T20 World Cup 2024: ಟಿ20 ವಿಶ್ವಕಪ್​ನಲ್ಲಿ ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ; ರಣಜಿ ತಂಡ ಕಾಣಲ್ಲವೇ ಎಂದ ಮೋಹನ್‌ದಾಸ್‌ ಪೈ - Vistara News

T20 ವಿಶ್ವಕಪ್

T20 World Cup 2024: ಟಿ20 ವಿಶ್ವಕಪ್​ನಲ್ಲಿ ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ; ರಣಜಿ ತಂಡ ಕಾಣಲ್ಲವೇ ಎಂದ ಮೋಹನ್‌ದಾಸ್‌ ಪೈ

T20 World Cup 2024: ಕರ್ನಾಟಕದ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು, ಬಡವರಿಗೆ ವಿದ್ಯಾರ್ಥಿ ವೇತನಗಳಿಗೆ ಏಕೆ ಕೆಎಂಎಫ್‌ ಪ್ರಾಯೋಜಕತ್ವವನ್ನು ನೀಡಬಾರದು? ಕೆಎಂಎಫ್ ಕನ್ನಡಿಗ ತೆರಿಗೆದಾರರ ಹಣ, ಸಬ್ಸಿಡಿ ಮತ್ತು ಬಜೆಟ್‌ನಿಂದ ಧನಸಹಾಯವನ್ನು ಪಡೆದುಕೊಳ್ಳುತ್ತದೆ. ಆದರೆ, ಯಾರಿಗೂ ಗೊತ್ತಿಲ್ಲದ ವಿದೇಶಿ ತಂಡಗಳಿಗೆ ಖರ್ಚು ಮಾಡಲು ಹೊರಟಿದೆ” ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಈ ಬಗ್ಗೆ ಟ್ಯಾಗ್‌ ಮಾಡಿದ್ದಾರೆ.

VISTARANEWS.COM


on

T20 World Cup 2024 Mohandas Pai attack Karnataka Government regarding KMF Sponsorship
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವೆಸ್ಟ್​ ಇಂಡೀಸ್​ ಮತ್ತು ಅಮೆರಿಕ ಆತಿಥ್ಯದಲ್ಲಿ ಜೂನ್ 1 ರಿಂದ ಆರಂಭವಾಗಲಿರುವ ಪುರುಷರ ಟಿ20 ವಿಶ್ವಕಪ್​ ಟೂರ್ನಿಯಲ್ಲಿ (T20 World Cup 2024) ಕರ್ನಾಟಕ ಹಾಲು ಮಹಾ ಮಂಡಳಿ (KMF) 2 ತಂಡಗಳ ಪ್ರಾಯೋಜಕತ್ವವನ್ನು ಪಡೆದುಕೊಂಡಿದೆ. ಆದರೆ, ಇದಕ್ಕೆ ಅಪಸ್ವರ ಕೇಳಿಬಂದಿದ್ದು, ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದೆ. ಉದ್ಯಮಿ ಮೋಹನ್‌ದಾಸ್‌ ಪೈ (Mohandas Pai) ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕೆಎಂಎಫ್‌ಗೆ ಕರ್ನಾಟಕ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು ಕಾಣುವುದಿಲ್ಲವೇ? ಇವುಗಳಿಗೇಕೆ ಪ್ರಾಯೋಜಕತ್ವ ನೀಡಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ಕೆಎಂಎಫ್‌ನಿಂದ ವಿದೇಶಿ ಕ್ರಿಕೆಟ್ ತಂಡಗಳಿಗೆ ಪ್ರಾಯೊಜಕತ್ವ ಪಡೆದ ವಿಚಾರದ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋಹನ್‌ ದಾಸ್‌ ಪೈ, ಕರ್ನಾಟಕದ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು, ಬಡವರಿಗೆ ವಿದ್ಯಾರ್ಥಿ ವೇತನಗಳಿಗೆ ಏಕೆ ಕೆಎಂಎಫ್‌ ಪ್ರಾಯೋಜಕತ್ವವನ್ನು ನೀಡಬಾರದು? ಕೆಎಂಎಫ್ ಕನ್ನಡಿಗ ತೆರಿಗೆದಾರರ ಹಣ, ಸಬ್ಸಿಡಿ ಮತ್ತು ಬಜೆಟ್‌ನಿಂದ ಧನಸಹಾಯವನ್ನು ಪಡೆದುಕೊಳ್ಳುತ್ತದೆ. ಆದರೆ, ಯಾರಿಗೂ ಗೊತ್ತಿಲ್ಲದ ವಿದೇಶಿ ತಂಡಗಳಿಗೆ ಖರ್ಚು ಮಾಡಲು ಹೊರಟಿದೆ” ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಈ ಬಗ್ಗೆ ಟ್ಯಾಗ್‌ ಮಾಡಿದ್ದಾರೆ.

ಟಿ20 ವಿಶ್ವಕಪ್​ನಲ್ಲಿ 2 ತಂಡಗಳ ಪ್ರಾಯೋಜಕತ್ವ ಪಡೆದ ನಂದಿನಿ

ನಂದಿನಿ ಹೆಸರಿನಲ್ಲಿ ಡೈರಿ ಉತ್ಪನ್ನ ಮಾರಾಟ ಮಾಡುತ್ತಿರುವ ಕೆಎಂಎಫ್‌ ಟಿ20 ವಿಶ್ವಕಪ್​ನಲ್ಲಿ ಸ್ಕಾಟ್ಲೆಂಡ್ (Scotland) ಮತ್ತು ಐರ್ಲೆಂಡ್ (Ireland) ತಂಡಗಳ ಪ್ರಾಯೋಜಕತ್ವ ಪಡೆದಿದೆ. ಈ ಮೂಲಕ ಕೆಎಂಎಫ್‌ ಕ್ರಿಕೆಟ್‌ ಲೋಕಕ್ಕೆ ಕಾಲಿಟ್ಟು ನಂದಿನಿ(nandini milk) ಲೋಗೋವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡಲು ಮುಂದಾಗಿದೆ. ಜತೆಗೆ ಅಮೂಲ್‌ಗೆ ತೀವ್ರ ಪೈಪೋಟಿ ನೀಡಲಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ಒಪ್ಪಂದಕ್ಕೆ ಈಗಾಗಲೇ ಅಧಿಕೃತವಾಗಿ ಸಹಿ ಮಾಡಿದ್ದೇವೆ. ವಿಶ್ವಕಪ್‌ನಂತಹ ದೊಡ್ಡ ಟೂರ್ನಿಯಲ್ಲಿ ನಂದಿನಿ ಕಂಪೆನಿಯು ಪ್ರಾಯೋಜಕತ್ವ ಪಡೆದಿರುವುದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದರು.

ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳ ಎಡಗೈ ಮೇಲೆ ನಂದಿನಿ ಲೋಗೋ ಕಾಣಿಸಿಕೊಳ್ಳಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಇದನ್ನೂ ಓದಿ T20 World Cup: ಟಿ20 ವಿಶ್ವಕಪ್​ನಲ್ಲಿ ಈ ಆಟಗಾರರಿಗೆ ಅವಕಾಶ ಸಿಗುವುದು ಡೌಟ್​

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಏಪ್ರಿಲ್​ ಕೊನೆಯ ವಾರದಲ್ಲಿ ಭಾರತ ತಂಡ ಪ್ರಕಟಗೊಳ್ಳುವ ನಿರೀಕ್ಷೆ ಇದೆ.

ತಲಾ 2 ಅಭ್ಯಾಸ ಪಂದ್ಯ


ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Women’s T20 World Cup: ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ; ಮಹಿಳಾ ಟಿ20 ವಿಶ್ವಕಪ್ ​ಸ್ಥಳಾಂತರ ಸಾಧ್ಯತೆ!

Women’s T20 World Cup: ಒಂದೊಮ್ಮೆ ಬಾಂಗ್ಲಾದೇಶದಲ್ಲಿ ಶಾಂತಿ ನೆಲೆಸದೇ ಹೋದರೆ, ಭದ್ರತಾ ಕಾರಣದಿಂದ ಟೂರ್ನಿಯನ್ನು ಬಾಂಗ್ಲಾದೇಶದಿಂದ ಬೇರೆ ದೇಶಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ.

VISTARANEWS.COM


on

Women's T20 World Cup
Koo

ಢಾಕಾ: ಬಹುನಿರೀಕ್ಷಿತ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿ(Women’s T20 World Cup) ಅಕ್ಟೋಬರ್‌ನಲ್ಲಿ ಬಾಂಗ್ಲಾದೇಶ ಆತಿಥ್ಯದಲ್ಲಿ ನಡೆಯಲಿದೆ. ಆದರೆ, ಬಾಂಗ್ಲಾದೇಶದಲ್ಲಿ(bangladesh violence)  ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಅಲ್ಲಿನ ನಾಗರೀಕರು ನಡೆಸುತ್ತಿರುವ ಪ್ರತಿಭಟನೆ, ಗಲಭೆಗಳು ಹಿಂಸಾತ್ಮಕ ರೂಪ ತಳೆದಿದೆ. ಇದೇ ಕಾರಣಕ್ಕೆ ಬಾಂಗ್ಲಾದೇಶದಲ್ಲಿನ ಭದ್ರತೆ ಪರಿಸ್ಥಿತಿಯ ಬಗ್ಗೆ ಗಮನ ಹರಿಸುವುದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ICC) ಹೇಳಿದೆ.

ಒಂದೊಮ್ಮೆ ಬಾಂಗ್ಲಾದೇಶದಲ್ಲಿ ಶಾಂತಿ ನೆಲೆಸದೇ ಹೋದರೆ, ಭದ್ರತಾ ಕಾರಣದಿಂದ ಟೂರ್ನಿಯನ್ನು ಬಾಂಗ್ಲಾದೇಶದಿಂದ ಬೇರೆ ದೇಶಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಟೂರ್ನಿ ಸ್ಥಳಾಂತರಗೊಂಡರೆ ಭಾರತದಲ್ಲಿ ನಡೆಯಲಿದೆ ಎನ್ನಲಾಗಿದೆ. ಸದ್ಯ ಪೊಲೀಸರು ಢಾಕಾದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು. ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವವರ ಮೇಲೆ ಲಾಠಿ ಚಾರ್ಜ್​ ನಡೆಸುತ್ತಿದ್ದಾರೆ. ಕೆಲವರು ಪೊಲೀಸ ಮೇಲೆಯೇ ದಾಳಿ ನಡೆಸುತ್ತಿರುವ ವಿಡಿಯೊಗಳು ಕೂಡ ವೈರಲ್​ ಆಗುತ್ತಿದೆ. ಇದುವರೆಗೆ ಹಿಂಸಾಚಾರದಲ್ಲಿ 150ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಬಾಂಗ್ಲಾ ವಿಮೋಚನೆ ಹೋರಾಟದಲ್ಲಿ (Bangladesh Protests) ಭಾಗಿಯಾಗಿದ್ದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 30ರಷ್ಟು ಮೀಸಲಾತಿ (Job Reservation) ನೀಡುವ ನಿಯಮವನ್ನು ಕೋರ್ಟ್‌ ಹಿಂತೆಗೆದುಕೊಂಡಿದೆ. ಆದರೆ ಸಂಪೂರ್ಣ ರದ್ದುಗೊಳಿಸಲಿಲ್ಲ. ಶೇ. 30ರಷ್ಟಿದ್ದ ಮೀಸಲಾತಿಯನ್ನು ಶೇ. 5ಕ್ಕೆ ಇಳಿಸಲಾಗಿದೆ. ಇದೇ ಕಾರಣಕ್ಕೆ ಇಲ್ಲಿ ಹೋರಾಟ ನಡೆಸುತ್ತಿದ್ದಾರೆ.

ಏನಿದು ವಿವಾದ?

1971ರಲ್ಲಿ ಪಾಕಿಸ್ತಾನದಿಂದ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಯೋಧರು ಮತ್ತು ಹೋರಾಟಗಾರರ ಸಂಬಂಧಿಕರಿಗೆ ಉದ್ಯೋಗಗಳಲ್ಲಿ ಶೇ. 30ರಷ್ಟು ಮೀಸಲಾತಿ ಘೋಷಣೆಯಾದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿದಿದ್ದರು. ರಾಜಧಾನಿ ಢಾಕಾ ಮತ್ತು ಇತರ ನಗರಗಳಲ್ಲಿ ನೂರಾರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಳೆದ ತಿಂಗಳಿನಿಂದ ರ‍್ಯಾಲಿಗಳನ್ನು ಪ್ರಾರಂಭಿಸಿದರು. ಶಾಂತವಾಗಿಯೇ ನಡೆಯುತ್ತಿದ್ದ ಪ್ರತಿಭಟನೆಕಾರರ ಮೇಲೆ ಪ್ರಧಾನಿ ಶೇಖ್‌ ಹಸೀನಾ ಅವರ ಆಡಳಿತರೂಢ ಅವಾಮಿ ಲೀಗ್‌ ಪಕ್ಷದ ಕಾರ್ಯಕರ್ತರು ದಾಳಿ ನಡೆಸಿದರು. ಆ ಬಳಿಕ ಪ್ರತಿಭಟನೆ ಹಿಂಸೆಯ ರೂಪ ತಾಳಿತು.

