ಮುಂಬಯಿ: ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ಜೂನ್ 1 ರಿಂದ ಆರಂಭಗೊಳ್ಳಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ(T20 World Cup 2024) ತಂಡ ಪ್ರಕಟಿಸಲು ಮೇ 1 ಅಂತಿಮ ದಿನವಾಗಿದೆ. ಹೀಗಾಗಿ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ 20 ದೇಶಗಳು ಬಲಿಷ್ಠ ತಂಡವನ್ನು ರಚಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ. ಭಾರತ ತಂಡ(t20 world cup 2024 india squad) ಏಪ್ರಿಲ್ 28 ಅಥವಾ 29ರಂದು ಪ್ರಕಟಗೊಳ್ಳಲಿದೆ ಎಂದು ಕ್ರಿಕ್ಇನ್ಫೋ ವರದಿ ಮಾಡಿದೆ.
ಏಪ್ರಿಲ್ 27ರಂದು ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಐಪಿಎಲ್ ಪಂದ್ಯ ನಡೆಯಲಿದೆ. ಇದೇ ಸಂದರ್ಭದಲ್ಲಿ ಸಭೆ ನಡೆಯಲಿದ್ದು, ಬಳಿಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ ಮತ್ತು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಜತೆಗೂಡಿ ತಂಡವನ್ನು ಘೋಷಣೆ ಮಾಡಲಿದ್ದಾರೆ ಎಂದು ಕ್ರಿಕ್ಇನ್ಫೋ ತಿಳಿಸಿದೆ.
Team India's T20 World Cup selection meeting is expected to be held in New Delhi around April 28-29. Captain Rohit Sharma will be present in the meeting. (Cricbuzz). pic.twitter.com/NwamrJ93Zn
— Vishal. (@SPORTYVISHAL) April 23, 2024
ಕಳೆದ ವಾರ ಕೆಲ ಮಾಧ್ಯಗಳಲ್ಲಿ ವರದಿಯಾದ ಪ್ರಕಾರ ಯಾವುದೇ ಹೊಸ ಮುಖಗಳಿಗೆ ಮಣೆ ಹಾಕದಿರಲು ಬಿಸಿಸಿಐ ನಿರ್ಧರಿಸಿದೆ ಎಂದು ಹೇಳಲಾಗಿತ್ತು. ಹೀಗಾಗಿ ಹಿರಿಯ ಆಟಗಾರರಾದ ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್ ಮೊಹಮ್ಮದ್ ಸಿರಾಜ್ ಜತೆ ಯುವ ಆಟಗಾರರಾದ ಅರ್ಶ್ದೀಪ್ ಸಿಂಗ್, ರಿಂಕು ಸಿಂಗ್ ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ.
ಸದ್ಯಕ್ಕೆ ಆರಂಭಿಕ ಸ್ಥಾನಕ್ಕೆ ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್ ಮತ್ತು ಅಭಿಷೇಕ್ ಶರ್ಮ, ಆಲ್ರೌಂಡರ್ ಕೋಟಾದಲ್ಲಿ ಶಿವಂ ದುಬೆ ಮತ್ತು ಹಾರ್ದಿಕ್ ಪಾಂಡ್ಯ ನಡುವೆ ತೀವ್ರ ಪೈಪೋಟಿ ಇದೆ. ರೋಹಿತ್ ಶರ್ಮ ಜತೆ ಕೊಹ್ಲಿ ಇನಿಂಗ್ಸ್ ಆರಂಭಿಸಲಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ.
ರಿಷಭ್ ಪಂತ್ ಅವರು ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿದ್ದರೆ, 2ನೇ ಕೀಪರ್ ಆಯ್ಕೆಗೆ ಒಟ್ಟು 4 ಮಂದಿ ಆಟಗಾರರ ನಡುವೆ ತೀವ್ರ ಸ್ಪರ್ಧೆ ಇದೆ. ರಾಹುಲ್, ಜಿತೇಶ್ ಶರ್ಮ, ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್ ಇವರಲ್ಲಿ ಒಬ್ಬರು ಆಯ್ಕೆಯಾಗಬಹುದು. ಈ ಬಾರಿಯ ಐಪಿಎಲ್‌ನಲ್ಲಿ ಶರವೇಗದ ಎಸೆತಗಳ ಮೂಲಕ ಭಾರೀ ಸಂಚಲನ ಮೂಡಿಸಿದ ಲಕ್ನೋ ತಂಡದ ಮಾಯಾಂಕ್ ಯಾದವ್ ಮತ್ತು ಹರ್ಷಿತ್ ರಾಣಾ ಮೀಸಲು ಬೌಲರ್ಗಳಾಗಿ ತಂಡದೊಂದಿಗೆ ಪ್ರಯಾಣಿಸಬಹುದು. ರವಿಚಂದ್ರನ್ ಅಶ್ವಿನ್ ಮತ್ತು ಶ್ರೇಯಸ್ ಅಯ್ಯರ್ಗೆ ಸ್ಥಾನ ಸಿಗುವುದು ಬಹುತೇಕ ಡೌಟ್ ಎನ್ನಲಾಗಿದೆ.
ಈಗಾಗಲೇ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್ 9 ರಂದು ಪಾಕ್ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ.