David Warner: ವಿದಾಯ ಪಂದ್ಯ ಆಡಿದ ವಾರ್ನರ್​ಗೆ ವಿಶೇಷ ಉಡುಗೊರೆ ನೀಡಿದ ಪಾಕ್​ ತಂಡ - Vistara News

ಕ್ರಿಕೆಟ್

David Warner: ವಿದಾಯ ಪಂದ್ಯ ಆಡಿದ ವಾರ್ನರ್​ಗೆ ವಿಶೇಷ ಉಡುಗೊರೆ ನೀಡಿದ ಪಾಕ್​ ತಂಡ

ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿದ ಡೇವಿಡ್​ ವಾರ್ನರ್​ಗೆ(David Warner) ಪಾಕಿಸ್ತಾನ ತಂಡದ ಆಟಗಾರರು ಬಾಬರ್ ಅಜಂ ಅವರ ಜೆರ್ಸಿ ನೀಡಿ ಗೌರವಿಸಿದ್ದಾರೆ.

VISTARANEWS.COM


on

david warner
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಿಡ್ನಿ: ಅಂತಾರಾಷ್ಟ್ರಿಯ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿದ ಡೇವಿಡ್​ ವಾರ್ನರ್​ಗೆ(David Warner) ಪಾಕಿಸ್ತಾನ ತಂಡದ ಆಟಗಾರರು ವಿಶೇಷ ಉಡುಗೊರೆ ನೀಡಿ ಗೌರವಿಸಿದ್ದಾರೆ. ಪಂದ್ಯ ಮುಗಿದ ಬಳಿಕ ಪಾಕ್​ ತಂಡದ ನಾಯಕ ಶಾನ್ ಮಸೂದ್ ಆಟಗಾರರ ಹಸ್ತಾಕ್ಷರವುಳ್ಳ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದರು.

ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ ಮಸೂದ್ “ನಾನು ಡೇವಿಡ್ ವಾರ್ನರ್‌ಗೆ ಸಣ್ಣ ಅಭಿನಂದನೆ ಹಾಗೂ ದೊಡ್ಡ ಉಡುಗೊರೆ ನೀಡಲು ಬಯಸುತ್ತೇನೆ. ನಿಮಗೆ ಪಾಕ್ ಆಟಗಾರರ ಸಹಿಯಿರುವ ಬಾಬರ್ ಅಜಂ ಅವರ ಜೆರ್ಸಿಯನ್ನು ನೀಡಲು ಬಯಸಿದ್ದು, ನಿಮ್ಮ ಮುಂದಿನ ಜೀವನ ಸುಖಕರವಾಗಿರಲಿ” ಎಂದು ಹೇಳಿ ಜೆರ್ಸಿ ನೀಡಿದರು. ವಾರ್ನರ್ ಈ ಜೆರ್ಸಿಯನ್ನು ಸಂತಸದಿಂದಲೇ ಸ್ವೀಕರಿಸಿ ಧನ್ಯವಾದ ತಿಳಿಸಿದರು.

ಸ್ಮರಣೀಯ ವಿದಾಯ


ವಿದಾಯದ ಪಂದ್ಯ ಆಡಿದ ಬಳಿಕ ತಮ್ಮ ಟೆಸ್ಟ್​ ಅನುಭವ ಹಂಚಿಕೊಂಡ ವಾರ್ನರ್​, “ನಾನು ಕಂಡ ಕನಸು ಸ್ಮರಣೀಯವಾಗಿ ಮುಕ್ತಾಯಕಂಡಿದೆ. ಅದರಲ್ಲೂ ಗೆಲುವಿನ ವಿದಾಯ ಸಿಕ್ಕಿರುವುದು ಮರೆಯಲು ಅಸಾಧ್ಯ. ಕಳೆದ 18 ತಿಂಗಳುಗಳಿಂದ ಆಸ್ಟ್ರೇಲಿಯಾ ಕ್ರಿಕೆಟ್​ನಲ್ಲಿ ಉತ್ತಮ ಸಾಧನೆ ಮಾಡಿದೆ. ಏಕದಿನ ಮತ್ತು ಟೆಸ್ಟ್​ ವಿಶ್ವಕಪ್​ ಗೆದ್ದ ಸಾಧನೆ ನಮ್ಮ ತಂಡದ್ದು. ಇಷ್ಟು ವರ್ಷಗಳ ಕಾಲ ಆಸೀಸ್​ ತಂಡದ ಪರ ಆಡಲು ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ. ನನ್ನ ಎಲ್ಲ ಕಷ್ಟದ ಕಾಲದಲ್ಲಿ ಜತೆಗಿದ್ದ ತಂಡದ ಸಿಬ್ಬಂದಿ, ಆಟಗಾರರು ಹಾಗೂ ಕುಟುಂಬ ಸದಸ್ಯರಿಗೆ ವಿಶೇಷ ಧನ್ಯವಾದಗಳು” ಎಂದು ವಾರ್ನರ್​ ಹೇಳಿದರು.