ಇದನ್ನೂ ಓದಿ Bangla Agitation Explainer: ಬಾಂಗ್ಲಾದೇಶ ಏಕೆ ಹೊತ್ತಿ ಉರಿಯುತ್ತಿದೆ? ವಿದ್ಯಾರ್ಥಿಗಳು ಏಕೆ ಹಿಂಸಾಚಾರಕ್ಕಿಳಿದಿದ್ದಾರೆ?

ದೇಶದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ಮತ್ತು ಗಲಭೆಗಳು ನಡೆಯುತ್ತಿರುವ ಕಾರಣ ಸುಮಾರು 1,000ರಷ್ಟು ಆತಂಕಿತ ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದಾರೆ. 778 ಭಾರತೀಯರು ಭೂಮಾರ್ಗದಲ್ಲಿ ತಾಯ್ನೆಲಕ್ಕೆ ಬಂದು ಸೇರಿದ್ದು, 200ಕ್ಕೂ ಅಧಿಕ ವಿದ್ಯಾರ್ಥಿಗಳು ವಿಮಾನದಲ್ಲಿ ಮರಳಿದ್ದಾರೆ.

ಈ ಪ್ರತಿಭಟನೆಯ ಹಿಂದೆ ರಾಜಕೀಯದ ಛಾಯೆಯೂ ಇದೆ. 1971ರ ಬಾಂಗ್ಲಾ ವಿಮೋಚನೆ ಹೋರಾಟದಲ್ಲಿ ಮುಂಚೂಣಿಯಲ್ಲಿ ಇದ್ದುದು ಶೇಖ್‌ ಮುಜಿಬುರ್‌ ರೆಹಮಾನ್‌ ಅವರ ಅವಾಮಿ ಲೀಗ್‌ ಪಕ್ಷ. ಈಗ ಪ್ರಧಾನಿ ಆಗಿರುವ ಶೇಖ್‌ ಹಸೀನಾ ಇವರ ಮಗಳು. ಹಾಗಾಗಿ ಅವಾಮಿ ಲೀಗ್‌ನ ಬೆಂಬಲಿಗರಿಗೆ ಮಾತ್ರ ಈ ಮೀಸಲಾತಿಯಿಂದ ಲಾಭ ಆಗುತ್ತದೆ ಎನ್ನುವುದು ಪ್ರತಿಪಕ್ಷಗಳ ಆರೋಪ.

Continue Reading

ಕ್ರಿಕೆಟ್

International Cricket Council : ಟಿ20 ವಿಶ್ವಕಪ್ ಆಯೋಜನೆಯಲ್ಲಿ ಐಸಿಸಿಗೆ 167 ಕೋಟಿ ರೂಪಾಯಿ ನಷ್ಟ

ಅಮೆರಿಕದಲ್ಲಿ ಮೊದಲ ಬಾರಿಗೆ ಟಿ20 ವಿಶ್ವಕಪ್ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು ಅತಿ ಹೆಚ್ಚು ಪಂದ್ಯಗಳು ನ್ಯೂಯಾರ್ಕ್ ನಲ್ಲಿ ನಡೆದಿದ್ದು, ಒಟ್ಟು 8 ಪಂದ್ಯಗಳು, ಫ್ಲೋರಿಡಾ ಮತ್ತು ಟೆಕ್ಸಾಸ್ ತಲಾ 4 ಪಂದ್ಯಗಳು ನಡೆದಿವೆ. ಇದರಲ್ಲಿ ಜೂನ್ 9 ರಂದು ನ್ಯೂಯಾರ್ಕ್ ನಲ್ಲಿ ಆಯೋಜಿಸಿದ್ದ ಭಾರತ ಮತ್ತು ಪಾಕಿಸ್ತಾನದ ಪಂದ್ಯದ ಬಳಿಕ 20 ಮಿಲಿಯನ್ ಡಾಲರ್ ನಷ್ಟವಾಗಿದೆ ಎನ್ನಲಾಗಿದೆ. ಈ ಕುರಿತು ಕೊಲಂಬೊದಲ್ಲಿ ಜುಲೈ 19 ರಿಂದ ಪ್ರಾರಂಭವಾಗುವ ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ನ (International Cricket Council) ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಯಲಿದೆ.

VISTARANEWS.COM


on

By

International Cricket Council
Koo

ಬೆಂಗಳೂರು : ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕದಲ್ಲಿ (United States America) 2024ರ ಟಿ20 ವಿಶ್ವಕಪ್ ನ (T20 World cup 2024) ಹಲವಾರು ಪಂದ್ಯಗಳನ್ನು ಆಯೋಜಿಸಿದ ಕಾರಣ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (International Cricket Council) 167 ಕೋಟಿ ರೂ. ನಷ್ಟ ಅನುಭವಿಸಿದೆ. ಜೂನ್ 9 ರಂದು ನ್ಯೂಯಾರ್ಕ್​ನಲ್ಲಿ (New York) ಆಯೋಜಿಸಿದ್ದ ಭಾರತ ಮತ್ತು ಪಾಕಿಸ್ತಾನದ (INDvsPAK) ಪಂದ್ಯದ ಬಳಿಕ 20 ಮಿಲಿಯನ್ ಡಾಲರ್ ನಷ್ಟವಾಗಿದೆ ಎನ್ನಲಾಗಿದೆ.

