ಬೆಂಗಳೂರು: ಹಾಲಿ ಟಿ20 ವಿಶ್ವಕಪ್ ಟೂರ್ನಿಯ(T20 World Cup 2024) ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್(India vs England Semi Final 2) ತಂಡವನ್ನು 68 ರನ್ಗಳಿಂದ ಮಣಿಸಿ ಫೈನಲ್ ಪ್ರವೇಶಿಸಿದ ಭಾರತ ತಂಡಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್(D. K. Shivakumar) ಶುಭ ಹಾರೈಸಿದ್ದಾರೆ. ಜತೆಗೆ ಟೀಮ್ ಇಂಡಿಯಾದ(team india) ಸಾಧನೆಯನ್ನು ಕೊಂಡಾಡಿದ್ದಾರೆ.
“ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಟೀಂ ಇಂಡಿಯಾ ಆಟಗಾರರ ಗಮನಾರ್ಹ ಪ್ರದರ್ಶನಕ್ಕೆ ಅಭಿನಂದನೆಗಳು!. ಟೂರ್ನಿಯುದ್ದಕ್ಕೂ ನೀವು ತೋರಿದ ಸಂಘಟಿತ ಪ್ರದರ್ಶನೇ ಈ ಯಶಸ್ಸಿಗೆ ಕಾರಣ. ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿಯೂ ಇದೇ ಸ್ಫೂರ್ತಿಯಿಂದ ಆಡುವ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸುವಂತಾಗಲಿ. ಫೈನಲ್ ಪಂದ್ಯಕ್ಕೆ ಶುಭ ಹಾರೈಸುತ್ತೇನೆ” ಎಂದು ಭಾರತ ತಂಡ ಫೋಟೊ ಹಂಚಿಕೊಂಡು ಟ್ವೀಟ್ ಮಾಡಿದ್ದಾರೆ.
ಗುರುವಾರ ತಡರಾತ್ರಿ ಗಯಾನದ ಪ್ರೊವಿಡೆನ್ಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಭಾರತ, ರೋಹಿತ್ ಶರ್ಮ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ಗೆ 171 ರನ್ ಬಾರಿಸಿ ಸವಾಲೊಡ್ಡಿತು. ಜವಾಬಿತ್ತ ಇಂಗ್ಲೆಂಡ್ ನಾಟಕೀಯ ಕುಸಿತ ಕಂಡು 16.4 ಓವರ್ಗಳಲ್ಲಿ 103 ರನ್ಗೆ ಸರ್ವಪತನ ಕಂಡಿತು.
ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ 2022ರ ಟಿ20 ವಿಶ್ವಕಪ್ ಸೆಮಿಫೈನಲ್ ಸೋಲಿನ ಸೇಡನ್ನು ತೀರಿಸಿಕೊಂಡಿತು. ಅಂದು ಅಡಿಲೇಡ್ ಓವಲ್‌ನಲ್ಲಿ ನಡೆದಿದ್ದ ಸೆಮಿ ಪಂದ್ಯದಲ್ಲಿ ಇಂಗ್ಲೆಂಡ್ 10 ವಿಕೆಟ್‌ಗಳಿಂದ ಭರ್ಜರಿಯಾಗಿ ರೋಹಿತ್ ಪಡೆಯನ್ನು ಮಗುಚಿ ಫೈನಲ್ ಪ್ರವೇಶಿಸಿತ್ತು. ಈ ಬಾರಿ ಭಾರತ ತಂಡ ಇಂಗ್ಲೆಂಡ್ ಮಣಿಸಿ ಫೈನಲ್ ಪ್ರವೇಶಿಸಿತು. ಅಲ್ಲಿಗೆ ಲೆಕ್ಕ ಚುಕ್ತಾ ಗೊಂಡಿತು. ಶನಿವಾರ ಬಾರ್ಬಡೋಸ್ನಲ್ಲಿ ನಡೆಯುವ ಫೈನಲ್ ಪಂದ್ಯದಲ್ಲಿ ರೋಹಿತ್ ಪಡೆ ದಕ್ಷಿಣ ಆಫ್ರಿಕಾದ ಸವಾಲು ಎದುರಿಸಲಿದೆ. ಕೂಟದ ಅಜೇಯ ತಂಡಗಳ ನಡುವಣ ಈ ಪ್ರಶಸ್ತಿ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.
ಇದನ್ನೂ ಓದಿ IND vs ENG Semi Final: ಇಂಗ್ಲೆಂಡ್ ಮಣಿಸಿ 10 ವರ್ಷಗಳ ಬಳಿಕ ಫೈನಲ್ ಪ್ರವೇಶಿಸಿದ ಭಾರತ
ಡಿಕೆಶಿ ಮುಖ್ಯಮಂತ್ರಿ ಮಾಡಿ ಎಂದು ಸಿಎಂಗೆ ಒತ್ತಾಯಿಸಿದ ಚಂದ್ರಶೇಖರ ಸ್ವಾಮೀಜಿ
ಡಿಕೆ ಶಿವಕುಮಾರ್ (DK Shivakumar) ಅವರನ್ನು ಸಿಎಂ ಮಾಡಿ ಎಂದು ಸ್ವಾಮೀಜಿಯೊಬ್ಬರು ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದೆ ವೇದಿಕೆಯ ಮೇಲೆಯೇ ಬೇಡಿಕೆ ಇಟ್ಟ ಪ್ರಸಂಗ ನಿನ್ನೆ(ಗುರುವಾರ) ನಡೆದ ಕೆಂಪೇಗೌಡ ಜಯಂತಿ (Kempegowda Jayanthi) ಕಾರ್ಯಕ್ರಮದಲ್ಲಿ ನಡೆದಿದೆ. ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Chandrashekhara swamiji) ಅವರು ಸಿದ್ದರಾಮಯ್ಯ ಅವರಿಗೆ ವೇದಿಕೆಯಲ್ಲೇ ಬಹಿರಂಗವಾಗಿ ಈ ಬೇಡಿಕೆಯನ್ನು ಇಟ್ಟಿದ್ದಾರೆ.
ಎಲ್ಲರೂ ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿಕೆ ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಡಿಕೆಶಿ ಸಿಎಂ ಆಗುವ ಕುರಿತು ಮತ್ತು ಹೊಸ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಕಾಂಗ್ರೆಸ್ ನಾಯಕರೊಳಗೇ ಬಣ ರಾಜಕೀಯ ನಡೆಯುತ್ತಿದೆ. ಹಲವಾರು ಕಾಂಗ್ರೆಸ್ ನಾಯಕರು, ಇನ್ನಷ್ಟು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬ ವಾದ ಮುಂದಿಟ್ಟಿದ್ದಾರೆ. ಇದೀಗ, ಒಕ್ಕಲಿಗರೊಬ್ಬರು ಸಿಎಂ ಆಗಬೇಕು ಎಂದು ಒಕ್ಕಲಿಗ ಸ್ವಾಮೀಜಿಗಳೇ ಹೇಳುವ ಮೂಲಕ ಈ ಬಣ ರಾಜಕೀಯಕ್ಕೆ ಇನ್ನಷ್ಟು ತುಪ್ಪ ಸುರಿದಂತಾಗಿದೆ.