ಇದನ್ನೂ ಓದಿ WTC 2023-25 Points Table: ಡಬ್ಲ್ಯುಟಿಸಿ​ ಅಂಕಪಟ್ಟಿಯಲ್ಲೂ ಭಾರತಕ್ಕೆ ಆಘಾತವಿಕ್ಕಿದ ಆಸ್ಟ್ರೇಲಿಯಾ

ವಾರ್ನರ್​ ಟೆಸ್ಟ್​ ಸಾಧನೆ


2011 ಜನವರಿ 4ರಂದು ಬ್ರಿಸ್ಬೇನ್‌ನಲ್ಲಿ ಕಿವೀಸ್​ ವಿರುದ್ಧದ ಪಂದ್ಯವನ್ನಾಡುವ ಮೂಲಕ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಡೇವಿಡ್ ವಾರ್ನರ್ ಒಟ್ಟು 205 ಇನಿಂಗ್ಸ್‌ಗಳಲ್ಲಿ 8,786 ರನ್ ಗಳಿಸಿದ್ದಾರೆ. 26 ಶತಕ ಹಾಗೂ 37 ಅರ್ಧಶತಕ ಬಾರಿಸಿದ್ದಾರೆ. ಅಜೇಯ 335 ಇವರ ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ.

ಪಾಕ್​ಗೆ ಹೀನಾಯ ಸೋಲು


ಪಾಕಿಸ್ತಾನ ವಿರುದ್ಧದ ಅಂತಿಮ ಟೆಸ್ಟ್​ ಪಂದ್ಯದಲ್ಲಿ ಆಸ್ಟ್ರೇಲಿಯಾ 8 ವಿಕೆಟ್​ಗಳ ಗೆಲುವು ಸಾಧಿಸಿ 3-0 ಅಂತರದಲ್ಲಿ ಸರಣಿಯನ್ನು ಕ್ಲೀನ್​ಸ್ವೀಪ್​ ಮಾಡಿದೆ. ನಾಲ್ಕನೇ ದಿನದಾಟದಲ್ಲಿ ಗೆಲುವಿಗೆ 130 ರನ್​ಗಳ ಗುರಿ ಪಡೆದ ಆಸ್ಟ್ರೇಲಿಯಾ, ವಾರ್ನರ್​ ಮತ್ತು ಲಬುಶೇನ್​ ಅವರ ಅರ್ಧಶತಕ ಬಲದಿಂದ 2 ವಿಕೆಟ್​ ನಷ್ಟಕ್ಕೆ 130 ರನ್​ ಬಾರಿಸಿ ಗೆಲುವಿನ ನಗೆ ಬೀರಿತು. ವಿದಾಯ ಪಂದ್ಯ ಆಡಿದ ವಾರ್ನರ್​ ತಮ್ಮ ಕೊನೆಯ ಇನಿಂಗ್ಸ್​ನಲ್ಲಿ ಅರ್ಧಶತಕ ಬಾರಿಸುವ ಮೂಲಕ ನೆರದಿದ್ದ ತವರಿನ ಅಭಿಮಾನಿಗಳಿಗೆ ನಿರಾಸೆ ಮಾಡಲಿಲ್ಲ. 75 ಎಸೆತಗಳಲ್ಲಿ 57 ರನ್​ ಬಾರಿಸಿ ಮಿಂಚಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Viral Video: ಜನಸಂದಣಿ ಮಧ್ಯೆಯೂ ಆ್ಯಂಬುಲೆನ್ಸ್​ಗೆ ದಾರಿ ಮಾಡಿಕೊಟ್ಟ ಟೀಮ್‌ ಇಂಡಿಯಾ ಅಭಿಮಾನಿಗಳು

Viral Video: ಅಭಿಮಾನಿಗಳು ಆ್ಯಂಬುಲೆನ್ಸ್​ಗೆ ದಾರಿ ಮಾಡಿಕೊಡುತ್ತಿರುವ ವಿಡಿಯೊ ಎಲ್ಲಡೆ ವೈರಲ್​ ಆಗಿದ್ದು(Viral Video), ಅಭಿಮಾನಿಗಳ ಈ ನಡೆಗೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ. ಉತ್ಸಾಹಿ ಕ್ರಿಕೆಟ್‌ ಅಭಿಮಾನಿಗಳ ನಡುವೆ ಆ್ಯಂಬುಲೆನ್ಸ್​ ಯಾವ ಸಮಸ್ಯೆಯೂ ಇಲ್ಲದಂತೆ ಸರಾಗವಾಗಿ ಮುನ್ನಡೆಯುತ್ತಿರುವ ವಿಡಿಯೊವನ್ನು ಎಎನ್​ಐ ಸುದ್ದಿ ಸಂಸ್ಥೆ ತನ್ನ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ

VISTARANEWS.COM


on

viral video
Koo

ಮುಂಬಯಿ: ಟಿ20 ವಿಶ್ವಕಪ್​ ವಿಜೇತ ತಂಡದ ಆಟಗಾರರನ್ನು ಅಭಿನಂದಿಸುವ(Team India victory parade) ಸಲುವಾಗಿ ಮುಂಬೈಯ ಮರೀನ್ ಡ್ರೈವ್‌ ಪ್ರದೇಶದಲ್ಲಿ ಸೇರಿದ ಅಭಿಮಾನಿಗಳನ್ನು(Team India fans) ಕಾಣುವಾಗ ಅರಬ್ಬಿ ಸಮುದ್ರವೇ ನಾಚಿ ನೀರಾಗುವಷ್ಟು ಕ್ರಿಕೆಟ್‌ ಪ್ರೀತಿಯ ಸಾಗರ ಉಕ್ಕೇರಿತ್ತು. ಮಳೆಯನ್ನು ಲೆಕ್ಕಿಸದೇ ಸಾವಿರಾರು ಕ್ರಿಕೆಟ್ ಅಭಿಮಾನಿಗಳು ಜಮಾಯಿಸಿದ್ದರು. ಕಿಕ್ಕಿರಿದ ಜನಸಂದಣಿಯ ನಡುವೆಯೂ ಆ್ಯಂಬುಲೆನ್ಸ್​ಗೆ(ambulance) ಟೀಮ್‌ ಇಂಡಿಯಾ(Team India) ಅಭಿಮಾನಿಗಳು ದಾರಿ ಮಾಡಿಕೊಡುವ ಮೂಲಕ ಮಾನವೀಯತೆ ತೋರಿ ಎಲ್ಲರ ಮನಗೆದ್ದಿದ್ದಾರೆ.

