Site icon Vistara News

T20 World Cup 2024: ವಿವಾದಾತ್ಮಕ ಕ್ಯಾಚ್​ನ ಮತ್ತೊಂದು ವಿಡಿಯೊ ವೈರಲ್​

T20 World Cup 2024

T20 World Cup 2024: Did Suryakumar Yadav touch the boundary rope in T20 World Cup final catch? New video clears air

ಬಾರ್ಬಡೋಸ್​​: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ವಿಶ್ವಕಪ್(T20 World Cup 2024)​ ಫೈನಲ್​ ಪಂದ್ಯದಲ್ಲಿ ಸೂರ್ಯಕುಮಾರ್​ ಯಾದವ್ (Suryakumar Yadav Catch)​ ಅವರು ಹಿಡಿದ ಕ್ಯಾಚ್​ ಬಗೆಗಿನ ಚರ್ಚೆಗಳು ಜೋರಾಗಿ ನಡೆಯುತ್ತಿರುವ ಬೆನ್ನಲ್ಲೇ ಐಸಿಸಿ(ICC) ಈ ಕ್ಯಾಚ್​ನ ಮತ್ತೊಂದು ವಿಡಿಯೊವನ್ನು ಹಂಚಿಕೊಂಡಿದೆ.

ಹೌದು, ಸೂರ್ಯಕುಮಾರ್​ ಅವರು ಕ್ಯಾಚ್​ ಹಿಡಿದ ವಿಡಿಯೊದಲ್ಲಿ ಬೌಂಡರಿ ಲೈನ್​ಗೆ ಬಳಸುವ ಕುಶನ್ ಹಿಂದಕ್ಕೆ ಜಾರಿದ ಮಾರ್ಕ್​ ಕಂಡುಬಂದಿತ್ತು. ಹೀಗಾಗಿ ಇದು ಚರ್ಚೆಗೆ ಗ್ರಾಸವಾಗಲು ಕಾರಣ. ಭಾರತದ ಬೌಲಿಂಗ್ ವೇಳೆ ಬೇಕಂತಲೇ ಕುಶನ್ ಹಿಂದಕ್ಕೆ ದೂಡಲಾಗಿತ್ತು, ಸೂರ್ಯಕುಮಾರ್(Suryakumar Yadav) ಅವರು ಬೌಂಡರಿ ಗೆರೆಯನ್ನು ತುಳಿದಿದ್ದರೂ ಕೂಡ ಔಟ್​ ನೀಡಲಾಗಿದೆ ಎಂದೆಲ್ಲ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು.

ಸ್ಪಷ್ಟನೇ ನೀಡಿದ್ದ ಸಂಖ್ಯಾಶಾಸ್ತ್ರಜ್ಞ


ವಿವಾದಾತ್ಮಕ ಕ್ಯಾಚ್​ ಬಗೆಗಿನ ಎಲ್ಲ ಅನುಮಾನಗಳಿಗೆ ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ ರಜನೀಶ್ ಗುಪ್ತಾ ಎಂಬವರು ಸ್ಪಷ್ಟನೆ ನೀಡಿದ್ದರು. “ನಾನು ಅಂದು ಮೈದಾನದ ಟಿವಿ ಕಾಮೆಂಟರಿ ಬಾಕ್ಸ್‌ನಲ್ಲಿದ್ದೆ. ಬಿಳಿ ಗೆರೆಯು ಬೌಂಡರಿಯಾಗಿರಲಿಲ್ಲ ಎಂದು ನಾನು ಹೇಳಬಲ್ಲೆ. ಏಕೆಂದರೆ ಬೌಂಡರಿ ರೋಪ್ ವೆಡ್ಜ್ ಆ ಬಿಳಿ ಗೆರೆಯ ಹಿಂದೆ ಇತ್ತು. ಪಂದ್ಯದ ಆರಂಭದಿಂದಲೂ ಹಾಗೆಯೇ ಇತ್ತು. ಪಿಚ್ ಅನ್ನು ಬದಲಾಯಿಸಿದಾಗ, ಬೌಂಡರಿಗಳನ್ನು ಸರಿಹೊಂದಿಸಲಾಗುತ್ತದೆ. ಹೀಗಾಗಿ ಈ ಬಗ್ಗೆ ಚರ್ಚೆ ನಡೆಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳಿದ್ದರು. ಆದರೂ ಕೂಡ ಚರ್ಚೆಗಳು ನಡೆಯಲುತ್ತಲೇ ಇದೆ. ಇದೇ ಕಾರಣದಿಂದ ಐಸಿಸಿ ಈ ಕ್ಯಾಚ್ನ ಮತ್ತೊಂದು ವಿಡಿಯೊ ಹಂಚಿಕೊಂಡಿದೆ.

