Site icon Vistara News

Viral Video: ಲಂಡನ್​ನ ಇಸ್ಕಾನ್​ ಮಂದಿರದ ಸಂಕೀರ್ತನೆಯಲ್ಲಿ ಪಾಲ್ಗೊಂಡ ವಿರಾಟ್​ ಕೊಹ್ಲಿ-ಅನುಷ್ಕಾ ಶರ್ಮಾ

Viral Video

Viral Video: Virat Kohli attends kirtan with wife Anushka Sharma at the ISKCON Temple in London

ಲಂಡನ್​: ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿ(virat kohli) ಮತ್ತು ಅವರ ಪತ್ನಿ ಅನುಷ್ಕಾ ಶರ್ಮ(Anushka Sharma) ಭಾರತ ತೊರೆದು ಲಂಡನ್​ನಲ್ಲಿ ವಾಸವಾಗಲಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಕೊಹ್ಲಿ ಮತ್ತು ಅನುಷ್ಕಾ ಲಂಡನ್​ನಲ್ಲಿರುವ ಇಸ್ಕಾನ್​ ಮಂದಿರದಲ್ಲಿ ನಡೆದ ಸಂಕೀರ್ತನೆಯಲ್ಲಿ ಕಾಣಿಸಿಕೊಂಡ ವಿಡಿಯೊವೊಂದು(Viral Video) ವೈರಲ್ ಆಗಿದೆ.

ಮಹಿಯಾ ಎನ್ನುವ ನೆಟ್ಟಿಗರೊಬ್ಬರು ತಮ್ಮ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ವಿರಾಟ್​ ಕೊಹ್ಲಿ ಮತ್ತು ಅನುಷ್ಕಾ ಲಂಡನ್​ನಲ್ಲಿ ನಡೆದ ಕೃಷ್ಣ ದಾಸ್ ಅವರ ಭಜನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ವಿಡಿಯೊವನ್ನು ಹಂಚಿಕೊಂಡಿದ್ದು. ಎಲ್ಲರೂ ಮುಕೇಶ್‌ ಅಂಬಾನಿ ಅವರ ಪುತ್ರ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಅವರ ವಿವಾಹಪೂರ್ವ ಕಾರ್ಯಕ್ರಮದಲ್ಲಿ ಬ್ಯೂಸಿಯಾಗಿದ್ದರೆ, ನನ್ನ ರೋಲ್​ ಮಾಡಲ್​ ವಿರಾಟ್​ ಕೊಹ್ಲಿ ಲಂಡನ್​ನ ಇಸ್ಕಾನ್​ ಮಂದಿರದಲ್ಲಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಸದ್ಯ ವೈರಲ್​ ಆಗುತ್ತಿರುವ ಈ ವಿಡಿಯೊ ಹೊಸತೋ ಅಲ್ಲ ಹಳೆಯದ್ದೋ ಎನ್ನುವುದು ಖಚಿತತೆ ಇಲ್ಲ.

ಕ್ರಿಕೆಟ್​ಗೆ​ ಪದಾರ್ಪಣೆ ಮಾಡಿದ ಆರಂಭಿಕ ದಿನಗಳಲ್ಲಿ ದೇವರ ಮೇಲೆ ಹೆಚ್ಚು ನಂಬಿಕೆ ಇಲ್ಲ ಎಂದು ಹೇಳಿದ್ದ ವಿರಾಟ್​ ಕೊಹ್ಲಿ ಇತ್ತೀಚಿನ ದಿನಗಳಲ್ಲಿ ಆಧ್ಯಾತ್ಮಿಕದ ಮೇಲೆ ಹೆಚ್ಚಿನ ಒಲವು ತೋರುತ್ತಿದ್ದಾರೆ. ದೇವಾಲಯಗಳಿಗೆ ಭೇಟಿ ಕೊಡುವುದು, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದು ಸಾಮಾನ್ಯವಾಗಿಬಿಟ್ಟಿದೆ.

