Danushka Gunathilaka | ಅತ್ಯಾಚಾರ ಆರೋಪಿ ದನುಷ್ಕ ಗುಣತಿಲಕಗೆ ಷರತ್ತುಬದ್ಧ ಜಾಮೀನು - Vistara News

Latest

Danushka Gunathilaka | ಅತ್ಯಾಚಾರ ಆರೋಪಿ ದನುಷ್ಕ ಗುಣತಿಲಕಗೆ ಷರತ್ತುಬದ್ಧ ಜಾಮೀನು

ಕೆಲವು ದಿನಗಳ ಹಿಂದೆ ಅತ್ಯಾಚಾರ ಆರೋಪ ಹೊತ್ತು ಆಸ್ಟ್ರೇಲಿಯಾದಲ್ಲಿ ಬಂಧನಕ್ಕೊಳಗಾಗಿದ್ದ ಶ್ರೀಲಂಕಾ ಕ್ರಿಕೆಟಿಗ ಧನುಷ್ಕ ಗುಣತಿಲಕಗೆ (Danushka Gunathilaka) ಅಂತಿಮವಾಗಿ ಜಾಮೀನು ಮಂಜೂರಾಗಿದೆ.

VISTARANEWS.COM


on

Danushka Gunathilaka Granted Bail
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಿಡ್ನಿ: ಲೈಂಗಿಕ ದೌರ್ಜನ್ಯ ಆರೋಪದಿಂದ ಆಸ್ಟ್ರೇಲಿಯಾದಲ್ಲಿ ಸೆರೆಯಾಗಿದ್ದ ಶ್ರೀಲಂಕಾ ಕ್ರಿಕೆಟಿಗ ದನುಷ್ಕ ಗುಣತಿಲಕ(Danushka Gunathilaka) ಅವರಿಗೆ ಗುರುವಾರ ಆಸ್ಟ್ರೇಲಿಯಾದ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 29 ವರ್ಷದ ಆಸ್ಟ್ರೇಲಿಯಾದ ಯುವತಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿರುವ ಗುಣತಿಲಕೆಗೆ ಸದ್ಯಕ್ಕೆ ರಿಲೀಫ್ ಸಿಕ್ಕಿದ್ದು, ಇದಕ್ಕಾಗಿ 1 ಕೋಟಿ ರೂ. ಠೇವಣಿ ಕೂಡ ಇರಿಸಿಕೊಳ್ಳಲಾಗಿದೆ.

11 ರಾತ್ರಿ ಪೊಲೀಸ್‌ ಕಸ್ಟಡಿಯಲ್ಲಿ ಕಳೆದ ದನುಷ್ಕ ಗುಣತಿಲಕಗೆ ಜಾಮೀನು ನೀಡಲು ಸೆಂಟ್ರಲ್ ಕೋರ್ಟ್ ನಿರಾಕರಿಸಿತ್ತು. ಪರಿಣಾಮ ಗುಣತಿಲಕ ಪರ ವಕೀಲರು ನ್ಯೂ ಸೌತ್‌ ವೇಲ್ಸ್‌ನ ಸುಪ್ರೀಂ ಕೋರ್ಟ್‌ಗೆ ಜಾಮೀನಿಗಾಗಿ ಅರ್ಜಿ ಹಾಕಿದ್ದರು. ಇದೀಗ ಶ್ರೀಲಂಕಾ ಕ್ರಿಕೆಟ್ ಸಂಸ್ಥೆ ನೆರವಿನಿಂದ ಜಾಮೀನು ಪಡೆದ ಗುಣತಿಲಕ ತವರಿಗೆ ತೆರಳಬಹುದಾಗಿದೆ. ಆದರೆ ಯಾವುದೇ ರೀತಿಯ ಸಾಕ್ಷ್ಯಾನಾಶ ಕೃತ್ಯದಲ್ಲಿ ಜತೆಗೆ ಟಿಂಡರ್ ಅಥವಾ ಯಾವುದೇ ಇತರ ಡೇಟಿಂಗ್ ಅಪ್ಲಿಕೇಶನ್‌ಗಳನ್ನು ಬಳಸದಂತೆ ವಿವಿಧ ಷರತ್ತುಗಳನ್ನು ವಿಧಿಸಲಾಗಿದೆ.

ನವೆಂಬರ್ ತಿಂಗಳ ಆರಂಭದಲ್ಲಿ 29 ವರ್ಷದ ಆಸ್ಟ್ರೇಲಿಯಾದ ಯುವತಿ ಮೇಲೆ ಬಲವಂತದ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ದನುಷ್ಕ ಗುಣತಿಲಕ ಬಂಧನಕ್ಕೊಳಗಾಗಿದ್ದರು.

