ಬೆಂಗಳೂರು: ವಿರಾಟ್ ಕೊಹ್ಲಿ (Virat Kohli) ಕ್ರಿಕೆಟ್ ಮೈದಾನದಲ್ಲಿ ಇದ್ದರೆ ಬ್ಯಾಟ್ ಮೂಲಕ ಅಥವಾ ತಮ್ಮ ನಡವಳಿಕೆಯ ಮೂಲಕ ಮೈದಾನದಲ್ಲಿ ಪ್ರೇಕ್ಷಕರಿಗೆ ಮನರಂಜನೆಯನ್ನು ನೀಡುತ್ತಾರೆ. ಅಂಥದ್ದೆ ಪ್ರಸಂಗ ಶ್ರೀಲಂಕಾ ವಿರುದ್ಧದ ಪಂದ್ಯದ ವೇಳೆಯೂ ನಡುವೆಯೂ ನಡೆಯಿತು. ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡದ ಸದೀರಾ ಸಮರವಿಕ್ರಮ ಅವರನ್ನು 14 ರನ್ಗಳಿಗೆ ಆಲ್ಔಟ್ ಆದರು. ಅವರು ನೀಡಿದ ಕ್ಯಾಚ್ ಅನ್ನು ವಿರಾಟ್ ಕೊಹ್ಲಿ ಪಡೆದರು. ಆದರೆ, ಕ್ಯಾಚ್ ಪಡೆದ ಖುಷಿಗೆ ಅವರ ಮಾಡಿದ ನೃತ್ಯ ಎಲ್ಲರ ಗಮನ ಸೆಳೆಯಿತು.
ಚೆಂಡನ್ನು ಹಿಡಿದ ನಂತರ, ಕೊಹ್ಲಿ ಅಸ್ಸಾಂನ ಜಾನಪದ ನೃತ್ಯವಾದ ಸಣ್ಣ ಸಂಭ್ರಮದ ಬಿಹು ಸ್ಟೆಪ್ ಹಾಕಿದರು. ಈ ಸ್ವಯಂಪ್ರೇರಿತ ಡಾನ್ಸ್ ಅವರ ಅಸ್ಸಾಂ ಮೂಲದ ಸಹ ಆಟಗಾರ ರಿಯಾನ್ ಪರಾಗ್ ಅವರ ಕಡೆಗಾಗಿತ್ತು. ಅವರು ಡಗೌಟ್ನಲ್ಲಿ ಕುಳಿತಿದ್ದರು. ಅವರಿನ್ನೂ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿಲ್ಲ. ಡ್ರೆಸ್ಸಿಂಗ್ ರೂಮ್ ಕಡೆಗೆ ಹೊಳೆಯುವ ನೋಡಿದ ನಂತರ ಕೊಹ್ಲಿ ಅಕ್ಷರ್ ಕಡೆಗೆ ಹೋದರು.
Can never get enough of Kohli’s celebrations 🕺
— Sony LIV (@SonyLIV) August 4, 2024
The Axar-Virat duo fetches India another wicket!
Watch #SLvIND 2nd ODI LIVE NOW on #SonyLIV 🍿 pic.twitter.com/YF6eW6E7Di
ಪಂದ್ಯದಲ್ಲಿ ಭಾರತಕ್ಕೆ ಸೋಲು
ಬೆಂಗಳೂರು : ಆತಿಥೇಯ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ (IND vs SL ODI ) ಎರಡನೇ ಪಂದ್ಯದಲ್ಲಿ ಭಾರತ ತಂಡ 32 ರನ್ಗಳ ಸೋಲಿಗೆ ಒಳಗಾಗಿದೆ. ಲಂಕಾದ ಸ್ಪಿನ್ನರ್ಗಳ ದಾಳಿಗೆ ನಲುಗಿದ ಭಾರತೀಯ ಬ್ಯಾಟರ್ಗಳು ಸುಲಭವಾಗಿ ಶರಣಾದರು. ಪ್ರಮುಖವಾಗಿ ಕಳೆದ ಎರಡು ಪಂದ್ಯಗಳಲ್ಲಿ ಭಾರತದ ಮಧ್ಯಮ ಕ್ರಮಾಂಕದ ಬ್ಯಾಟರ್ಗಳ ಪ್ರದರ್ಶನದ ಬಗ್ಗೆ ಟೀಕೆಗಳು ಕೇಳಿ ಬಂದವು. ಭಾರತ ಹಾಗೂ ಲಂಕಾ ನಡುವಿನ ಮೊದಲ ಪಂದ್ಯವು ಟೈ ಆಗಿತ್ತು. ಹೀಗಾಗಿ ಈ ಗೆಲುವಿನೊಂದಿಗೆ ಲಂಕಾ ತಂಡವು ಸರಣಿಯಲ್ಲಿ 1-0 ಮುನ್ನಡೆಯನ್ನು ಪಡೆದುಕೊಂಡಿದೆ. ಮುಂದಿನ ಪಂದ್ಯದಲ್ಲಿ ಭಾರತ ಗೆದ್ದರೆ ಮಾತ್ರ ಭಾರತ ತಂಡದ ಮರ್ಯಾದೆ ಉಳಿಯಬಹುದು. ಇಲ್ಲವಾದರೆ ರೋಹಿತ್ ಶರ್ಮಾ ಬಳಗ ಮುಖಭಂಗ ಅನುಭವಿಸುವ ಎಲ್ಲ ಸಾಧ್ಯತೆಗಳಿವೆ.
ಇದನ್ನೂ ಓದಿ: Novak Djokovic : ಅಲ್ಕರಾಜ್ ಮಣಿಸಿ ಚೊಚ್ಚಲ ಒಲಿಂಪಿಕ್ಸ್ ಚಿನ್ನದ ಪದಕ ಗೆದ್ದ ನೊವಾಕ್ ಜೊಕೊವಿಕ್
ಕೊಲೊಂಬೊದ ಪ್ರೇಮದಾಸ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಲಂಕಾ ತಂಡ ಮೊದಲು ಬ್ಯಾಟ್ ಮಾಡಿ ನಿಗದಿತ 50 ಓವರ್ಗಳಲ್ಲಿ 9 ವಿಕೆಟ್ಗೆ 240 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಭಾರತ ತಂಡ.. ಓವರ್ಗಳಲ್ಲಿ 42.2 ಓವರ್ಗಳಲ್ಲಿ 208 ರನ್ಗೆ ಆಲ್ಔಟ್ ಆಗಿ ಸೋಲೊಪ್ಪಿಕೊಂಡಿತು. ಜೆಫ್ರಿ ವಂಡರ್ಸೆ 6 ವಿಕೆಟ್ ಹಾಗೂ ಚರಿತ್ ಅಸಲಂಕಾ 3 ವಿಕೆಟ್ ಉರುಳಿಸಿ ಭಾರತ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ಲಂಕಾ ಸ್ಪಿನ್ನರ್ಗಳ ದಾಳಿಗೆ ನಿಯಮಿತವಾಗಿ ವಿಕೆಟ್ ಕಳೆದುಕೊಂಡು ನಿರಾಸೆಗೆ ಒಳಗಾಯಿತು.