ಅಭಿಮಾನಿಗಳು ಆ್ಯಂಬುಲೆನ್ಸ್​ಗೆ ದಾರಿ ಮಾಡಿಕೊಡುತ್ತಿರುವ ವಿಡಿಯೊ ಎಲ್ಲಡೆ ವೈರಲ್​ ಆಗಿದ್ದು(Viral Video), ಅಭಿಮಾನಿಗಳ ಈ ನಡೆಗೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ. ಉತ್ಸಾಹಿ ಕ್ರಿಕೆಟ್‌ ಅಭಿಮಾನಿಗಳ ನಡುವೆ ಆ್ಯಂಬುಲೆನ್ಸ್​ ಯಾವ ಸಮಸ್ಯೆಯೂ ಇಲ್ಲದಂತೆ ಸರಾಗವಾಗಿ ಮುನ್ನಡೆಯುತ್ತಿರುವ ವಿಡಿಯೊವನ್ನು ಎಎನ್​ಐ ಸುದ್ದಿ ಸಂಸ್ಥೆ ತನ್ನ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ. ನೆಟ್ಟಿಗರು ಈ ವಿಡಿಯೊಗೆ ಕಮೆಂಟ್​ ಮಾಡಿದ್ದು, ಟೀಮ್​ ಇಂಡಿಯಾ ಅಭಿಮಾನಿಗಳಿಗೆ ದೊಡ್ಡ ಚಪ್ಪಾಳೆ ನೀಡಬೇಕು ಎಂದಿದ್ದಾರೆ.

ಬಾರ್ಬಡೋಸ್‌ನಿಂದ ಬುಧವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿದ್ದ ಭಾರತ ತಂಡವು ಗುರುವಾರ ಬೆಳಗ್ಗೆ ನವದೆಹಲಿಗೆ ಬಂದಿಳಿದಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಆತಿಥ್ಯ ಸ್ವೀಕರಿಸಿದ ನಂತರ ಮಧ್ಯಾಹ್ನ 3.42ಕ್ಕೆ ಮುಂಬೈಗೆ ಪ್ರಯಾಣ ಬೆಳೆಸಿತ್ತು. ಸಂಜೆ ಐದು ಗಂಟೆಯ ನಂತರ ವಿಮಾನವು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಆಟಗಾರರು ಬಂದೊಡನೆಯೇ ಕ್ರಿಕೆಟ್‌ ಪ್ರೇಮಿಗಳ ಜಯಘೋಷ ಮೊಳಗಿತು. ಅಭಿಮಾನಿಗಳ ಅಬ್ಬರಕ್ಕೆ ಅರಬ್ಬಿ ಸಮುದ್ರ ಕೂಡ ಒಂದು ಕ್ಷಣ ಸ್ಥಬ್ಧವಾಗಿತ್ತು. ವಿಶೇಷ ವಿನ್ಯಾಸದ ತೆರೆದ ವಾಹನದಲ್ಲಿ ವಿಶ್ವಕಪ್‌ ಟ್ರೋಫಿ ಹಿಡಿದು ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಬೂಮ್ರಾ, ಪಾಂಡ್ಯ, ಕೋಚ್‌ ರಾಹುಲ್‌ ದ್ರಾವಿಡ್‌ ಸೇರಿದಂತೆ ಎಲ್ಲ ಆಟಗಾರರು ವಿಜಯಯಾತ್ರೆಯ ಮೆರವಣಿಗೆಯಲ್ಲಿ ಭಾಗಿಯಾಗಿ ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಘೋಷಣೆ ಕೂಗಿ ಅಭಿನಂದನೆಗಳ ಸಲ್ಲಿಸಿದರು.

ಇದನ್ನೂ ಓದಿ Team India: ವಾಂಖೆಡೆ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ಟೀಮ್​ ಇಂಡಿಯಾ; ವಿಡಿಯೊ ಹಂಚಿಕೊಂಡ ಎ.ಆರ್. ರೆಹಮಾನ್

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

ಜೂನ್ 29ರಂದು ಬಾರ್ಬಾಡೋಸ್‌ನಲ್ಲಿ ನಡೆದಿದ್ದ ಟೂರ್ನಿಯ ಫೈನಲ್‌ನಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ಎದುರು ಜಯಿಸಿತ್ತು. ಆದರೆ ಕೆರೀಬಿಯನ್ ದ್ವೀಪದಲ್ಲಿ ಚಂಡಮಾರುತ ಬೀಸಿದ್ದ ಕಾರಣ ವಿಮಾನಯಾನ ಸೌಲಭ್ಯ ರದ್ದಾಗಿತ್ತು. ಆದ್ದರಿಂದ ಬುಧವಾರದವರೆಗೂ ತಂಡವು ಬಾರ್ಬಾಡೋಸ್‌ನಲ್ಲಿಯೇ ಉಳಿದಿತ್ತು.

