ಕ್ರಿಕೆಟ್
WPL 2023 : ಡೆಲ್ಲಿ ತಂಡದ ಗೆಲುವಿಗೆ 148 ರನ್ ಗುರಿ, ಅರ್ಧ ಶತಕ ಬಾರಿಸಿದ ಲಾರಾ ವೋಲ್ವರ್ತ್, ಆ್ಯಶ್ಲೀ ಗಾರ್ಡ್ನರ್
ಡೆಲ್ಲಿ ಕ್ಯಾಪಿಟಲ್ಸ್ನ ಬೌಲಿಂಗ್ ದಾಳಿಯನ್ನು ಹಿಮ್ಮೆಟ್ಟಿಸಿದ ಗುಜರಾತ್ ತಂಡ ಸ್ಪರ್ಧಾತ್ಮಕ ಮೊತ್ತ ಪೇರಿಸಿತು.
ಮುಂಬಯಿ: ಮಹಿಳೆಯರ ಪ್ರೀಮಿಯರ್ ಲೀಗ್ನ (WPL 2023) 14ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜಯಂಟ್ಸ್ ತಂಡ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 147 ರನ್ ಗಳಿಸಿದೆ. ಇದರೊಂದಿಗೆ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 148 ರನ್ಗಳ ಗೆಲುವಿನ ಗುರಿಯನ್ನು ಪಡೆದುಕೊಂಡಿದೆ. ಗುಜರಾತ್ ಪರ ಲಾರಾ ವೋಲ್ವರ್ತ್ (57) ಹಾಗೂ ಆ್ಯಶ್ಲೀ ಗಾರ್ಡ್ನರ್ ( ಅಜೇಯ 51) ಅರ್ಧ ಶತಕಗಳನ್ನು ಬಾರಿಸಿದರು.
ಇಲ್ಲಿನ ಬ್ರಬೊರ್ನ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಹಣಾಹಣಿಯಲ್ಲಿ ಡೆಲ್ಲಿ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಲು ಅವಕಾಶ ಪಡೆದ ಗುಜರಾತ್ ತಂಡ ಸ್ಪರ್ಧಾತ್ಮಕ ಮೊತ್ತ ಪೇರಿಸಿತು. ಡೆಲ್ಲಿ ಪರ ಬೌಲಿಂಗ್ನಲ್ಲಿ ಜೆಸ್ ಜೊನಾಸೆನ್ 38 ರನ್ಗಳಿಗೆ 2 ವಿಕೆಟ್ ಪಡೆದರು.
ಇದನ್ನೂ ಓದಿ : Virat Kohli : ಆರ್‌ಸಿಬಿ ನಾಯಕತ್ವ ತ್ಯಜಿಸಿದ ಬಗ್ಗೆ ಮಾತನಾಡಿದ ವಿರಾಟ್ ಕೊಹ್ಲಿ, ಏನಂದರು ಅವರು?
ಮೊದಲು ಬ್ಯಾಟ್ ಮಾಡಿದ ಗುಜರಾತ್ ತಂಡ ಸೋಫಿ ಡಂಕ್ಲಿ (4) ವಿಕೆಟ್ ಔಟಾಗುವುದರೊಂದಿಗೆ ಆತಂಕಕ್ಕೆ ಸಿಲುಕಿತು. ಈ ವೇಳೆ ಜತೆಯಾದ ಲಾರಾ ಹಾಗೂ ಹರ್ಲಿನ್ ಡಿಯೋಲ್ (31) ನಿಧಾನಗತಿಯಲ್ಲಿ ಬ್ಯಾಟ್ ಮಾಡಿ ಇನಿಂಗ್ಸ್ ಕಟ್ಟಿದರು. ಆದರೆ ಜೊನಾಸೆನ್ ಎಸೆತಕ್ಕೆ ಭಾಟಿಯಾಗೆ ಕ್ಯಾಚ್ ನೀಡಿದ ಹರ್ಲಿನ್ ಪೆವಿಲಿಯನ್ ಕಡೆಗೆ ನಿರಾಸೆಯಿಂದ ನಡೆದರು. ಈ ವೇಳೆ ಕ್ರೀಸ್ಗೆ ಇಳಿದ ಆ್ಯಶ್ಲೀ ಗಾರ್ಡ್ನರ್ ಸ್ಫೋಟಕ ಬ್ಯಾಟ್ ಮಾಡಿ 33 ಎಸೆತಗಳಲ್ಲಿ 9 ಫೋರ್ಗಳ ಸಮೇತ ಅರ್ಧ ಶತಕ ಬಾರಿಸಿದರು.
ಕ್ರಿಕೆಟ್
IPL 2023: ಧೋನಿಗೆ ಗಾಯ; ಮೊದಲ ಪಂದ್ಯಕ್ಕೆ ಅನುಮಾನ; ಸ್ಟೋಕ್ಸ್ ನಾಯಕತ್ವ ಸಾಧ್ಯತೆ
ಮೊಣ ಕಾಲಿನ ಗಾಯಕ್ಕೆ ತುತ್ತಾಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಇಂದು ನಡೆಯುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.
ಅಹಮದಾಬಾದ್: ಇನ್ನೇನು ಕೆಲವೇ ಗಂಟೆಗಳಲ್ಲಿ ಕ್ಯಾಶ್ ರಿಚ್ ಕ್ರಿಕೆಟ್ ಲೀಗ್ ಐಪಿಎಲ್ಗೆ(IPL 2023) ಚಾಲನೆ ದೊರೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್(Chennai Super Kings) ಮತ್ತು ಗುಜರಾತ್ ಟೈಟಾನ್ಸ್(Gujarat Titans) ಮುಖಾಮುಖಿಯಾಗಲು ಸಜ್ಜಾಗಿದೆ. ಆದರೆ ಇದೀಗ ಚೆನ್ನೈ ತಂಡಕ್ಕೆ ಮತ್ತು ತಂಡದ ಅಭಿಮಾನಿಗಳಿಗೆ ಆಘಾತ ಎದುರಾಗಿದೆ. ಎಡ ಮೊಣಕಾಲಿನ ಗಾಯಕ್ಕೆ ತುತ್ತಾಗಿರುವ ಧೋನಿ ಅವರು ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.
ಚೆನ್ನೈಯ ಚೆಪಾಕ್ ಕ್ರಿಕೆಟ್ ಮೈದಾನದಲ್ಲಿ ಅಭ್ಯಾಸ ನಡೆಸುವ ವೇಳೆ ಧೋನಿ ಅವರ ಎಡ ಮೊಣಕಾಲಿಗೆ ಗಾಯವಾಗಿದೆ. ಹೀಗಾಗಿ ಅವರು ಗುರುವಾರ ತಂಡದ ಆಟಗಾರರೊಂದಿಗೆ ಅಭ್ಯಾಸ ನಡೆಸಿಲ್ಲ. ಹೀಗಾಗಿ ಅವರು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬ ಅನುಮಾನ ಮೂಡಿದೆ.
16ನೇ ಆವೃತ್ತಿಯ ಈ ಐಪಿಎಲ್ಗೆ ಈಗಾಗಲೇ ಹಲವು ಆಟಗಾರರು ಗಾಯದ ಸಮಸ್ಯೆಯಿಂದ ಅಲಭ್ಯರಾಗಿದ್ದಾರೆ. ಇದೇ ಕಾರಣಕ್ಕೆ ಈ ಬಾರಿಯ ಐಪಿಎಲ್ ಟೂರ್ನಿಯನ್ನು ಇಂಜುರಿ ಟೂರ್ನಿ ಎಂದು ಕರೆಯಲಾಗುತ್ತಿದೆ. ಇದೀಗ ಧೋನಿ ಕೂಡ ಗಾಯಕ್ಕೆ ತುತ್ತಾಗಿರುವುದು ಅವರ ಅಭಿಮಾನಿಗಳಿಗೆ ಭಾರಿ ಚಿಂತೆ ಉಂಟುಮಾಡಿದೆ.
ಧೋನಿ ಅವರು ಮೊದಲ ಪಂದ್ಯಕ್ಕೆ ಅಲಭ್ಯರಾಗುವ ಸುಳಿವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಸಿಇಒ ನೀಡಿದ್ದಾರೆ. ಆದರೆ ಅವರ ಹೇಳಿಕೆ ಒಂದು ರೀತಿ ಗೊಂದಲದಿಂದ ಕೂಡಿದೆ. ಆರಂಭದಲ್ಲಿ “ನನಗೆ ತಿಳಿದಿರುವಂತೆ ಧೋನಿ ಶೇ 100 ರಷ್ಟು ಆಡುತ್ತಾರೆ. ಬೇರೆ ಯಾವುದೇ ಬೆಳವಣಿಗೆಯ ಬಗ್ಗೆ ನನಗೆ ತಿಳಿದಿಲ್ಲ” ಎಂದು ಹೇಳಿದರು. ಆ ಬಳಿಕ ಒಂದು ವೇಳೆ ಧೋನಿ ಆಡದಿದ್ದರೆ, ಡೆವೊನ್ ಕಾನ್ವೇ ಅಥವಾ ಅಂಬಾಟಿ ರಾಯುಡು ವಿಕೆಟ್ ಕೀಪಿಂಗ್ ಮಾಡಬಹುದು. ಟೀಮ್ನಲ್ಲಿ ಧೋನಿ ಬಿಟ್ಟರೆ ಇವರಿಬ್ಬರು ಕೀಪಿಂಗ್ ಸಾಮರ್ಥ್ಯ ಹೊಂದಿದ್ದಾರೆ” ಎಂದರು. ಒಟ್ಟಾರೆ ಇವರ ಈ ಹೇಳಿಕೆ ಗಮನಿಸುವಾಗ ಧೋನಿ ಆಡುವುದು ಅನುಮಾನ ಎಂಬಂತಿದೆ.
ಇದನ್ನೂ ಓದಿ IPL 2023: ಧೋನಿ ವಿಶ್ವದ ಗ್ರೇಟ್ ಫಿನಿಶರ್; ರಿಯಾನ್ ಪರಾಗ್
ಇತ್ತೀಚೆಗೆ ಸಿಎಸ್ಕೆ ತನ್ನ ಟ್ವಿಟರ್ನಲ್ಲಿ ಧೋನಿ ಅಭ್ಯಾಸಕ್ಕೆ ಮೈದಾನಕ್ಕೆ ಬರುತ್ತಿರುವ ವಿಡಿಯೊ ಹಂಚಿಕೊಂಡಿತ್ತು. ಇದು ಕೆಲವೇ ಗಂಟೆಯಲ್ಲಿ ವೈರಲ್ ಆದದ್ದಲ್ಲದೇ, ಮೈದಾನಕ್ಕಿಳಿಯುತ್ತಿದ್ದಂತೆ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟುವಂತಿತ್ತು. ಈ ಬಾರಿಯ ಐಪಿಎಲ್ ಬಳಿಕ ಧೋನಿ ಅವರು ವಿದಾಯ ಹೇಳಲಿದ್ದಾರೆ ಎಂಬ ಸುದ್ದಿಗಳು ಜೋರಾಗಿ ಹರಿದಾಡುತ್ತಿದೆ. ಅವರ ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರನ ಆಟವನ್ನು ಕೊನೆಯಾ ಬಾರಿ ನೋಡಲು ತುದಿಗಾಲಲ್ಲಿ ನಿಂತಿದ್ದಾರೆ ಈ ಮಧ್ಯೆ ಧೋನಿ ಅವರಿಗೆ ಮೊಣಕಾಲಿನ ಗಾಯವಾಗಿರುವುದು ಅವರ ಅಭಿಮಾನಿಗಳಿಗೆ ಆತಂಕ ಉಂಟುಮಾಡಿದೆ. ಒಂದೊಮ್ಮೆ ಧೋನಿ ಅವರು ಮೊದಲ ಪಂದ್ಯದಿಂದ ಹೊರಗುಳಿದರೆ ಬೆನ್ ಸ್ಟೋಕ್ಸ್ ಅವರು ತಂಡದ ನಾಯಕತ್ವ ನಿರ್ವಹಿಸುವ ಸಾಧ್ಯತೆ ಇದೆ.
ಕ್ರಿಕೆಟ್
IPL 2023: ಧೋನಿ ವಿಶ್ವದ ಗ್ರೇಟ್ ಫಿನಿಶರ್; ರಿಯಾನ್ ಪರಾಗ್
16ನೇ ಆವೃತ್ತಿಯ ಐಪಿಎಲ್ ಟೂರ್ನಿ ಶುಕ್ರವಾರ ಆರಂಭಗೊಳ್ಳಲಿದೆ. ಉದ್ಘಾಟನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಸಾರಥ್ಯದ ಗುಜರಾತ್ ಟೈಟಾನ್ಸ್ ಮತ್ತು ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಅಹಮದಾಬಾದ್: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ(MS Dhoni) ಅವರಂತೆ ಫಿನಿಶರ್ ಪಾತ್ರವನ್ನು ಯಾರೂ ನಿರ್ವಹಿಸಲು ಸಾಧ್ಯವಿಲ್ಲ ಎಂದು ರಾಜಸ್ಥಾನ್ ರಾಯಲ್ಸ್ ತಂಡದ ಆಲ್ರೌಂಡರ್ ರಿಯಾನ್ ಪರಾಗ್(riyan parag) ಹೇಳಿದ್ದಾರೆ.
16ನೇ ಆವೃತ್ತಿಯ ಐಪಿಎಲ್ ಟೂರ್ನಿ ಶುಕ್ರವಾರ ಆರಂಭಗೊಳ್ಳಲಿದೆ. ಉದ್ಘಾಟನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಸಾರಥ್ಯದ ಗುಜರಾತ್ ಟೈಟಾನ್ಸ್ ಮತ್ತು ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ನಡೆಸಿದ ಸಂದರ್ಶನವೊಂದರಲ್ಲಿ ಮಾತನಾಡಿದ ಧೋನಿ ಅವರ ಅಪ್ಪಟ ಅಭಿಮಾನಿಯಾಗಿರುವ ರಿಯಾನ್ ಪರಾಗ್, ನಾನು ಕೂಡ ಧೋನಿಯಂತೆ ಫಿನಿಶರ್ ರೋಲ್ ನಿರ್ವಹಿಸಲು ಬಯಸುತ್ತಿದ್ದೇನೆ ಆದರೆ ಅವರಂತೆ ಗ್ರೇಟ್ ಫಿನಿಶರ್ ಆಗಲು ಸಾಧ್ಯವಿಲ್ಲ ಎಂದರು.
ಇದನ್ನೂ ಓದಿ IPL 2023: ಬಹುನಿರೀಕ್ಷಿತ ಐಪಿಎಲ್ ಟೂರ್ನಿಗೆ ಕ್ಷಣಗಣನೆ; ಈ ಬಾರಿ ಟೂರ್ನಿಯ ಮಾದರಿ ಹೇಗಿದೆ?
“ಕಳೆದ ಮೂರು ವರ್ಷಗಳಿಂದ ನಾನು ಫಿನಿಶಿಂಗ್ ಪಾತ್ರ ನಿಭಾಯಿಸುತ್ತಿದ್ದೇನೆ. ಫಿನಿಶಿಂಗ್ ವಿಚಾರಕ್ಕೆ ಬಂದಾಗ ನನ್ನ ನೆನಪಿಗೆ ಬರುವ ಒಂದೇ ಒಂದು ಹೆಸರು ಎಂದರೆ ಅದು ಧೋನಿ ಸರ್, ಈ ಹಿಂದೆಯೂ ಇದನ್ನೇ ಹೇಳಿದ್ದೆ. ಧೋನಿ ಹೊರತುಪಡಿಸಿ ಫಿನಿಶಿಂಗ್ ಕಲೆಯನ್ನು ಬೇರೆ ಯಾರೂ ಉತ್ತಮವಾಗಿ ನಿರ್ವಹಿಸಲು ಸಾಧ್ಯವಿಲ್ಲ. ನಾನು ಕೂಡ ಅವರಂತೆ ಆಗಲು ಪ್ರಯತ್ನಿಸುತ್ತಿದ್ದೇನೆ” ಎಂದು ಪರಾಗ್ ಅಭಿಪ್ರಾಯಪಟ್ಟರು.