ಇದನ್ನೂ ಓದಿ Suryakumar Yadav : ವಿಶ್ವ ಕಪ್​ ಟ್ರೋಫಿಯನ್ನು ಬೆಡ್​ ಮಧ್ಯದಲ್ಲಿಟ್ಟು ನಿದ್ದೆ ಮಾಡಿದ ಸೂರ್ಯಕುಮಾರ್ ದಂಪತಿ!

ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್​ 29, ಶನಿವಾರ ರಾತ್ರಿ ನಡೆದಿದ್ದ ಅತ್ಯಂತ ರೋಚಕ ಟಿ20 ವಿಶ್ವಕಪ್​ ಫೈನಲ್ ಪಂದ್ಯದಲ್ಲಿ ಟೀಮ್​ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್​ ಅಂತರದ ಗೆಲುವು ಸಾಧಿಸಿ 13 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಬರವನ್ನು ನೀಗಿಸಿತ್ತು.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಮಿಲ್ಲರ್​ ಔಟ್​ ಆಗುತ್ತಿದ್ದಂತೆ ಭಾರತದ ಗೆಲುವು ಕೂಡ ಖಚಿತಗೊಂಡಿತು.

ತವರಿಗೆ ಬಂದಿಳಿದ ಟೀಮ್‌ ಇಂಡಿಯಾ

ರೋಹಿತ್‌ ಶರ್ಮಾ (Rohit Sharmaನೇತೃತ್ವದ ಭಾರತದ ಕ್ರಿಕೆಟ್‌ ತಂಡವು ಭಾರತಕ್ಕೆ ಆಗಮಿಸಿದೆ. ಏರ್‌ ಇಂಡಿಯಾ ಏರ್‌ಲೈನ್ಸ್‌ನ ವಿಶೇಷ ಚಾರ್ಟರ್ಡ್‌ ವಿಮಾನದಲ್ಲಿ ಭಾರತ ತಂಡದ (Team India) ಆಟಗಾರರು ಇಂದು(ಗುರುವಾರ) ದೆಹಲಿಗೆ ಆಗಮಿಸಿದ್ದಾರೆ. ಪ್ರತಿಕೂಲ ಹವಾಮಾನದ ಕಾರಣದಿಂದ ಆಟಗಾರರು ಕೆಲವು ದಿನ ಬಾರ್ಬಡಾಸ್​ನಲ್ಲೇ ಸಿಲುಕಿ ಹಾಕಿಕೊಂಡಿದ್ದರು. ಇದೀಗ ತವರಿಗೆ ಆಗಮಿಸಿದ ವಿಶ್ವಕಪ್‌ ಹೀರೋಗಳಿಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ.

ಸಹಾಯಕ ಸಿಬ್ಬಂದಿ, ಆಟಗಾರರ ಕುಟುಂಬ ಸದಸ್ಯರು, ಕ್ರಿಕೆಟ್‌ ಮಂಡಳಿಯ ಅಧಿಕಾರಿಗಳು ಮತ್ತು ಪತ್ರಕರ್ತರೊಂದಿಗೆ ಭಾರತೀಯ ತಂಡದ ಆಟಗಾರರು ಗ್ರಾಂಟ್ಲಿ ಆಡಮ್ಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬುಧವಾರ ವಿಶೇಷ ಚಾರ್ಟರ್ ವಿಮಾನ ಏರಿದ್ದರು. ಏರ್ ಇಂಡಿಯಾ ಚಾಂಪಿಯನ್ಸ್ 24 ವರ್ಲ್ಡ್‌ ಕಪ್‌ (Air India Champions 24 World Cup) ಎನ್ನುವ ಹೆಸರಿನ ವಿಮಾನವು ಬೆಳಿಗ್ಗೆ 6:20ರ ಸುಮಾರಿಗೆ ದೆಹಲಿಯ ಇಂದಿರಾ ಗಾಂಧಿ ಇಂಟರ್​ನ್ಯಾಷನ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.

Exit mobile version