ ಬರೆದರು. ಟಿ20 ಕ್ರಿಕೆಟ್ನಲ್ಲಿ 500 ಸಿಕ್ಸರ್ಗಳನ್ನು ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಇನಿಂಗ್ಸ್ನಲ್ಲಿ ಐದು ಸಿಕ್ಸರ್ ಬಾರಿಸುವ ಮೂಲಕ ಈ ಗಡಿಯನ್ನು ದಾಟಿದ್ದಾರೆ. ರವೀಂದ್ರ ಜಡೇಜಾ ಅವರ ಬೌಲಿಂಗ್ನಲ್ಲಿ ಬಂದ ಮೂರನೇ ಸಿಕ್ಸರ್ಗಳೊಂದಿಗೆ ರೋಹಿತ್ 500 ಟಿ 20 ಸಿಕ್ಸರ್ ಪೂರೈಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಅತಿ ಹೆಚ್ಚು ಪಂದ್ಯ; ಧೋನಿ 2ನೇ ಆಟಗಾರ ಎಂಬ ಹೆಗ್ಗಳಿಕೆ
ಆರ್‌ಸಿಬಿ ಪರವಾಗಿ 250 ಪಂದ್ಯಗಳನ್ನು ಆಡುವ ಮೂಲಕ ಐಪಿಎಲ್ ಇತಿಹಾಸದಲ್ಲಿಯೇ ಒಂದೇ ಫ್ರಾಂಚೈಸ್ ಪರ ಇಷ್ಟು ಪಂದ್ಯಗಳನ್ನು ಆಡಿದ ಏಕೈಕ ಬ್ಯಾಟ್ಸ್‌ಮನ್ ಎನಿಸಿದ್ದರು. ಈಗ ಧೋನಿ ಅವರು ಕೂಡ 250 ಪಂದ್ಯಗಳನ್ನು ಆಡುವಾಗ ಮೂಲಕ ಅತಿ ಹೆಚ್ಚು ಪಂದ್ಯವಾಡಿದ ಎರಡನೇ ಆಟಗಾರ ಎನಿಸಿದ್ದಾರೆ. 2008ರಲ್ಲಿ ಸಿಎಸ್‌ಕೆ ಪರವಾಗಿ ಧೋನಿ ಆಡಲು ಆರಂಭಿಸಿದರು. ಎರಡು ವರ್ಷ ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ಪರವಾಗಿ ಹೊರತುಪಡಿಸಿದರೆ ಧೋನಿ ಅವರು ಸಿಎಸ್‌ಕೆ ಪರವಾಗಿಯೇ ಆಡಿದ್ದಾರೆ.
ಇದನ್ನೂ ಓದಿ: MS Dhoni: ಕೊಹ್ಲಿ ನಂತರ ಈ ದಾಖಲೆ ಬರೆದ ಎರಡನೇ ಆಟಗಾರ ಎನಿಸಿದ ಧೋನಿ; ಏನದು?