ತಮ್ಮ ಆಟದ ಸಾಮರ್ಥ್ಯದ ಬಗ್ಗೆ ಮಾತನಾಡಿದ ಅವರು, “ಈ ಋತುವಿನ ದೇಶಿಯಾ ಕ್ರಿಕೆಟ್ ಟೂರ್ನಿಗಳಲ್ಲಿ ನಾನು ಬ್ಯಾಟಿಂಗ್ ಜತೆಗೆ ಸಾಕಷ್ಟು ಬೌಲಿಂಗ್ ಮಾಡಿದ್ದೇನೆ. ಇದರಿಂದ ಬೌಲಿಂಗ್ನಲ್ಲಿಯೂ ದೊಡ್ಡ ಮಟ್ಟದ ಸುಧಾರಣೆಯಾಗಿದೆ. ಆದ್ದರಿಂದ ನಾನು ಈ ಬಾರಿ ಆಲ್ರೌಂಡರ್ ಪ್ರದರ್ಶ ತೋರಲಿದ್ದೇನೆ” ಎಂದು ತಿಳಿಸಿದರು.
2018ರ ಅಂಡರ್-19 ವಿಶ್ವಕಪ್ ವಿಜೇತ ತಂಡದಲ್ಲಿ ಸ್ಥಾನ ಪಡೆದಿದ್ದ ಪರಾಗ್ ಅವರು 2022-23ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಐದನೇ ಅತಿ ಹೆಚ್ಚು ರನ್ಗಳಿಸಿದ್ದ ಆಟಗಾರರಾಗಿದ್ದರು. 69 ಸರಾಸರಿಯೊಂದಿಗೆ 552 ರನ್ಗಳನ್ನು ಗಳಿಸಿದ್ದ ಪರಾಗ್ ಮೂರು ಶತಕ ಮತ್ತು ಒಂದು ಅರ್ಧಶತಕ ಸಿಡಿಸಿದ್ದರು. ಸೈಯದ್ ಮುಷ್ತಾಕ್ ಅಲಿ ಟ20 ಟ್ರೋಫಿಯಲ್ಲಿ ಎರಡು ಅರ್ಧಶತಕಗಳೊಂದಿಗೆ 253 ರನ್ ಗಳಿಸಿದ್ದರು. ಇದೀಗ 16ನೇ ಆವೃತ್ತಿಯ ಐಪಿಎಲ್ನಲ್ಲಿ ಮಿಂಚಲು ಕಾತರರಾಗಿದ್ದಾರೆ.
ಇದನ್ನೂ ಓದಿ IPL 2023: ಗುರು ಶಿಷ್ಯರ ಕಾದಾಟ; ಯಾರಿಗೆ ಒಲಿಯಲಿದೆ ಗೆಲುವಿನ ಶುಭಾರಂಭ
ಐಪಿಎಲ್ಗೆ ವಿದಾಯ ಹೇಳಲಿದ್ದಾರಾ ಧೋನಿ?
ಈ ಬಾರಿಯ ಐಪಿಎಲ್ ಬಳಿಕ ಧೋನಿ(ms dhoni) ಅವರು ವಿದಾಯ ಹೇಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡಲಾರಂಭಿಸಿದೆ. ಆದರೆ ಈ ಬಗ್ಗೆ ಧೋನಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಸದ್ಯಕ್ಕೆ ಧೋನಿ ಅವರು ಹಲವು ದಾಖಲೆಗಳನ್ನು ನಿರ್ಮಿಸುತ್ತ ಚಿತ್ತ ನೆಟ್ಟಿದ್ದಾರೆ.
5000 ರನ್ ಸನಿಹದಲ್ಲಿ ಧೋನಿ
ಕೂಲ್ ಕ್ಯಾಪ್ಟನ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಅವರು ಈ ವರೆಗೆ 234 ಪಂದ್ಯಗಳಿಂದ 4978 ರನ್ ಗಳಿಸಿದ್ದಾರೆ. ಈ ಟೂರ್ನಿಯಲ್ಲಿ ಅವರು 22 ರನ್ ಗಳಿಸಿದರೆ 5 ಸಾವಿರ ರನ್ ಪೂರೈಸಿದ ಮೊದಲ ವಿಕೆಟ್ ಕೀಪರ್ ಎಂಬ ದಾಖಲೆ ಬರೆಯಲಿದ್ದಾರೆ. ಇದರ ಜತೆಗೆ 185 ರನ್ ಬಾರಿಸಿದರೆ ಆರ್‌ಸಿಬಿ ಮಾಜಿ ಆಟಗಾರ ಎಬಿ ಡಿ ವಿಲಿಯರ್ಸ್ (5162) ಅವರನ್ನು ಹಿಂದಿಕ್ಕಲಿದ್ದಾರೆ. ಆ ಮೂಲಕ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ 6ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.
