ಲಕ್ನೋ: 2 ತಿಂಗಳ ಹಿಂದೆ ಲಂಡನ್ನಲ್ಲಿ ಶಮಿ ಪಾದದ ಶಸ್ತ್ರಚಿಕಿತ್ಸೆಗೆ(mohammed shami injury update) ಒಳಗಾಗಿದ್ದ ಭಾರತ ಕ್ರಿಕೆಟ್ ತಂಡದ ಪ್ರಧಾನ ವೇಗಿ ಮೊಹಮ್ಮದ್ ಶಮಿ(Mohammed Shami)ತಮ್ಮ ಕಾಲಿನ ಗಾಯದಿಂದ ಚೇತರಿಕೆ(Mohammed Shami injury update) ಕಾಣುತ್ತಿದ್ದಾರೆ. ಅಲ್ಲದೆ ಕ್ರಿಕೆಟ್ಗೆ ಮರಳುವ ನಿಟ್ಟಿನಲ್ಲಿ ಪುನರ್ವಸತಿ ಆರಂಭಿಸಿದ್ದಾರೆ. ಇದೀಗ ಅವರು ತಮ್ಮ ನಿವಾಸದಲ್ಲೆ ನಿರ್ಮಾಣ ಮಾಡಿರುವ ಕ್ರಿಕೆಟ್ ಪಿಚ್ನಲ್ಲಿ ರೋಲರ್ ಓಡಿಸಿದ್ದಾರೆ. ಈ ವಿಡಿಯೊವನ್ನು ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ(Viral Video).
ಲಂಡನ್ನಲ್ಲಿ ಶಮಿ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ವಿಶ್ರಾಂತಿಯಲ್ಲಿದ್ದ ಶಮಿ ಇದೀಗ ಮತ್ತೆ ಕ್ರಿಕೆಟ್ಗೆ ಮರಳುವು ಸಿದ್ಧತೆಯಲ್ಲಿದ್ದಾರೆ. ನಿನ್ನೆಯಷ್ಟೇ(ಮಂಗಳವಾರ) ವಾಕಿಂಗ್ ಸ್ಟಿಕ್ಗಳೊಂದಿಗೆ ತಮ್ಮ ನಿವಾಸದಲ್ಲಿರುವ ಕಿಕೆಟ್ ಪಿಚ್ನಲ್ಲಿ ನಡೆದಾಡಿ ಕೆಲ ಕಾಲ ವ್ಯಾಯಾಮ ಕೂಡ ಮಾಡಿದ್ದರು. ಇದರ ಫೋಟೊ ಕೂಡ ಹಂಚಿಕೊಂಡಿದ್ದರು. ಇದೀಗ ಬುಧವಾರ ಪಿಚ್ ಸಿದ್ಧತೆಯಲ್ಲಿ ತೊಡಗಿದ್ದಾರೆ. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್ ಬಳಿಕ ಶಮಿ ಯಾವುದೇ ಕ್ರಿಕೆಟ್ ಆಡಿಲ್ಲ.
2 ವಾರ ಹಿಂದೆ ಶಮಿ ಅವರು 2 ಸ್ಟಿಕ್ ವಾಕರ್ಗಳೊಂದಿಗೆ ಗಾರ್ಡನ್ನಲ್ಲಿ ನಿಂತಿರುವ ಫೋಟೊವನ್ನು ಹಂಚಿಕೊಂಡು, ‘ಮತ್ತೆ ಟ್ರ್ಯಾಕ್ಗೆ ಮರಳುವ ಹಸಿದಿದೆ. ಈ ಹಾದಿ ಕಠಿಣವಾಗಿರಬಹುದು, ಆದರೆ ಇದನ್ನೇಲ್ಲ ಎದುರಿಸಿ ಶೀಘ್ರದಲ್ಲೇ ಕ್ರಿಕೆಟ್ಗೆ ಮರಳುವ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದರು. ಇದಕ್ಕೂ ಮುನ್ನ ಶಮಿ ತಮ್ಮ ಮನೆಯಲ್ಲಿ ಪಾದಕ್ಕೆ ಎಲೆಕ್ಟ್ರಿಕ್ ಮಸಾಜ್ ಮಾಡುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದರು.
ಇದನ್ನೂ ಓದಿ Mohammed Shami: ಸ್ಟಿಕ್ ವಾಕರ್ ಸಹಾಯದೊಂದಿಗೆ ವ್ಯಾಯಾಮ ಆರಂಭಿಸಿದ ಶಮಿ
ಚೇತರಿಕೆಯ ಹಾದಿಯಲ್ಲಿರುವ ಶಮಿ ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಗೆ ಪುನರಾಗಮನ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಗಾಯದಿಂದಾಗಿ ಶಮಿಗೆ ಈ ಬಾರಿ ಐಪಿಎಲ್ ಸೇರಿ ಮಹತ್ವದ ಟಿ20 ವಿಶ್ವಕಪ್ ಟೂರ್ನಿ ಕೈತಪ್ಪಿತು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್ ವೇಳೆ ಗಾಯಗೊಂಡಿದ್ದ ಶಮಿ, ಈ ಗಾಯವನ್ನು ಮರೆಮಾಚಿ ವಿಶ್ವಕಪ್ನಲ್ಲಿ ಅಮೋಘ ಬೌಲಿಂಗ್ ಪ್ರದರ್ಶನ ತೋರಿದ್ದರು.
#mdshami pic.twitter.com/xlVZnL0glL
— 𝕸𝖔𝖍𝖆𝖒𝖒𝖆𝖉 𝖘𝖍𝖆𝖒𝖎 (@MdShami11) April 30, 2024
ವಿಶ್ವಕಪ್ ಟೂರ್ನಿಯಲ್ಲಿ ಶಮಿ ಅವರು ತಮ್ಮ ಮೊನಚಾದ ಬೌಲಿಂಗ್ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್ ಉರುಳಿಸಿದ್ದರು. ಅವರ ಈ ಸಾಧನೆಯನ್ನು ಪರಿಗಣಿಸಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದರು. ಮೊಹಮ್ಮದ್ ಶಮಿ ಭಾರತ ಪರ 64 ಟೆಸ್ಟ್ ಪಂದ್ಯಗಳಲ್ಲಿ 229 ವಿಕೆಟ್ ಪಡೆದಿದ್ದಾರೆ. 101 ಏಕದಿನ ಪಂದ್ಯಗಳಲ್ಲಿ 195 ವಿಕೆಟ್ ಪಡೆದಿದ್ದಾರೆ. 23 ಟಿ20 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದಾರೆ.