Virat kohli | ಜನವರಿ 15 ವಿರಾಟ್​ ಕೊಹ್ಲಿ ದಿನವಾಗಲಿ; ಅಭಿಮಾನಿಗಳ ಈ ಆಗ್ರಹದ ಹಿನ್ನೆಲೆಯೇನು? - Vistara News

ಕ್ರಿಕೆಟ್

Virat kohli | ಜನವರಿ 15 ವಿರಾಟ್​ ಕೊಹ್ಲಿ ದಿನವಾಗಲಿ; ಅಭಿಮಾನಿಗಳ ಈ ಆಗ್ರಹದ ಹಿನ್ನೆಲೆಯೇನು?

ವಿರಾಟ್​ ಕೊಹ್ಲಿ (Virat kohli) ಜನವರಿ 15ರಂದು ಒಂದು ಟೆಸ್ಟ್​ ಪಂದ್ಯ ಸೇರಿದಂತೆ ಒಟ್ಟು ನಾಲ್ಕು ಶತಕಗಳನ್ನು ಬಾರಿಸಿದ್ದಾರೆ.

VISTARANEWS.COM


on

Virat kohli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುವನಂತಪುರ: ಟೀಮ್​ ಇಂಡಿಯಾದ ರನ್​ ಮೆಷಿನ್ ವಿರಾಟ್​ ಕೊಹ್ಲಿ(Virat kohli) ಶ್ರೀಲಂಕಾ ತಂಡದ ವಿರುದ್ಧದ ಏಕ ದಿನ ಸರಣಿಯ ಮೂರನೇ ಪಂದ್ಯದಲ್ಲಿ ಅಮೋಘ ಶತಕ (166) ಬಾರಿಸಿದ್ದಾರೆ. ಇದು ಅವರು 46ನೇ ಏಕ ದಿನ ಕ್ರಿಕೆಟ್​ ಶತಕ ಹಾಗೂ ಒಟ್ಟಾರೆ 74ನೇ ಅಂತಾರಾಷ್ಟ್ರೀಯ ಶತಕವಾಗಿದೆ. ವಿರಾಟ್​ ಕೊಹ್ಲಿಯ ಈ ಸಾಧನೆಗೆ ಮೆಚ್ಚಿರುವ ಅವರ ಅಭಿಮಾನಿಗಳು ಜನವರಿ 15 ಅನ್ನು ವಿರಾಟ್​ ಕೊಹ್ಲಿ ದಿನವನ್ನಾಗಿ ಆಚರಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹಿಸಿದ್ದಾರೆ. ಆದರೆ, ಅವರ ಈ ಆಗ್ರಹಕ್ಕೆ ಬೇರೊಂದು ಕಾರಣವೂ ಇದೆ.

ಜನವರಿ 15, 2023ರಲ್ಲಿ ಅವರು ಬಾರಿಸಿದ್ದು 46ನೇ ಏಕ ದಿನ ಶತಕವಾಗಿದ್ದು ಅವರ ಪಾಲಿಗೆ ಅವಿಸ್ಮರಣೀಯ ಸಾಧನೆಯಾಗಿದೆ. ಕೊಹ್ಲಿ 27ನೇ ಏಕ ದಿನ ಶತಕವನ್ನು 2017ರ ಜನವರಿ 15ರಂದು (ಇಂಗ್ಲೆಂಡ್​ ವಿರುದ್ಧ), 39ನೇ ಶತಕವನ್ನು 2019ರಂದು (ಆಸ್ಟ್ರೇಲಿಯಾ ವಿರುದ್ಧ) ಬಾರಿಸಿದ್ದಾರೆ. ಈ ಮೂಲಕ ಒಟ್ಟಾರೆ 46 ಏಕದಿನ ಶತಕಗಳಲ್ಲಿ ಮೂರು ಶತಕಗಳು ಜನವರಿ 15ರಂದು ಬಾರಿಸಿದ್ದಾರೆ. ಅದೂ ಅಲ್ಲದೆ, 2018ರ ಜನವರಿ 15 ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​​ನಲ್ಲೂ ಶತಕದ ಸಾಧನೆ ಮಾಡಿದ್ದರು. ಈ ಮೂಲಕ ಒಟ್ಟು 74ರಲ್ಲಿ 4 ಶತಕಗಳು ಜನವರಿ 15ರಂದು ದಾಖಲಾಗಿವೆ. ಹೀಗಾಗಿ ಈ ದಿನವನ್ನು ವಿರಾಟ್​ ಕೊಹ್ಲಿದಿನ ಎಂದು ಘೋಷಿಸಲು ಅಭಿಮಾನಿಗಳು ಒತ್ತಾಯಿಸಿದ್ದಾರೆ.