ಸಿಕ್ಸರ್ ದಾಖಲೆ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಯುನಿವರ್ಸ್ ಬಾಸ್ ಖ್ಯಾತಿಯ ವಿಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್ ಹೆಸರಿನಲ್ಲಿದೆ ಅವರು 357 ಸಿಕ್ಸರ್ಗಳನ್ನು ಬಾರಿಸಿ ಅಗ್ರ ಸ್ಥಾನದಲ್ಲಿದ್ದಾರೆ. ಸದ್ಯ ಧೋನಿ 229 ಸಿಕ್ಸರ್ ಸಿಡಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಈ ಬಾರಿ ಅವರು 23 ಸಿಕ್ಸ್ ಸಿಡಿಸಿದರೆ 250 ಸಿಕ್ಸರ್ ಕ್ಲಬ್ಗೆ ಸೇರುವ ಜತೆಗೆ ಎಬಿಡಿ ಅವರ ದಾಖಲೆಯನ್ನು ಮುರಿಯಲಿದ್ದಾರೆ ಎಬಿಡಿ 251 ಸಿಕ್ಸರ್ ಬಾರಿಸಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 240 ಸಿಕ್ಸರ್ ಸಿಡಿಸಿ ಮೂರನೇ ಸ್ಥಾನದಲ್ಲಿದ್ದಾರೆ ಅವರಿಗೂ ಎಬಿಡಿ ಅವರ ದಾಖಲೆ ಮುರಿಯುವ ಅವಕಾಶವಿದೆ.
250ನೇ ಐಪಿಎಲ್ ಪಂದ್ಯ
ಐಪಿಎಲ್ನ ಇದುವರೆಗಿನ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯವನ್ನಾಡಿದ ದಾಖಲೆ ಧೋನಿ ಹೆಸರಿನಲ್ಲಿದೆ. ಸದ್ಯ ಅವರು 234 ಪಂದ್ಯಗಳನ್ನಾಡಿದ್ದಾರೆ. ಈ ಬಾರಿ ಅವರು 16 ಪಂದ್ಯಗಳಲ್ಲಿ ಆಡಿದರೆ 250 ಪಂದ್ಯಗಳನ್ನು ಪೂರೈಸಿದ ಮೊದಲ ಆಟಗಾರ ಎಂಬ ಮೈಲುಗಲ್ಲು ಸ್ಥಾಪಿಸಲಿದ್ದಾರೆ. ಆರ್‌ಸಿಬಿ ಆಟಗಾರ ದಿನೇಶ್ ಕಾರ್ತಿಕ್ 229 ಪಂದ್ಯಗಳನ್ನಾಡಿ ಈ ಸಾಧನೆ ಮಾಡಿದವರ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಈ ಬಾರಿಯೂ ಅವರು ಆಡುತ್ತಿರುವ ಕಾರಣ ಪಂದ್ಯಗಳ ಸಂಖ್ಯೆ ಇನ್ನೂ ಹೆಚ್ಚಾಗಲಿದೆ.
ಕ್ರಿಕೆಟ್
IPL 2023: ಬಹುನಿರೀಕ್ಷಿತ ಐಪಿಎಲ್ ಟೂರ್ನಿಗೆ ಕ್ಷಣಗಣನೆ; ಈ ಬಾರಿ ಟೂರ್ನಿಯ ಮಾದರಿ ಹೇಗಿದೆ?
ಇಂದು(ಶುಕ್ರವಾರ ಮಾರ್ಚ್ 31) ನಡೆಯುವ ಐಪಿಎಲ್ನ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಹಮದಾಬಾದ್: ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್(IPL 2023) 16ನೇ ಆವೃತ್ತಿಗೆ ಇಂದು(ಶುಕ್ರವಾರ ಮಾರ್ಚ್ 31) ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಅದ್ಧೂರಿಯಾಗಿ ಚಾಲನೆ ದೊರೆಯಲಿದೆ. ಮುಂದಿನ 2 ತಿಂಗಳು ದೇಶದಲ್ಲಿ ಕ್ರಿಕೆಟ್ ಹಬ್ಬದ ವಾತಾವರಣ ಇರಲಿದೆ. ಈ ಬಾರಿಯ ಟೂರ್ನಿ ಕೆಲ ನೂತನ ನಿಯಮಗಳಿಂದ ಸುದ್ದಿಯಾಗಿದೆ. ಈ ನಿಯಗಳು ಯಾವುದು ಮತ್ತು ಈ ಬಾರಿಯ ವಿಶೇಷತೆಗಳೇನು ಎಂಬ ಸಂಪೂರ್ಣ ಮಾಹಿತಿ ಇಂತಿದೆ.