ಟ್ರೋಫಿ ಪರೇಡ್ ನಡೆಸಿದ ಬಳಿಕ ವಾಂಖೆಡೆ ಕ್ರೀಡಾಂಗಣದಲ್ಲಿ ವಿಶ್ವಕಪ್ ವಿಜೇತ ಆಟಗಾರರು ಅಭಿಮಾನಿಗಳ ಮುಂದೆ ‘ವಂದೇ ಮಾತರಂ'(Vande Mataram) ಹಾಡನ್ನು ಹಾಡಿದ್ದರು. ಜತೆಗೆ ನೃತ್ಯ ಕೂಡ ಮಾಡಿ ಅಭಿಮಾನಿಗಳಿಗೆ ಮನರಂಜನೆ ನೀಡಿದರು. ಒಟ್ಟಾರೆ ಆಟಗಾರರು ಮತ್ತು ಮುಂಬೈ ಜನತೆ ನಿನ್ನೆ ಸಂತಸ ಅಲೆಯಲ್ಲಿ ತೇಲಾಡಿತ್ತು.

Continue Reading

ಕ್ರೀಡೆ

Team India: ವಾಂಖೆಡೆ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ಟೀಮ್​ ಇಂಡಿಯಾ; ವಿಡಿಯೊ ಹಂಚಿಕೊಂಡ ಎ.ಆರ್. ರೆಹಮಾನ್

Team India: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

VISTARANEWS.COM


on

Team India
Koo

ಮುಂಬಯಿ: ವಿಶ್ವ ವಿಜೇತ ಟೀಮ್​ ಇಂಡಿಯಾ ಆಟಗಾರರನ್ನು ನಿನ್ನೆ (ಗುರುವಾರ) ಸಂಜೆ ಮುಂಬೈನಲ್ಲಿ ಅಭೂತಪೂರ್ವವಾಗಿ ಅಭಿನಂದಿಸಲಾಯಿತು. ಲಕ್ಷಾಂತರ ಜನರು ಮರೀನ್ ಡ್ರೈವ್ ನಿಂದ ವಾಂಖಡೆ ಕ್ರೀಡಾಂಗಣದ ವರೆಗೆ ಅದ್ದೂರಿ ಮೆರವಣಿಗೆ ನಡೆಸಿ ಸಂಭ್ರಮಾಚರಣೆ ನಡೆಸಿದ್ದರು. ಟ್ರೋಫಿ ಪರೇಡ್ ನಡೆಸಿದ ಬಳಿಕ ವಾಂಖೆಡೆ ಕ್ರೀಡಾಂಗಣದಲ್ಲಿ ವಿಶ್ವಕಪ್ ವಿಜೇತ ಆಟಗಾರರು ಅಭಿಮಾನಿಗಳ ಮುಂದೆ ‘ವಂದೇ ಮಾತರಂ'(Vande Mataram) ಹಾಡನ್ನು ಹಾಡಿದ್ದಾರೆ. ಈ ವಿಡಿಯೊವನ್ನು ಭಾರತದ ಮ್ಯೂಸಿಕ್‌ ಲೆಜೆಂಡ್‌ ಎ.ಆರ್. ರೆಹಮಾನ್ ತಮ್ಮ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.

ವಾಂಖೆಡೆ ಸ್ಟೇಡಿಯಂನಲ್ಲಿ ಸಂಜೆಯಿಂದಲೇ ಜಮಾಯಿಸಿ ಕಾತರದಿಂದ ಕಾಯುತ್ತಿದ್ದ ಲಕ್ಷಾಂತರ ಕ್ರಿಕೆಟ್​ ಅಭಿಮಾನಿಗಳು ರೋಹಿತ್​ ಶರ್ಮಾ, ವಿರಾಟ್ ಕೊಹ್ಲಿ ಪರ ಜಯಘೋಷ ಕೂಗಿದ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಜನ ಸಾಗರ ಮಧ್ಯೆ ಅರಬ್ಬಿ ಸಮುದ್ರ ಕೂಡ ಕೆಲ ಕಾಲ ಸ್ಥಬ್ಧವಾಗಿತ್ತು.

2007 ರ ಟಿ 20 ವಿಶ್ವಕಪ್‌ನ ವಿಜಯೋತ್ಸವದ ಮೆರವಣಿಗೆ, 2011 ರಲ್ಲಿ ಭಾರತದ ಏಕದಿನ ವಿಶ್ವಕಪ್ ವಿಜಯೋತ್ಸವ ನಡೆಸಿದ 13 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆಯನ್ನು ಮುಂಬೈ ನಗರ ಹೊಸ ಉತ್ಸವವಾಗಿ ಆಚರಿಸಿತು.

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಂಬೈಗೆ ಆಗಮಿಸಿದ ಭಾರತ ತಂಡದ ಆಟಗಾರರು ಮರೀನಾ ಡ್ರೈವ್‌ ಬಳಿ ವಿಶೇಷ ವಿನ್ಯಾಸದ ತೆರೆದ ವಾಹನದಲ್ಲಿ ವಿಶ್ವಕಪ್‌ ಟ್ರೋಫಿ ಹಿಡಿದು ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಬೂಮ್ರಾ, ಪಾಂಡ್ಯ, ಕೋಚ್‌ ರಾಹುಲ್‌ ದ್ರಾವಿಡ್‌ ಸೇರಿದಂತೆ ಎಲ್ಲ ಆಟಗಾರರು ವಿಜಯಯಾತ್ರೆಯ ಮೆರವಣಿಗೆಯಲ್ಲಿ ಭಾಗಿಯಾಗಿ ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಘೋಷಣೆ ಕೂಗಿ ಅಭಿನಂದನೆಗಳ ಸಲ್ಲಿಸಿದರು.