ವಿರಾಟ್​ ಕೊಹ್ಲಿ ಲಂಕಾ ವಿರುದ್ಧ ಶತಕ ಬಾರಿಸುವ ಮೂಲಕ ತವರು ನೆಲದಲ್ಲಿ ಅತ್ಯಧಿಕ ಶತಕ ಬಾರಿಸಿದ ದಾಖಲೆಯನ್ನು ತಮ್ಮೆಸರಿಗೆ ಬರೆಸಿಕೊಂಡರು. ಈ ಹಿಂದೆ ಈ ದಾಖಲೆ ದಿಗ್ಗಜ ಸಚಿನ್​ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು. ವಿರಾಟ್​ ಕೊಹ್ಲಿ ಈಗ ತವರಿನಲ್ಲಿ 21 ಶತಕಗಳನ್ನು ಬಾರಿಸಿದ ದಾಖಲೆ ಮಾಡಿದ್ದಾರೆ.

ಇದನ್ನೂ ಓದಿ | INDvsSL ODI | ಗಾಯಗೊಂಡ ಎದುರಾಳಿ ತಂಡದ ಆಟಗಾರರ ಆರೋಗ್ಯ ವಿಚಾರಿಸಿದ ವಿರಾಟ್​ ಕೊಹ್ಲಿಯ ನಡೆಗೆ ಮೆಚ್ಚುಗೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024: ಐಪಿಎಲ್​ನಲ್ಲಿ ದಾಖಲೆ ಬರೆದ ಮ್ಯಾಕ್‌ಗುರ್ಕ್; ಜೈಸ್ವಾಲ್​ ದಾಖಲೆ ಪತನ

IPL 2024: ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧದ ಪಂದ್ಯದಲ್ಲಿ ಮ್ಯಾಕ್‌ಗುರ್ಕ್ ಅರ್ಧಶತಕ ಬಾರಿಸುವ ಮೂಲಕ 20 ಎಸೆತಗಳಿಗಿಂತ ಕಡಿಮೆ ಎಸೆತ ಎದುರಿಸಿ ಅತ್ಯಧಿಕ ಬಾರಿ ಐಪಿಎಲ್​ ಅರ್ಧಶತಕ ಬಾರಿಸಿದ ದಾಖಲೆ ತಮ್ಮದಾಗಿಸಿಕೊಂಡರು.

VISTARANEWS.COM


on

IPL 2024
Koo

ನವದೆಹಲಿ: ಈ ಬಾರಿಯ ಐಪಿಎಲ್​ನಲ್ಲಿ(IPL 2024) ಬಿರುಸಿನ ಬ್ಯಾಟಿಂಗ್​ ಮೂಲಕ ಸಂಚಲನ ಮೂಡಿಸಿರುವ ಆಸ್ಟ್ರೇಲಿಯಾದ ಬ್ಯಾಟರ್​, ಡೆಲ್ಲಿ(Delhi Capitals) ತಂಡದ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್(Jake Fraser-McGurk) ಐಪಿಎಲ್​ನಲ್ಲಿ ನೂತನ ದಾಖಲೆಯೊಂದನ್ನು ಬರೆದಿದ್ದಾರೆ. ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ 20 ಎಸೆತಗಳಿಗಿಂತ ಕಡಿಮೆ ಎಸೆತ ಎದುರಿಸಿ ಅತ್ಯಧಿಕ ಬಾರಿ ಐಪಿಎಲ್​ ಅರ್ಧಶತಕ ಬಾರಿಸಿದ ದಾಖಲೆ ತಮ್ಮದಾಗಿಸಿಕೊಂಡರು.

ರಾಜಸ್ಥಾನ್​ ರಾಯಲ್ಸ್​ ಎದುರಿನ ಪಂದ್ಯದಲ್ಲಿ ಮ್ಯಾಕ್‌ಗುರ್ಕ್ ಕೇವಲ 19 ಎಸೆತಗಳಿಂದ ಅರ್ಧತಕ ಬಾರಿಸುವ ಮೂಲಕ 20 ಎಸೆತಗಳಿಗಿಂತ ಕಡಿಮೆ ಎಸೆದ ಎದುರಿಸಿ ಅತ್ಯಧಿಕ ಐಪಿಎಲ್​ ಅರ್ಧಶತಕ ಬಾರಿಸಿದ ದಾಖಲೆ ಬರೆದರು. 3 ಬಾರಿ ಮ್ಯಾಕ್‌ಗುರ್ಕ್ ಈ ಸಾಧನೆ ಮಾಡಿದ್ದಾರೆ. ಯಶಸ್ವಿ ಜೈಸ್ವಾಲ್​ 2 ಬಾರಿ ಈ ಸಾಧನೆ ಮಾಡಿದ್ದಾರೆ. ಕಳೆದ ಮುಂಬೈ ಇಂಡಿಯನ್ಸ್​ ಮತ್ತು ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಮ್ಯಾಕ್‌ಗುರ್ಕ್ 15 ಎಸೆತಗಳಿಂದ ಅರ್ಧಶತಕ ಬಾರಿಸಿದ್ದರು.

