ಲಾಡರ್‌ಹಿಲ್ (ಯುಎಸ್‌ಎ): ಅಮೆರಿಕದಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್ (T20 World Cup 2024) ಟೂರ್ನಿಯ ಗ್ರೂಪ್ ಹಂತದ ಭಾರತ ಹಾಗೂ ಕೆನಡಾ ನಡುವಿನ (India vs Canada Match) ಪಂದ್ಯವು ಒಂದೂ ಎಸೆತ ಕಾಣದೆ ರದ್ದಾಗಿದೆ. ಭಾರಿ ಮಳೆಯಿಂದಾಗಿ ಶನಿವಾರ (ಜೂನ್ 15) ಲಾಡರ್‌ಹಿಲ್‌ನಲ್ಲಿರುವ ಮೈದಾನದಲ್ಲಿ ನಡೆಯಬೇಕಿದ್ದ ಪಂದ್ಯವು ರದ್ದಾಯಿತು. ಇದರಿಂದಾಗಿ ಎರಡೂ ತಂಡಗಳಿಗೆ ತಲಾ ಒಂದು ಅಂಕ ಹಂಚಿಕೆ ಮಾಡಲಾಯಿತು. ಗ್ರೂಪ್ ಹಂತದಲ್ಲಿ ಒಂದೂ ಪಂದ್ಯ ಸೋಲದ ಭಾರತ ತಂಡವು 7 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿ ಸೂಪರ್ 8 ಹಂತಕ್ಕೆ ಪ್ರವೇಶ ಪಡೆದಿದೆ.
ಕಳೆದ ಹಲವು ದಿನಗಳಿಂದ ಲಾಡರ್‌ಹಿಲ್‌ನಲ್ಲಿ ಭಾರಿ ಮಳೆಯಾಗುತ್ತಿದ್ದು, ಶುಕ್ರವಾರ ನಡೆಯಬೇಕಿದ್ದ ಎರಡೂ ಪಂದ್ಯಗಳು ರದ್ದಾಗಿದ್ದವು. ಭಾರತ ಹಾಗೂ ಕೆನಡಾ ಪಂದ್ಯಕ್ಕೂ ಮಳೆಯ ಭೀತಿ ಇತ್ತು. ಹವಾಮಾನ ಇಲಾಖೆಯೂ ಎಚ್ಚರಿಕೆ ನೀಡಿತ್ತು. ಅದರಂತೆ, ಕೊನೆಗೆ ಟಾಸ್ ಕೂಡ ನಡೆಯದೆ ಪಂದ್ಯವನ್ನು ರದ್ದುಗೊಳಿಸಿ, ಅಂಕಗಳನ್ನು ಸಮನಾಗಿ ಹಂಚಿಕೆ ಮಾಡಲಾಗಿದೆ. ಇದರೊಂದಿಗೆ ಭಾರತ ಹಾಗೂ ಅಮೆರಿಕ ತಂಡವು ಸೂಪರ್ 8 ಪ್ರವೇಶಿಸಿವೆ. ಭಾನುವಾರ ಐರ್ಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ಗ್ರೂಪ್ ಹಂತದ ಹಾಗೂ ಟೂರ್ನಿಯ ಕೊನೆಯ ಪಂದ್ಯವನ್ನು ಆಡಲಿವೆ.
T20 World Cup 2024: India vs Canada match abandoned due to wet outfield. pic.twitter.com/4ZVl5mKXR3
— ANI (@ANI) June 15, 2024
ಭಾರತ ಹಾಗೂ ಕೆನಡಾ ಪಂದ್ಯವನ್ನು ಆಡಲಿಸಲು ಪ್ರಯತ್ನ ಮಾಡಲಾಯಿತು. ಹಲವು ಬಾರಿ ಪಿಚ್ ಹಾಗೂ ಮೈದಾನವನ್ನು ಪರಿಶೀಲನೆ ನಡೆಸಲಾಯಿತು. ಕೊನೆಗೆ ಐದು ಓವರ್‌ಗಳ ಪಂದ್ಯವನ್ನಾದರೂ ಆಡಿಸಲು ಪ್ರಯತ್ನಿಸಲಾಯಿತು. ಆದರೆ, ಮಳೆ ಕಡಿಮೆಯಾದರೂ ಮೈದಾನದಲ್ಲಿ ತೇವಾಂಶ ರದ್ದಿರುವ ಕಾರಣ ಪಂದ್ಯವನ್ನು ರದ್ದುಗೊಳಿಸಲಾಯಿತು. ಸೂಪರ್ 8ರಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಒಂದೇ ಗ್ರೂಪ್‌ನಲ್ಲಿವೆ. ಜೂನ್ 19ರಿಂದ ಸೂಪರ್ 8 ಪಂದ್ಯಗಳು ಆರಂಭವಾಗಲಿವೆ. ಸೂಪರ್ 8 ಪಂದ್ಯಗಳು ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿವೆ.
ಉತ್ತಮ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗವನ್ನು ಹೊಂದಿದ್ದರೂ ಸಂಘಟಿತ ಪ್ರದರ್ಶನ ನೀಡುವಲ್ಲಿ ವಿಫಲವಾಗುವ ಜತೆಗೆ ಅದೃಷ್ಟದಾಟದಲ್ಲೂ ಹಿನ್ನಡೆ ಅನುಭವಿಸಿದ ಪಾಕಿಸ್ತಾನ ಕ್ರಿಕೆಟ್ ತಂಡವು ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದೆ. ಸೂಪರ್ 8ರ ರೇಸ್‌ನಲ್ಲಿ ಹಿನ್ನಡೆ ಅನುಭವಿಸಿದ ಬಾಬರ್ ಅಜಂನೇತೃತ್ವದ ತಂಡವು ಟೂರ್ನಿಯಿಂದ ಹೊರಬಿದ್ದಿದ್ದು, ಪಾಕ್ ಕ್ರಿಕೆಟ್ ಅಭಿಮಾನಿಗಳು ತಂಡದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ: T20 World Cup 2024: ಟಿ-20 ವಿಶ್ವಕಪ್‌ನಿಂದ ಪಾಕಿಸ್ತಾನ ಔಟ್; ಸೂಪರ್ 8ಕ್ಕೆ ಲಗ್ಗೆ ಇಟ್ಟ ಅಮೆರಿಕ