Site icon Vistara News

IPL 2024 : ದೊಡ್ಡ ಮೊತ್ತದ ಪಂದ್ಯದಲ್ಲಿ ಮುಂಬೈ ವಿರುದ್ಧ ಡೆಲ್ಲಿಗೆ 10 ರನ್ ಜಯ

IPL 2024

ನವ ದೆಹಲಿ: ಮತ್ತೊಂದು ದೊಡ್ಡ ಮೊತ್ತದ ಐಪಿಎಲ್​ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮುಂಬಯಿ ಇಂಡಿಯನ್ಸ್ ವಿರುದ್ಧ. 10 ರನ್​ಗಳ ವಿಜಯ ದೊರಕಿದೆ. ಎರಡೂ ತಂಡಗಳು ಗೆಲುವಿಗಾಗಿ ಕೊನೇ ಕ್ಷಣದ ತನಕ ಹೋರಾಡಿದ್ದು ಹಲವು ಸೋಲಿನ ಬಳಿಕ ಪುಟಿದೆದ್ದಿರುವ ಡೆಲ್ಲಿ ತಂಡ ಪಾಂಡ್ಯ ಬಳಗಕ್ಕೆ ಗೆಲುವು ನಿಕರಾಕರಿಸಿದೆ. ಈ ಮೂಲಕ ಮುಂಬೈ ತಂಡದ ಸೋಲಿನ ಬವಣೆ ಮುಂದುವರಿದಿದ್ದು ಹಾಲಿ ಆವೃತ್ತಿಯಲ್ಲಿ 9ನೇ ಪರಾಜಯಕ್ಕೆ ಒಳಗಾಗಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐದನೇ ಗೆಲುವನ್ನು ತನ್ನದಾಗಿಸಿಕೊಂಡು ಒಟ್ಟು 10 ಅಂಕಗಳನ್ನು ಪಡೆದುಕೊಂಡಿದ್ದು ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದೆ. ಇದೇ ವೇಳೆ ಮುಂಬಯಿ ಇಂಡಿಯನ್ಸ್​ ಬಳಗ ಕೇವಲ 6 ಅಂಕಗಳೊಂದಿಗೆ 9ನೇ ಸ್ಥಾನವನ್ನು ಪಡೆದುಕೊಂಡಿತು.

ಇಲ್ಲಿನ ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬಯಿ ಇಂಡಿಯನ್ಸ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಬಳಗ ನಿಗದಿತ 20 ಓವರ್​​ಗಳಲ್ಲಿ 4 ವಿಕೆಟ್​ಗೆ 257 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಮುಂಬಯಿ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್​ ನಷ್ಟಕ್ಕೆ 247 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಮುಂಬಯಿ ಭರ್ಜರಿ ಹೋರಾಟ