ಇದನ್ನೂ ಓದಿ | MS Dhoni | ಈ ಬಾರಿಯೂ ಸಿಎಸ್​ಕೆಗೆ ಮಹೇಂದ್ರ ಸಿಂಗ್​ ಧೋನಿಯೇ ಸಾರಥಿ; ಕೆ.ಎಸ್. ವಿಶ್ವನಾಥನ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

Mysore lok sabha Constituency :ಇತ್ತೀಚಿನ ಎರಡು ಚುನಾವಣೆಗಳಲ್ಲಿ ಬಿಜೆಪಿ ಪ್ರತಾಪ್ ಸಿಂಹ ಈ ಕ್ಷೇತ್ರದಲ್ಲಿ ಬಿಜೆಪಿ ಸ್ಥಾನ ಭದ್ರಪಡಿಸಿಕೊಂಡಿದ್ದರು. ಈ ಕ್ಷೇತ್ರವು ಮೈಸೂರು ಜಿಲ್ಲೆಯ ಭಾಗ ಮತ್ತು ಇಡೀ ಕೊಡಗು ಜಿಲ್ಲೆಯನ್ನು ಒಳಗೊಂಡಿದೆ. ಭಾರತದ ಚುನಾವಣಾ ಆಯೋಗದ ಪ್ರಕಾರ, 2019 ರಲ್ಲಿ ಒಟ್ಟು 18,96,333 ಮತದಾರರಿದ್ದರು.

VISTARANEWS.COM


on

Mysore lok sabha constituency
Koo

ಬೆಂಗಳೂರು: ಕಾಂಗ್ರೆಸ್ ಪ್ರಾಬಲ್ಯದ ಮೈಸೂರು ಲೋಕ ಸಭಾ ಕ್ಷೇತ್ರವು (Mysore lok sabha Constituency) ಕಳೆದ ಎರಡು ಚುನಾವಣೆಗಳಲ್ಲಿ ಸಂಪೂರ್ಣ ಬದಲಾವಣೆಗೆ ಸಾಕ್ಷಿಯಾಗಿದೆ. ಪ್ರತಾಪ್ ಸಿಂಹ (Pratap Simha) ಸತತ ಎರಡು ಬಾರಿ ಗೆದ್ದಿರುವ ಕ್ಷೇತ್ರದಲ್ಲಿ ಬಿಜೆಪಿ ತನ್ನ ಬಲವನ್ನು ಸಾಬೀತುಪಡಿಸಿದೆ. ಅದಕ್ಕಿಂತ ಹಿಂದೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸೇರಿದಂತೆ ಹಿಂದಿನ ಮೈಸೂರು ರಾಜಮನೆತನದ ಸದಸ್ಯರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದರು. ಈ ಬಾರಿ ಮೈಸೂರು ಕ್ಷೇತ್ರದಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮೈಸೂರಿನ ಕೆಲವು ಪ್ರದೇಶಗಳಲ್ಲಿ ಹಿಡಿತ ಹೊಂದಿರುವ ಬಿಜೆಪಿಯ ಮೈತ್ರಿ ಪಾಲುದಾರ ಜೆಡಿಎಸ್ ಅವರ ಗೆಲುವಿನ ಅಭಿಯಾನದಲ್ಲಿ ಸಾಥ್ ನೀಡಿದೆ. ಹೀಗಾಗಿ ಈ ಬಾರಿಯ ಚುನಾವಣೆ ‘ಕಿಂಗ್ ವರ್ಸಸ್ ಆರ್ಡಿನರಿ ಸಿಟಿಜನ್’ ಎಂಬ ಟ್ಯಾಗ್ ಲೈನ್ ಹೊಂದಿದೆ. ಕಾಂಗ್ರೆಸ್​ನಿಂದ ಆ ಪಕ್ಷದ ರಾಜ್ಯ ವಕ್ತಾರ ಲಕ್ಷ್ಮಣ ಕಣದಲ್ಲಿದ್ದಾರೆ.

1977 ರಲ್ಲಿ ರಚನೆಯಾದ ಮೈಸೂರು ಲೋಕಸಭಾ ಕ್ಷೇತ್ರವು ಮುಖ್ಯವಾಗಿ ಕಾಂಗ್ರೆಸ್ ಪ್ರಭಾವ ಹೊಂದಿತ್ತು. ಎಚ್.ಡಿ.ತುಳಸೀದಾಸ್, ಎಂ. ರಾಜಶೇಖರಮೂರ್ತಿ ಮತ್ತು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರಂತಹ ಗಮನಾರ್ಹ ನಾಯಕರು ಇಲ್ಲಿ ಗೆದ್ದಿದ್ದರು. ಇತ್ತೀಚಿನ ಎರಡು ಚುನಾವಣೆಗಳಲ್ಲಿ ಬಿಜೆಪಿ ಪ್ರತಾಪ್ ಸಿಂಹ ಈ ಕ್ಷೇತ್ರದಲ್ಲಿ ಬಿಜೆಪಿ ಸ್ಥಾನ ಭದ್ರಪಡಿಸಿಕೊಂಡಿದ್ದರು. ಈ ಕ್ಷೇತ್ರವು ಮೈಸೂರು ಜಿಲ್ಲೆಯ ಭಾಗ ಮತ್ತು ಇಡೀ ಕೊಡಗು ಜಿಲ್ಲೆಯನ್ನು ಒಳಗೊಂಡಿದೆ. ಭಾರತದ ಚುನಾವಣಾ ಆಯೋಗದ ಪ್ರಕಾರ, 2019 ರಲ್ಲಿ ಒಟ್ಟು 18,96,333 ಮತದಾರರಿದ್ದರು.