ಯುಎಸ್ಎ ಒಟ್ಟು 16 ವಿಶ್ವಕಪ್ ಪಂದ್ಯಗಳಿಗೆ ಆತಿಥ್ಯ ವಹಿಸಿದೆ ಮೊದಲ ಬಾರಿಗೆ ಅಮೆರಿಕದಲ್ಲಿ ವಿಶ್ವಕಪ್ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು ಅತಿ ಹೆಚ್ಚು ಪಂದ್ಯಗಳು ನ್ಯೂಯಾರ್ಕ್​​ನಲ್ಲಿ ನಡೆದಿದೆ. ಒಟ್ಟು 8 ಪಂದ್ಯಗಳು, ಫ್ಲೋರಿಡಾ ಮತ್ತು ಟೆಕ್ಸಾಸ್ ತಲಾ 4 ಪಂದ್ಯಗಳು ನಡೆದಿವೆ. ಆದರೆ, ಇದಕ್ಕೆ ವಿನಿಯೋಗ ಮಾಡಿರುವ ದುಡ್ಡು ವಿಶ್ವ ಕಪ್​ ಬಜೆಟ್​ಗಿಂತಲೂ ಹೆಚ್ಚಾಗಿದೆ. ಪ್ರಮುಖವಾಗಿ ತಾತ್ಕಾಲಿಕ ಮೈದಾನ ತಯಾರಿ, ಕ್ರಿಕೆಟ್ ಪಿಚ್ ಇಲ್ಲದ ನ್ಯೂಯಾರ್ಕ್​ನಲ್ಲಿ ಆಯೋಜನೆ ನಷ್ಟಕ್ಕೆ ಕಾರಣವಾಗಿದೆ. ಆಟಗಾರರ ಲಾಜಿಸ್ಟಿಕ್ ವ್ಯವಸ್ಥೆ (ಪ್ರಯಾಣ ಹಾಗೂ ವಸತಿ) ಮೂಲಕವೂ ಹೆಚ್ಚುವರಿ ಹೊರೆಯಾಗಿದೆ ಎನ್ನಲಾಗಿದೆ.

ಕೊಲಂಬೊದಲ್ಲಿ ಜುಲೈ 19ರಿಂದ ಪ್ರಾರಂಭವಾಗುವ ಐಸಿಸಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (AGM) ನಷ್ಟದ ವಿಚಾರವೇ ಪ್ರಮುಖ ವಿಷಯಗಳಲ್ಲಿ ಒಂದಾಗಿದೆ. ವಾರ್ಷಿಕ ಸಾಮಾನ್ಯ ಸಭೆಯ ಒಂಬತ್ತು ಅಂಶಗಳ ಕಾರ್ಯಸೂಚಿಯಲ್ಲಿ ನಷ್ಟದ ವಿವರ ಇಲ್ಲ. ಆದರೆ, ಅದನ್ನೂ ಚರ್ಚಿಸಲಾಗುವುದು ಎನ್ನಲಾಗಿದೆ.

ಐಸಿಸಿಯ ಹೊಸ ಲೆಕ್ಕಪರಿಶೋಧಕರ ನೇಮಕಾತಿಯು ಐಸಿಸಿ ಸದಸ್ಯತ್ವ, ಅಸೋಸಿಯೇಟ್ ಸದಸ್ಯರ ಸಭೆಯ ವರದಿಗಳು ಮತ್ತು ಐಸಿಸಿ ಅಭಿವೃದ್ಧಿ ಪ್ರಶಸ್ತಿಗಳ ಪ್ರಸ್ತುತಿಯ ಚರ್ಚೆಗಳೊಂದಿಗೆ ಕಾರ್ಯಸೂಚಿಯಲ್ಲಿದೆ. ಇನ್ನೊಂದು ಪ್ರಮುಖ ಅಂಶವೆಂದರೆ ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ಪಾಕಿಸ್ತಾನಕ್ಕೆ ಪ್ರಯಾಣಿಸದಿರುವ ಬಗ್ಗೆಯೂ ಐಸಿಸಿ ಚರ್ಚೆ ನಡೆಯಲಿದೆ.

International Cricket Council
International Cricket Council


ಜಯ್ ಶಾ ಅಧ್ಯಕ್ಷರಾಗುತ್ತಾರೆಯೇ?

ಶ್ರೀಲಂಕಾದಲ್ಲಿ ಐಸಿಸಿ ವಾರ್ಷಿಕ ಸಮ್ಮೇಳನ ನಡೆಯುತ್ತಿರುವುದರಿಂದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ನ್ಯೂಜಿಲೆಂಡ್ ನ ಗ್ರೆಗ್ ಬಾರ್ಕ್ಲೇ ಬದಲಿಗೆ ಜಯ್ ಶಾ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾವಾಗ ಏರುತ್ತಾರೆ ಎಂಬುದರ ಕುರಿತು ಊಹಾಪೋಹಗಳು ಎದ್ದಿವೆ.

ಜಯ್ ಶಾ ಅವರ ಭವಿಷ್ಯ ನಿರ್ಣಯ

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಉನ್ನತ ಹುದ್ದೆಗೆ ಶಾ ಅವರ ಆಯ್ಕೆ ವಿಚಾರ ಸಮ್ಮೇಳನದಲ್ಲಿ ನಿರ್ಣಾಯಕ ವಿಷಯವಾಗಿದೆ ಎಂದು ಐಸಿಸಿ ಸದಸ್ಯರೇ ತಿಳಿಸಿದ್ದಾರೆ. ಮಂಡಳಿಯ ನಿಯಮಗಳ ಪ್ರಕಾರ ಬಿಸಿಸಿಐ ಕಾರ್ಯದರ್ಶಿಯಾಗಿ ಜಯ್ ಶಾ ಅವರಿಗೆ ಇನ್ನೂ ಒಂದು ವರ್ಷ ಉಳಿದಿದೆ. ಕಡ್ಡಾಯ ಕೂಲಿಂಗ್-ಆಫ್ ಅವಧಿ ಪ್ರಾರಂಭವಾಗುವ ಮೊದಲು ಅವರ ಅಧಿಕಾರಾವಧಿ 2025ರಲ್ಲಿ ಕೊನೆಗೊಳ್ಳುತ್ತದೆ. ಆದರೂ ಅಮಿತ್​ ಶಾ ಅವರು 2025ರಲ್ಲಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ. ಬಾರ್ಕ್ಲೇ ಅವರ ಎರಡು ವರ್ಷಗಳ ಅವಧಿ ಈ ವರ್ಷ ಕೊನೆಗೊಳ್ಳಲಿದೆ. ಅವರು ಮತ್ತೆ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಳ್ಳುವುದು ಸಾಧ್ಯವಾಗುವುದಿಲ್ಲ.

