Site icon Vistara News

David Johnson: ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ಸಾವು; ಖಿನ್ನತೆಯಿಂದ ಆತ್ಮಹತ್ಯೆ?

David Johnson

David Johnson: Former Indian team player David Johnson committed suicide due to depression

ಬೆಂಗಳೂರು: ಟೀಮ್​ ಇಂಡಿಯಾದ ಮಾಜಿ ಆಟಗಾರ, ಕನ್ನಡಿಗ ಡೇವಿಡ್ ಜಾನ್ಸನ್(52) ಅವರು ಖಿನ್ನತೆಗೆ ಒಳಗಾಗಿ ಕಟ್ಟಡದಿಂದ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕೊತ್ತನೂರು ಬಳಿ ಇರುವ ಅಪಾರ್ಟ್ಮೆಂಟ್ ನಿಂದ ಕೆಳಗೆ ಬಿದ್ದ ಕಾರಣ ಅವರು ಮೃತಪಟ್ಟಿದ್ದಾರೆ. ಆದರೆ ಅವರ ಕುಟುಂಬದವರು, ಆಕಸ್ಮಿಕವಾಗಿ ಬಿದ್ದು ಅವರು ಮೃತಪಟ್ಟಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ಡೇವಿಡ್‌ ಜಾನ್ಸನ್‌ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.

ಅರಸಿಕೆರೆ ಮೂಲದ ಡೇವಿಡ್ ಜಾನ್ಸನ್(David Jude Johnson) ಅವರು 1996ರಲ್ಲಿ ಭಾರತ ಪರ 2 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿ ಇದಾಗಿತ್ತು. ಬ್ಯಾಟಿಂಗ್ ಆಲ್​ರೌಂಡರ್​ ಆಗಿದ್ದ ಅವರು ಟೆಸ್ಟ್​ನಲ್ಲಿ 8 ರನ್​ ಮತ್ತು 3 ವಿಕೆಟ್​ ಕಿತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಅವರಿಗೆ ಭಾರತ ಪರ ಕೊನೆಯ ಪಂದ್ಯವಾಗಿತ್ತು. ಇದಾದ ಬಳಿಕ ಅವರಿಗೆ ತಂಡದಲ್ಲಿ ಅವಕಾಶ ಸಿಕ್ಕಿರರಿಲ್ಲ.

ಇದನ್ನೂ ಓದಿ Team India Coach: ಇಂದು ಟೀಮ್​ ಇಂಡಿಯಾದ ನೂತನ ಕೋಚ್‌ ಹೆಸರು ಘೋಷಣೆ!


ವಿಪರೀತ ಕುಡಿತದ ಚಟ ಹೊಂದಿದ್ದ ಡೇವಿಡ್ ಜಾನ್ಸನ್ ಕೆಲ ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಹೀಗಾಗಿ ಖಿನ್ನತೆಗೆ ಜಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಕೆಪಿಎಲ್​ನಲ್ಲಿ ಬೆಳಗಾವಿ ಪ್ಯಾಂಥರ್ಸ್ ಪರವಾಗಿ ಆಟವಾಡಿದ್ದರು. ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 39 ಪಂದ್ಯಗಳಿಂದ 437 ರನ್​, ಲಿಸ್ಟ್​ 2 ಕ್ರಿಕೆಟ್​ನಲ್ಲಿ 33 ಪಂದ್ಯಗಳನ್ನಾಡಿ 118 ರನ್​ ಬಾರಿಸಿದ್ದಾರೆ.

1971ರ ಅಕ್ಟೋಬರ್ 16ರಂದು ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಜನಿಸಿದ ಡೇವಿಡ್ ಜಾನ್ಸನ್, 90ರ ಕಾಲಘಟ್ಟದಲ್ಲಿ ಅತಿವೇಗದ ಬೌಲಿಂಗ್ ಮಾಡಿದ್ದರು. ಆಸೀಸ್​ ವಿರುದ್ಧದ ಪಂದ್ಯದಲ್ಲಿ ಗಂಟೆಗೆ 157.8 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿ ಆಸ್ಟ್ರೇಲಿಯಾದ ಮೈಕಲ್ ಸ್ಲೇಟರ್ ಅವರ ವಿಕೆಟ್​ ಕಿತ್ತಿದ್ದರು.

ಡೇವಿಡ್ ಜಾನ್ಸನ್ ನಿಧನಕ್ಕೆ ಟೀಮ್​ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಸೇರಿ ಹಲವು ಕ್ರಿಕೆಟಿಗರು ಕಂಬನಿ ಮಿಡಿದಿದ್ದಾರೆ.

Exit mobile version