Site icon Vistara News

Viral Video: ‘ಹಿಟ್​ ದಿ ಟಾರ್ಗೆಟ್’​ ಎಂದು ಬೌಲಿಂಗ್​ ಅಭ್ಯಾಸ ಆರಂಭಿಸಿದ ಮೊಹಮ್ಮದ್ ಶಮಿ

Viral Video

Viral Video: Mohammad Shami started bowling practice saying 'hit the target'

ಲಕ್ನೋ: ಪಾದದ ಶಸ್ತ್ರಚಿಕಿತ್ಸೆಗೆ(mohammed shami injury update) ಒಳಗಾಗಿ ಚೇತರಿಕೆ ಕಾಣುತ್ತಿರುವ ಭಾರತ ಕ್ರಿಕೆಟ್​ ತಂಡದ ಪ್ರಧಾನ​ ವೇಗಿ ಮೊಹಮ್ಮದ್ ಶಮಿ(Mohammed Shami) ಕ್ರಿಕೆಟ್​ಗೆ ಮರಳುವು ಸಿದ್ಧತೆಯಲ್ಲಿದ್ದಾರೆ. ತಮ್ಮ ನಿವಾಸದಲ್ಲೇ ನಿರ್ಮಿಸಲಾಗಿರುವ ಕ್ರಿಕೆಟ್​ ಪಿಚ್​ನಲ್ಲಿ ಬೌಲಿಂಗ್​ ಅಭ್ಯಾಸ ಆರಂಭಿಸಿದ್ದು, ಈ ವಿಡಿಯೊವನ್ನು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ವೈರಲ್​(Viral Video) ಆಗಿದೆ.

ಫೆಬ್ರವರಿಯಲ್ಲಿ ಶಮಿ ಅವರು ಲಂಡನ್​ನಲ್ಲಿ ತಮ್ಮ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕ ಶಮಿ ಯಾವುದೇ ಕ್ರಿಕೆಟ್​ ಸರಣಿ ಆಡಿಲ್ಲ. ಇದೀಗ ಕ್ರಿಕೆಟ್​ಗೆ ಮರಳುವ ನಿಟ್ಟಿನಲ್ಲಿ ಪುನರ್ವಸತಿ ಆರಂಭಿಸಿದ್ದಾರೆ. ಬೌಲಿಂಗ್​ ಅಭ್ಯಾಸ ಆರಂಭಿಸಿರುವ ಶಮಿ ‘ಹಿಟ್​ ದಿ ಟಾರ್ಗೆಟ್​’ ಎಂದು ಬರೆದುಕೊಂಡಿದ್ದಾರೆ. ಶಮಿ ಅವರು ಬೌಲಿಂಗ್​ನಲ್ಲಿ ವಿಕೆಟ್​ ಉರುಳಿಸಿದ್ದು ಈ ವಿಡಿಯೊದಲ್ಲಿ ಕಾಣಬಹುದಾಗಿದೆ.

2 ವಾರ ಹಿಂದೆ ಶಮಿ ಅವರು 2 ಸ್ಟಿಕ್​ ವಾಕರ್​ಗಳೊಂದಿಗೆ ಗಾರ್ಡನ್​ನಲ್ಲಿ ನಿಂತಿರುವ ಫೋಟೊವನ್ನು ಹಂಚಿಕೊಂಡು, ‘ಮತ್ತೆ ಟ್ರ್ಯಾಕ್‌ಗೆ ಮರಳುವ ಹಸಿದಿದೆ. ಈ ಹಾದಿ ಕಠಿಣವಾಗಿರಬಹುದು, ಆದರೆ ಇದನ್ನೇಲ್ಲ ಎದುರಿಸಿ ಶೀಘ್ರದಲ್ಲೇ ಕ್ರಿಕೆಟ್​ಗೆ ಮರಳುವ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದರು. ಇದಕ್ಕೂ ಮುನ್ನ ಶಮಿ ತಮ್ಮ ಮನೆಯಲ್ಲಿ ಪಾದಕ್ಕೆ ಎಲೆಕ್ಟ್ರಿಕ್​ ಮಸಾಜ್​ ಮಾಡುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದರು.

ಬಾಂಗ್ಲಾ ಸರಣಿಯಲ್ಲಿ ಕಣಕ್ಕೆ?

ಚೇತರಿಕೆಯ ಹಾದಿಯಲ್ಲಿರುವ ಶಮಿ  ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಗೆ ಪುನರಾಗಮನ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಗಾಯದಿಂದಾಗಿ ಶಮಿಗೆ ಈ ಬಾರಿ ಐಪಿಎಲ್​ ಸೇರಿ ಮಹತ್ವದ ಟಿ20 ವಿಶ್ವಕಪ್​ ಟೂರ್ನಿ ಕೈತಪ್ಪಿತ್ತು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡಿದ್ದ ಶಮಿ, ಈ ಗಾಯವನ್ನು ಮರೆಮಾಚಿ ವಿಶ್ವಕಪ್​ನಲ್ಲಿ ಅಮೋಘ ಬೌಲಿಂಗ್​ ಪ್ರದರ್ಶನ ತೋರಿದ್ದರು.

ಇದನ್ನು ಓದಿ Anushka Sharma: ಕೊಹ್ಲಿಯಂತೆ ತಾಳ್ಮೆ ಕಳೆದುಕೊಂಡ ಪತ್ನಿ ಅನುಷ್ಕಾ; ವಿಡಿಯೊ ವೈರಲ್​

ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಶಮಿ ಅವರು ತಮ್ಮ ಮೊನಚಾದ ಬೌಲಿಂಗ್​ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್‌ ಉರುಳಿಸಿದ್ದರು. ಅವರ ಈ ಸಾಧನೆಯನ್ನು ಪರಿಗಣಿಸಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದರು. ಮೊಹಮ್ಮದ್ ಶಮಿ ಭಾರತ ಪರ 64 ಟೆಸ್ಟ್ ಪಂದ್ಯಗಳಲ್ಲಿ 229 ವಿಕೆಟ್ ಪಡೆದಿದ್ದಾರೆ. 101 ಏಕದಿನ ಪಂದ್ಯಗಳಲ್ಲಿ 195 ವಿಕೆಟ್ ಪಡೆದಿದ್ದಾರೆ. 23 ಟಿ20 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದಾರೆ.

Exit mobile version