ನ್ಯೂಯಾರ್ಕ್: ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಜಂಟಿ ಆತಿಥ್ಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್(T20 World Cup) ಟೂರ್ನಿಯಲ್ಲಿ ಕಾಮೆಂಟ್ರಿ ಮಾಡುತ್ತಿರುವ ಮಾಜಿ ಆಟಗಾರರಾದ ಪಾಕಿಸ್ತಾನ ವಾಸಿಂ ಅಕ್ರಮ್(Wasim Akram) ಮತ್ತು ಭಾರತದ ಸುನಿಲ್ ಗವಾಸ್ಕರ್(Sunil Gavaskar) ಅವರು ಜತೆಯಾಗಿ ಡ್ಯಾನ್ಸ್ ಮಾಡಿದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video) ಆಗಿದೆ. ಈ ವಿಡಿಯೊಗೆ ನೆಟ್ಟಿಗರು ಹಲವು ಹಾಡುಗಳನ್ನು ಎಡಿಟ್ ಮಾಡಿ ಶೇರ್ ಮಾಡಿದ್ದಾರೆ.
ಗವಾಸ್ಕರ್ ಮತ್ತು ಅಕ್ರಮ್ ಉತ್ತಮ ಸ್ನೇಹಿತರಾಗಿದ್ದಾರೆ. ಕಾಮೆಂಟ್ರಿ ವೇಳೆಯೂ ಆಗಾಗ ಪರಸ್ಪರ ಕಾಲೆಳೆಯುತ್ತಿರುತ್ತಾರೆ. ಅದರಲ್ಲೂ ಭಾರತ ಮತ್ತು ಪಾಕ್ ಪಂದ್ಯ ಇರುವ ಸಂದರ್ಭದಲ್ಲಿ ಇದು ಹೆಚ್ಚಾಗಿ ಕಂಡು ಬರುತ್ತದೆ.
ಇದನ್ನೂ ಓದಿ RSA vs NEP: ನೇಪಾಳ ವಿರುದ್ಧ ದಕ್ಷಿಣ ಆಫ್ರಿಕಾಗೆ 1 ರನ್ ರೋಚಕ ಜಯ; ಗೆಲುವಿನ ಖಾತೆ ತೆರೆದ ಕಿವೀಸ್
ಮೂರು ಪಂದ್ಯಗಳನ್ನು ಆಡಿರುವ ಪಾಕಿಸ್ತಾನವು ಅಮೆರಿಕ ಹಾಗೂ ಭಾರತದ ವಿರುದ್ಧ ಹೀನಾಯವಾಗಿ ಸೋಲನುಭವಿಸಿದೆ. ಕೆನಡಾ ವಿರುದ್ಧ ಮಾತ್ರ ಗೆದ್ದಿರುವ ಕಾರಣ 2 ಪಾಯಿಂಟ್‌ಗಳನ್ನು ಪಡೆದಿದೆ. ಇನ್ನು, ನಾಲ್ಕು ಪಾಯಿಂಟ್ ಹೊಂದಿದ್ದ ಅಮೆರಿಕ ತಂಡವು ಐರ್ಲೆಂಡ್ ವಿರುದ್ಧ ಸೋತು, ಜೂನ್ 16ರಂದು ಐರ್ಲೆಂಡ್ ವಿರುದ್ಧ ನಡೆಯುವ ಪಂದ್ಯದಲ್ಲಿ ಬಾಬರ್ ಅಜಂ ಬಳಗ ಗೆದ್ದರೆ ಮಾತ್ರ ಸೂಪರ್ 8ಕ್ಕೆ ಅರ್ಹತೆ ಪಡೆಯುತ್ತಿತ್ತು. ಆದರೆ, ಅಮೆರಿಕ ಹಾಗೂ ಐರ್ಲೆಂಡ್ ನಡುವಿನ ಪಂದ್ಯವು ಮಳೆಯಿಂದ ರದ್ದಾದ ಕಾರಣ ಅಮೆರಿಕದ ಅಂಕಗಳು 5ಕ್ಕೆ ಏರಿಕೆಯಾದವು. ಇದರಿಂದಾಗಿ ಐರ್ಲೆಂಡ್ ವಿರುದ್ಧ ಪಾಕ್ ಗೆದ್ದರೂ ಯಾವುದೇ ಉಪಯೋಗವಿಲ್ಲದಂತಾಗಿದೆ.
