ಕೋಲ್ಕತ್ತಾ: ಲೋಕಸಭೆ ಚುನಾವಣೆಗೆ(Lok Sabha Election 2024) ಎಲ್ಲ ಪಕ್ಷಗಳು ಭಾರೀ ತಯಾರಿ ನಡೆಸುತ್ತಿದೆ. ಈಗಾಗಲೇ ಬಿಜೆಪಿ ಮೊದಲ ಹಂತದಲ್ಲಿ ಪ್ರಬಲ ಅಭ್ಯರ್ಥಿಗಳ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ. ಇದೀಗ ಟೀಮ್ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಶಮಿ(Mohammed Shami) ಕೂಡ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ.
ಹೌದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಿಂದ ಮೊಹಮ್ಮದ್ ಶಮಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ಆಲೋಚಿಸುತ್ತಿದೆ ಎಂದು ವರದಿಯಾಗಿದೆ. ಈ ಬಗ್ಗೆ ಮೂಲಗಳನ್ನು ಉದ್ದೇಶಿಸಿ ಇಂಡಿಯಾ ಟುಡೇ ವರದಿ ಮಾಡಿದೆ. ವರದಿಗಳ ಪ್ರಕಾರ, ಲೋಕಸಭೆ ಚುನಾವಣೆಯಲ್ಲಿ ಶಮಿ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ನಿಲ್ಲಿಸುವ ಪ್ರಸ್ತಾಪವನ್ನು ಭಾರತೀಯ ಜನತಾ ಪಕ್ಷದಲ್ಲಿ ಚರ್ಚಿಸಲಾಗಿದ್ದು, ಈಗಾಗಲೇ ಬಿಜೆಪಿಯ ಹಲವು ನಾಯಕರು ಮತ್ತು ಮುಖಂಡರು ಶಮಿಯನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ. ಈ ಚರ್ಚೆ ಜೋರಾಗುತ್ತಿದ್ದಂತೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಶಮಿ ಅವರ ಭೇಟಿಯ ಫೋಟೊ ಒಂದು ವೈರಲ್ ಆಗಿದೆ. ಆದರೆ, ಶಮಿ ಈ ವಿಚಾರದಲ್ಲಿ ಇದುವರೆಗೂ ಯಾವುದೇ ಹೇಳಿಕೆ ನೀಡಿಲ್ಲ.
🛑🛑 Cricketer Mohammed Shami likely to join BJP.
— Naren Mukherjee – Modi Ka Parivar (@NMukherjee6) March 8, 2024
Likely to contest elections from Barasat, West Bengal. 😋😋👇 pic.twitter.com/0LJ09P1mYI
ಮೋದಿ ಹಾರೈಕೆ
ಶಮಿ ಅವರು ಏಕದಿನ ವಿಶ್ವಕಪ್ ಬಳಿಕ ಗಾಯಗೊಂಡು ಇತ್ತೀಚೆಗೆ ಲಂಡನ್ನಲ್ಲಿ ತಮ್ಮ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಫೋಟೊವನ್ನು ಮೊಹಮ್ಮದ್ ಶಮಿ ತಮ್ಮ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಪ್ರಧಾನಿ ಮೋದಿ, ‘ನೀವು ಶೀಘ್ರವಾಗಿ ಚೇತರಿಸಿಕೊಳ್ಳಲು ಮತ್ತು ಉತ್ತಮ ಆರೋಗ್ಯವನ್ನು ಪಡೆಯಲು ಬಯಸುತ್ತೇವೆ.! ನೀವು ಧೈರ್ಯದಿಂದ ಈ ಗಾಯವನ್ನು ಜಯಿಸುತ್ತೀರಿ ಎಂದು ನನಗೆ ವಿಶ್ವಾಸವಿದೆ” ಎಂದು ಮೋದಿ ಹಾರೈಸಿದ್ದರು.
It was such a wonderful surprise to receive a personal note from Prime Minister Narendra Modi sir wishing me a speedy recovery. His kindness and thoughtfulness truly mean a lot to me. Thank you so much Modi sir ,for your well wishes and support during this time.
— 𝕸𝖔𝖍𝖆𝖒𝖒𝖆𝖉 𝖘𝖍𝖆𝖒𝖎 (@MdShami11) February 27, 2024
I will continue… https://t.co/aDagbvLeAM
ಏಕದಿನ ವಿಶ್ವಕಪ್ ಟೂರ್ನಿಯಲ್ಲಿಯೂ ಮೋದಿ ಅವರು ಶಮಿಯ ಪ್ರದರ್ಶನಕ್ಕೆ ಮೆಚ್ಚುಗೆ ಸೂಚಿಸಿದ್ದರು. ಅಲ್ಲದೆ ಆಸ್ಟ್ರೇಲಿಯಾ ವಿರುದ್ಧ ಫೈನಲ್ನಲ್ಲಿ ಸೋತಾಗ ಡ್ರೆಸಿಂಗ್ ರೂಮ್ಗೆ ಬಂದಿದ್ದ ಮೋದಿ, ಶಮಿಯನ್ನು ವಿಶೇಷವಾಗಿ ತಬ್ಬಿಕೊಂಡು ಬೆನ್ನು ತಟ್ಟಿದ್ದರು.
ರಾಮ ಮಂದಿರ, ಮೋದಿಗೆ ಬೆಂಬಲ ಸೂಚಿಸಿದ್ದ ಶಮಿ
ಶಮಿ ಕೂಡ ರಾಮ ಮಂದಿರ ಕಟ್ಟಿ ಜೈಶ್ರೀರಾಮ್ ಕೂಗುವುದರಿಂದ ಯಾರಿಗೂ ತೊಂದರೆ ಇಲ್ಲ ಎಂದು ಹೇಳಿದ್ದರು. ಜತೆಗೆ ಮೋದಿ ಆಡಳಿತದ ಬಗ್ಗೆಯೂ ಶಮಿ ಬಹಿರಂಗವಾಗಿಯೇ ಮೆಚ್ಚುಗೆಯ ಮಾತುಗಳನ್ನಾಡಿದ್ದರು. “ನರೇಂದ್ರ ಮೋದಿ ಅವರು ದೇಶಕ್ಕಾಗಿ ದುಡಿಯುತ್ತಿದ್ದು, ಅವರ ಪರ ನಿಲ್ಲುತ್ತೇವೆ” ಎಂದು ಹೇಳಿದ್ದರು. ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ಶಮಿ, “ನಾವು ನಮ್ಮ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡಬೇಕು. ಇದರಿಂದ ದೇಶವು ಏಳಿಗೆ ಹೊಂದುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಏಳಿಗೆಗಾಗಿ ದುಡಿಯುತ್ತಿದ್ದಾರೆ. ನಾವು ಕೂಡ ಅವರಿಗೆ ಬೆಂಬಲ ನೀಡಬೇಕು. ದೇಶದ ಪ್ರವಾಸೋದ್ಯಮದ ಏಳಿಗೆಗೆ ಕೈಜೋಡಿಸಬೇಕು” ಎಂದು ಹೇಳಿದ್ದರು.
ಈ ಎಲ್ಲ ಸನ್ನಿವೇಶಗಳನ್ನು ನೋಡುವಾಗ ಶಮಿ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಮಾನ ಕೂಡ ಮೂಡುತ್ತದೆ. ಶಮಿಯನ್ನು ಕಣಕ್ಕಿಳಿಸುವುದು ಬಂಗಾಳದ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಎನ್ನಲಾಗಿದೆ. ಉತ್ತರ ಪ್ರದೇಶ ಮೂಲದವರಾದರು ಶಮಿ ದೇಶೀಯ ಕ್ರಿಕೆಟ್ನಲ್ಲಿ ಬಂಗಾಳವನ್ನು ಪ್ರತಿನಿಧಿಸುತ್ತಾರೆ. ಹೀಗಾಗಿ ಅವರಿಗೆ ಬಂಗಾಳದಲ್ಲಿಯೂ ಅಪಾರ ಸಂಖ್ಯೆಯ ಅಭಿಮಾನಿ ಬಳಗವಿದೆ. ಇದಲ್ಲದೆ ಬಂಗಾಳದಲ್ಲಿ ಬಿಜೆಪಿಗೆ ಇನ್ನೂ ಅಷ್ಟಾಗಿ ಪ್ರಾಬಲ್ಯ ಸಾಧಿಸಲು ಸಾಧ್ಯವಾಗಿಲ್ಲ. ಇದೀಗ ಶಮಿಯ ಮೂಲಕ ಈ ಪ್ರಾಬಲ್ಯ ಸಾಧಿಸಲು ಬಿಜೆಪಿ ಯೋಚಿಸುತ್ತಿದೆ ಎನ್ನಲಾಗಿದೆ.