ಪಂದ್ಯಗಳ ಮಾದರಿ
ಈ ಬಾರಿಯ ಟೂರ್ನಿಯಲ್ಲಿ ಹತ್ತು ತಂಡಗಳನ್ನು ತಲಾ 5 ತಂಡಗಳ ಎರಡು ಗುಂಪುಗಳಾಗಿ ಬಿಂಗಡಿಸಲಾಗಿದೆ. ಗುಂಪು ಹಂತದಲ್ಲಿ ತಂಡವೊಂದು ತನ್ನದೇ ಗುಂಪಿನ ಉಳಿದ 4 ತಂಡಗಳ ವಿರುದ್ಧ ತಲಾ 2 ಪಂದ್ಯಗಳನ್ನು ಆಡಬೇಕು. ಆಗ ತಂಡವೊಂದು 8 ಪಂದ್ಯಗಳನ್ನು ಆಡಿದಂತಾಗುತ್ತದೆ. ಬಳಿಕ ಎರಡೂ ಗುಂಪುಗಳ ತಂಡಗಳ ನಡುವೆ ಪಂದ್ಯಗಳು ಆರಂಭವಾಗುತ್ತವೆ. ಅಂದರೆ ಮೊದಲ ಗುಂಪಿನ ಒಂದು ತಂಡ, ಇನ್ನೊಂದು ಗುಂಪಿನ ತಂಡವೊಂದರ ವಿರುದ್ಧ ತಲಾ 2 ಪಂದ್ಯಗಳನ್ನು ಆಡುತ್ತದೆ. ಇತರ ನಾಲ್ಕು ತಂಡಗಳ ವಿರುದ್ಧ ತಲಾ 1 ಪಂದ್ಯ ಆಡಲಾಗುತ್ತದೆ. ಇದೇ ಮಾದರಿ ಇತರ ತಂಡಗಳಿಗೂ ಈ ಅನ್ವಯವಾಗುತ್ತದೆ. ಅಲ್ಲಿಗೆ ತಂಡವೊಂದು ಲೀಗ್ ಹಂತದಲ್ಲಿ 14 ಪಂದ್ಯಗಳನ್ನಾಡಿದಂತಾಗುತ್ತದೆ.
ಇದನ್ನೂ ಓದಿ IPL 203 : ಐಪಿಎಲ್ 16ನೇ ಆವೃತ್ತಿಯ ವೇಳಾಪಟ್ಟಿ ಇಲ್ಲಿದೆ
ಇಂಪ್ಯಾಕ್ಟ್ ಪ್ಲೇಯರ್
ಆಸ್ಟ್ರೇಲಿಯದ ಪ್ರತಿಷ್ಠಿತ ಬಿಗ್‌ಬಾಶ್ ಟಿ20 ಲೀಗ್‌ನಲ್ಲಿ ಚಾಲ್ತಿಯಲ್ಲಿರುವ ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ಈ ಬಾರಿ ಐಪಿಎಲ್ನಲ್ಲಿಯೂ ಪರಿಚಯಿಸಲಾಗಿದೆ. ಈ ನಿಯಮದ ಪ್ರಮಾರ ತಂಡವೊಂದು ಆಡುತ್ತಿರುವಾಗ ಪರಿಸ್ಥಿತಿಗೆ ಅನುಗುಣವಾಗಿ ಒಬ್ಬ ಬದಲಿ ಆಟಗಾರನನ್ನು ಕಣಕ್ಕಿಳಿಸಬಹುದು. ಪ್ಲೇಯಿಂಗ್ ಇಲೆವನ್ ಬಳಗದಿಂದ ಹೊರಗಿರುವ ಒಬ್ಬ ಆಟಗಾರನನ್ನು ತಂಡಕ್ಕೆ ಆಡುವ ಬಳಗಕ್ಕೆ ಸೇರಿಸಿಕೊಳ್ಳಬಹುದು. ಇನಿಂಗ್ಸ್ ಆರಂಭಕ್ಕೂ ಮುನ್ನ, ಒಂದು ಓವರ್ ಮುಗಿದ ಮೇಲೆ, ವಿಕೆಟ್ ಬಿದ್ದಾಗ, ಓವರ್‌ಗಳ ನಡುವಿನ ವಿರಾಮದಲ್ಲಿ ಈ ನಿಯಮವನ್ನು ಬಳಸಬಹುದು. ಈ ನಿಯಮದನ್ವಯ ಒಬ್ಬ ಬದಲಿ ಆಟಗಾರನನ್ನು ಮಾತ್ರ ಬದಲಿಸಲು ಅವಕಾಶವಿರಲಿದೆ.
ಇದನ್ನೂ ಓದಿ IPL 2023: ಅಹಮದಾಬಾದ್ನಲ್ಲಿ ಭಾರಿ ಮಳೆ; ಚೆನ್ನೈ-ಗುಜರಾತ್ ಪಂದ್ಯ ಅನುಮಾನ
ವೈಡ್, ನೋಬಾಲ್‌ಗಳೂ ಡಿಆರ್‌ಎಸ್
ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಜಾರಿಗೆ ತರಲಾಗಿದ್ದ ವೈಡ್, ನೋಬಾಲ್ ಡಿಆರ್‌ಎಸ್ ನಿಯಮವನ್ನು ಈ ಬಾರಿಯ ಐಪಿಎಲ್ನಲ್ಲಿಯೂ ಅಳವಡಿಸಲಾಗಿದೆ. ಅಂಪೈರ್ಗಳು ನೀಡಿದ ವೈಡ್, ನೋಬಾಲ್ ಕರೆಗಳನ್ನು ಡಿಆರ್‌ಎಸ್ ಮೂಲಕ ಈಗ ಆಟಗಾರರಿಗೆ ಪ್ರಶ್ನಿಸಬಹುದಾಗಿದೆ.
