ಮೆಲ್ಬೋರ್ನ್: ಆಸ್ಟ್ರೇಲಿಯಾ ತಂಡದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ (David Warner) ಅವರು ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಹಲವಾರು ದಾಖಲೆಗಳನ್ನು ಬರೆದಿದ್ದಾರೆ. ಈ ಮೂಲಕ ಅವರು ಬಾಕ್ಸಿಂಗ್ ಡೇ ಟೆಸ್ಟ್ನಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಅದ್ಧೂರಿ ಮನರಂಜನೆ ನೀಡಿದ್ದಾರೆ.
ದಕ್ಷಿಣ ಆಫ್ರಿಕಾ ತಂಡ ಮೊದಲ ಇನಿಂಗ್ಸ್ನಲ್ಲಿ ಪೇರಿಸಿದ್ದ 189 ರನ್ಗಳಿಗೆ ಪ್ರತಿಯಾಗಿ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡದ ಪರ ವಾರ್ನರ್ 200 ರನ್ ಬಾರಿಸಿದ್ದಾರೆ. ಇದು ಅವರ ಪಾಲಿಗೆ 100 ಶತಕವಾಗಿದ್ದು, ಅವಿಸ್ಮರಣೀಯ ಪಂದ್ಯದಲ್ಲಿ ದ್ವಿಶತಕ ಬಾರಿಸಿ ದಾಖಲೆ ಬರೆದಿದ್ದಾರೆ.
ಡೇವಿಡ್ ವಾರ್ನರ್ ಅವರು ಇದೀಗ 100ನೇ ಪಂದ್ಯದಲ್ಲಿ ಶತಕ ಬಾರಿಸಿದ ವಿಶ್ವದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ಈ ಹಿಂದೆ ಇಂಗ್ಲೆಂಡ್ ತಂಡದ ಜೋ ರೂಟ್ ಅವರು ಈ ಸಾಧನೆ ಮಾಡಿದ್ದರು. ಆದರೆ, 100ನೇ ಪಂದ್ಯದಲ್ಲಿ ದ್ವಿ ಶತಕ ಬಾರಿಸಿದ ಏಕೈಕ ಕ್ರಿಕೆಟಿಗ ಡೇವಿಡ್ ವಾರ್ನರ್.
ಇದೇ ವೇಳೆ ಅವರು ಭಾರತ ಕ್ರಿಕೆಟ್ ತಂಡದ ಮಾಜಿ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನೂ ಸರಿಗಟ್ಟಿದ್ದಾರೆ. ಸಚಿನ್ ತೆಂಡೂಲ್ಕರ್ ಅವರು ಭಾರತ ತಂಡದ ಆರಂಭಿಕರಾಗಿ ಬ್ಯಾಟ್ ಮಾಡಿ 45 ಶತಕಗಳನ್ನು ಬಾರಿಸಿದ್ದರು. ಏಕ ದಿನ ಹಾಗೂ ಟೆಸ್ಟ್ ಪಂದ್ಯಗಳು ಇದರಲ್ಲಿ ಸೇರಿಕೊಂಡಿವೆ. ಇದೀಗ ಡೇವಿಡ್ ವಾರ್ನರ್ ಅವರು ಅಷ್ಟೇ ಸಂಖ್ಯೆಯ ಶತಕವನ್ನು ಆರಂಭಿಕರಾಗಿ ಬ್ಯಾಟ್ ಮಾಡಿ ಬಾರಿಸಿದ್ದಾರೆ. ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಲ್ ಅವರು ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ಅವರ ಹೆಸರಲ್ಲಿ 42 ಶತಕಗಳಿವೆ. ಶ್ರೀಲಂಕಾದ ಮಾಜಿ ಆಟಗಾರ ಜಯಸೂರ್ಯ (41) ನಾಲ್ಕನೇ ಸ್ಥಾನದಲ್ಲಿದ್ದರೆ, ಮ್ಯಾಥ್ಯೂ ವೇಡ್ (40) ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ | AUS VS SA | ದ್ವಿಶತಕ ಬಾರಿಸಿ ನೂರನೇ ಪಂದ್ಯವನ್ನು ಸ್ಮರಣೀಯಗೊಳಿಸಿದ ಡೇವಿಡ್ ವಾರ್ನರ್