ಟೂರ್ನಿಯಿಂದ ಹೊರಬಿದ್ದಿರುವ ಪಾಕ್ ತಂಡದ ಪ್ರದರ್ಶನದ ಬಗ್ಗೆ ವಾಸಿಂ ಅಕ್ರಮ್ ಸೇರಿ ಅನೇಕ ಮಾಜಿ ಆಟಗಾರರು ಆಕ್ರೋಶ ಹೊರಹಾಕಿದ್ದಾರೆ. ಕ್ರಿಕೆಟ್ ಅಭ್ಯಾಸ ಮಾಡುವುದನ್ನು ಬಿಟ್ಟು ಶೋಕಿಗಾಗಿ ಸೇನೆಯಲ್ಲಿ ಫಿಟ್ನೆಸ್ ತರಬೇತಿ ಪಡೆದು ಸಮಯ ವ್ಯರ್ಥ ಮಾಡಿದ್ದು ಈ ಸೋಲಿಗೆ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ. ಟೂರ್ನಿಯಿಂದ ಹೊರಬಿದ್ದ ಪಾಕ್ ತಂಡವನ್ನು(Pakistan Team Troll) ಸ್ವತಃ ತವರಿನ ಅಭಿಮಾನಿಗಳು ಸೇರಿ ಭಾರತೀಯ(India fans troll Pakistan cricket team) ನೆಟ್ಟಿಗರು ಟ್ರೋಲ್ ಮಾಡಿದ್ದಾರೆ. ಹಲವು ಮಿಮ್ಸ್ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮತ್ತೆ ಬಾಬರ್ ತಲೆದಂಡ?
ಕಳೆದ ವರ್ಷ(2023) ಭಾರತದ ಆತಿಥ್ಯದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನಲ್ಲಿ ಬಾಬರ್ ಸಾರಥ್ಯದಲ್ಲಿ ಪಾಕಿಸ್ತಾನ ತಂಡ ನೀರಸ ಪ್ರದರ್ಶನ ತೋರಿತ್ತು. ಆಡಿದ 9 ಪಂದ್ಯಗಳ ಪೈಕಿ ಕೇವಲ 4 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿ ಲೀಗ್ ಹಂತದಲ್ಲೇ ಹೊರಬಿದ್ದಿತ್ತು. ಹೀಗಾಗಿ ಬಾಬರ್ ವಿರುದ್ಧ ಪಾಕ್ ತಂಡದ ಮಾಜಿ ಆಟಗಾರರು ಸೇರಿ ಅಂದಿನ ಪಿಬಿ ಅಧ್ಯಕ್ಷ ಭಾರೀ ಟೀಕೆ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಬಾಬರ್ ಎಲ್ಲಾ ಮೂರು ಸ್ವರೂಪಗಳ ನಾಯಕತ್ವದಿಂದ ಕೆಳಗಿಳಿದಿದ್ದರು. ಇದೀಗ ಟಿ20 ವಿಶ್ವಕಪ್‌ನಲ್ಲಿ ಪಾಕ್ ತಂಡ ಅತ್ಯಂತ ಕಳಪೆ ಪ್ರದರ್ಶನ ತೋರಿದ್ದಕ್ಕಾಗಿ ಮತ್ತೆ ಬಾಬರ್ ಅವರ ತಲೆದಂಡವಾಗುವ ಸಾಧ್ಯತೆ ಅಧಿಕವಾಗಿದೆ ಎನ್ನಲಾಗಿದೆ.