Site icon Vistara News

Shiva Rajkumar: ರಾಹುಲ್ ದ್ರಾವಿಡ್ ಫೋಟೊ ಶೇರ್‌ ಮಾಡಿ ‘ಗೋಡೆ’ ಮೇಲೆ ವರ್ಲ್ಡ್ ಕಪ್ ಇಡೋರ್ ಆಗ್ಬೇಕು ಎಂದ ಶಿವಣ್ಣ

Shiva Rajkumar Tweet About India's T20 Victory about rahul

ಬೆಂಗಳೂರು: ಅತ್ಯಂತ ರೋಚಕವಾಗಿ ನಡೆದ ಟಿ20 ವಿಶ್ವಕಪ್​ ಫೈನಲ್(T20 World Cup 2024) ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ(South Africa vs India) ತಂಡವನ್ನು 7 ರನ್​ಗಳಿಂದ ಮಣಿಸಿದ ಭಾರತ 2ನೇ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿತು. ಜತೆಗೆ 13 ವರ್ಷಗಳ ಕಪ್​ ಬರಗಾಲ ಕೂಡ ನೀಗಿತು. ಇದೀಗ ಟೀಂ ಇಂಡಿಯಾಗೆ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಹಾಗೇ ನಟ ಶಿವರಾಜ್‌ ಕುಮಾರ್‌ ಅವರು ಕ್ರಿಕೆಟ್‌ ಪ್ರೇಮಿ ಎಂಬುದು ಗೊತ್ತೇ ಇದೆ. ಇದೀಗ ಶಿವಣ್ಣ ಸಹ ಖುಷಿ ಪಟ್ಟಿದ್ದು, ದ್ರಾವಿಡ್‌ಗೆ ವಿಶ್ವಕಪ್ ಗೆದ್ದು ಕೊಟ್ಟಿರುವುದನ್ನು ‘ಗೋಡೆ’ ಮೇಲೆ ವರ್ಲ್​ಕಪ್ ಇಡೋರು ಆಗ್ಬೇಕುʼʼಎಂದು ಹೇಳಿದ್ದಾರೆ.

ರಾಹುಲ್ ದ್ರಾವಿಡ್ ಕರ್ನಾಟಕದ ಆಟಗಾರ. ಆದರೆ ಅವರಿಗೆ ವಿಶ್ವಕಪ್‌ ಗೆಲ್ಲಲು ಸಾದ್ಯವಾಗಿಲ್ಲ, ಆದರೆ ದ್ರಾವಿಡ್‌ ಅವರು ಭಾರತ ಕ್ರಿಕೆಟ್ ತಂಡದ ಕೋಚ್ ಸ್ಥಾನದಿಂದ ಕೆಳಗೆ ಇಳಿಯುವ ಹೊತ್ತಿನಲ್ಲಿ ಭಾರತ ತಂಡ ವಿಶ್ವಕಪ್ ಗೆದ್ದಿದೆ. ಮಾತ್ರವಲ್ಲ ದ್ರಾವಿಡ್‌ ಕೈಯಲ್ಲಿ ಕಪ್‌ ಕಂಡು ಕನ್ನಡಿಗರು ವಿಶೇಷವಾಗಿ ಭಾವುಕಗೊಂಡಿದ್ದಾರೆ. ಹೀಗಾಗಿ ಶಿವಣ್ಣ ಕೂಡ ದ್ರಾವಿಡ್ ಗೆ ವಿಶ್ವಕಪ್ ಗೆದ್ದು ಕೊಟ್ಟಿರುವುದನ್ನು ‘ಗೋಡೆ’ ಮೇಲೆ ವರ್ಲ್​ಕಪ್ ಇಡೋರು ಆಗ್ಬೇಕು ಎಂದು ಬರೆದುಕೊಂಡಿದ್ದಾರೆ.

ಶಿವಣ್ಣ ಎಕ್ಸ್‌ ಖಾತೆಯಲ್ಲಿ ʻʻಅಡ್ಡ ಗೋಡೆ ಮೇಲೆ ದೀಪ ಇಡೋ ಕಾಲದಲ್ಲಿ, ‘ಗೋಡೆ’ ಮೇಲೆ ವರ್ಲ್ಡ್ ಕಪ್ ಇಡೋರ್ ಆಗ್ಬೇಕುʼʼಎಂದು ಬರೆದುಕೊಂಡಿದ್ದಾರೆ. ಶಿವಣ್ಣ ಕೂಡ ಈಗ ಸಿಸಿಎಲ್ ಇನ್ನಿತರೆ ಸಿನಿಮಾ ಸಂಬಂಧಿ ಕ್ರಿಕೆಟ್ ಟೂರ್ನಿಗಳಲ್ಲಿ ಶಿವಣ್ಣ ಭಾಗವಹಿಸುತ್ತಾರೆ.

ಇದನ್ನೂ ಓದಿ: Kalki 2898 AD: ಮೂರನೇ ದಿನ ಭರ್ಜರಿ ಗಳಿಕೆ ಕಂಡ ‘ಕಲ್ಕಿ 2898 ಎಡಿ’ ಸಿನಿಮಾ ! 

ರೋಚಕ ಪಂದ್ಯ ಗೆದ್ದ ಭಾರತ

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಎರಡನೇ ಎಸೆತವನ್ನು ರಬಾಡಾ ಬೌಂಡರಿ ಬಾರಿಸಿದರು. ಮೂರನೇ ಎಸೆತದಲ್ಲಿ ಒಂದು ರನ್ ಬಂತು. ಕೊನೆಯ ಎರಡು ಎಸೆತಗಳಲ್ಲಿ 10 ರನ್ ಅಗತ್ಯವಿತ್ತು. ಹಾರ್ದಿಕ್ ಒಂದು ವೈಡ್ ಎಸೆದರು. ರಬಾಡಾ ಕ್ಯಾಚಿತ್ತು ನಿರ್ಗಮಿಸಿದರು. ಕೊನೆಯ ಎಸೆತದಲ್ಲಿ ಒಂದು ರನ್ ಮಾತ್ರ ಬಂತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

Exit mobile version