ಮುಂಬಯಿ: ನಿರೀಕ್ಷೆಯಂತೆ ಮೊಹಮ್ಮದ್ ಶಮಿ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ. ಜತೆಗೆ ಮಧ್ಯಮ ವೇಗಿ ದೀಪಕ್ ಚಹರ್ ಅವರು ಏಕದಿನ ಸರಣಿಯಿಂದ ಹಿಂದೆ ಸರಿದಿದ್ದಾರೆ. ಉಭಯ ಆಟಗಾರರ ಅಲಭ್ಯತೆಯನ್ನು ಬಿಸಿಸಿಐ ಶನಿವಾರ ಅಧಿಕೃತ ಪ್ರಕಟನೆಯ ಮೂಲಕ ತಿಳಿಸಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ನಾಳೆ ನಡೆಯಲಿದೆ. ಈ ಪಂದ್ಯ ಆರಂಭಕ್ಕೂ ಮುನ್ನ ದೀಪಕ್ ಚಹರ್ ಅವರು ಸರಣಿಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಕುಟುಂಬದ ವೈದ್ಯಕೀಯ ತುರ್ತುಸ್ಥಿತಿಯಿಂದಾಗಿ ಅವರು ಏಕದಿನ ಸರಣಿಯಿಂದ ಹಿಂದೆ ಸರಿದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ದೀಪಕ್ ಸ್ಥಾನಕ್ಕೆ ಆಕಾಶ್ ದೀಪ್ ಅವರನ್ನು ಬದಲಿ ಆಟಗಾರನಾಗಿ ಆಯ್ಕ ಮಾಡಲಾಗಿದೆ.
ದೀಪಕ್ ಚಹರ್ ಅವರನ್ನು ತಂಡಕ್ಕೆ ಆಯ್ಕೆ ಮಾಡುವಾಗಲೇ ಅವರು ಸರಣಿಯಲ್ಲಿ ಆಡುವುದು ಅನುಮಾನ ಎನ್ನಲಾಗಿತ್ತು. ಇದೀಗ ನಿರೀಕ್ಷೆಯಂತೆ ಅವರು ಸರಣಿಯಿಂದ ಹೊರಬಿದ್ದಿದ್ದಾರೆ. ಪಾದದ ನೋವಿನಿಂದ ಬಳಲುತ್ತಿದ್ದ ಮೊಹ್ಮಮದ್ ಶಮಿ ಕೂಡ ಅನುಮಾನ ಎನ್ನಲಾಗಿತ್ತು. ಫಿಟ್ನೆಸ್ ಪಾಸ್ ಆಗದ ಕಾರಣ ಅವರನ್ನು ಕೂಟ ಟೆಸ್ಟ್ ಸರಣಿಯಿಂದ ಕೈಬಿಡಲಾಗಿದೆ.
ಇದನ್ನೂ ಓದಿ ಮೊದಲ ಏಕದಿನ ಪಂದ್ಯಕ್ಕೆ ಹೀಗಿರಲಿದೆ ಭಾರತ ಆಡುವ ಬಳಗ; ಸಂಜು ಓಪನರ್
🚨 NEWS 🚨
— BCCI (@BCCI) December 16, 2023
Deepak Chahar withdrawn from the ODI series; Mohd. Shami ruled out of the Test series.
Details 🔽 #TeamIndia | #SAvIND https://t.co/WV86L6Cnmt pic.twitter.com/oGdSJk9KLK
ಶಮಿ ಅವರು ಟೆಸ್ಟ್ ಸರಣಿಯಲ್ಲಿ ಭಾಗವಹಿಸುವಿಕೆಯ ಭಾಗವಾಗಿ ಫಿಟ್‌ನೆಸ್‌ಗೆ ಒಳಪಟ್ಟಿದ್ದರು. ಆದರೆ ಬಿಸಿಸಿಐ ವೈದ್ಯಕೀಯ ತಂಡವು ಅವರಿಗೆ ಆಡುವ ಅನುಮತಿ ನೀಡಿಲ್ಲ. ಆಡಲು ಸಂಪೂರ್ಣ ಫಿಟ್ ಆಗಿಲ್ಲ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಹೀಗಾಗಿ 2 ಪಂದ್ಯಗಳ ಟಸ್ಟ್ ಸರಣಿಯಿಂದ ಶಮಿಯನ್ನು ಕೈಬಿಡಲಾಗಿದೆ.
ಶ್ರೇಯಸ್ ಅಯ್ಯರ್ ಟೆಸ್ಟ್ ಸರಣಿಗೆ ತಯಾರಿ ನಡೆಸಲು ಟೆಸ್ಟ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಹೀಗಾಗಿ ಶ್ರೇಯಸ್ ಎರಡನೇ ಮತ್ತು ಮೂರನೇ ಏಕದಿನ ಪಂದ್ಯಕ್ಕೆ ಲಭ್ಯವಿರುವುದಿಲ್ಲ ಎಂದು ಬಿಸಿಸಿಐ ಖಚಿತಪಡಿಸಿದೆ. ಡಿಸೆಂಬರ್ 26 ರಿಂದ ಮೊದಲ ಟೆಸ್ಟ್ ಆರಂಭವಾಗಲಿದೆ.
ವಿಶ್ವಕಪ್ ಟೂರ್ನಿಯಲ್ಲಿ ಶಮಿ ಅವರು ಕೇವಲ 7 ಪಂದ್ಯಗಳನ್ನು ಆಡಿ 24 ವಿಕೆಟ್‌ಗಳನ್ನು ಕಬಳಿಸಿ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್ ಕಿತ್ತ ಬೌಲರ್ ಎನಿಸಿಕೊಂಡಿದ್ದರು. ಎರಡು ಬಾರಿ ಐದು ವಿಕೆಟ್‌ಗಳು ಮತ್ತು ಒಂದು ಬಾರಿ ಏಳು ವಿಕೆಟ್ ಕಿತ್ತ ಸಾಧನೆ ಮಾಡಿದ್ದರು. ಶಮಿಯ ಘಾತಕ ಬೌಲಿಂಗ್ ಮುಂದೆ ಎದುರಾಳಿ ತಂಡದ ಬ್ಯಾಟರ್ಗಳು ರನ್ ಗಳಿಸಲು ಪರದಾಟ ನಡೆಸಿದ್ದರು.
ಪರಿಷ್ಕೃತ ಏಕದಿನ ತಂಡ
ಋತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಮುಖೇಶ್ ಕುಮಾರ್, ಅವೇಶ್ ಖಾನ್ , ಅರ್ಷದೀಪ್ ಸಿಂಗ್, ಆಕಾಶ್ ದೀಪ್