ಕ್ಷೇತ್ರದ ವ್ಯಾಪ್ತಿಯೇನು?

ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್ 5, ಜೆಡಿಎಸ್ 2, ಬಿಜೆಪಿ 1 ಸ್ಥಾನ ಹೊಂದಿವೆ. ಸರಾಸರಿ ಸಾಕ್ಷರತಾ ಪ್ರಮಾಣವು ಸುಮಾರು 67,65% ರಷ್ಟಿದೆ. ಸುಮಾರು 977500 ನಗರ ಮತದಾರರು 51.6% ರಷ್ಟಿದ್ದಾರೆ. ಎಸ್ಸಿ ಮತ್ತು ಎಸ್ಟಿ ಮತದಾರರು ಸುಮಾರು 13.9% ರಷ್ಟಿದ್ದಾರೆ.

ಹಿಂದಿನ ಮೂರು ಚುನಾವಣಾ ಫಲಿತಾಂಶಗಳು

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​​ನ ಸಿ.ಎಚ್.ವಿಜಯಶಂಕರ್ ಅವರನ್ನು 1,38,647 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.52.27ರಷ್ಟು ಮತಗಳನ್ನು ಪಡೆದಿತ್ತು.

ಇದನ್ನೂ ಓದಿ : Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​ನ ಅಡಗೂರು ಎಚ್.ವಿಶ್ವನಾಥ್ ಅವರನ್ನು 31,608 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.43.46ರಷ್ಟು ಮತಗಳನ್ನು ಗಳಿಸಿದೆ

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಅಡಗೂರು ಎಚ್.ವಿಶ್ವನಾಥ್ ಅವರು ಬಿಜೆಪಿಯ ಸಿ.ಎಚ್.ವಿಜಯಶಂಕರ್ ಅವರನ್ನು 7,691 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ 36.42% ಮತಗಳನ್ನು ಪಡೆದಿತ್ತು.

ಬೌಗೋಳಿಕ ಗಡಿಗಳು

ಮೈಸೂರು ಲೋಕಸಭೆ ಕ್ಷೇತ್ರ ಭಾರತದ ದಕ್ಷಿಣ ಪ್ರದೇಶ ಮತ್ತು ಕರ್ನಾಟಕದ ದಕ್ಷಿಣ ಕರ್ನಾಟಕ ಪ್ರದೇಶದಲ್ಲಿದೆ. ಈ ಸ್ಥಾನವು ಕರ್ನಾಟಕದ ಕೊಡಗು, ಮೈಸೂರು ಜಿಲ್ಲೆಗಳನ್ನು ಒಳಗೊಂಡಿದೆ.

Continue Reading

ಪ್ರಮುಖ ಸುದ್ದಿ

Hyderabad City : ಹೈದರಾಬಾದ್​ ಇನ್ನು ತೆಲಂಗಾಣಕ್ಕಷ್ಟೇ ರಾಜಧಾನಿ; ಏನಿದು ವಿಂಗಡಣೆ?

Hyderabad City : ನಿಗದಿತ ದಿನದಂದು (ಜೂನ್ 2ರಂದು) ಅಸ್ತಿತ್ವದಲ್ಲಿರುವ ಆಂಧ್ರಪ್ರದೇಶದ ಹೈದರಾಬಾದ್, ಹತ್ತು ವರ್ಷಗಳ ಕಾಲ ಮೀರದೇ ತೆಲಂಗಾಣ ರಾಜ್ಯ ಮತ್ತು ಆಂಧ್ರಪ್ರದೇಶ ರಾಜ್ಯದ ಸಾಮಾನ್ಯ ರಾಜಧಾನಿಯಾಗಲಿದೆ” ಎಂದು ಆಂಧ್ರಪ್ರದೇಶ ಮರುವಿಂಗಡಣೆ ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

Hyderabad City : Hyderabad no longer joint capital of Andhra Pradesh, Telangana from today
Koo

ಬೆಂಗಳೂರು : ಅಖಂಡ ಆಂಧ್ರಪ್ರದೇಶವನ್ನು ತೆಲಂಗಾಣ ಮತ್ತು ಆಂಧ್ರಪ್ರದೇಶವವೆಂದು ಮರು ವಿಂಗಡಣೆ ಮಾಡುವ ಕಾಯ್ದೆ, 2014 ರ ಪ್ರಕಾರ ಮುತ್ತಿನ ನಗರವಾಗಿರುವ ಹೈದರಾಬಾದ್ (Hyderabad City), ಭಾನುವಾರದಿಂದ ತೆಲಂಗಾಣ ಮತ್ತು ಆಂಧ್ರಪ್ರದೇಶದ ಜಂಟಿ ರಾಜಧಾನಿಯಾಗಿರುವುದಿಲ್ಲ. ಜೂನ್ 2 ರಿಂದ ಹೈದರಾಬಾದ್ ಕೇವಲ ತೆಲಂಗಾಣದ ರಾಜಧಾನಿಯಾಗಿರಲಿದೆ.

