Site icon Vistara News

DDCA President: ಡಿಡಿಸಿಎ ಅಧ್ಯಕ್ಷ ರೋಹನ್ ಜೇಟ್ಲಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

DDCA President: DDCA President Rohan Jaitley accused of sexual assault

DDCA President: DDCA President Rohan Jaitley accused of sexual assault

ನವದೆಹಲಿ: ದೆಹಲಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್​ (DDCA President) ಅಧ್ಯಕ್ಷ ರೋಹನ್ ಜೇಟ್ಲಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಲಾಗಿದ್ದು ಬಿಸಿಸಿಐಗೆ ದೂರು ದಾಖಲಾಗಿದೆ.

ಜ್ಯೋತ್ಸ್ನಾ ಸಹನಿ ಎಂಬ ಮಹಿಳೆ ಮಾಜಿ ಕೇಂದ್ರ ಸಚಿವ ದಿ. ಅರುಣ್ ಜೇಟ್ಲಿ ಅವರ ಪುತ್ರ ರೋಹನ್ ಜೇಟ್ಲಿ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದಾರೆ. ಜತೆಗೆ ಈ ಪ್ರಕರಣದಲ್ಲಿ ಡಿಡಿಸಿಎ ನಿಧಿ ದುರ್ಬಳಕೆಯ ಆರೋಪಗಳು ಕೂಡ ಕೇಳಿ ಬಂದಿದೆ.

ಸಂತ್ರಸ್ತ ಮಹಿಳೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಕಾರ್ಯದರ್ಶಿ ಜಯ್ ಶಾ ಹಾಗೂ ಎನ್‌ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್‌ಗೆ ಇ-ಮೇಲ್ ಮೂಲಕ ಈ ಬಗ್ಗೆ ವಿವರಣೆ ನೀಡಿದ್ದಾರೆ. ಮದುವೆಯ ನೆಪದಲ್ಲಿ ರೊಹನ್ ಜೇಟ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ IND VS AUS: ಕಳಪೆ ಪ್ರದರ್ಶನ ತೋರುವ ಆಟಗಾರರಿಗೆ ಉದ್ದನೆಯ ಹಗ್ಗ ನೀಡಿ; ಶಶಿ ತರೂರ್​

ಮೂರು ಪುಟಗಳ ಇ-ಮೇಲ್‌ನಲ್ಲಿ ವಿವರಣೆ ನೀಡಿರುವ ಜ್ಯೋತ್ಸ್ನಾ ಸಹನಿ, ‘ರೊಹನ್ ಜೇಟ್ಲಿ ಅವರು ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಬಳಿಕ ಈ ವಿಚಾರವನ್ನು ಯಾರಿಗೂ ಹೇಳದಂತೆ ಜೀವ ಬೆದರಿಕೆ ಒಡ್ಡಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಪ್ರಕರಣದ ವಿಚಾರವಾಗಿ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದು, ರೋಹನ್ ಜೇಟ್ಲಿ ಅವರನ್ನು ದೆಹಲಿ ಜಿಲ್ಲಾ ಕ್ರಿಕೆಟ್ ಅಸೊಸಿಯೇಶನ್ ಅಧ್ಯಕ್ಷ ಸ್ಥಾನದಿಂದ ತಕ್ಷಣವೇ ಬಿಸಿಸಿಐ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

Exit mobile version