20 ಎಸೆತಗಳಿಗಿಂತ ಕಡಿಮೆ ಎಸೆತ ಎದುರಿಸಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಆಟಗಾರರು


ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್- 3

ಯಶಸ್ವಿ ಜೈಸ್ವಾಲ್​-2

ನಿಕೋಲಸ್​ ಪೂರನ್​-2

ಇಶಾನ್​ ಕಿಶನ್​-2

ಸುನೀಲ್​ ನರೈನ್​-2

ಕೈರನ್​ ಪೊಲಾರ್ಡ್​-2

ಟ್ರಾವಿಸ್​ ಹೆಡ್​-2​

ಕೆ.ಎಲ್​ ರಾಹುಲ್​-2

ಅರುಣ್​ ಜೇಟ್ಲಿ ಕ್ರಿಕೆಟ್​​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ರಾಜಸ್ಥಾನ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 221 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್​ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ಗೆ 201 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ IPL 2024: ಅಂಪೈರ್​ ಜತೆ ವಾಗ್ವಾದ; ಸಂಜುಗೆ ಬಿತ್ತು ಭಾರೀ ದಂಡ

ಸಂಜು ಸ್ಯಾಮ್ಸನ್​ ಕ್ರೀಸ್​ನಲ್ಲಿರುವ ತನಕ ಪಂದ್ಯ ರಾಜಸ್ಥಾನ್ ಪರವಾಗಿತ್ತು. ಆದರೆ, ಸಂಜು ವಿಕೆಟ್​ ಪತನದ ಬಳಿಕ ಏಕಾಏಕಿ ಕುಸಿತ ಕಂಡ ರಾಜಸ್ತಾನ್​ ಸೋಲಿಗೆ ಸಿಲುಕಿತು. ಕುಲ್​ದೀಪ್​​ ಯಾದವ್​ 25 ರನ್​ಗಳಗೆ ಪ್ರಮುಖ 2 ವಿಕೆಟ್ ಉರುಳಿಸುವ ಮೂಲಕ ಕೊನೇ ಹಂತದಲ್ಲಿ ಪಂದ್ಯಕ್ಕೆ ತಿರುವು ತಂದುಕೊಟ್ಟರು. ಸಂಜು 46 ಎಸೆತಕ್ಕೆ 86 ರನ್ ಬಾರಿಸಿ ಹೋಪ್​ ಹಿಡಿದ ಸೂಪರ್​ ಕ್ಯಾಚ್​ಗೆ ವಿಕೆಟ್​ ಕೈಚೆಲ್ಲಿದರು.

Continue Reading

ಕ್ರೀಡೆ

Shakib Al Hasan: ಸೆಲ್ಫಿ ತೆಗೆಯಲು ಬಂದ ಅಭಿಮಾನಿಗೆ ಥಳಿಸಲು ಮುಂದಾದ ಶಕಿಬ್; ವಿಡಿಯೊ ವೈರಲ್​

Shakib Al Hasan: ಶೇಖ್ ಜಮಾಲ್ ಧನ್ಮೊಂಡಿ ಕ್ಲಬ್ ಪರವಾಗಿ ಆಡುತ್ತಿರುವ ಶಕೀಬ್​ ಪಂದ್ಯಕ್ಕೂ ಮುನ್ನ ಸಹ ಆಟಗಾರರ ಜತೆ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಅಭಿಮಾನಿಯೊಬ್ಬ ಮೈದಾನಕ್ಕೆ ಬಂದು ಸೆಲ್ಫಿ ತೆಗೆಯಲು ಮುಂದಾಗಿದ್ದಾನೆ. ಈ ಅಭಿಮಾನಿಯನ್ನು ಕಂಡ ಕೂಡಲೇ ಕೆರಳಿದ ಶಕೀಬ್ ಕುತ್ತಿಗೆಗೆ ಕೈಹಾಕಿ ಹೊಡೆಯಲು ಮುಂದಾಗಿದ್ದಾರೆ. ಈ ವಿಡಿಯೊ ಇದೀಗ ವೈರಲ್​ ಆಗುತ್ತಿದೆ.