2014ರಲ್ಲಿ ಅವಿಭಜಿತ ಆಂಧ್ರಪ್ರದೇಶದ ವಿಭಜನೆಯಾದಾಗ ಹೈದರಾಬಾದ್ ಅನ್ನು 10 ವರ್ಷಗಳ ಕಾಲ ಎರಡು ರಾಜ್ಯಗಳ ರಾಜಧಾನಿಯನ್ನಾಗಿ ಆಯ್ಕೆ ಮಾಡಲಾಗಿತ್ತು. ಅಂತೆಯೇ ತೆಲಂಗಾಣ ಜೂನ್ 2, 2014 ರಂದು ಅಸ್ತಿತ್ವಕ್ಕೆ ಬಂದಿತ್ತು.

ನಿಗದಿತ ದಿನದಂದು (ಜೂನ್ 2ರಂದು) ಅಸ್ತಿತ್ವದಲ್ಲಿರುವ ಆಂಧ್ರಪ್ರದೇಶದ ಹೈದರಾಬಾದ್, ಹತ್ತು ವರ್ಷಗಳ ಕಾಲ ಮೀರದೇ ತೆಲಂಗಾಣ ರಾಜ್ಯ ಮತ್ತು ಆಂಧ್ರಪ್ರದೇಶ ರಾಜ್ಯದ ಸಾಮಾನ್ಯ ರಾಜಧಾನಿಯಾಗಲಿದೆ” ಎಂದು ಆಂಧ್ರಪ್ರದೇಶ ಮರುವಿಂಗಡಣೆ ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆ.

“ಉಪ-ವಿಭಾಗ (1) ರಲ್ಲಿ ಉಲ್ಲೇಖಿಸಲಾದ ಅವಧಿ ಮುಗಿದ ನಂತರ, ಹೈದರಾಬಾದ್ ತೆಲಂಗಾಣ ರಾಜ್ಯದ ರಾಜಧಾನಿಯಾಗಲಿದೆ ಮತ್ತು ಆಂಧ್ರಪ್ರದೇಶ ರಾಜ್ಯಕ್ಕೆ ಹೊಸ ರಾಜಧಾನಿ ಇರುತ್ತದೆ” ಎಂದು ಅದು ಹೇಳಿದೆ. ಅಮರಾವತಿ ನಗರವನ್ನು ಆಂಧ್ರಪ್ರದೇಶ ತನ್ನ ರಾಜಧಾನಿಯಾಗಿ ಆಯ್ಕೆ ಮಾಡಿದೆ.

ಫೆಬ್ರವರಿ 2014ರಲ್ಲಿ ಸಂಸತ್ತಿನಲ್ಲಿ ಆಂಧ್ರಪ್ರದೇಶ ಮರುಸಂಘಟನೆ ಮಸೂದೆಯನ್ನು ಅಂಗೀಕರಿಸಲಾಗಿತ್ತು. ನಂತರ ಜೂನ್ 2, 2014 ರಂದು ತೆಲಂಗಾಣ ರಚನೆಯು ದಶಕಗಳ ಬೇಡಿಕೆಯ ಈಡೇರಿಕೆಯಾಗಿತ್ತು. ಆಂಧ್ರಪ್ರದೇಶದ ಆಡಳಿತಕ್ಕಾಗಿ 10 ವರ್ಷಗಳ ಅವಧಿಗೆ ನೀಡಲಾದ ಹೈದರಾಬಾದ್​ನ ಲೇಕ್ ವ್ಯೂ ಸರ್ಕಾರಿ ಅತಿಥಿ ಗೃಹದಂತಹ ಕಟ್ಟಡಗಳನ್ನು ಜೂನ್ 2 ರ ನಂತರ ಸ್ವಾಧೀನಪಡಿಸಿಕೊಳ್ಳುವಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಕಳೆದ ತಿಂಗಳು ಅಧಿಕಾರಿಗಳಿಗೆ ತಿಳಿಸಿದ್ದರು.