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

ಇದನ್ನೂ ಓದಿ Team India : ಮುಂಬೈನಲ್ಲಿ ನಡೆದ ಭಾರತ ತಂಡದ ವಿಜಯೋತ್ಸವ ನೋಡಿದರೆ ರೋಮಾಂಚನ ಖಾತರಿ

ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಆರಂಭವಾಯಿತು. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಯಿತು.

ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ(Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟವನ್ನು ಕೂಡ ಏರ್ಪಡಿಸಲಾಗಿತ್ತು.

Continue Reading

ಪ್ರಮುಖ ಸುದ್ದಿ

Team India : ಮುಂಬೈನಲ್ಲಿ ನಡೆದ ಭಾರತ ತಂಡದ ವಿಜಯೋತ್ಸವ ನೋಡಿದರೆ ರೋಮಾಂಚನ ಖಾತರಿ

Team India : ಸಮಾರಂಭದ ನಂತರ, ಆಟಗಾರರು ಅಭಿಮಾನಿಗಳೊಂದಿಗೆ ಮಾತುಕತೆ ನಡೆಸಿದರು. ಸಹಿ ಮಾಡಿದ ಚೆಂಡುಗಳನ್ನು ವಿತರಿಸಿದರು ಮತ್ತು ಸೆಲ್ಫಿಗಳನ್ನು ತೆಗೆದುಕೊಂಡರು. ಇದು ಕ್ರಿಕೆಟ್​ನ ಅಪ್ಪಟ ಅಭಿಮಾನಿಗಳಿಗೆ ಸಂತೋಷವನ್ನುಂಟುಮಾಡಿತು. ಮರೀನ್ ಡ್ರೈವ್​​ನಲ್ಲಿ ಪ್ರಾರಂಭವಾದ 20 ವಿಶ್ವಕಪ್ ವಿಜಯೋತ್ಸವ ಮೆರವಣಿಗೆ ವಾಂಖೆಡೆ ಕ್ರೀಡಾಂಗಣದಲ್ಲಿ ಕೊನೆಗೊಂಡಿತು.

VISTARANEWS.COM


on

Team India
Koo

ಬೆಂಗಳೂರು: ಟಿ 20 ವಿಶ್ವಕಪ್ 2024 ರಲ್ಲಿ (Team India) ಟೀಮ್ ಇಂಡಿಯಾದ ಟ್ರೋಫಿ ಗೆದ್ದ ಸಂಭ್ರಮವನ್ನು ಆಚರಿಸಲು ಕ್ರಿಕೆಟ್ ಅಭಿಮಾನಿಗಳು ಮುಂಬೈನಲ್ಲಿ ಜಮಾಯಿಸಿದ್ದರು. ಅಲ್ಲಿನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣವು ಗದ್ದಲ ಮತ್ತು ಉತ್ಸಾಹದಿಂದ ತುಂಬಿತ್ತು. ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 125 ಕೋಟಿ ರೂ.ಗಳ ಬಹುಮಾನವು ದೊರೆಯಿತು. ಈ ಕಾರ್ಯಕ್ರಮದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರಾಹುಲ್ ದ್ರಾವಿಡ್ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಪ್ರಮುಖ ಆಟಗಾರರು ವೇದಿಕೆಯಲ್ಲಿದ್ದು, ಅದ್ಯಮ ಉತ್ಸಹದಲ್ಲಿದ್ದ ಪ್ರೇಕ್ಷಕರೊಂದಿಗೆ ತಮ್ಮ ಭಾವನೆಗಳನ್ನು ಹಂಚಿಕೊಂಡರು.

ಸಮಾರಂಭದ ನಂತರ, ಆಟಗಾರರು ಅಭಿಮಾನಿಗಳೊಂದಿಗೆ ಮಾತುಕತೆ ನಡೆಸಿದರು. ಸಹಿ ಮಾಡಿದ ಚೆಂಡುಗಳನ್ನು ವಿತರಿಸಿದರು ಮತ್ತು ಸೆಲ್ಫಿಗಳನ್ನು ತೆಗೆದುಕೊಂಡರು. ಇದು ಕ್ರಿಕೆಟ್​ನ ಅಪ್ಪಟ ಅಭಿಮಾನಿಗಳಿಗೆ ಸಂತೋಷವನ್ನುಂಟುಮಾಡಿತು. ಮರೀನ್ ಡ್ರೈವ್​​ನಲ್ಲಿ ಪ್ರಾರಂಭವಾದ 20 ವಿಶ್ವಕಪ್ ವಿಜಯೋತ್ಸವ ಮೆರವಣಿಗೆ ವಾಂಖೆಡೆ ಕ್ರೀಡಾಂಗಣದಲ್ಲಿ ಕೊನೆಗೊಂಡಿತು. ಅಭಿಮಾನಿಗಳ ಬೃಹತ್​​ ಸಂಖ್ಯೆಯು ಯಶಸ್ಸನ್ನು ಹೆಚ್ಚಿಸಿತು. ಅಪಾರ ಜನಸಂದಣಿಯಿಂದಾಗಿ ಟೀಮ್ ಇಂಡಿಯಾ ಬಸ್ ಬೀದಿಗಳಲ್ಲಿ ಸಂಚರಿಸಲು ಕಷ್ಟವಾಯಿತು. ಇದು ಭಾವನಾತ್ಮಕ ಮತ್ತು ಸಂಭ್ರಮದ ವಾತಾವರಣ ಉಂಟು ಮಾಡಿತು.

