Site icon Vistara News

T20 World Cup Final : ಟಾಸ್​ ಗೆದ್ದವರು ಮ್ಯಾಚ್​ ಗೆಲ್ತಾರೆ; ವಿಶ್ವ ಕಪ್​ ಫೈನಲ್ ಪಂದ್ಯದ ಇತಿಹಾಸ ಹೀಗಿದೆ

T20 World Cup final

ಬೆಂಗಳೂರು: ಬಾರ್ಬಡೋಸ್​​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ 20 ವಿಶ್ವಕಪ್ 2024 ರ ಫೈನಲ್​ನಲ್ಲಿ ಟಾಸ್ ಗೆದ್ದ ಮೆನ್ ಇನ್ ಬ್ಲೂ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಇದ್ದು ಈ ಆವೃತ್ತಿಯ ಜಿದ್ದಾಜಿದ್ದಿನ ಪಂದ್ಯವಾಗಿದ್ದು ಇತ್ತಂಡಗಳು ಪ್ರಶಸ್ತಿಗಾಗಿ ಹಪಾಹಪಿಸುತ್ತಿವೆ. ಅಂತೆಯೇ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ತೆಗೆದುಕೊಂಡು ಅದೃಷ್ಟ ಪರೀಕ್ಷೆಗೆ ಹೊರಟಿದೆ.

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧದ ಕಳೆದ ಎರಡು ಪಂದ್ಯಗಳಲ್ಲಿ ರೋಹಿತ್ ಶರ್ಮಾ ಟಾಸ್ ಗೆಲ್ಲಲು ವಿಫಲಗೊಂಡಿದ್ದರು. ಆದರೆ ಈ ಬಾರಿ ಅದೃಷ್ಟ ಮೆನ್ ಇನ್ ಬ್ಲೂ ಪರವಾಗಿದೆ. ಪಿಚ್ ತೇವಗೊಂಡಂತೆ ಕಾಣುತ್ತದೆ, ಅದಕ್ಕಾಗಿಯೇ ಅವರು ಮೊದಲು ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ. ಇನ್ನು ಆದರೆ ಟಾಸ್ ಗೆದ್ದಿರುವುದು ಭಾರತೀಯ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿಯಾಗಲು ಮತ್ತೊಂದು ಕಾರಣವಿದೆ. 2010 ರಿಂದ ಟಿ 20 ವಿಶ್ವಕಪ್ ಫೈನಲ್​ನಲ್ಲಿ ಟಾಸ್ ಗೆದ್ದ ತಂಡವು ಟ್ರೋಫಿಯನ್ನು ಗೆದ್ದಿದೆ. 2009ರ ಆವೃತ್ತಿಯಲ್ಲಿ ಟಾಸ್ ಗೆದ್ದ ಶ್ರೀಲಂಕಾ ಫೈನಲ್​ನಲ್ಲಿ ಸೋತಿತ್ತು. 2007 ರ ಟಿ 20 ವಿಶ್ವಕಪ್ ಫೈನಲ್​ನಲ್ಲಿ ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದ ಭಾರತ ಆ ಪಂದ್ಯವನ್ನು ಗೆದ್ದಿತು.

ಟಾಸ್ ಗೆದ್ದ ನಂತರ ಟಿ 20 ವಿಶ್ವಕಪ್ ಫೈನಲ್ ಗೆದ್ದ ತಂಡಗಳ ಸಂಪೂರ್ಣ ಪಟ್ಟಿ ಇಲ್ಲಿದೆ

ಫೈನಲ್ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ ಈ ರೀತಿ ಇದೆ

ರೋಹಿತ್ ಶರ್ಮಾ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಷ್ದೀಪ್ ಸಿಂಗ್.

ಇದನ್ನು ಓದಿ: T20 World Cup 2024 : ಫೈನಲ್ ಪಂದ್ಯ ಆರಂಭಕ್ಕೆ ಮೊದಲೇ ವಿಜೇತರನ್ನು ಘೋಷಿಸಿದ ಟಾಮ್ ಮೂಡಿ

ಫೈನಲ್​ ಪಂದ್ಯಕ್ಕೆ ದಕ್ಷಿಣ ಆಫ್ರಿಕಾ ಪ್ಲೇಯಿಂಗ್ ಇಲೆವೆನ್ ಈ ರೀತಿ ಇದೆ

ಕ್ವಿಂಟನ್ ಡಿ ಕಾಕ್ (ವಿಕೆ), ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಮ್ (ಸಿ), ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಕ್ ನಾರ್ಟ್ಜೆ, ತಬ್ರೈಜ್ ಶಮ್ಸಿ.

Exit mobile version