ಮುಂಬಯಿ: ಕಳೆದ ವರ್ಷ ಭಾರತದ(Team India) ಆತಿಥ್ಯದಲ್ಲಿ ನಡೆದ 13ನೇ ಆವೃತ್ತಿಯ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಆತಿಥೇಯ ಟೀಮ್ ಇಂಡಿಯಾವನ್ನು 6 ವಿಕೆಟ್ಗಳಿಂದ ಮಣಿಸಿದ ಆಸ್ಟ್ರೇಲಿಯಾ 6ನೇ ಏಕದಿನ ವಿಶ್ವಕಪ್ ಗೆದ್ದು ಸಂಭ್ರಮಿಸಿತ್ತು. ಈ ಐತಿಹಾಸಿಕ ಸಾಧನೆ ಬಳಿಕ ಆಸ್ಟ್ರೇಲಿಯಾ ತಂಡದ ಆಲ್‌ರೌಂಡರ್ ಮಿಚೆಲ್ ಮಾರ್ಷ್(Mitchell Marsh) ಡ್ರೆಸ್ಸಿಂಗ್ ರೋಮ್ನಲ್ಲಿ ಟ್ರೋಫಿ ಮೇಲೆ ಕಾಲಿಟ್ಟು ಸಂಭ್ರಮಿಸಿದ್ದರು. ಮಾರ್ಷ್ ಅವರ ಈ ದುರ್ವರ್ತನೆಗೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಕೆಲವರು ಮಾರ್ಷ್ ವಿರುದ್ಧ ಆರ್‌ಟಿಐ ಕಾರ್ಯಕರ್ತನೊಬ್ಬ ಉತ್ತರ ಪ್ರದೇಶದಲ್ಲಿ ಎಫ್‌ಐಆರ್ ದಾಖಲಿಸಿದ್ದರು.
ಇದೀಗ ಭಾರತ ತಂಡ ಟಿ20 ವಿಶ್ವಕಪ್ ಗೆದ್ದ ತವರಿಗೆ ಮರಳಿದ ವೇಳೆ ಆಟಗಾರರಿಗೆ ಸಿಕ್ಕ ಸ್ವಾಗತ ಮತ್ತು ಆಟಗಾರರು ಟ್ರೋಫಿಗೆ ನೀಡಿದ ಗೌರವವನ್ನು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಕೊಂಡಾಡಿದ್ದಾರೆ. ಇದು ನೈಜ ಮತ್ತು ನಮ್ಮ ದೇಶದ ಸಂಸ್ಕೃತಿ ಎಂದು ಮಾರ್ಷ್ಗೆ ಮತ್ತು ಆಸೀಸ್ ಆಟಗಾರರಿಗೆ ಟಾಂಗ್ ಕೊಟ್ಟಿದ್ದಾರೆ.
ಆಟಗಾರರ ತ್ಯಾಗ ಮತ್ತು ಪರಿಶ್ರಮದ ಫಲವಾಗಿ ಭಾರತಕ್ಕೆ ವಿಶ್ವಕಪ್ ಟ್ರೋಫಿ ದೊರಕಿದೆ. ಭಾರತೀಯ ಆಟಗಾರರು ಸರಿಯಾದ ಕ್ರಮದಲ್ಲೇ ಈ ಟ್ರೋಫಿಗೆ ಗೌರವ ಸೂಚಿಸಿದ್ದಾರೆ. ಕಳೆದ ಬಾರಿ ಟ್ರೋಫಿ ಮೇಲೆ ಕಾಲಿಟ್ಟ ಆಸೀಸ್ ತಂಡ ತನಗಿಂತ ಕೆಲ ಕ್ರಮಾಂಕದ ತಂಡದ ವಿರುದ್ಧ ಕೂಡ ಸೋಲಿನ ಅವಮಾನ ಎದುರಿಸಿತು. ನಿಮ್ಮ ಈ ಸೋಲಿಗೆ ಅಂದು ತೋರಿದ ದರ್ಪವೇ ಕಾರಣ ಎಂದು ನೆಟ್ಟಿಗರು ಆಸೀಸ್ ವಿರುದ್ಧ ಸೇಡು ತೀರಿಸಿಕೊಂಡಿದ್ದಾರೆ.
ಇದನ್ನೂ ಓದಿ Team India: ಟೀಮ್ ಇಂಡಿಯಾ ಬಳಿ ಇರುವುದು ನಕಲಿ ವಿಶ್ವಕಪ್ ಟ್ರೋಫಿ; ಅಸಲಿ ಟ್ರೋಫಿ ಎಲ್ಲಿದೆ?
ಗುರುವಾರ ವಿಶ್ವಕಪ್ ವಿಜೇತ ತಂಡದ ಆಟಗಾರರನ್ನು ಅಭಿನಂದಿಸುವ(Team India victory parade) ಸಲುವಾಗಿ ಮುಂಬೈಯ ಮರೀನ್ ಡ್ರೈವ್ ಪ್ರದೇಶದಲ್ಲಿ ಸೇರಿದ ಅಭಿಮಾನಿಗಳನ್ನು(Team India fans) ಕಾಣುವಾಗ ಅರಬ್ಬಿ ಸಮುದ್ರವೇ ನಾಚಿ ನೀರಾಗುವಷ್ಟು ಕ್ರಿಕೆಟ್ ಪ್ರೀತಿಯ ಸಾಗರ ಉಕ್ಕೇರಿತ್ತು.
ನಾಯಕ ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಸೇರಿ ಎಲ್ಲ ಆಟಗಾರರು ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕುವ ಮೂಲಕ ಗೌರವ ಸೂಚಿಸುತ್ತಿರುವ ವಿಡಿಯೊ ಮತ್ತು ಫೋಟೊಗಳನ್ನು ನೆಟ್ಟಿಗರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಮಾರ್ಷ್ಗೆ ತಿರುಗೇಟು ನೀಡಿದ್ದಾರೆ.
ಕೆಲ ನೆಟ್ಟಿಗರು, ಆಸೀಸ್ಗೆ ಇದೊಂದು ಮುಖ್ಯ ವಿಷಯವಲ್ಲ. , ಅವರು ನಮ್ಮಂತೆ ಭಾವನಾತ್ಮಕ ವಿಷಯಗಳನ್ನು ನೋಡುವುದಿಲ್ಲ. ಈ ಬಗ್ಗೆ ಚರ್ಚಿಸಿ ಪ್ರಯೋಜನವಿಲ್ಲ. ಚಿಂತಿಸಲು ಹಲವಾರು ವಿಷಯಗಳಿವೆ ಎಂದು ಹೇಳಿದ್ದಾರೆ.
ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್ 29ರಂದು ನಡೆದಿದ್ದ ಟಿ20 ವಿಶ್ವಕಪ್ ಫೈನಲ್(T20 World Cup 2024) ಪಂದ್ಯದಲ್ಲಿ ಭಾರತ ತಂಡ(Team India) ದಕ್ಷಿಣ ಆಫ್ರಿಕಾ(South Africa vs India) ವಿರುದ್ಧ 7 ರನ್ಗಳ ಸಾಧಿಸುವ ಮೂಲಕ 13 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರವೊಂದನ್ನು ನೀಗಿಸಿತ್ತು.