ಇದನ್ನೂ ಓದಿ: India’s open-bus parade : ಮುಂಬೈನಲ್ಲಿ ನಡೆದ ಭಾರತ ಕ್ರಿಕೆಟ್​ ತಂಡದ ವಿಜಯೋತ್ಸವ ಕಾರ್ಯಕ್ರಮದ ಚಿತ್ರಗಳು ಇಲ್ಲಿವೆ

“ಮುಂಬೈ ಎಂದಿಗೂ ನಿರಾಶೆ ಮಾಡುವುದಿಲ್ಲ.. ನಮಗೆ ಆದರದ ಸ್ವಾಗತ ದೊರೆಯಿತು. ತಂಡದ ಪರವಾಗಿ, ನಾವು ಅಭಿಮಾನಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇವೆ. ನಾನು ತುಂಬಾ ಸಂತೋಷ ಮತ್ತು ನಿರಾಳನಾಗಿದ್ದೇನೆ ಎದು ರೋಹಿತ್​ ಶರ್ಮಾ ಹೇಳಿದರು. ಇದೇ ವೇಳೆ ಅವರು ಟಿ 20 ವಿಶ್ವಕಪ್​​ನ ಅಂತಿಮ ಓವರ್​ನಲ್ಲಿ ನಿರ್ಣಾಯಕ ಪ್ರದರ್ಶನಕ್ಕಾಗಿ ಭಾರತೀಯ ನಾಯಕ ತಮ್ಮ ಉಪನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ಶ್ಲಾಘಿಸಿದರು. “ಕೊನೆಯ ಓವರ್ ಎಸೆದು ತಂಡವನ್ನು ಕಾಪಾಡಿದ ಹಾರ್ದಿಕ್ಗೆ ಹ್ಯಾಟ್ಸ್ ಆಫ್. ನಿಮಗೆ ಎಷ್ಟು ರನ್​ಗಳ ಅಗತ್ಯವಿದ್ದರೂ, ಆ ಓವರ್ ಎಸೆಯಲು ಯಾವಾಗಲೂ ತುಂಬಾ ಒತ್ತಡವಿರುತ್ತದೆ. ಅವರಿಗೆ ಹ್ಯಾಟ್ಸ್ ಆಫ್” ಎಂದು ನಾಯಕ ಹೇಳಿದರು. ಇದೇ ವೇಳೆ ಹಾರ್ದಿಕ್! ಹಾರ್ದಿಕ್!” ಜನಸಮೂಹದಿಂದ. ಪಾಂಡ್ಯ ಮುಗುಳ್ನಗೆ ಮತ್ತು ಅಲೆಯೊಂದಿಗೆ ಚಪ್ಪಾಳೆಯನ್ನು ಒಪ್ಪಿಕೊಂಡರು. ಭಾವಪರವಶರಾದ ಹಾರ್ದಿಕ್ ಎದ್ದು ನಿಂತು ಅಭಿಮಾನಿಗಳನ್ನು ಸ್ವಾಗತಿಸಿದರು. ಇದು ವಾಂಖೆಡೆಯಲ್ಲಿ ಭಾವನಾತ್ಮಕ ಮತ್ತು ಸಂಭ್ರಮದ ವಾತಾವರಣವನ್ನು ಹೆಚ್ಚಿಸಿತು.

ವಿರಾಟ್ ಕೊಹ್ಲಿ ಕೂಡ ಪ್ರೇಕ್ಷಕರಿಗೆ ಹಾಗೂ ಸಹ ಆಟಗಾರರಿಗೆ ಹೃತ್ಪೂರ್ವಕ ಧನ್ಯವಾದ ಹೇಳಿದ್ದಾರೆ. “ರೋಹಿತ್ ಮತ್ತು ನಾನು ನಾವು ಇದನ್ನು ಬಹಳ ಸಮಯದಿಂದ ಪ್ರಯತ್ನಿಸುತ್ತಿದ್ದೇವೆ. ನಾವು ಯಾವಾಗಲೂ ವಿಶ್ವಕಪ್ ಗೆಲ್ಲಲು ಬಯಸಿದ್ದೆವು. ಟ್ರೋಫಿಯನ್ನು ವಾಂಖೆಡೆಗೆ ಮರಳಿ ತರುವುದು ಬಹಳ ವಿಶೇಷವಾದ ಭಾವನೆ. ನಾವು ಕಳೆದ 15 ವರ್ಷಗಳಿಂದ ಆಡುತ್ತಿದ್ದೇವೆ ಮತ್ತು ರೋಹಿತ್ ತುಂಬಾ ಭಾವುಕನಾಗಿರುವುದನ್ನು ನಾನು ಇದೇ ಮೊದಲ ಬಾರಿಗೆ ನೋಡಿದ್ದೇನೆ. ಅವನು ಅಳುತ್ತಿದ್ದನು, ನಾನು ಅಳುತ್ತಿದ್ದೆ, ನಮ್ಮಿಬ್ಬರ ನಡುವಿನ ಆ ಅಪ್ಪುಗೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.

