Site icon Vistara News

Suryakumar Yadav: ಸೂರ್ಯಕುಮಾರ್​ಗೆ ನಾಯಕತ್ವ ಒಲಿದದ್ದು ಕಾಪು ಮಾರಿಯಮ್ಮನ ಆಶೀರ್ವಾದದಿಂದ!

Suryakumar Yadav

Suryakumar Yadav: Suryakumar Yadav replaces Rohit Sharma as T20I captain

ಮುಂಬಯಿ: ಟೀಮ್​ ಇಂಡಿಯಾದ ಹಾರ್ಡ್​ ಹಿಟ್ಟರ್​ ಸೂರ್ಯಕುಮಾರ್​ ಯಾದವ್(Suryakumar Yadav) ಪತ್ನಿ​ ದೇವಿಶಾ ಶೆಟ್ಟಿ ಜತೆಗೂಡಿ ಜುಲೈ 8ರಂದು ಕಾಪು ಶ್ರೀ ಹೊಸ ಮಾರಿಗುಡಿ(Hosa Marigudi Kaup) ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿದ್ದರು. ಈ ಸಂದರ್ಭ ದೇವಸ್ಥಾನದ ಅರ್ಚಕರು ಸೂರ್ಯಕುಮಾರ್​ ಅವರಿಗೆ ನಾಯಕರಾಗುವ ಭಾಗ್ಯ ದೊರಕಲಿ ಎಂದು ಹಾರೈಸಿ ಪ್ರಸಾದ ನೀಡಿದ್ದರು. ಇದೀಗ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಸೂರ್ಯಕುಮಾರ್​ ನಾಯಕನಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ ಟಿ20ಗೆ ಖಾಯಂ ನಾಯಕನಾಗಿ ಮುಂದುವರಿಯಲಿದ್ದಾರೆ ಎನ್ನಲಾಗಿದೆ. ಸೂರ್ಯ ಅವರಿಗೆ ನಾಯಕತ್ವ ಒಲಿದದ್ದು ಕಾಪು ಮಾರಿಗುಡಿಯ ಮಾರಿಯಮ್ಮ ದೇವಿಯ ಆಶೀರ್ವಾದದಿಂದಲೇ ಎಂದು ಕೆಲ ನೆಟ್ಟಗರು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಹೊಸ ಮಾರಿಗುಡಿಯ ಮಾರಿಯಮ್ಮ ದೇವಿಯ ದರ್ಶನ ಪಡೆದಿದ್ದ ಸೂರ್ಯಕುಮಾರ್​ ಮುಖಮಂಟಪದ ಶಿಲಾಸ್ತಂಭ ಸಹಿತ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಿಸಿದ್ದರು. ಇದೇ ವೇಳೆ ಸೂರ್ಯ ಪತ್ನಿ, ನೂತನ ದೇಗುಲ ಉದ್ಘಾಟನೆಯ ವೇಳೆ ಬಿಡುವುದ್ದರೆ ಸೂರ್ಯ ಖಂಡಿತವಾಗಿಯೂ ಇಲ್ಲಿಗೆ ಬರಲಿದ್ದಾರೆ ಎಂದು ಹೇಳಿದ್ದರು. ದೇವಿಶಾ ಶೆಟ್ಟಿ ಅವರು ಉಡುಪಿಯ ಕಾಪು ಮೂಲದವರಾಗಿದ್ದಾರೆ. ಸದ್ಯ ಮುಂಬೈನಲ್ಲೇ ನೆಲೆಸಿದ್ದಾರೆ.

ಕಳೆದ ಒಂದು ವರ್ಷಗಳಿಂದ ರೋಹಿತ್​ ಬಳಿಕ ಹಾರ್ದಿಕ್‌ ಪಾಂಡ್ಯರನ್ನೇ(Hardik Pandya) ಭವಿಷ್ಯದ ನಾಯಕ ಎಂದು ಬಿಂಬಿಸಲಾಗಿತ್ತು. ಆದರೆ, ಲಂಕಾ ಸರಣಿಗೆ ಸೂರ್ಯಕುಮಾರ್​ಗೆ ನಾಯಕತ್ವ ನೀಡಲಾಗಿದೆ. ಹೌದು, ಪಾಂಡ್ಯ ಅವರಿಗೆ ನಾಯಕತ್ವ ನೀಡದಿರಲು ಪ್ರಮುಖ ಕಾರಣ ಅವರ ಫಿಟ್ನೆಸ್‌ ಸಮಸ್ಯೆ. ಪಾಂಡ್ಯ ತಮ್ಮ 8 ವರ್ಷಗಳ ಕ್ರಿಕೆಟ್​ ವೃತ್ತಿಬದುಕಿನಲ್ಲಿ ಹಲವು ಬಾರಿ ಗಾಯದ ಸಮಸ್ಯೆಗೆ ತುತ್ತಾಗಿ ತಂಡದಿಂದ ಹೊರಗುಳಿದಿದ್ದರು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಯೂ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದರು. ಪದೇಪದೆ ಗಾಯಕ್ಕೆ ತುತ್ತಾಗುವ ಕಾರಣ ಪಾಂಡ್ಯ ನೇಮಕಕ್ಕೆ ಬಿಸಿಸಿಐನ ಕೆಲ ಪ್ರಮುಖ ಅಧಿಕಾರಿಗಳು ಹಾಗೂ ಆಯ್ಕೆ ಸಮಿತಿಯ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ Team India Srilanka Tour : ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಸೂರ್ಯಕುಮಾರ್​ಗೆ ಟಿ20 ನಾಯಕತ್ವ

ಸೂರ್ಯಕುಮಾರ್‌ ಯಾದವ್​ ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿ ಸರಣಿ ಗೆದ್ದಿದ್ದರು. ಸೂರ್ಯಕುಮಾರ್ ಯಾದವ್ ಕಾರ್ಯವೈಖರಿ ಬಗ್ಗೆಯೂ ಬಿಸಿಸಿಐ ಹಾಗೂ ಆಯ್ಕೆ ಸಮಿತಿಗೆ ಸಮಾಧಾನವಿದ್ದು, ಅವರನ್ನೇ ನಾಯಕನನ್ನಾಗಿ ಮುಂದುವರಿಸುವ ಸಾಧ್ಯತೆ ಅಧಿಕವಾಗಿದೆ.

ಟಿ20 ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿ.ಕೀ ), ಸಂಜು ಸ್ಯಾಮ್ಸನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ , ಅರ್ಶದೀಪ್​ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್​ ಸಿರಾಜ್.

Exit mobile version