ಅಧಿಕಾರಾವಧಿ ಬದಲಾಣೆ

ಐಸಿಸಿ ತನ್ನ ಅಧ್ಯಕ್ಷರ ಅಧಿಕಾರಾವಧಿಯನ್ನು ಸರಿಹೊಂದಿಸಬಹುದು ಎನ್ನುವ ಊಹೆಯೂ ಇದೆ. ಪ್ರಸ್ತುತ, ತಲಾ ಎರಡು ವರ್ಷಗಳ ಮೂರು ಅವಧಿಗಳಾಗಿ ರಚಿಸಲಾಗಿದೆ. ಇದನ್ನು ಪ್ರತಿ ಮೂರು ವರ್ಷಗಳ ಎರಡು ಅವಧಿಗಳಿಗೆ ಬದಲಾಯಿಸಲು ಪರಿಗಣಿಸಬಹುದು.

ಇದನ್ನೂ ಓದಿ: India Squad Announcement: ಶ್ರೀಲಂಕಾ ಸರಣಿಗೆ ಮರಳಿದ ಹಿಟ್​ಮ್ಯಾನ್​ ರೋಹಿತ್​!

ಅಧಿಕಾರಾವಧಿ ಬದಲಾವಣೆಯ ಪರಿಣಾಮ

ಬಾರ್ಕ್ಲೇ ಅವರ ಪ್ರಸ್ತುತ ಅವಧಿಯನ್ನು ಮೂರು ವರ್ಷಗಳಿಗೆ ಮಾರ್ಪಡಿಸಿದರೆ ಐಸಿಸಿಯ ಅಧಿಕಾರ ವಹಿಸುವ ಮುನ್ನ ಶಾ ಅವರು ಬಿಸಿಸಿಐ ಕಾರ್ಯದರ್ಶಿಯಾಗಿ ತಮ್ಮ ಅವಧಿಯನ್ನು ಮುಗಿಸಲು ಅನುವು ಮಾಡಿಕೊಟ್ಟಂತಾಗುತ್ತದೆ. ಈ ಸಂದರ್ಭದಲ್ಲಿ ಶಾ ಅವರು 2025 ರಲ್ಲಿ ಐಸಿಸಿ ಅಧ್ಯಕ್ಷ ಸ್ಥಾನವನ್ನು ಪಡೆದುಕೊಳ್ಳಬಹುದು. ಇದು ಬಿಸಿಸಿಐನಿಂದ ಅವರ ಕೂಲಿಂಗ್-ಆಫ್ ಅವಧಿಗೆ ಹೊಂದಿಕೆಯಾಗುತ್ತದೆ. 2028 ರ ವೇಳೆಗೆ ಶಾ ಅವರು ಮತ್ತೆ ಬಿಸಿಸಿಐ ಅಧ್ಯಕ್ಷರಾಗಲು ಮರಳಬಹುದು.

Continue Reading

ಕ್ರೀಡೆ

Karnataka Assembly: ಬಿಜೆಪಿಯಿಂದಲೇ ರಾಹುಲ್​ಗೆ ಶ್ಲಾಘನೆ; ಸದನದಲ್ಲಿ ಅಭಿನಂದನೆಗೆ ನಿರ್ಣಯ

Karnataka Assembly: ದ್ರಾವಿಡ್ ಅವರಿಗೆ “ಭಾರತ ರತ್ನ” ಪ್ರಶಸ್ತಿಯಿಂದ ಗೌರವಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುನೀಲ್ ಗವಾಸ್ಕರ್ ಒತ್ತಾಯಿಸಿದ್ದರು. “ಭಾರತ ಸರಕಾರವು ದ್ರಾವಿಡ್​ಗೆ ಭಾರತ ರತ್ನ ಪ್ರಶಸ್ತಿಯಿಂದ ಗೌರವಿಸಿದರೆ ಅದು ಅವರಿಗೆ ಸಲ್ಲುವ ಸೂಕ್ತ ಗೌರವವಾಗುತ್ತದೆ. ಈ ಗೌರವಕ್ಕೆ ಅವರು ಸಂಪೂರ್ಣವಾಗಿ ಅರ್ಹರಾಗಿದ್ದಾರೆ ಎಂದು ಕೇಳಿದ್ದರು.

VISTARANEWS.COM


on

Karnataka Assembly
Koo

ಬೆಂಗಳೂರು: ಟಿ20 ವಿಶ್ವಕಪ್‌ ವಿಜೇತ ಭಾರತ ತಂಡದ ಕೋಚ್‌, ಕನ್ನಡಿಗ ರಾಹುಲ್‌ ದ್ರಾವಿಡ್‌(Rahul Dravid) ಅವರಿಗೆ ಅಭಿನಂದಿಸುವ ನಿರ್ಣಯವನ್ನು ವಿಧಾನಸಭೆ ತೆಗೆದುಕೊಳ್ಳಬೇಕೆಂದು ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್(S. Suresh Kumar) ಆಗ್ರಹಿಸಿದ್ದಾರೆ. ಇದಕ್ಕೆ ಸ್ಪೀಕರ್‌ ಯು.ಟಿ. ಖಾದರ್‌(U. T. Khader) ಸಹಮತ ವ್ಯಕ್ತಪಡಿಸಿ ಈ ನಿರ್ಣಯವನ್ನು ಅಂಗೀಕರಿಸಿದ್ದಾರೆ.

ಭಾರತ ತಂಡ 17 ವರ್ಷಗಳ ಬಳಿಕ 2ನೇ ಟಿ20 ವಿಶ್ವಕಪ್​ ಗೆಲ್ಲುವಂತಾಗಲು ಕೋಚ್​ ರಾಹುಲ್‌ ದ್ರಾವಿಡ್‌ ಅವರ ತರಬೇತಿ ಹಾಗೂ ಮಾರ್ಗದರ್ಶನವೂ ಮಹತ್ವದ ಪಾತ್ರ ವಹಿಸಿದೆ. ಹೀಗಾಗಿ ಈ ಸದನ ಒಕ್ಕೊರಲಿನಿಂದ ಅವರನ್ನು ಅಭಿನಂದಿಸುವ ನಿರ್ಣಯ ತೆಗೆದುಕೊಳ್ಳಬೇಕು ಎಂದು ಸುರೇಶ್‌ ಕುಮಾರ್‌ ಹೇಳಿದರು. ಇದಕ್ಕೆ ಸಹಮತ ವ್ಯಕ್ತಪಡಿಸಿದ ಸ್ಪೀಕರ್‌ ಯು.ಟಿ. ಖಾದರ್‌, “ಈ ಬಗ್ಗೆ ಈಗಾಗಲೇ ಚರ್ಚಿಸಲಾಗಿದೆ. ದ್ರಾವಿಡ್‌ ಅವರನ್ನು ಅಭಿನಂದಿಸುವ ನಿರ್ಣಯವನ್ನು ತಕ್ಷಣ ಮಂಡಿಸುವುದಕ್ಕೆ ಸೂಚನೆ ನೀಡಲಾಗುವುದು’ ಎಂದರು.