ಭಾರತದ ಶ್ರೇಷ್ಠ ಆಟಗಾರ ಜಸ್ಪ್ರೀತ್ ಬುಮ್ರಾ ಅವರನ್ನು ಶ್ಲಾಘಿಸಿದ ಕೊಹ್ಲಿ, “ಜಸ್ಪ್ರೀತ್ ಬುಮ್ರಾ ಇದೀಗ ವಿಶ್ವದ ಎಂಟನೇ ಅದ್ಭುತ ಎಂದು ಹೇಳಿದರು. ಮುಂಬೈನ ಪ್ರೇಕ್ಷಕರು ಬೌಲರ್​​ನ ಅಸಾಧಾರಣ ಕೊಡುಗೆಗಳನ್ನು ಸಂಭ್ರಮಿಸಿದರು.

ವಾಂಖೆಡೆಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಅಪ್ರತಿಮ ಜೋಡಿ ಕೊಹ್ಲಿ ಮತ್ತು ರೋಹಿತ್ ಮೈದಾನದಲ್ಲಿ ನೃತ್ಯ ಮಾಡಿದರು. ಇದು ಅಭಿಮಾನಿಗಳ ಸಂತೋಷಕ್ಕೆ ಕಾರಣವಾಯಿತು. ವಿಜಯೋತ್ಸವದ ಮೆರವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಜಸ್ಪ್ರೀತ್ ಬುಮ್ರಾ, “ನಾನು ಇಂದು ನೋಡಿದ್ದನ್ನು ನಾನು ಹಿಂದೆಂದೂ ನೋಡಿಲ್ಲ ಎಂದು ಹೇಳಿದರು.

Continue Reading

ಪ್ರಮುಖ ಸುದ್ದಿ

India’s open-bus parade : ಮುಂಬೈನಲ್ಲಿ ನಡೆದ ಭಾರತ ಕ್ರಿಕೆಟ್​ ತಂಡದ ವಿಜಯೋತ್ಸವ ಕಾರ್ಯಕ್ರಮದ ಚಿತ್ರಗಳು ಇಲ್ಲಿವೆ

India’s open-bus parade: ಟೀಮ್ ಇಂಡಿಯಾ ಮುಂಬೈಗೆ ಆಗಮಿಸುವ ಮೊದಲೇ ಸಾವಿರಾರು ಅಭಿಮಾನಿಗಳು ಮರೀನ್ ಡ್ರೈವ್​ಗೆ ಆಗಮಿಸಿದ್ದರು. ವಿಶ್ವಕಪ್ ವಿಜೇತರಿಗಾಗಿ ಅಭಿಮಾನಿಗಳು ತೀವ್ರವಾಗಿ ಕಾಯುತ್ತಿದ್ದರಿಂದ ವಾಂಖೆಡೆ ಕ್ರೀಡಾಂಗಣವೂ ಜನರಿಂದ ತುಂಬಿತ್ತು. ಆ ಬಳಿಕ ಐತಿಹಾಸಿಕ ವಾಖೆಂಡೆ ಸ್ಟೇಡಿಯಮ್​ನಲ್ಲಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು.

VISTARANEWS.COM


on

India's open-bus parade
Koo

ಮುಂಬೈ: ಟಿ20 ವಿಶ್ವ ಕಪ್​ ನಲ್ಲಿ ಚಾಂಪಿಯನ್​ ಪಟ್ಟ ಪಡೆದುಕೊಂಡ ಭಾರತ ಕ್ರಿಕೆಟ್ ತಂಡಕ್ಕೆ (Team India) ಮುಂಬಯಿನಲ್ಲಿ ಬಿಸಿಸಿಐ ಅದ್ಧೂರಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಿತ್ತು. ತಂಡದ ಆಟಗಾರರನ್ನು ತುಂಬಿಕೊಂಡಿದ್ದ ತೆರೆದ ಬಸ್​ (India’s open-bus parade) ಸಂಜೆ 7 ಗಂಟೆಗೆ ಮರೀನ್ ಡ್ರೈವ್​ನಿಂದ ಆರಂಭಗೊಂಡು ರಸ್ತೆಯುದ್ದಕ್ಕೂ ನೆರೆದಿದ್ದ ಅಭಿಮಾನಿಗಳ ಸಮ್ಮುಖದಲ್ಲಿ ಸಾಗಿತು.

ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ಐತಿಹಾಸಿಕ ವಿಜಯವನ್ನು ಆಚರಿಸಲು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದರು. ಟೀಮ್ ಇಂಡಿಯಾ ಮುಂಬೈಗೆ ಆಗಮಿಸುವ ಮೊದಲೇ ಸಾವಿರಾರು ಅಭಿಮಾನಿಗಳು ಮರೀನ್ ಡ್ರೈವ್​ಗೆ ಆಗಮಿಸಿದ್ದರು. ವಿಶ್ವಕಪ್ ವಿಜೇತರಿಗಾಗಿ ಅಭಿಮಾನಿಗಳು ತೀವ್ರವಾಗಿ ಕಾಯುತ್ತಿದ್ದರಿಂದ ವಾಂಖೆಡೆ ಕ್ರೀಡಾಂಗಣವೂ ಜನರಿಂದ ತುಂಬಿತ್ತು. ಆ ಬಳಿಕ ಐತಿಹಾಸಿಕ ವಾಖೆಂಡೆ ಸ್ಟೇಡಿಯಮ್​ನಲ್ಲಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ನಾಯಕ ರೋಹಿತ್ ಶರ್ಮಾ. ವಿರಾಟ್​ ಕೊಹ್ಲಿ ಮುಂದಾಳತ್ವದಲ್ಲಿ ತಂಡದ ಆಟಗಾರರು ಕುಣಿದು ಕುಪ್ಪಳಿಸಿದರು. ಬಳಿಕ ಅವರು ತಮ್ಮ ತಂಡದ ಆಟಗಾರರು ಹಾಗೂ ಪ್ರೇಕ್ಷಕರನ್ನುದ್ದೇಶಿಸಿ ಮಾತನಾಡಿದರು. ಈ ವಿಶೇಷ ಸಂದರ್ಭದ ಚಿತ್ರಗಳು ಈ ಕೆಳಗಿವೆ.

