ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಮತ್ತು ನಟಿ ಅನುಷ್ಕಾ ಶರ್ಮಾ ಇತ್ತೀಚೆಗೆ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದಂಪತಿ ಇತರ ಭಕ್ತರೊಂದಿಗೆ ದೇವಾಲಯದ ಒಳಗೆ ಕುಳಿತಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಿರಾಟ್ ಮತ್ತು ಅನುಷ್ಕಾ ಇಬ್ಬರೂ ಒಂದು ಮೂಲೆಯಲ್ಲಿ ಒಟ್ಟಿಗೆ ಕುಳಿತು ಪುರೋಹಿತರೊಂದಿಗೆ ಮಾತನಾಡುತ್ತಿರುವ ದೃಶ್ಯ ವೈರಲ್ ಆಗಿದೆ.
ಈ ವರ್ಷದ ಆರಂಭದಲ್ಲಿ ವಿರಾಟ್ ಮತ್ತು ಅನುಷ್ಕಾ ಉತ್ತರಾಖಂಡದ ಆಶ್ರಮಕ್ಕೆ ಭೇಟಿ ನೀಡಿದ್ದರು. ದಂಪತಿ ಬಾಬಾ ನೀಮ್ ಕರೋಲಿಯ ಅನುಯಾಯಿಗಳು ಎನ್ನಲಾಗಿದೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ಅವರು ತಮ್ಮ ಪತ್ನಿಯ ಬಗ್ಗೆ ಮಾತನಾಡಿದ್ದಾರೆ. “ಅನುಷ್ಕಾ ಅವರ ಭೇಟಿ ನನ್ನ ಜೀವನದಲ್ಲಿ ಹೊಸ ದೃಷ್ಟಿಕೋನವನ್ನು ಕೊಟ್ಟಿದೆ. ಹಾಗೇ ಎಲ್ಲವನ್ನೂ ಸ್ವೀಕರಿಸುವ ಭಾವನೆಯನ್ನು ಬೆಳೆಸಿಕೊಳ್ಳಲು ಸಹಕರಿಸಿದೆ” ಎಂದು ಹೇಳಿಕೊಂಡಿದ್ದಾರೆ.
ಭಕ್ತರೊಂದಿಗೆ ದೇವಾಲಯದ ಒಳಗೆ ಕುಳಿತಿರುವ ಅನುಷ್ಕಾ-ವಿರಾಟ್
ಇದನ್ನೂ ಓದಿ: Virat Kohli: 2020ರ ಬಳಿಕ ಟೆಸ್ಟ್ನಲ್ಲಿ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಸಾಧನೆ
“ನನ್ನ ಜೀವನವು ಸಂಪೂರ್ಣವಾಗಿ ವಿಭಿನ್ನ ದೃಷ್ಟಿಕೋನವನ್ನು ಹೊಂದಿತ್ತು. ನೀವು ಒಬ್ಬ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಾಗ, ನಿಮ್ಮೊಳಗೆ ಆ ಬದಲಾವಣೆಗಳನ್ನು ಪ್ರಕ್ರಿಯೆಗೊಳಿಸಲು ಪ್ರಾರಂಭಿಸುತ್ತೀರಿ. ಅವಳ ಜೀವನದ ದೃಷ್ಟಿಕೋನವು ವಿಭಿನ್ನವಾಗಿತ್ತು ಮತ್ತು ಅದು ನನ್ನನ್ನು ಉತ್ತಮವಾಗಿ ಬದಲಾಯಿಸಲು ಮತ್ತು ವಿಷಯಗಳನ್ನು ಹೆಚ್ಚು ಒಪ್ಪಿಕೊಳ್ಳುವಂತೆ ಪ್ರೇರೇಪಿಸಿತು”ಎಂದು ಅವರು ಕೊಹ್ಲಿ ಹೇಳಿಕೊಂಡಿದ್ದಾರೆ. ತಾಯಿಯಾಗಿ ಅನುಷ್ಕಾ ಮಾಡಿದ ತ್ಯಾಗಗಳು ದೊಡ್ಡವು. ಅವಳನ್ನು ನೋಡಿದಾಗ, ನನಗೆ ಏನೇ ಸಮಸ್ಯೆಗಳಿದ್ದರೂ ಏನೂ ಅಲ್ಲ ಎಂದು ಎನಿಸಿಬಿಡುತ್ತದೆ ಎಂದೂ ಅವರು ಹೇಳಿಕೊಂಡಿದ್ದಾರೆ.