ಈ ಹಿಂದೆ ಟಾಸ್ಗೂ ಮುನ್ನ ಪ್ಲೇಯಿಂಗ್ ಇಲೆವೆನ್ ಪಟ್ಟಿ ಸಲ್ಲಿಸಬೇಕಿತ್ತು. ಆದರೆ ಇದೀಗ ತಂಡಗಳ ನಾಯಕರು ಟಾಸ್ ಹಾರಿಸುವಾಗ 11 ಆಟಗಾರರ ಅಂತಿಮಪಟ್ಟಿಯನ್ನು ನೀಡಬೇಕಾಗಿಲ್ಲ. ಟಾಸ್ ಫಲಿತಾಂಶ ನೋಡಿಕೊಂಡು ಬಳಿಕ 11ರ ಪಟ್ಟಿಯನ್ನು ಪ್ರಕಟಿಸಬಹುದು.
ಗುವಾಹಟಿಯಲ್ಲಿ 2 ಪಂದ್ಯ
ಫುಟ್ಬಾಲ್ ಕ್ರೀಡೆಯನ್ನು ಹೆಚ್ಚಾಗಿ ನೆಚ್ಚಿಕೊಂಡಿರುವ ಅಸ್ಸಾಂನ ಗುವಾಹಟಿಯಲ್ಲಿ ಈ ಬಾರಿ ಐಪಿಎಲ್ ಪಂದ್ಯಗಳು ನಡೆಯಲಿವೆ. ಈ ಮೂಲಕ ಇಲ್ಲಿನ ಫುಟ್ಬಾಲ್ ಅಭಿಮಾನಿಗಳಿಗೆ ಕ್ರಿಕೆಟ್‌ನಲ್ಲೂ ಆಸಕ್ತಿ ಹುಟ್ಟಿಸಲು ಬಿಸಿಸಿಐ ಮುಂದಾಗಿದೆ. ಗುವಾಹಟಿಯಲ್ಲಿ ಈ ಬಾರಿ ಎರಡು ಪಂದ್ಯಗಳು ನಡೆಯಲಿದೆ. ರಾಜಸ್ಥಾನ ರಾಯಲ್ಸ್‌ನ ಎರಡು ತವರಿನ ಪಂದ್ಯಗಳು ಅಸ್ಸಾಂ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕ್ರಿಕೆಟ್
IPL 2023: ಅಹಮದಾಬಾದ್ನಲ್ಲಿ ಭಾರಿ ಮಳೆ; ಚೆನ್ನೈ-ಗುಜರಾತ್ ಪಂದ್ಯ ಅನುಮಾನ
ಅಹಮಾದಾಬಾದ್ನಲ್ಲಿ ಭಾರಿ ಮಳೆಯಾಗುತ್ತಿದ್ದು ಬಹುನಿರೀಕ್ಷಿತ 16ನೇ ಆವೃತ್ತಿಯ ಐಪಿಎಲ್(IPL 2023) ಶುಕ್ರವಾರದ ಉದ್ಘಾಟನಾ ಪಂದ್ಯ ನಡೆಯುವುದು ಅನುಮಾನ ಎನ್ನಲಾಗಿದೆ.
ಅಹಮಾದಾಬಾದ್: ಬಹುನಿರೀಕ್ಷಿತ 16ನೇ ಆವೃತ್ತಿಯ ಐಪಿಎಲ್(IPL 2023) ಇಂದಿನಿಂದ ಆರಂಭಗೊಳ್ಳಲಿದೆ. ಕೋವಿಡ್ ನಂತರ ಮೊದಲ ಬಾರಿಗೆ ಐಪಿಎಲ್ ಉದ್ಘಾಟನಾ ಸಮಾರಂಭ ನಡೆಸಲು ಬಿಸಿಸಿಐ ಎಲ್ಲ ಸಿದ್ಧತೆ ಪೂರ್ಣಗೊಳಿಸಿದೆ. ಆದರೆ ಇದೀಗ ಈ ಸಮಾರಂಭ ಮತ್ತು ಪಂದ್ಯ ನಡೆಯುವುದು ಅನುಮಾನ ಎನ್ನಲಾಗಿದೆ. ಅಹಮದಾಬಾದ್ನಲ್ಲಿ ಭಾರಿ ಮಳೆಯಾಗುತ್ತಿದ್ದು ಶುಕ್ರವಾರವು ಮಳೆ ಅಬ್ಬರ ಇರಲಿದೆ ಎಂದು ತಿಳಿದುಬಂದಿದೆ.
ಗುರುವಾರ ಗುಜರಾತ್ ಮತ್ತು ಚೆನ್ನೈ ತಂಡದ ಆಟಗಾರರು ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವಾಗ ದಿಢೀರ್ ಮಳೆ ಸುರಿದಿದೆ. ನಂತರ ಆಟಗಾರರು ಮಳೆಗೆ ಒದ್ದೆಯಾಗಿ ಡ್ರೆಸ್ಸಿಂಗ್ ರೂಮ್ಗೆ ತೆರಳುತ್ತಿರುವ ಫೋಟೊ ಇದೀಗ ವೈರಲ್ ಆಗಿದೆ. ಗುಜರಾತ್ ತಂಡದ ಕೋಚ್ ಆಶೀಸ್ ನೆಹ್ರಾ ಅವರು ಮಳೆಗೆ ಒದ್ದೆಯಾಗುತ್ತಿರುವ ಫೋಟೊವನ್ನು ಗುಜರಾತ್ ಟೈಟಾನ್ಸ್ ತಂಡ ಟ್ವಿಟರ್ನಲ್ಲಿ ಹಂಚಿಕೊಂಡಿದೆ.