ಇದನ್ನೂ ಓದಿ: Lok Sabha Election 2024: ಮತ ಎಣಿಕೆಗೆ 1 ದಿನವಷ್ಟೇ ಬಾಕಿ; ಚುನಾವಣಾ ಆಯೋಗದ ಕದ ತಟ್ಟಿದ ಎನ್‌ಡಿಎ, ʼಇಂಡಿಯಾʼ ಮೈತ್ರಿಕೂಟ

ಪ್ರತ್ಯೇಕಗೊಂಡು ಹತ್ತು ವರ್ಷಗಳ ನಂತರವೂ, ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವೆ ಆಸ್ತಿಗಳ ವಿಭಜನೆಯಂತಹ ಹಲವಾರು ಸಮಸ್ಯೆಗಳು ಇನ್ನೂ ಬಗೆಹರಿದಿಲ್ಲ. ತೆಲಂಗಾಣ ಸರ್ಕಾರವು ಕ್ಯಾಬಿನೆಟ್ ಸಭೆಯಲ್ಲಿ ವಿಭಜನೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಪ್ರಯತ್ನಿಸಿತ್ತು. ಆದರೆ ಲೋಕಸಭಾ ಚುನಾವಣೆಯ ನೀತಿ ಸಂಹಿತೆಯನ್ಮಾನು ಗಮನದಲ್ಲಿಟ್ಟುಕೊಂಡು ಚುನಾವಣಾ ಆಯೋಗವು ಅದಕ್ಕೆ ಅನುಮೋದನೆ ನೀಡಿಲ್ಲ.

Continue Reading

ಪ್ರಮುಖ ಸುದ್ದಿ

Chikballapur lok sabha constituency : ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ ಇನ್ನಷ್ಟು ಬಲ ತರುವರೇ ಸುಧಾಕರ್​?

Chikballapur lok sabha constituency : ಚಿಕ್ಕಬಳ್ಳಾಪುರ ಕ್ಷೇತ್ರ ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲವು ಭಾಗಗಳನ್ನು ಒಳಗೊಂಡಿದೆ. ಗೌರಿಬಿದನೂರು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಯಲಹಂಕ, ಹೊಸಕೋಟೆ, ದೇವನಹಳ್ಳಿ (ಎಸ್ಸಿ), ದೊಡ್ಡಬಳ್ಳಾಪುರ ಮತ್ತು ನೆಲಮಂಗಲ (ಎಸ್ಸಿ) ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಇದು ದೇಶದ 35 ನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಜಿಲ್ಲೆ ಹಾಗೂ ಸರಾಸರಿ 71% ಸಾಕ್ಷರತಾ ಪ್ರಮಾಣ ಹೊಂದಿದೆ.

VISTARANEWS.COM


on

Chikballapur lok sabha constituency
Koo

ಬೆಂಗಳೂರು : ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರ (Chikballapur lok sabha constituency) ಕರ್ನಾಟಕದ ಪ್ರಮುಖ ಕ್ಷೇತ್ರಗಳಲ್ಲಿ ಒಂದು. 1977 ರಲ್ಲಿ ಕ್ಷೇತ್ರ ಮರು ವಿಂಗಡಣೆ ನಂತರ ಈ ಕ್ಷೇತ್ರ ಅಸ್ತಿತ್ವಕ್ಕೆ ಬಂತು. ಇದು ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲವು ಭಾಗಗಳನ್ನು ಒಳಗೊಂಡಿದೆ. ಗೌರಿಬಿದನೂರು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಯಲಹಂಕ, ಹೊಸಕೋಟೆ, ದೇವನಹಳ್ಳಿ (ಎಸ್ಸಿ), ದೊಡ್ಡಬಳ್ಳಾಪುರ ಮತ್ತು ನೆಲಮಂಗಲ (ಎಸ್ಸಿ) ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಇದು ದೇಶದ 35 ನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಜಿಲ್ಲೆ ಹಾಗೂ ಸರಾಸರಿ 71% ಸಾಕ್ಷರತಾ ಪ್ರಮಾಣ ಹೊಂದಿದೆ.

ಈ ಬಾರಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಅವರ ಪುತ್ರ ರಕ್ಷಾ ರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. 1977ರಿಂದೀಚೆಗೆ ಚಿಕ್ಕಬಳ್ಳಾಪುರದಲ್ಲಿ ಒಟ್ಟು 12 ಚುನಾವಣೆಗಳು ನಡೆದಿವೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ 10 ಬಾರಿ, ಜನತಾದಳ ಮತ್ತು ಬಿಜೆಪಿ ತಲಾ ಒಂದು ಬಾರಿ ಗೆಲುವು ಸಾಧಿಸಿವೆ. 1996ರ ಲೋಕಸಭಾ ಚುನಾವಣೆಯಲ್ಲಿ ಆರ್.ಎಲ್.ಜಾಲಪ್ಪ ಗೆಲುವು ಸಾಧಿಸಿದ್ದರು. ದೇವೇಗೌಡ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದ ಜಾಲಪ್ಪ ಅವರು 1998ರ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧಿಸಿ ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 2009 ಮತ್ತು 2014 ರಲ್ಲಿ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಈ ಸ್ಥಾನವನ್ನು ಸತತವಾಗಿ ಗೆದ್ದರು.

ಈ ಹಿಂದೆ ಗೆದ್ದವರು ಯಾರು?

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರು ಕಾಂಗ್ರೆಸ್​ನ ಎಂ.ವೀರಪ್ಪ ಮೊಯ್ಲಿ ಅವರನ್ನು 1,82,110 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.53.74ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಎಂ.ವೀರಪ್ಪ ಮೊಯ್ಲಿ ಅವರು ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರನ್ನು 9,520 ಮತಗಳ ಕೆಲವೇ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ 33.63% ಮತಗಳನ್ನು ಗಳಿಸಿದೆ.

