ದುಬೈ: ಟಿ20 ವಿಶ್ವಕಪ್ಗೆ(T20 World Cup) ಈಗಾಗಲೇ ಭಾರತ 15 ಸದಸ್ಯರ ಮತ್ತು ಮೀಸಲು ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಸ್ಟಾರ್ ಆಟಗಾರ ಕೆ.ಎಲ್ ರಾಹುಲ್(KL Rahul) ಅವರನ್ನು ಈ ತಂಡದಿಂದ ಕೈಬಿಡಲಾಗಿದೆ. ಆದರೆ, ರಾಹುಲ್ಗೆ ಇನ್ನೂ ಕೂಡ ತಂಡ ಸೇರುವ ಅವಕಾಶವೊಂದಿದೆ. ಇದು ಹೇಗೆ ಎನ್ನುವ ಮಾಹಿತಿ ಇಂತಿದೆ.
ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ. ಅವಕಾಶ ಸಿಕ್ಕ ಆಟಗಾರರ ಪೈಕಿ ಯಾರಾದರು ಗಾಯಗೊಂಡು ಅಲಭ್ಯರಾದರೆ ಆಗ ರಾಹುಲ್ಗೆ ಅವಕಾಶ ಸಿಗಬಹುದು. ಇನ್ನೊಂದು ಸಾಧ್ಯತೆ ಎಂದರೆ ತಂಡ ಬದಲಾವಣೆಯ ಅಂತಿಮ ದಿನವಾದ 25ರಂದು ಅಚ್ಚರಿ ಎಂಬಂತೆ ರಾಹುಲ್ ಆಯ್ಕೆಯಾಗುವ ಸಾಧ್ಯತೆಯೂ ಇದೆ.
ಕೆಲ ತಂಡಗಳು ಗೇಮ್ ಸ್ಟ್ರಟಜಿ ಮಾಡಿಕೊಂಡು ಕೆಲ ಸ್ಟಾರ್ ಆಟಗಾರರನ್ನು ಮೊದಲ ಪಟ್ಟಿಯಿಂದ ಕೈಬಿಟ್ಟು ಆ ಬಳಿಕ ಅಚ್ಚರಿ ಎಂಬಂತೆ ತಂಡಕ್ಕೆ ಆಯ್ಕೆ ಮಾಡಿಕೊಳ್ಳುತ್ತದೆ. ಇದರ ಹಿಂದಿರುವ ಕಾರಣವೆಂದರೆ ಎದುರಾಳಿ ತಂಡಗಳ ಪೂರ್ವ ಯೋಜನೆಯನ್ನು ಬುಡಮೇಲು ಮಾಡುವುದು. ಕಳೆದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಅನುಭವಿ ಆಟಗಾರ ಮಾರ್ನಸ್ ಲನುಶೇನ್ ಅವರನ್ನು ಆಯ್ಕೆ ಮಾಡಿರಲಿಲ್ಲ. ಇನ್ನೇನು ತಂಡ ಬದಲಾವಣೆಗೆ ಅಂತಿಮ ದಿನ ಬಾಕಿ ಇರುವಾಗ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಹೀಗಾಗಿ ಭಾರತ ಕೂಡ ರಾಹುಲ್ ಅವರನ್ನು ಈ ರೀತಿ ಆಯ್ಕೆ ಮಾಡುವ ಸಾಧ್ಯತೆಯೂ ಕಂಡು ಬಂದಿದೆ.
ಇದನ್ನೂ ಓದಿ T20 World Cup 2024: ಡ್ರಾಪ್ -ಇನ್ ಪಿಚ್ ಅಳವಡಿಕೆ ಕಾರ್ಯ ಆರಂಭಿಸಿದ ಐಸಿಸಿ
ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್ 9 ರಂದು ಪಾಕ್ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆದರೆ, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಜೂನ್ 29ಕ್ಕೆ ಫೈನಲ್ ಪಂದ್ಯ ಸಾಗಲಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್