VISTARANEWS.COM


on

Shakib Al Hasan
Koo

ಢಾಕಾ: ಬಾಂಗ್ಲಾದೇಶದ ಕ್ರಿಕೆಟ್​ ತಂಡದ ಹಿರಿಯ ಆಲ್​ರೌಂಡರ್​ ಶಕಿಬ್ ಅಲ್ ಹಸನ್‌(Shakib Al Hasan) ತಾಳ್ಮೆ ಕಳೆದುಕೊಂಡು, ಅಂಪೈರ್​ಗಳ ಜತೆ ಮತ್ತು ಅಭಿಮಾನಿಗಳ ನಡುವೆ ಈಗಾಗಲೇ ಹಲವು ಬಾರಿ ಕಿರಿಕ್​ ಮಾಡಿಕೊಂಡು ಸುದ್ದಿಯಾಗಿದ್ದರು. ಇದೀಗ ಇಂತಹದ್ದೇ ಮತ್ತೊಂದು ಘಟನೆ ನಡೆದಿದೆ. ಸೆಲ್ಫಿ ಫೋಟೋ ತೆಗೆಸಿಕೊಳ್ಳಲು ಬಂದ ಅಭಿಮಾನಿಗೆ ಶಕಿಬ್​ ಥಳಿಸಲು ಮುಂದಾಗಿದ್ದಾರೆ. ಈ ವಿಡಿಯೊ ವೈರಲ್(Video Viral)​ ಆಗಿದ್ದು ಶಕಿಬ್​​ ವರ್ತನೆ ಬಗ್ಗೆ ಅನೇಕ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕ ಕಣ್ಣಿನ ದೃಷ್ಟಿ ಸಮಸ್ಯೆಗೆ ಒಳಗಾಗಿದ್ದ ಶಕೀಬ್​ ಶಸ್ತ್ರಚಿಕಿತ್ಸೆಗೆ ಒಳಗಾಗಿ ಬಹುದಿನಗಳ ವಿಶ್ರಾಂತಿ ಪಡೆದಿದ್ದರು. ಇದೇ ಜೂನ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಆಡುವ ಸಲುವಾಗಿ ಢಾಕಾ ಪ್ರೀಮಿಯರ್ ಲೀಗ್​ನಲ್ಲಿ ಆಡಲಿಳಿದಿದ್ದಾರೆ.

ಶೇಖ್ ಜಮಾಲ್ ಧನ್ಮೊಂಡಿ ಕ್ಲಬ್ ಪರವಾಗಿ ಆಡುತ್ತಿರುವ ಶಕೀಬ್​ ಪಂದ್ಯಕ್ಕೂ ಮುನ್ನ ಸಹ ಆಟಗಾರರ ಜತೆ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಅಭಿಮಾನಿಯೊಬ್ಬ ಮೈದಾನಕ್ಕೆ ಬಂದು ಸೆಲ್ಫಿ ತೆಗೆಯಲು ಮುಂದಾಗಿದ್ದಾನೆ. ಈ ಅಭಿಮಾನಿಯನ್ನು ಕಂಡ ಕೂಡಲೇ ಕೆರಳಿದ ಶಕೀಬ್, ಇಲ್ಲ ಫೋಟೊ ತೆಗೆಸಿಕೊಳ್ಳಲ್ಲ ಇಲ್ಲಿಂದ ಹೋಗು ಎಂದು ​ಸೂಚನೆ ನೀಡಿದ್ದಾರೆ. ಆದರೂ ಕೂಡ ಅಭಿಮಾನಿ ಮತ್ತೆ ಮತ್ತೆ ಫೋಟೊ ತೆಗೆಯಲು ಒತ್ತಾಯಿಸಿದಾಗ, ಅವರ ಕುತ್ತಿಗೆಗೆ ಕೈಹಾಕಿದ ಶಾಕಿಬ್ ಹೊಡೆಯಲು ಮುಂದಾದರು. ಈ ವಿಡಿಯೊ ಇದೀಗ ವೈರಲ್​ ಆಗುತ್ತಿದೆ.

ಶಕಿಬ್‌ ಅವರು ಈ ರೀತಿ ತಾಳ್ಮೆ ಕಳೆದುಕೊಂಡಿರುವುದು ಇದೇ ಮೊದಲೇನಲ್ಲ ಹಲವು ಬಾರಿ ಅವರು ಮೈದಾನದಲ್ಲಿ ತಮ್ಮ ಕೋಪವನ್ನು ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಅಂಪೈರ್‌ ಅವರೊಂದಿಗೆ ಶಕಿಬ್‌ ಹಲವು ಬಾರಿ ವಾಗ್ವಾದಕ್ಕೆ ಇಳಿದ ಹಲವು ನಿದರ್ಶನಗಳಿವೆ. ಕಳೆದ ಬಾರಿಯ ಬಾಂಗ್ಲಾ ಪ್ರೀಮಿಯರ್​ ಲೀಗ್​ನಲ್ಲಿ ಅಂಪೈರ್​ ಅವರು ಔಟ್​ ನೀಡಿಲ್ಲ ಎಂಬ ಕಾರಣಕ್ಕೆ ಶಬಿಕ್​ ವಿಕೆಟ್​ಗೆ ಕಾಲಿನಿಂದ ಒದ್ದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ Shakib Al Hasan : ರಾಜಕೀಯ ಆಟದಲ್ಲಿ ಗೆಲುವು ಕಂಡ ಶಕಿಬ್ ಅಲ್ ಹಸನ್​