ಇದನ್ನೂ ಓದಿ: Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

2009ರ ಸಾರ್ವತ್ರಿಕ ಚುನಾವಣೆಯಲ್ಲಿ ವೀರಪ್ಪ ಮೊಯ್ಲಿ ಅವರು ಬಿಜೆಪಿಯ ಅಶ್ವತ್ಥನಾರಾಯಣ ಅವರನ್ನು 51,381 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ ಈ ಕ್ಷೇತ್ರದಲ್ಲಿ 39.9% ಮತಗಳನ್ನು ಹೊಂದಿತ್ತು. 2014ರ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡ ಈ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. 2009ಕ್ಕೂ ಮೊದಲು ಕಾಂಗ್ರೆಸ್ ನ ಆರ್.ಎಲ್.ಜಾಲಪ್ಪ ಸತತ ನಾಲ್ಕು ಬಾರಿ ಗೆಲುವು ಸಾಧಿಸಿದ್ದರು.

ಕ್ಷೇತ್ರ ಹೇಗಿದೆ?

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಎಂಟು ಲೋಕಸಭಾ ಕ್ಷೇತ್ರಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಚಿಕ್ಕಬಳ್ಳಾಪುರಕ್ಕೆ ಹೊಂದಿಕೊಂಡಿರುವ ಇತರ ಲೋಕಸಭಾ ಕ್ಷೇತ್ರಗಳು ಹೀಗಿವೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಆಂಧ್ರಪ್ರದೇಶ: ಹಿಂದೂಪುರ, ರಾಜಂಪೇಟೆ. ಈ ಕ್ಷೇತ್ರವು ಆಂಧ್ರಪ್ರದೇಶದೊಂದಿಗೆ ಅಂತರರಾಜ್ಯ ಗಡಿಯನ್ನು ಹಂಚಿಕೊಂಡಿದೆ

ಈ ಕ್ಷೇತ್ರದಲ್ಲಿ ಶೇ.70.1ರಷ್ಟು ಗ್ರಾಮೀಣ ಮತದಾರರಿದ್ದಾರೆ. ಸರಾಸರಿ ಸಾಕ್ಷರತಾ ಪ್ರಮಾಣವು 69.76% – ಮಹಿಳೆಯರಲ್ಲಿ 61.55% ಮತ್ತು ಪುರುಷರಲ್ಲಿ 77.75% ಆಗಿತ್ತು. 2011 ರ ಜನಗಣತಿಯ ಅಂಕಿಅಂಶಗಳ ಪ್ರಕಾರ ಚಿಕ್ಕಬಳ್ಳಾಪುರದ ಜನಸಂಖ್ಯೆ 1255104.

Continue Reading

ಪ್ರಮುಖ ಸುದ್ದಿ

Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

kolar lok sabha constituency : ಸ್ವಾತಂತ್ರ್ಯದ ನಂತರ ನಡೆದ ಒಟ್ಟು 16 ಚುನಾವಣೆಗಳಲ್ಲಿ 15 ರಲ್ಲಿ ಕಾಂಗ್ರೆಸ್​ ಗೆದ್ದಿದ್ದು, ಈ ಪಕ್ಷದಭದ್ರಕೋಟೆ ಎಂದು ಕರೆಯಬಹುದು. ಬಿಜೆಪಿಗೆ ಇಲ್ಲಿ ತನ್ನ ಛಾಪು ಮೂಡಿಸಲು ಸಾಧ್ಯವಾಗಿಲ್ಲ. 1984ರಲ್ಲಿ ಜನತಾ ಪಕ್ಷದ ವಿ.ವೆಂಕಟೇಶ್ ಗೆಲುವು ಸಾಧಿಸಿದಾಗ ಕಾಂಗ್ರೆಸ್ ಪಕ್ಷ ಈ ಸ್ಥಾನವನ್ನು ಕಳೆದುಕೊಂಡಿತ್ತು. 2019ರಲ್ಲಿ ಬಿಜೆಪಿಯ ಎಸ್​, ಮುನಿಸ್ವಾಮಿ ಗೆಲುವು ಸಾಧಿಸಿದ್ದರು.

