Site icon Vistara News

T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

T20 World Cup 2024 Super 8

T20 World Cup 2024 Super 8: Schedule of Super-8 matches announced; Afghanistan is India's first opponent

ನ್ಯೂಯಾರ್ಕ್​: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ಸಾಗುತ್ತಿರುವ ಟಿ20 ವಿಶ್ವಕಪ್(T20 World Cup 2024) ಟೂರ್ನಿಯ ಲೀಗ್​ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಹಲವು ತಂಡಗಳು ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿದೆ. ಸದ್ಯ 6 ತಂಡಗಳು ಸೂಪರ್​ 8 ಹಂತಕ್ಕೆ ಪ್ರವೇಶ ಪಡೆದಿವೆ. ಇನ್ನುಳಿದ 4 ಸ್ಥಾನಗಳಿಗೆ ಮೂರು ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದಕ್ಕೂ ಮುನ್ನವೇ ಐಸಿಸಿ ಸೂಪರ್​-8 ಹಂತದ ವೇಳಾಪಟ್ಟಿಯನ್ನು(T20 World Cup 2024 Super 8) ಪ್ರಕಟಿಸಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಅಫಘಾನಿಸ್ತಾನ ವಿರುದ್ಧ ಆಡಲಿದೆ.

ಭಾರತ, ಆಸ್ಟ್ರೇಲಿಯಾ, ಅಫಘಾನಿಸ್ತಾನ, ಅಮೆರಿಕ, ದಕ್ಷಿಣ ಆಫ್ರಿಕಾ, ವೆಸ್ಟ್​ ಇಂಡೀಸ್​ ಸೂಪರ್​-8ಗೆ ಪ್ರವೇಶ ಪಡೆದ ತಂಡಗಳು. ಇನ್ನುಳಿದ 2 ಸ್ಥಾನಕ್ಕೆ ಸ್ಕಾಟ್ಲೆಂಡ್​, ಇಂಗ್ಲೆಂಡ್​, ಬಾಂಗ್ಲಾದೇಶ ಮತ್ತು ನೆದರ್ಲೆಂಡ್ಸ್​ ವಿರುದ್ಧ ತೀವ್ರ ಪೈಪೋಟಿ ಏರ್ಪಟ್ಟಿದೆ.

ಸೂಪರ್​-8ನಲ್ಲಿ ಭಾರತ, ಆಸ್ಟ್ರೇಲಿಯಾ, ಅಫಘಾನಿಸ್ತಾನ ಮತ್ತು ‘ಡಿ’ ಗುಂಪಿನಲ್ಲಿ 2ನೇ ಸ್ಥಾನಿಯಾಗುವ ತಂಡ ಕಾದಾಟ ನಡೆಸಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಹೈವೋಲ್ಟೇಜ್​ ಪಂದ್ಯ ಜೂನ್​ 24 ಭಾನುವಾರದಂದು ನಡೆಯಲಿದೆ. ಸೂಪರ್​-8 ಪಂದ್ಯಗಳು ಜೂನ್​ 19ರಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಆತಿಥೇಯ ಅಮೆರಿಕ ಮತ್ತು ದಕ್ಷಿಣ ಆಫ್ರಿಕಾ ಸೆಣಸಾಟ ನಡೆಸಲಿವೆ. ಟೀಮ್​ ಇಂಡಿಯಾದ ಎಲ್ಲ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪ್ರಸಾರಗೊಳ್ಳಲಿದೆ.

ಭಾರತದ ಸೂಪರ್​-8 ಪಂದ್ಯದ ವೇಳಾಪಟ್ಟಿ

ಎದುರಾಳಿದಿನಾಂಕತಾಣಪ್ರಸಾರ
ಭಾರತ-ಅಫಘಾನಿಸ್ತಾನಜೂನ್​ 20ಬಾರ್ಬಡೋಸ್ರಾತ್ರಿ 8ಕ್ಕೆ
ಭಾರತ-ಡಿ 2(ಡಿ ಗುಂಪಿನ 2ನೇ ಸ್ಥಾನಿ)ಜೂನ್​ 22ಆಂಟಿಗುವಾರಾತ್ರಿ 8ಕ್ಕೆ
ಭಾರತ-ಆಸ್ಟ್ರೇಲಿಯಾಜೂನ್​ 24ಸೇಂಟ್ ಲೂಸಿಯಾರಾತ್ರಿ 8ಕ್ಕೆ

ಭಾರತಕ್ಕೆ ಇಂದು ಕೊನೆಯ ಲೀಗ್​ ಪಂದ್ಯ


ಟೀಮ್​ ಇಂಡಿಯಾ(IND vs CAN) ತನ್ನ ಅಂತಿಮ ಲೀಗ್ ಪಂದ್ಯವನ್ನಾಡಲು ಸಜ್ಜಾಗಿದೆ. ಇಂದು(ಶನಿವಾರ) ನಡೆಯುವ ಪಂದ್ಯದಲ್ಲಿ ಕೆನಾಡ ವಿರುದ್ಧ ಕಣಕ್ಕಿಳಿಯಲಿದೆ. ಈಗಾಗಲೇ ಸೂಪರ್​-8ಗೆ ಪ್ರವೇಶ ಪಡೆದಿರುವ ಕಾರಣ ರೋಹಿತ್​ ಪಡೆಗೆ ಇದೊಂದು ​ಔಪಚಾರಿಕ ಪಂದ್ಯ ಎಂದರೂ ತಪ್ಪಾಗಲಾರದು. ಆದರೆ ಈ ಪಂದ್ಯ ನಡೆಯುವುದೇ ಅನುಮಾನ ಎನ್ನಲಾಗಿದೆ.

ಇದೇ ಮೈದಾನದಲ್ಲಿ ಶುಕ್ರವಾರ ನಡೆಯಬೇಕಿದ್ದ 2 ಪಂದ್ಯಗಳು ಕೂಡ ಒಂದು ಎಸೆತ ಕಾಣದೆ ರದ್ದಾಗಿತ್ತು. ಇಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿದ್ದು. ಇಂದು ಕೂಡ ಭಾರೀ ಮಳೆ(IND vs CAN weather report) ಬೀಳುವ ಸಾಧ್ಯತೆ ಇದೆ. 2 ದಿನಗಳ ಹಿಂದೆಯೇ ಹವಾಮಾನ ಇಲಾಖೆ ಈ ಕುರಿತು ಎಚ್ಚರಿಕೆ ನೀಡಿತ್ತು. ಒಂದೊಮ್ಮೆ ಪಂದ್ಯ ನಡೆದರೂ ಕೂಡ ಭಾರತ ಈ ಪಂದ್ಯಕ್ಕೆ ತನ್ನ ಆಡುವ ಬಳಗದಲ್ಲಿ ಹಲವು ಮಹತ್ವದ ಬದಲಾವಣೆ ಮಾಡುವುದು ನಿಶ್ಚಿತ.

Exit mobile version