ಹಿಂದೊಮ್ಮೆ ಜಾಹೀರಾತು ಪ್ರಚಾರದ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ವೇಳೆ ಶಕಿಬ್‌ ಸಾಗುವ ಮಾರ್ಗದಲ್ಲಿ ಅನೇಕ ಕ್ರೀಡಾಭಿಮಾನಿಗಳು ಅವರೊಂದಿಗೆ ಫೋಟೋ ತೆಗೆಸಿಕೊಳ್ಳಲು ಮುಂದಾಗಿದ್ದರು. ಈ ವೇಳೆ ಅಭಿಮಾನಿಯೊಬ್ಬ ಗುಂಪಿನ ಮಧ್ಯೆಯಿಂದ ಫೋಟೊ ತೆಗೆಯಲು ಮುಂದಾಗಿದ್ದ ಇದರಿಂದ ಸಿಟ್ಟಿಗೆದ್ದ ಶಕೀಬ್​ತಲೆಯಿಂದ ಕ್ಯಾಪ್​ ಎಳೆದಿದ್ದರು. ಅಲ್ಲದೆ ಕ್ಯಾಪ್‌ ನಿಂದಲೇ ಒಂದೆರಡು ಬಾರಿ ಥಳಿಸಿದ್ದರು. 

Continue Reading

ಕ್ರೀಡೆ

IPL 2024: ಅಂಪೈರ್​ ಜತೆ ವಾಗ್ವಾದ; ಸಂಜುಗೆ ಬಿತ್ತು ಭಾರೀ ದಂಡ

IPL 2024: ಐಪಿಎಲ್​ನಲ್ಲಿ 14 ಕೋಟಿ ರೂ. ಸಂಭಾವನೆ ಪಡೆಯುತ್ತಿರುವ ಸಂಜು ಸ್ಯಾಮ್ಸನ್ ಶೇ.30ರ ಅನ್ವಯದಲ್ಲಿ 30 ಲಕ್ಷ ರೂ. ದಂಡ ಪಾವತಿಸಬೇಕಿದೆ. ಜತೆಗೆ ಇಂತಹ ತಪ್ಪುಗಳನ್ನು ಪುನರಾವರ್ತಿಸದಂತೆ ಮ್ಯಾಚ್ ರೆಫ್ರಿ ಎಚ್ಚರಿಕೆ ನೀಡಿದ್ದಾರೆ. ಒಂದೊಮ್ಮೆ ಮತ್ತೆ ಸಂಜು ಈ ರೀತಿಯ ತಪ್ಪು ಮಾಡಿದರೆ ಒಂದು ಪಂದ್ಯದ ನಿಷೇಧಕ್ಕೆ ಗುರಿಯಾಗಬೇಕಾಗುತ್ತದೆ.

VISTARANEWS.COM


on

IPL 2024
Koo

ನವದೆಹಲಿ: ಮಂಗಳವಾರ ರಾತ್ರಿ ನಡೆದ ಐಪಿಎಲ್​ನ 56ನೇ ಪಂದ್ಯದಲ್ಲಿ(IPL 2024) ರಾಜಸ್ಥಾನ್​ ರಾಯಲ್ಸ್​(Rajasthan Royals) ಮತ್ತು ಡೆಲ್ಲಿ ಕ್ಯಾಪಿಟಲ್ಸ್(Delhi Capitals)​ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ರಾಜಸ್ಥಾನ್​ ನಾಯಕ ಸಂಜು ಸ್ಯಾಮ್ಸನ್(Sanju Samson)​ ತಮ್ಮ ವಿವಾದಾತ್ಮಕ ಕ್ಯಾಚ್​ಗೆ ಔಟ್​ ನೀಡಿದ್ದಕ್ಕಾಗಿ ಅಂಪೈರ್​ ಜತೆ ವಾಗ್ವಾದ ನಡೆಸಿದ್ದರು. ಈ ತಪ್ಪಿಗಾಗಿ ಸಂಜುಗೆ ಪಂದ್ಯ ಶುಲ್ಕದ ಶೇ.30 ರಷ್ಟು ದಂಡ ವಿಧಿಸಲಾಗಿದೆ.

ಐಪಿಎಲ್​ನಲ್ಲಿ 14 ಕೋಟಿ ರೂ. ಸಂಭಾವನೆ ಪಡೆಯುತ್ತಿರುವ ಸಂಜು ಸ್ಯಾಮ್ಸನ್ ಶೇ.30ರ ಅನ್ವಯದಲ್ಲಿ 30 ಲಕ್ಷ ರೂ. ದಂಡ ಪಾವತಿಸಬೇಕಿದೆ. ಜತೆಗೆ ಇಂತಹ ತಪ್ಪುಗಳನ್ನು ಪುನರಾವರ್ತಿಸದಂತೆ ಮ್ಯಾಚ್ ರೆಫ್ರಿ ಎಚ್ಚರಿಕೆ ನೀಡಿದ್ದಾರೆ. ಒಂದೊಮ್ಮೆ ಮತ್ತೆ ಸಂಜು ಈ ರೀತಿಯ ತಪ್ಪು ಮಾಡಿದರೆ ಒಂದು ಪಂದ್ಯದ ನಿಷೇಧಕ್ಕೆ ಗುರಿಯಾಗಬೇಕಾಗುತ್ತದೆ.

ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಸ್ಯಾಮ್ಸನ್ 16ನೇ ಓವರ್​ನ 4ನೇ ಎಸೆತದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್ ನೀಡಿದ್ದರು. ಬೌಂಡರಿ ಲೈನ್​ನಲ್ಲಿದ್ದ ಶಾಯ್ ಹೋಪ್ ಅವರು ಈ ಕ್ಯಾಚ್​ ಪಡೆದರು. ಹೋಪ್​ ಕಾಲು ಬೌಂಡರಿ ಲೈನ್​ಗೆ ತಗುಲಿದಂತೆ ಕಂಡು ಬಂದ ಕಾರಣ ಮೂರನೇ ಅಂಪೈರ್​ ಇದನ್ನು ಪರೀಕ್ಷಿಸಿದ ಬಳಿಕ ಔಟ್​ ಎಂದು ತೀರ್ಪು ನೀಡಿದರು. ಈ ವೇಳೆ ಸಂಜು ಮರು ತೀರ್ಪನ್ನು ಮರು ಪರಿಶೀಲಿಸುವಂತೆ ಫೀಲ್ಡ್ ಅಂಪೈರ್ ಜತೆ ವಾಗ್ವಾದ ನಡೆಸಿದರು. ಅಂಪೈರ್​ ತಮ್ಮ ನಿರ್ಧಾರದ ಬಗ್ಗೆ ಮಾಹಿತಿ ನೀಡಿದರೂ ಕೂಡ ಸಂಜು ಇದಕ್ಕೆ ಒಪ್ಪದೆ ಅಂಪೈರ್​ ಜತೆ ವಾಗ್ವಾದ ನಡೆಸಿದರು. ಇದು ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಮೊದಲ ಹಂತದ ಅಪರಾಧವಾಗಿದೆ. ಹೀಗಾಗಿ ಅವರಿಗೆ ಪಂದ್ಯ ಶುಲ್ಕದ ಶೇ.30 ರಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್​ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ IPL 2024 Points Table: ಡೆಲ್ಲಿಗೆ ಗೆಲುವು ಅಂಕಪಟ್ಟಿಯಲ್ಲಿ ಕುಸಿತ ಕಂಡ ಲಕ್ನೋ

ಸಂಜು ಸ್ಯಾಮ್ಸನ್​ ಕ್ರೀಸ್​ನಲ್ಲಿರುವ ತನಕ ಪಂದ್ಯ ರಾಜಸ್ಥಾನ್ ಪರವಾಗಿತ್ತು. ಆದರೆ, ಸಂಜು ವಿಕೆಟ್​ ಪತನದ ಬಳಿಕ ಏಕಾಏಕಿ ಕುಸಿತ ಕಂಡ ರಾಜಸ್ತಾನ್​ ಸೋಲಿಗೆ ಸಿಲುಕಿತು. ಕುಲ್​ದೀಪ್​​ ಯಾದವ್​ 25 ರನ್​ಗಳಗೆ ಪ್ರಮುಖ 2 ವಿಕೆಟ್ ಉರುಳಿಸುವ ಮೂಲಕ ಕೊನೇ ಹಂತದಲ್ಲಿ ಪಂದ್ಯಕ್ಕೆ ತಿರುವು ತಂದುಕೊಟ್ಟರು. ಸಂಜು 46 ಎಸೆತಕ್ಕೆ 86 ರನ್ ಬಾರಿಸಿ ಹೋಪ್​ ಹಿಡಿದ ಸೂಪರ್​ ಕ್ಯಾಚ್​ಗೆ ವಿಕೆಟ್​ ಕೈಚೆಲ್ಲಿದರು.