ಇದನ್ನೂ ಓದಿ IPL 2023 : ಚೆನ್ನೈ ಸೂಪರ್ ಕಿಂಗ್ಸ್ ಬಳಗ ಸೇರಿದ ರಾಜಸ್ಥಾನ್ ರಾಯಲ್ಸ್‌ನ ಮಾಜಿ ಬೌಲರ್
ನರೇಂದ್ರ ಮೋದಿ ಕ್ರೀಡಾಂಗಣ ಮೊದಲ ಪಂದ್ಯಕ್ಕೆ ಸಂಪೂರ್ಣ ಸಜ್ಜಾಗಿ ನಿಂತಿದೆ. ಆದರೆ ಅಹಮದಾಬಾದ್ನಲ್ಲಿ ಗುರುವಾರ ಸಂಜೆ ಭಾರಿ ಮಳೆ ಆಗಿದ್ದು ಇದೀಗ ಮೊದಲ ಪಂದ್ಯ ನಡೆಯುವುದು ಅನುಮಾನ ಎನ್ನಲಾಗಿದೆ. ಹವಾಮಾನ ಇಲಾಖೆ ಶುಕ್ರವಾರವೂ ಮಳೆಯ ಮುನ್ಸೂಚನೆ ನೀಡಿದೆ. ಹೀಗಾಗಿ ಅಭಿಮಾನಿಗಳಿಗೆ ಚಿಂತೆಗೀಡು ಮಾಡಿದೆ.
ಸಂಜೆ 7.30ಕ್ಕೆ ಉದ್ಘಾಟನಾ ಪಂದ್ಯ ನಡೆಯುವ ಒಂದು ಗಂಟೆ ಮೊದಲು ಸಿನೆಮಾ ತಾರೆಗಳಾದ ತಮನ್ನಾ ಭಾಟಿಯಾ ಮತ್ತು ರಶ್ಮಿಕಾ ಮಂದಣ್ಣ ನೃತ್ಯ ಕಾರ್ಯಕ್ರಮದ ಮೂಲಕ ಈ ಟೂರ್ನಿಗೆ ಅದ್ಧೂರಿ ಚಾಲನೆ ನೀಡಲಾಗುವುದು. ಇದೇ ವೇಳೆ ಕ್ರಿಕೆಟ್‌ನ ಮಾಜಿ ದಿಗ್ಗಜರಾದ ಸಚಿನ್ ತೆಂಡೂಲ್ಕರ್, ಸುನೀಲ್ ಗವಾಸ್ಕರ್, ರವಿಶಾಸ್ತ್ರಿ ಸೇರಿ ಹಲವು ಕ್ರಿಕೆಟಿಗರು ಈ ಸಮಾರಂಭದ ಭಾಗವಾಗಲಿದ್ದಾರೆ. ಆದರೆ ಮಳೆಯಾರ ಇದಕ್ಕೆ ಅಡ್ಡಿ ಪಡಿಸಬಾರದು.
-
ಸುವಚನ9 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ6 hours ago
Chenab Bridge | ಐಫೆಲ್ ಟವರ್ಗಿಂತಲೂ ಎತ್ತರದ ರೈಲ್ವೇ ಸೇತುವೆ ಜಮ್ಮು ಕಾಶ್ಮೀರದಲ್ಲಿ ಲೋಕಾರ್ಪಣೆಗೆ ಸಿದ್ಧ
-
ಕರ್ನಾಟಕ7 hours ago
SSLC Exam 2023: ಇಂದಿನಿಂದ SSLC ಎಕ್ಸಾಂ; ಪರೀಕ್ಷೆ ಬರೆಯಲಿರುವ 8.42 ಲಕ್ಷ ವಿದ್ಯಾರ್ಥಿಗಳು
-
ಪ್ರಮುಖ ಸುದ್ದಿ15 hours ago
ವಿಸ್ತಾರ ಸಂಪಾದಕೀಯ: ಹಿಂದಿ ಬಗ್ಗೆ ಪೂರ್ವಗ್ರಹ ಬೇಡ, ಹಾಗಂತ ಹೇರಿಕೆ ಸಲ್ಲದು
-
ಕ್ರಿಕೆಟ್22 hours ago
IPL 2023: ಗುಜರಾತ್ vs ಚೆನ್ನೈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ವೈರಲ್ ನ್ಯೂಸ್22 hours ago
Viral Video: ಇದು ರೋಲ್ಸ್ ರಾಯ್ಸ್ ಆಫ್ ಆಟೋ; ಒಂದು ಬಟನ್ ಪ್ರೆಸ್ ಮಾಡಿದ್ರೆ ಸಾಕು ಮೇಲ್ಭಾಗ ತೆರೆದುಕೊಳ್ಳತ್ತೆ!
-
ಕರ್ನಾಟಕ19 hours ago
ವಿಸ್ತಾರ Special: ಬಿಜೆಪಿ ಇತಿಹಾಸದಲ್ಲೇ ಮೊದಲ ಪ್ರಯತ್ನ ಇದು: ಅಭ್ಯರ್ಥಿ ಆಯ್ಕೆಗೆ ಶುಕ್ರವಾರ ನಡೆಯಲಿದೆ ಆಂತರಿಕ ಚುನಾವಣೆ
-
ಕ್ರಿಕೆಟ್19 hours ago
IPL 203 : ಐಪಿಎಲ್ 16ನೇ ಆವೃತ್ತಿಯ ವೇಳಾಪಟ್ಟಿ ಇಲ್ಲಿದೆ