ಕಳೆದ ವಾರ ಬೆಂಗಳೂರಿನ(Bengaluru) ಕ್ರಿಕೆಟ್​ ಅಕಾಡೆಮಿಯ ವಿದ್ಯಾರ್ಥಿಗಳು ಗಾರ್ಡ್‌ ಆಫ್‌ ಹಾನರ್‌ (ಗೌರವ ವಂದನೆ) ಮೂಲಕ(guard of honour) ದ್ರಾವಿಡ್​ಗೆ ಅಭಿನಂದಿಸಿದ್ದರು.

ರಾಹುಲ್​ ದ್ರಾವಿಡ್​ ಅವರು ಎನ್​ಸಿಎ ಕ್ರಿಕೆಟ್​ ಅಕಾಡೆಮಿಗೆ(cricket academy in Bengaluru) ಆಗಮಿಸುತ್ತಿದ್ದಂತೆ ಅಧಿಕಾರಿಗಳು ಮತ್ತು ಇಲ್ಲಿ ಕ್ರಿಕೆಟ್​ ಅಭ್ಯಾಸ ನಡೆಸುತ್ತಿರುವ ವಿದ್ಯಾರ್ಥಿಗಳು ಬ್ಯಾಟ್​ ಎತ್ತಿ ಗಾರ್ಡ್‌ ಆಫ್‌ ಹಾನರ್‌ ಮೂಲಕ ಗೌರವ ಸಲ್ಲಿಸಿದರು. ದ್ರಾವಿಡ್​ ಕೂಡ ಸಂತಸದಿಂದಲೇ ಎಲ್ಲರ ಕೈ ಕುಲುಕಿ ಧನ್ಯವಾದ ತಿಳಿಸಿದ್ದರು.

ದ್ರಾವಿಡ್​ಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಒತ್ತಾಯಿಸಿದ ಗವಾಸ್ಕರ್


ಪ್ರಧಾನ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಅವರಿಗೆ “ಭಾರತ ರತ್ನ” ಪ್ರಶಸ್ತಿಯಿಂದ ಗೌರವಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುನೀಲ್ ಗವಾಸ್ಕರ್ ಒತ್ತಾಯಿಸಿದ್ದರು. “ಭಾರತ ಸರಕಾರವು ದ್ರಾವಿಡ್​ಗೆ ಭಾರತ ರತ್ನ ಪ್ರಶಸ್ತಿಯಿಂದ ಗೌರವಿಸಿದರೆ ಅದು ಅವರಿಗೆ ಸಲ್ಲುವ ಸೂಕ್ತ ಗೌರವವಾಗುತ್ತದೆ. ಈ ಗೌರವಕ್ಕೆ ಅವರು ಸಂಪೂರ್ಣವಾಗಿ ಅರ್ಹರಾಗಿದ್ದಾರೆ ಎಂದು ಕೇಳಿದ್ದರು.

ಇದನ್ನೂ ಓದಿ Rahul Dravid : ತಮಗೆ ನೀಡಿದ 2.5 ಕೋಟಿ ರೂಪಾಯಿ ನಿರಾಕರಿಸಿ ಸಮಾನತೆ ತತ್ವ ಸಾರಿದ ರಾಹುಲ್ ದ್ರಾವಿಡ್​

ದ್ರಾವಿಡ್​ ಆಟಗಾರರಾಗಿ ಮತ್ತು ತಂಡದ ನಾಯಕರಾಗಿ ವಿದೇಶಗಳಲ್ಲಿ ಭಾರತಕ್ಕೆ ಗೆಲುವು ತಂದು ಕೊಟ್ಟಿದ್ದಾರೆ. ವೆಸ್ಟ್ ಇಂಡೀಸ್​ನಲ್ಲಿ ಗೆಲ್ಲುವುದು ಅಸಾಧ್ಯ ಎಂಬ ಕಾಲದಲ್ಲಿ ಅವರು ಭಾರತಕ್ಕೆ ಸರಣಿ ಗೆಲುವನ್ನು ತಂದಿದ್ದಾರೆ. ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿಗಳನ್ನು ಗೆದ್ದಿರುವ ಕೇವಲ ಮೂರು ಭಾರತೀಯ ನಾಯಕರ ಪೈಕಿ ಅವರು ಕೂಡ ಒಬ್ಬರಾಗಿದ್ದಾರೆ. ಈ ಹಿಂದೆ, ಅವರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷರಾಗಿ ಅತ್ಯುತ್ತಮ ಕ್ರಿಕೆಟ್ ಪ್ರತಿಭೆಗಳನ್ನು ಹೊರತಂದಿದ್ದಾರೆ. ಬಳಿಕ ಭಾರತೀಯ ಹಿರಿಯರ ಕ್ರಿಕೆಟ್ ತಂಡದ ಕೋಚ್ ಆಗಿ ಉತ್ತಮ ನಿರ್ವಹಣೆ ನೀಡಿದ್ದಾರೆ ಎಂದು ಗವಾಸ್ಕರ್​ ಬರೆದುಕೊಂಡಿದ್ದಾರೆ.

1996ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ರಾಹುಲ್‌ ದ್ರಾವಿಡ್‌ 2012ರ ವರೆಗೆ ಭಾರತ ತಂಡದ ಪರವಾಗಿ ಆಡಿದ್ದರು. ಆದರೆ ವಿಶ್ವಕಪ್ ಎನ್ನುವುದು ಅವರಿಗೆ ಕನಸಾಗಿತ್ತು. ಈ ಕೊರಗು ಕೂಡ ಅವರಲ್ಲಿತ್ತು. ನಾಯಕನಾಗಿ, ಆಟಗಾರನಾಗಿ ಗೆಲ್ಲಲಾಗದ ವಿಶ್ವಕಪ್‌ ಅನ್ನು ತರಬೇತುದಾರನಾಗಿ ಗಳಿಸಿಕೊಂಡಿದ್ದಾರೆ. ಅದು ಕೂಡ ತಮ್ಮ ಕೊನೆಯ ಮಾರ್ಗದರ್ಶನದಲ್ಲಿ ಎನ್ನುವುದು ವಿಶೇಷ.