ಅರುಣ್​ ಜೇಟ್ಲಿ ಕ್ರಿಕೆಟ್​​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ರಾಜಸ್ಥಾನ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 221 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್​ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ಗೆ 201 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

Continue Reading

ಕ್ರಿಕೆಟ್

IPL 2024 Points Table: ಡೆಲ್ಲಿಗೆ ಗೆಲುವು ಅಂಕಪಟ್ಟಿಯಲ್ಲಿ ಕುಸಿತ ಕಂಡ ಲಕ್ನೋ

IPL 2024 Points Table: ಇಂದು ನಡೆಯುವ ಪಂದ್ಯದಲ್ಲಿ 4ನೇ ಸ್ಥಾನಿ ಸನ್​ರೈಸರ್ಸ್​ ಹೈದರಾಬಾದ್​ ಮತ್ತು ಲಕ್ನೋ ಸೂಪರ್​ ಜೈಂಟ್ಸ್​ ಮುಖಾಮುಖಿಯಅಗಲಿವೆ. ಉಭಯ ತಂಡಗಳಿಗೂ ಇದು ಮಹತ್ವದ ಪಂದ್ಯವಾಗಿದೆ. ಯಾರೇ ಗೆದ್ದರೂ 14 ಅಂಕದೊಂದಿಗೆ 3ನೇ ಸ್ಥಾನಕ್ಕೇರಲಿದ್ದಾರೆ. ಈ ತಂಡ ಯಾವುದು ಎನ್ನುವುದು ಈ ಪಂದ್ಯದ ಕುತೂಹಲ.

VISTARANEWS.COM


on

IPL 2024 Points Table
Koo

ನವದೆಹಲಿ: ರಾಜಸ್ಥಾನ್​ ರಾಯಲ್ಸ್​ ವಿರುದ್ಧದ ಬೃಹತ್​ ಮೊತ್ತದ ಪಂದ್ಯದಲ್ಲಿ(IPL 2024) ಆತಿಥೇಯ ಡೆಲ್ಲಿ ಕ್ಯಾಪಿಲಟ್ಸ್​ ತಂಡ 20 ರನ್​ಗಳ ಗೆಲುವು ಸಾಧಿಸಿ ತನ್ನ ಪ್ಲೇ ಆಫ್​ ರೇಸ್​ ಹಾದಿಯನ್ನು ಜೀವಂತವಿರಿಸಿದೆ. ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ(IPL 2024 Points Table) 5ನೇ ಸ್ಥಾನಕ್ಕೇರಿದೆ. ಈ ಹಿಂದೆ 5 ನೇ ಸ್ಥಾನಿಯಾಗಿದ್ದ ಲಕ್ನೋ ಸೂಪರ್​ ಜೈಂಟ್ಸ್​ ತಂಡ 6ನೇ ಸ್ಥಾನಕ್ಕೆ ಕುಸಿದಿದೆ. ಸೋಲು ಕಂಡರೂ ರಾಜಸ್ಥಾನ್​ 2ನೇ ಸ್ಥಾನದಲ್ಲೇ ಉಳಿದಿದೆ.

ಇಂದು ನಡೆಯುವ ಪಂದ್ಯದಲ್ಲಿ 4ನೇ ಸ್ಥಾನಿ ಸನ್​ರೈಸರ್ಸ್​ ಹೈದರಾಬಾದ್​ ಮತ್ತು ಲಕ್ನೋ ಸೂಪರ್​ ಜೈಂಟ್ಸ್​ ಮುಖಾಮುಖಿಯಅಗಲಿವೆ. ಉಭಯ ತಂಡಗಳಿಗೂ ಇದು ಮಹತ್ವದ ಪಂದ್ಯವಾಗಿದೆ. ಯಾರೇ ಗೆದ್ದರೂ 14 ಅಂಕದೊಂದಿಗೆ 3ನೇ ಸ್ಥಾನಕ್ಕೇರಲಿದ್ದಾರೆ. ಈ ತಂಡ ಯಾವುದು ಎನ್ನುವುದು ಈ ಪಂದ್ಯದ ಕುತೂಹಲ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ಕೆಕೆಆರ್​118316 (+1.453)
ರಾಜಸ್ಥಾನ್​ ರಾಯಲ್ಸ್​​​118316 (+0.476)
ಚೆನ್ನೈ​​116514 (+0.700)
ಹೈದರಾಬಾದ್​116512 (-0.065)
ಡೆಲ್ಲಿ126612 (-0.316)
ಲಕ್ನೋ116512 (-0.371)
ಆರ್​ಸಿಬಿ11478 (-0.049)
ಪಂಜಾಬ್​10468 (-0.062)
ಮುಂಬೈ12488 (-0.212)
ಗುಜರಾತ್​11478 (-1.320)

ಅರುಣ್​ ಜೇಟ್ಲಿ ಕ್ರಿಕ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ರಾಜಸ್ಥಾನ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 221 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್​ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ಗೆ 201 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ IPL 2024 : ರಾಜಸ್ಥಾನ್​ ವಿರುದ್ಧ ಡೆಲ್ಲಿಗೆ 20 ರನ್​ ಗೆಲುವು, ಪ್ಲೇಆಫ್ ಕನಸು ಜೀವಂತ