VISTARANEWS.COM


on

kolar lok sabha constituency
Koo

ಕರ್ನಾಟಕದ ಕೋಲಾರ ಪ್ರದೇಶವು ಖನಿಜ ಸಂಪತ್ತಿನ ಮೂಲಕ ಪ್ರಖ್ಯಾತಿ. ಕೆಜಿಎಫ್​​ ಚಿನ್ನ ಗಣಿ ಇಲ್ಲಿದೆ. ಈ ಪ್ರದೇಶವು ಹಾಲು ಉತ್ಪಾದನೆಯಲ್ಲಿಯೂ ದಾಖಲೆಯನ್ನು ನಿರ್ಮಿಸಿದೆ. ರಾಜಧಾನಿ ಬೆಂಗಳೂರಿನಿಂದ 65 ಕಿಲೋಮೀಟರ್​ ದೂರದಲ್ಲಿರುವ ಈ ನಗರವು ದೇವಾಲಯಗಳು ಮತ್ತು ಪ್ರಾಚೀನ ಇತಿಹಾಸಕ್ಕೆ ಹೆಸರುವಾಸಿಯಾಗಿದೆ. ಕೋಲಾರ ಲೋಕಸಭಾ ಕ್ಷೇತ್ರವು (Kolar lok sabha constituency) ಪರಿಶಿಷ್ಟ ಜಾತಿಗೆ ಮೀಸಲಾಗಿರುವ ರಾಜ್ಯದ ಐದು ಲೋಕಸಭಾ ಕ್ಷೇತ್ರಗಳಲ್ಲಿ ಒಂದು . ಇದರ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಿವೆ. ಸ್ವಾತಂತ್ರ್ಯದ ನಂತರ ನಡೆದ ಒಟ್ಟು 16 ಚುನಾವಣೆಗಳಲ್ಲಿ 15 ರಲ್ಲಿ ಕಾಂಗ್ರೆಸ್​ ಗೆದ್ದಿದ್ದು, ಈ ಪಕ್ಷದಭದ್ರಕೋಟೆ ಎಂದು ಕರೆಯಬಹುದು. ಬಿಜೆಪಿಗೆ ಇಲ್ಲಿ ತನ್ನ ಛಾಪು ಮೂಡಿಸಲು ಸಾಧ್ಯವಾಗಿಲ್ಲ. 1984ರಲ್ಲಿ ಜನತಾ ಪಕ್ಷದ ವಿ.ವೆಂಕಟೇಶ್ ಗೆಲುವು ಸಾಧಿಸಿದಾಗ ಕಾಂಗ್ರೆಸ್ ಪಕ್ಷ ಈ ಸ್ಥಾನವನ್ನು ಕಳೆದುಕೊಂಡಿತ್ತು. 2019ರಲ್ಲಿ ಬಿಜೆಪಿಯ ಎಸ್​, ಮುನಿಸ್ವಾಮಿ ಗೆಲುವು ಸಾಧಿಸಿದ್ದರು.

2024 ರ ಲೋಕಸಭಾ ಚುನಾವಣೆಯ 2 ನೇ ಹಂತದಲ್ಲಿ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26, 2024 ರಂದು ಮತದಾನ ನಡೆಯಿತು. ಜೂನ್ 4, 2024 ರಂದು ಮತ ಎಣಿಕೆ ನಡೆಯಲಿದೆ.ಈ ಬಾರಿ ಕಾಂಗ್ರೆಸ್ ನ ಕೆ.ವಿ.ಗೌತಮ್ ಅವರು ಜೆಡಿಎಸ್ ನ ಮಲ್ಲೇಶ್ ಬಾಬು ವಿರುದ್ಧ ಕಣದಲ್ಲಿದ್ದಾರೆ.

ಕೋಲಾರ ಕ್ಷೇತ್ರದ ವಿಶೇಷವೇನು?

ಇದು ಚಿಕ್ಕಬಳ್ಳಾಪುರ ಜಿಲ್ಲೆಯ ಕೆಲವು ಮತ್ತು ಮತ್ತು ಇಡೀ ಕೋಲಾರ ಜಿಲ್ಲೆಯನ್ನು ಈ ಕ್ಷೇತ್ರ ಹೊಂದಿದೆ. 2019ರಲ್ಲಿ ಈ ಕ್ಷೇತ್ರದಲ್ಲಿ 16,29,961 ಮತದಾರರಿದ್ದರು. ಸರಾಸರಿ ಸಾಕ್ಷರತಾ ಪ್ರಮಾಣವನ್ನು 86.13% ಎಂದು ಸೂಚಿಸುತ್ತದೆ – ಅದರಲ್ಲಿ ಪುರುಷರು ಮತ್ತು ಮಹಿಳೆಯರು ಕ್ರಮವಾಗಿ 90.05% ಮತ್ತು 82.18% ರಷ್ಟಿದ್ದಾರೆ. ಕೋಲಾರ ಜಿಲ್ಲೆಯ 68.75% ಜನಸಂಖ್ಯೆಯು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿದೆ.

ಇದನ್ನೂ ಓದಿ: mandya lok sabha constituency : ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಕುಮಾರಸ್ವಾಮಿಗೆ ಗೆಲುವು ಸಿಗುವುದೇ?

ಕೋಲಾರ ಲೋಕಸಭಾ ಕ್ಷೇತ್ರವು ಶಿಡ್ಲಘಟ್ಟ, ಚಿಂತಾಮಣಿ, ಶ್ರೀನಿವಾಸಪುರ, ಮುಳಬಾಗಿಲು, ಕೋಲಾರ ಗೋಲ್ಡ್ ಫೀಲ್ಡ್ಸ್, ಬಂಗಾರಪೇಟೆ, ಕೋಲಾರ ಮತ್ತು ಮಾಲೂರು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಾಂಪ್ರದಾಯಿಕವಾಗಿ ಪ್ರಬಲವಾಗಿವೆ.