ಲಂಡನ್​ಗೆ ಶಿಫ್ಟ್​ ಆಗಲಿದ್ದಾರಾ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಭಾರತ ತೊರೆದು ಕುಟುಂಬ ಸಮೇತರಾಗಿ ಲಂಡನ್​ನಲ್ಲಿ ನೆಲೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದೆ. ಟಿ20 ವಿಶ್ವಕಪ್​ ಗೆದ್ದು ಭಾರತಕ್ಕೆ ಬಂದ ದಿನವೇ ಕೊಹ್ಲಿ ಮುಂಬೈನಲ್ಲಿ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮ ಮುಗಿಸಿ ರಾತ್ರೋರಾತ್ರಿ ಲಂಡನ್​ಗೆ ವಿಮಾನ ಏರಿದ್ದರು. ಹೀಗಾಗಿ ಕೆಲ ನೆಟ್ಟಿಗರುವ ಕೊಹ್ಲಿ ಇನ್ನು ಮುಂದೆ ಲಂಡನ್​ನಲ್ಲಿಯೇ ವಾಸಿಸುವ ಸಾಧ್ಯತೆ ಇದೆ ಎಂದಿದ್ದರು. ಬಾಲಿವುಡ್ ಕಾರ್ಯಕ್ರಮಗಳು ಮತ್ತು ಚಲನಚಿತ್ರಗಳಿಂದಲೂ ಅನುಷ್ಕಾ ಶರ್ಮಾ ದೂರ ಉಳಿದಿರುವುದು ಕೂಡ ಊಹಾಪೋಹಗಳಿಗೆ ಕಾರಣವಾಗಿದೆ.

ಇದನ್ನೂ ಓದಿ Virat Kohli : ನಿವೃತ್ತಿ ಬಳಿಕ ಪತ್ನಿ ಜತೆ ಲಂಡನ್​ಗೆ ತೆರಳಿ ನೆಲೆಸಲಿದ್ದಾರೆ ವಿರಾಟ್​ ಕೊಹ್ಲಿ,

ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ಅನುಷ್ಕಾ ಮತ್ತು ವಿರಾಟ್ ಯುಕೆ ಮೂಲದ ಕಂಪನಿಯ ನಿರ್ದೇಶಕರಾಗಿದ್ದಾರೆ. ಯುಕೆ ಸರ್ಕಾರದ ಫೈಂಡ್ ಅಂಡ್ ಅಪ್ಡೇಟ್ ಕಂಪನಿಯ ಮಾಹಿತಿ ಸೇವೆಯ ಪ್ರಕಾರ, ದಂಪತಿಗಳು ಮ್ಯಾಜಿಕ್ ಲ್ಯಾಂಪ್​​ನ ಮೂವರು ನಿರ್ದೇಶಕರಲ್ಲಿ ಇಬ್ಬರು. ಇದು ಆಗಸ್ಟ್ 1, 2022 ರಂದು ಆರಂಭಗೊಂಡ ಸಲಹಾ ಸಂಸ್ಥೆಯಾಗಿದೆ. ಕಂಪನಿಯ ಅಧಿಕೃತ ಕಚೇರಿ ವಿಳಾಸವು ಯುಕೆಯ ವೆಸ್ಟ್ ಯಾರ್ಕ್​ಶೈರ್​ನಲ್ಲಿದೆ.

ಟಿ20ಗೆ ವಿದಾಯ ಹೇಳಿದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಟಿ20 ವಿಶ್ವಕಪ್​ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಫೈನಲ್​ ಪಂದ್ಯದಲ್ಲಿ 76 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದ್ದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದಿದ್ದರು. ಕೊಹ್ಲಿ ತಮ್ಮ 125 ಪಂದ್ಯಗಳ ಟಿ 20 ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ಭಾರತದ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಸ್ವರೂಪದಲ್ಲಿ ಕೊನೆಗೊಳಿಸಿದ್ದಾರೆ. 4188 ರನ್, 48.69 ಸರಾಸರಿ ಮತ್ತು ಸ್ಟ್ರೈಕ್ ರೇಟ್ 137.04 ಹೊಂದಿದ್ದಾರೆ.

Exit mobile version