2007ರಲ್ಲಿ ವೆಸ್ಟ್​ ಇಂಡೀಸ್​ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ರಾಹುಲ್​ ದ್ರಾವಿಡ್​ ಅವರ ನಾಯಕತ್ವದಲ್ಲಿ ಭಾರತ ಅತ್ಯಂತ ಕಳಪೆ ಪ್ರದರ್ಶನ ತೋರುವ ಮೂಲಕ ಲೀಗ್​ ಹಂತದಿಂದಲೇ ನಿರ್ಗಮಿಸಿತ್ತು. ದುರ್ಬಲ ಬಾಂಗ್ಲಾದೇಶ ವಿರುದ್ದವೂ ಕೂಡ ಗೆಲುವು ಸಾಧಿಸಲು ಸಾಧ್ಯವಾಗ ಅವಮಾನಕ್ಕೆ ಸಿಲುಕಿತ್ತು. ಅಂದು ಅವಮಾನ ಎದುರಿಸಿದ ವಿಂಡೀಸ್​ ನೆಲದಲ್ಲೇ ಇದೀಗ ದ್ರಾವಿಡ್​ ತರಬೇತುದಾರನಾಗಿ ವಿಶ್ವಕಪ್​ ಕಪ್​ ಗೆದ್ದು ಸಂಭ್ರಮಿಸಿ ತಮ್ಮ ಎಲ್ಲ ಹಿಂದಿನ ನೋವನ್ನು ಮರೆತಿದ್ದಾರೆ. ಸದ್ಯ ಕೋಚ್​ ಹುದ್ದೆಯಿಂದ ಕೆಳಗಿಳಿದಿರುವ ದ್ರಾವಿಡ್​ ತಮ್ಮ ಇಬ್ಬರು ಮಕ್ಕಳ ಕ್ರಿಕೆಟ್​ ಭವಿಷ್ಯ ರೂಪಿಸುವಲ್ಲಿ ಹೆಚ್ಚಿನ ಕಾಳಜಿ ವಹಿಸಿಕೊಳ್ಳಬಹುದು.

Continue Reading

ಕ್ರೀಡೆ

T20 World Cup 2026: ಆತಿಥೇಯ ಭಾರತಕ್ಕೆ ಬೆದರಿಕೆಯೊಡ್ಡಿದ ಪಾಕಿಸ್ತಾನ ಕ್ರಿಕೆಟ್​ ಮಂಡಳಿ​

T20 World Cup 2026: 2026ರ ಟಿ20 ವಿಶ್ವಕಪ್​ ಟೂರ್ನಿಗೆ ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯ ವಹಿಸಿಕೊಂಡಿದೆ. ಭಾರತ ತಂಡ ಪಾಕ್​ ನೆಲದಲ್ಲಿ ಚಾಂಪಿಯನ್ಸ್​ ಟ್ರೋಫಿ ಆಡದೇ ಹೋದರೆ, ಭಾರತದಲ್ಲಿ ನಡೆಯುವ ಟಿ20 ವಿಶ್ವಕಪ್​ ಪಂದ್ಯವನ್ನು ಆಡಲು ಪಾಕ್ ತಂಡ ಸಿದ್ಧವಿಲ್ಲ ಎಂದು ಪಿಸಿಬಿ ಹೇಳಿರುವುದಾಗಿ ವರದಿಯಾಗಿದೆ.

VISTARANEWS.COM


on

T20 World Cup 2026: Pakistan to boycott 2026 T20 World Cup in India
Koo

ನವದೆಹಲಿ: ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯುವ ಚಾಂಪಿಯನ್ಸ್​ ಟ್ರೋಫಿಯಲ್ಲಿ(Champions Trophy 2025) ಆಡಲು ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲಿದೆಯಾ? ಅಥವಾ ಟೂರ್ನಿಯಿಂದ ಹಿಂದೆ ಸರಿಯಲಿದೆಯಾ? ಹೀಗೆ ಕಳೆದ ಹಲವು ದಿನಗಳಿಂದ ಚರ್ಚೆಗಳು ನಡೆಯುತ್ತಿವೆ. ಟೂರ್ನಿಯನ್ನು ಹೈಬ್ರೀಡ್​ ಮಾದರೊಯಲ್ಲಿ ನಡೆಸುವಂತೆ ಬಿಸಿಸಿಐ, ಐಸಿಸಿಗೆ ಒತ್ತಡ ಹಾಕುತ್ತಿದೆ ಎಂದು ಕೂಡ ವರದಿಯಾಗಿತ್ತು. ಇದೀಗ ಭಾರತ ಪಾಕ್​ಗೆ ತೆರಳದೇ ಇದ್ದರೆ, 2026ರಲ್ಲಿ(T20 World Cup 2026) ನಡೆಯುವ ಟಿ20 ವಿಶ್ವಕಪ್​ ಟೂರ್ನಿಯಿಂದ ಪಾಕ್​ ಹಿಂದೆ ಸರಿಯಲಿದೆ(Pakistan to boycott 2026 T20 World Cup) ಎಂದು ವರದಿಯಾಗಿದೆ.

2026ರ ಟಿ20 ವಿಶ್ವಕಪ್​ ಟೂರ್ನಿಗೆ ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯ ವಹಿಸಿಕೊಂಡಿದೆ. ಭಾರತ ತಂಡ ಪಾಕ್​ ನೆಲದಲ್ಲಿ ಚಾಂಪಿಯನ್ಸ್​ ಟ್ರೋಫಿ ಆಡದೇ ಹೋದರೆ, ಭಾರತದಲ್ಲಿ ನಡೆಯುವ ಟಿ20 ವಿಶ್ವಕಪ್​ ಪಂದ್ಯವನ್ನು ಆಡಲು ಪಾಕ್ ತಂಡ ಸಿದ್ಧವಿಲ್ಲ ಎಂದು ಪಿಸಿಬಿ ಹೇಳಿರುವುದಾಗಿ ವರದಿಯಾಗಿದೆ.

ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಭಾರತ ತಂಡ ಪಾಕ್​ಗೆ ಹೋಗುವುದಿಲ್ಲ ಎಂಬ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು ಬಿಸಿಸಿಐ ಅಥವಾ ಸರ್ಕಾರ ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

‘ಮುಂದಿನ ವರ್ಷ ನಡೆಯುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡ ಭಾಗವಹಿಸುವುದಿಲ್ಲ ಎಂದು ಕೆಲವು ವರದಿಗಳನ್ನು ನೋಡಿದ್ದೇನೆ. ಜತೆಗೆ ಭಾರತದ ಪಂದ್ಯಗಳನ್ನು ತಟಸ್ಥ ಸ್ಥಳಗಳಲ್ಲಿ ನಡೆಸುವಂತೆ ಬಿಸಿಸಿಐ, ಐಸಿಸಿ ಬಳಿ ಕೇಳಿಕೊಂಡಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಆದರೆ, ಬಿಸಿಸಿಐ ಇನ್ನೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ’ ಎಂದು ಹೇಳುವ ಮೂಲಕ ಶುಕ್ಲಾ ಈ ವಿಷಯಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ Champions Trophy 2025: ಚಾಂಪಿಯನ್ಸ್‌ ಟ್ರೋಫಿಯಿಂದ ಭಾರತ ಹಿಂದೆ ಸರಿದರೆ ಯಾವ ತಂಡಕ್ಕೆ ಸಿಗಲಿದೆ ಅವಕಾಶ?

ನವೆಂಬರ್ 2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ 150 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ ಭಾರತವು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಆಡಿಲ್ಲ. ಜೂನ್-ಜುಲೈ 2008 ರಲ್ಲಿ ಏಷ್ಯಾ ಕಪ್ ಸಮಯದಲ್ಲಿ ಭಾರತೀಯ ಕ್ರಿಕೆಟ್ ತಂಡವು ಕೊನೆಯ ಬಾರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸಿತ್ತು. ಭಾರತ ತಂಡವು ಪ್ರಯಾಣಿಸಲು ನಿರಾಕರಿಸಿದ ನಂತರ, ಕಳೆದ ವರ್ಷದ ಏಷ್ಯಾಕಪ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಯಿತ್ತು. ಕೇವಲ ನಾಲ್ಕು ಪಂದ್ಯಗಳನ್ನು ಪಾಕಿಸ್ತಾನದಲ್ಲಿ ನಡೆಸಿ ಉಳಿದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದಿದ್ದವು. ಭಾರತ ಎಲ್ಲ ಪಂದ್ಯಗಳನ್ನು ಲಂಕಾದಲ್ಲಿ ಆಡಿತ್ತು.

ಚಾಂಪಿಯನ್ಸ್​ ಟ್ರೋಫಿಯ ಯಶಸ್ಸಿಗೆ ಪಿಸಿಬಿ ಬದ್ಧವಾಗಿದ್ದರೂ, ಭದ್ರತಾ ಕಾರಣಗಳಿಂದಾಗಿ ಭಾರತವು ಭಾಗವಹಿಸದಿದ್ದರೆ, ಆಗ ಏಷ್ಯಾ ಕಪ್​ನಂತೆ​ ಹೈಬ್ರಿಡ್ ಮಾದರಿಯ ಮೊರೆ ಹೋಗಬೇಕಿದೆ. ಆದರೆ ಸ್ವತಂತ್ರ ಏಜೆನ್ಸಿಯೊಂದಿಗೆ ಸಮಾಲೋಚಿಸಿ ಸಮಗ್ರ ಭದ್ರತಾ ಮೌಲ್ಯಮಾಪನವನ್ನು ನಡೆಸಿ ಪಾಕಿಸ್ತಾನದಲ್ಲಿಯೇ ಟೂರ್ನಿ ನಡೆಸಿ ಎಂದು ಪಿಸಿಬಿ ಹೇಳುವ ಸಾಧ್ಯತೆಗಳಿವೆ. ಐಸಿಸಿ ಈ ವಿನಂತಿಯನ್ನು ಒಪ್ಪಿಕೊಂಡಿದೆ ಎಂದು ಇತ್ತೀಚಿನ ವರದಿಗಳು ಹೇಳಿವೆ. ಭಾರತ ಪಾಕ್​ನಲ್ಲಿ ಆಡಲಿದೆಯಾ ಅಥವಾ ಬಿಸಿಸಿಐ ಒತ್ತಾಯಕ್ಕೆ ಮಣಿದು ಟೂರ್ನಿ ಪಾಕ್​ ನಿಂದ ಶಿಫ್ಟ್​ ಆಗಲಿದೆಯಾ ಎನ್ನುವುದನ್ನು ಕಾದು ನೋಡಬೇಕಿದೆ.

Continue Reading
Advertisement
DK Shivakumar
ಕರ್ನಾಟಕ12 mins ago

Brand Bengaluru: ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

Drone Prathap Eye surgery for an old woman with her own money
ಬಿಗ್ ಬಾಸ್17 mins ago

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

ದೇಶ19 mins ago

Chandipura Virus: ಗುಜರಾತ್‌ನಲ್ಲಿ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್‌ಗೆ 48 ಬಲಿ; 39 ಮಂದಿಗೆ ಚಾಂದಿಪುರ ವೈರಸ್ ದೃಢ

Ricky Ponting
ಕ್ರೀಡೆ21 mins ago

Ricky Ponting : ಡೆಲ್ಲಿ ಕ್ಯಾಪಿಟಲ್ಸ್​ ಕೋಚಿಂಗ್ ಹುದ್ದೆಯಿಂದ ಪಾಂಟಿಂಗ್ ನಿರ್ಗಮಿಸಿದ್ದು ಯಾಕೆ? ಕಾರಣ ಕೊಟ್ಟ ಮಾಲೀಕ ಪಾರ್ಥ್​ ಜಿಂದಾಲ್​

karnataka Rain
ಮಳೆ22 mins ago

Karnataka Rain : ಭಾರಿ ಗಾಳಿ-ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೆ ಸಾವು

PARIS 2024 OLYMPICS
ಕ್ರೀಡೆ40 mins ago

PARIS 2024 OLYMPICS: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಸೋಲು

Road Accident
ದೇಶ46 mins ago

Road Accident: ಕಣಿವೆಗೆ ಉರುಳಿದ ಕಾರು; ಐವರು ಮಕ್ಕಳು ಸೇರಿ 8 ಮಂದಿ ಸಾವು

Ashwini Puneeth Rajkumar launched Appu Cup season 2
ಕ್ರಿಕೆಟ್51 mins ago

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Money Guide
ಮನಿ-ಗೈಡ್1 hour ago

Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

Womens Asia Cup Final
ಕ್ರೀಡೆ2 hours ago

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ3 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ4 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ22 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ23 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ24 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