ದಶಕಗಳಿಂದ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಈ ಕ್ಷೇತ್ರವನ್ನು 2019 ರಲ್ಲಿ ಬಿಜೆಪಿ ಕಸಿದುಕೊಂಡಿತ್ತು. ಬಿಜೆಪಿಯ ಎಸ್.ಮುನಿಸ್ವಾಮಿ ಅವರು ನಾಲ್ಕು ಬಾರಿ ಕಾಂಗ್ರೆಸ್ ಸಂಸದ ಕೆ.ಎಚ್.ಮುನಿಯಪ್ಪ ವಿರುದ್ಧ ಗೆಲುವು ಸಾಧಿಸಿದ್ದರು.

ಹಿಂದಿನ ಫಲಿತಾಂಶಗಳು ಇಂತಿವೆ

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಎಸ್ .ಮುನಿಸ್ವಾಮಿ ಅವರು ಕಾಂಗ್ರೆಸ್​​ನ ಕೆ.ಎಚ್.ಮುನಿಯಪ್ಪ ಅವರನ್ನು 2,10,021 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.56.32ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಕೆ.ಎಚ್.ಮುನಿಯಪ್ಪ ಅವರು ಜೆಡಿಎಸ್ ನ ಕೋಲಾರ ಕೇಶವ ಅವರನ್ನು 47,850 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ 37.16% ಮತಗಳನ್ನು ಗಳಿಸಿದೆ.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಕೆ.ಎಚ್.ಮುನಿಯಪ್ಪ ಅವರು ಬಿಜೆಪಿಯ ಡಿ.ಎಸ್.ವೀರಯ್ಯ ಅವರನ್ನು 23,006 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ 37.17% ಮತಗಳನ್ನು ಪಡೆದಿತ್ತು.

Continue Reading
Advertisement
Mysore lok sabha constituency
ಪ್ರಮುಖ ಸುದ್ದಿ4 mins ago

Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

Haveri Lok Sabha Constituency
ಹಾವೇರಿ34 mins ago

Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Hyderabad City : Hyderabad no longer joint capital of Andhra Pradesh, Telangana from today
ಪ್ರಮುಖ ಸುದ್ದಿ37 mins ago

Hyderabad City : ಹೈದರಾಬಾದ್​ ಇನ್ನು ತೆಲಂಗಾಣಕ್ಕಷ್ಟೇ ರಾಜಧಾನಿ; ಏನಿದು ವಿಂಗಡಣೆ?

Loksabha Election 2024
Lok Sabha Election 202444 mins ago

Lok Sabha Election 2024: ಮತ ಎಣಿಕೆಗೆ 1 ದಿನವಷ್ಟೇ ಬಾಕಿ; ಚುನಾವಣಾ ಆಯೋಗದ ಕದ ತಟ್ಟಿದ ಎನ್‌ಡಿಎ, ʼಇಂಡಿಯಾʼ ಮೈತ್ರಿಕೂಟ

Chikballapur lok sabha constituency
ಪ್ರಮುಖ ಸುದ್ದಿ1 hour ago

Chikballapur lok sabha constituency : ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ ಇನ್ನಷ್ಟು ಬಲ ತರುವರೇ ಸುಧಾಕರ್​?

Bangalore Rain
ಕರ್ನಾಟಕ1 hour ago

Bangalore Rain: ಬೆಂಗಳೂರಲ್ಲಿ ವರುಣನ ಅಬ್ಬರ; ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

Kannada New Movie
ಸಿನಿಮಾ1 hour ago

Kannada New Movie: ಎಸ್. ನಾರಾಯಣ್ ನಿರ್ದೇಶನದ ಹೊಸ ಚಿತ್ರದಲ್ಲಿ ಒಂದಾದ ದುನಿಯಾ ವಿಜಯ್, ಶ್ರೇಯಸ್ ಮಂಜು

Koppal Lok Sabha Constituency
ಕೊಪ್ಪಳ2 hours ago

Koppal Lok Sabha Constituency: ಮಾಜಿ ಶಾಸಕರ ಪುತ್ರರ ನಡುವಿನ ಸ್ಪರ್ಧೆಯಲ್ಲಿ ಯಾರಾಗುವರು ಸಂಸದ?

kolar lok sabha constituency
ಪ್ರಮುಖ ಸುದ್ದಿ2 hours ago

Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

Money Guide
ಮನಿ-ಗೈಡ್2 hours ago

Money Guide: ಗೃಹಸಾಲದ ಕಂತು ಪೂರ್ತಿಯಾಯ್ತೆ? ನಿಲ್ಲಿ, ನಿಮ್ಮ ಜವಾಬ್ದಾರಿ ಇನ್ನೂ ಇದೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ12 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 day ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