ದೊಡ್ಡ ಮೊತ್ತವನ್ನು ಬೆನ್ನಟ್ಟಲು ಹೊರಟ ಮುಂಬೈ ತಂಡಕ್ಕೆ ಅದಕ್ಕೆ ಪೂರಕವಾಗಿರುವ ಆರಂಭ ದೊರಕಲಿಲ್ಲ. ರೋಹಿತ್ ಶರ್ಮಾ 8 ರನ್​ಗೆ ಔಟಾದರೆ ಇಶಾನ್ ಕಿಶನ್​ 20 ರನ್​ಗಳಿಗೆ ವಿಕೆಟ್​ ಒಪ್ಪಿಸಿದರು. 45 ರನ್​ಗೆ 2 ವಿಕೆಟ್​ ನಷ್ಟ ಮಾಡಿಕೊಂಡ ಮುಂಬೈಗೆ ಆತಂಕ ಎದುರಾಯಿತು. ಈ ವೇಳೆ ಆಡಲು ಬಂದ ಸೂರ್ಯಕುಮಾರ್ ಯಾದವ್​ 13 ಎಸೆತಕ್ಕೆ 26 ರನ್ ಬಾರಿಸಿ ಮಿಂಚುವ ಸೂಚನೆ ಕೊಟ್ಟರು. ಆದರೆ ಸೂರ್ಯನ ಆಟ ಹೆಚ್ಚು ಹೊತ್ತು ನಡೆಯಲಿಲ್ಲ. ಆದರೆ, ಮತ್ತೊಂದು ಬದಿಯಲ್ಲಿ ತಿಲಕ್ ವರ್ಮಾ ಗಟ್ಟಿಯಾಗಿ ನಿಂತು ಡೆಲ್ಲಿ ಬೌಲರ್​ಗಳನ್ನು ದಂಡಿಸಿದರು. ಅದೇ ರೀತಿ ಹಾಲಿ ಆವೃತ್ತಿಯಲ್ಲಿ ಮೊದಲ ಬ್ಯಾರಿಗೆ ಬ್ಯಾಟಿಂಗ್​ನಲ್ಲಿ ಮಿಂಚಿದ ಹಾರ್ದಿಕ್ ಪಾಂಡ್ಯ 24 ಎಸೆತಕ್ಕೆ 46 ರನ್ ಬಾರಿಸಿದರು.

ನಂತರ ಬಂದ ನೇಹಲ್ ವದೇರಾ 4 ರನ್​ಗೆ ಔಟಾದಾಗ ಮತ್ತೆ ಮುಂಬೈಗೆ ಭಯ ಶುರುವಾಯಿತು. ಆದೆರ, ಟಿಮ್ ಡೇವಿಡ್ 17 ಎಸೆತಕ್ಕೆ 37 ರನ್ ಬಾರಿಸ ಗೆಲುವಿನ ಸನಿಹಕ್ಕೆ ಬರಲು ನೆರವಾದರು. ಡೆಲ್ಲಿ ಪರ ರಸಿಕ್​ ಸಲಾಂ ಹಾಗೂ ಮುಖೇಶ್ ಕುಮಾರ್​ ತಲಾ 3 ವಿಕೆಟ್​ ಉರುಳಿಸಿ ತಂಡ ಗೆಲುವಿಗೆ ನೆರವಾದರು.

ಇದನ್ನೂ ಓದಿ: IPL 2024 : ಅಹಮದಾಬಾದ್​ನಲ್ಲಿ ಕೊಹ್ಲಿಗೆ ಭರ್ಜರಿ ಸ್ವಾಗತ; ವಿಡಿಯೊ ಇದೆ

ಮೆಗ್​ಕುರ್ಕ್​ ಭರ್ಜರಿ ಬ್ಯಾಟಿಂಗ್​

ಗೆಲುವಿನೊಂದಿಗೆ ಚೈತನ್ಯ ಪಡೆದುಕೊಂಡಿದ್ದ ಡೆಲ್ಲಿ ತಂಡ ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿತು. ಜೇಕ್​ ಫೇಸರ್​ ಮೆಕ್​ಗುರ್ಕ್​ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ 27 ಎಸೆತಕ್ಕೆ 84 ರನ್ ಬಾರಿಸಿ ಮಿಂಚಿದರು. ಅವರು ಅಭಿಷೇಕ್ ಪೊರೆಲ್​ (36 ರನ್​) ಜತೆಗೂಡಿ 114 ರನ್ ಬಾರಿಸಿ ಮಿಂಚಿದರು. ಶಾಯ್​ ಹೋಪ್​ 17 ಎಸೆತಕ್ಕೆ 41 ರನ್ ಬಾರಿಸಿ ಮಿಂಚಿದ್ದಾರೆ. ರಿಷಭ್ ಪಂತ್​ 29 ರನ್ ಬಾರಿಸಿ ಮಿಂಚಿದರೆ ಟ್ರಿಸ್ಟಾನ್ 25 ಎಸೆತಕ್ಕೆ 48 ರನ್ ಬಾರಿಸಿದರು.

Exit mobile version