ಇದನ್ನೂ ಓದಿ: Rohit Sharma : ವಾಂಖೆಡೆ ಸ್ಟೇಡಿಯಮ್​ನಲ್ಲಿ ಡಾನ್ಸ್ ಮಾಡಿದ ರೋಹಿತ್ ಶರ್ಮಾ

Continue Reading
Advertisement
Job Alert
ಉದ್ಯೋಗ3 mins ago

Job Alert: ಇಂಡಿಯನ್‌ ಹೈವೇ ಮ್ಯಾನೇಜ್‌ಮೆಂಟ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಇಂದೇ ಅಪ್ಲೈ ಮಾಡಿ

UK Election
ವಿದೇಶ9 mins ago

UK Election: ಬ್ರಿಟನ್‌ನಲ್ಲಿ ಲೇಬರ್‌ ಪಾರ್ಟಿಗೆ ಗದ್ದುಗೆ ಖಚಿತ- ಪ್ರಧಾನಿ ಪಟ್ಟಕೇರಲಿರುವ ಕೀರ್‌ ಸ್ಟಾರ್ಮರ್‌ ಹಿನ್ನೆಲೆ ಏನು?

IAS Transfer
ಪ್ರಮುಖ ಸುದ್ದಿ10 mins ago

IAS Transfer: ಮೈಸೂರು ಜಿಲ್ಲಾಧಿಕಾರಿ ಸೇರಿದಂತೆ 21 ಐಎಎಸ್‌ ಅಧಿಕಾರಿಗಳ ವರ್ಗಾವಣೆ, ಯಾರ್ಯಾರು ಎಲ್ಲಿಗೆ?

viral video
ಕ್ರೀಡೆ24 mins ago

Viral Video: ಜನಸಂದಣಿ ಮಧ್ಯೆಯೂ ಆ್ಯಂಬುಲೆನ್ಸ್​ಗೆ ದಾರಿ ಮಾಡಿಕೊಟ್ಟ ಟೀಮ್‌ ಇಂಡಿಯಾ ಅಭಿಮಾನಿಗಳು

Bajaj Freedom 125
ಆಟೋಮೊಬೈಲ್27 mins ago

Bajaj Freedom 125: ವಿಶ್ವದ ಮೊದಲ ಸಿಎನ್‌ಜಿ ಬೈಕ್‌ ಬಜಾಜ್‌ ಫ್ರೀಡಂ 125 ಇಂದು ಬಿಡುಗಡೆ

Sumalatha Ambareesh Talks About Darshan Fans And Renukaswamy Case
ಸ್ಯಾಂಡಲ್ ವುಡ್42 mins ago

Actor Darshan: ದರ್ಶನ್‌ ಕೇಸ್‌ ಬಗ್ಗೆ ಮಾತನಾಡದೇ ಇರೋದಕ್ಕೆ ಕಾರಣ ತಿಳಿಸಿದ ಸಮಲತಾ; ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದೇನು?

Team India
ಕ್ರೀಡೆ56 mins ago

Team India: ವಾಂಖೆಡೆ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ಟೀಮ್​ ಇಂಡಿಯಾ; ವಿಡಿಯೊ ಹಂಚಿಕೊಂಡ ಎ.ಆರ್. ರೆಹಮಾನ್

Vastu Tips
ಧಾರ್ಮಿಕ1 hour ago

Vastu Tips: ಮನೆಯೊಳಗೆ ಎಲ್ಲೆಂದರಲ್ಲಿ ಕನ್ನಡಿ ಇಟ್ಟು ಕುಟುಂಬದ ನೆಮ್ಮದಿ ಹಾಳು ಮಾಡಬೇಡಿ!

assault case anekal
ಕ್ರೈಂ1 hour ago

Assault Case: ʼಏಯ್‌ ಹೋಗೋʼ ಅಂದಿದ್ದಕ್ಕೆ ವಿಕಲ ಚೇತನನನ್ನು ಕೊಚ್ಚಿ ಹಾಕಿದರು!

Anant-Radhika Wedding Justin Bieber arrives in Mumbai
ಬಾಲಿವುಡ್1 hour ago

Anant-Radhika Wedding: ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮಕ್ಕೆ ಕೆನಡಾದ ಖ್ಯಾತ ಗಾಯಕ ಆಗಮನ; ಸಂಭಾವನೆ ಕೇಳಿದ್ರೆ ದಂಗಾಗ್ತೀರಾ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast Rain
ಮಳೆ3 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ16 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ17 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ18 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ20 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ20 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ22 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ23 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ3 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ4 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