ಸಂಜು ಸ್ಯಾಮ್ಸನ್​ ಕ್ರೀಸ್​ನಲ್ಲಿರುವ ತನಕ ಪಂದ್ಯ ರಾಜಸ್ಥಾನ್ ಪರವಾಗಿತ್ತು. ಆದರೆ, ಸಂಜು ವಿಕೆಟ್​ ಪತನದ ಬಳಿಕ ಏಕಾಏಕಿ ಕುಸಿತ ಕಂಡ ರಾಜಸ್ತಾನ್​ ಸೋಲಿಗೆ ಸಿಲುಕಿತು. ಕುಲ್​ದೀಪ್​​ ಯಾದವ್​ 25 ರನ್​ಗಳಗೆ ಪ್ರಮುಖ 2 ವಿಕೆಟ್ ಉರುಳಿಸುವ ಮೂಲಕ ಕೊನೇ ಹಂತದಲ್ಲಿ ಪಂದ್ಯಕ್ಕೆ ತಿರುವು ತಂದುಕೊಟ್ಟರು. ಸಂಜು 46 ಎಸೆತಕ್ಕೆ 86 ರನ್ ಬಾರಿಸಿ ಹೋಪ್​ ಹಿಡಿದ ಸೂಪರ್​ ಕ್ಯಾಚ್​ಗೆ ವಿಕೆಟ್​ ಕೈಚೆಲ್ಲಿದರು.

Continue Reading
Advertisement
Heavy Rain
ತುಮಕೂರು1 min ago

Heavy Rain: ಕಳುವರಹಳ್ಳಿಯಲ್ಲಿ ಭಾರೀ ಗಾಳಿ ಮಳೆಗೆ ಶಾಲಾ ಚಾವಣಿ ಕುಸಿತ

Fried Oil
ಆರೋಗ್ಯ20 mins ago

Fried Oil: ಒಮ್ಮೆ ಕರಿದ ಎಣ್ಣೆಯನ್ನು ಮತ್ತೊಮ್ಮೆ ಬಳಸಬಹುದೆ?

IPL 2024
ಕ್ರೀಡೆ31 mins ago

IPL 2024: ಐಪಿಎಲ್​ನಲ್ಲಿ ದಾಖಲೆ ಬರೆದ ಮ್ಯಾಕ್‌ಗುರ್ಕ್; ಜೈಸ್ವಾಲ್​ ದಾಖಲೆ ಪತನ

Akshaya Tritiya Jewellery
ಫ್ಯಾಷನ್50 mins ago

Akshaya Tritiya Jewellery: ಅಕ್ಷಯ ತೃತೀಯಕ್ಕೆ ಬಂದಿವೆ ವೈವಿಧ್ಯಮಯ ಫ್ಯಾಷನ್‌ ಜ್ಯುವೆಲರಿಗಳು!

Narendra Modi
ದೇಶ54 mins ago

Narendra Modi: ಅಂಬಾನಿ, ಅದಾನಿಯಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಹಣ; ಮೋದಿ ತಿರುಗುಬಾಣ!

Apple New Products
ಗ್ಯಾಜೆಟ್ಸ್59 mins ago

Apple New Products: ಐಪ್ಯಾಡ್ ಪ್ರೊನಿಂದ ಪೆನ್ಸಿಲ್ ಪ್ರೊವರೆಗೆ; 2024ರ ಆಪಲ್‌ ಹೊಸ ಉತ್ಪನ್ನಗಳಿವು

State Education Policy
ಕರ್ನಾಟಕ1 hour ago

State Education Policy: 3 ವರ್ಷದ ಪದವಿಗೆ ರಾಜ್ಯ ಸರ್ಕಾರ ಅಸ್ತು; ಎಸ್‌ಇಪಿ ಆಯೋಗದ ಶಿಫಾರುಸುಗಳ ಅನ್ವಯ ಆದೇಶ

Actor Ravichandran female lead in ravichandrans premaloka 2
ಸ್ಯಾಂಡಲ್ ವುಡ್1 hour ago

Actor Ravichandran: ಕನಸುಗಾರನ ʻಪ್ರೇಮಲೋಕ 2’ ಚಿತ್ರಕ್ಕೆ ನಾಯಕಿ ಫಿಕ್ಸ್‌!

Prajwal Revanna Case Two additional SPPs appointed for SIT cases
ಕ್ರೈಂ1 hour ago

Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇಬ್ಬರು ಹೆಚ್ಚುವರಿ ಎಸ್‌ಪಿಪಿ ನೇಮಕ; ರಾಜ್ಯ ಸರ್ಕಾರದ ಮಹತ್ವದ ಆದೇಶ

Paris Olympics 2024
ಕ್ರೀಡೆ2 hours ago

Paris Olympics 2024: 19ನೇ ಶತಮಾನದ ಹಡಗಿನಲ್ಲಿ ಇಂದು ಫ್ರಾನ್ಸ್‌ಗೆ ಬರಲಿದೆ ಒಲಿಂಪಿಕ್‌ ಜ್ಯೋತಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ21 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ24 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