Site icon Vistara News

WPL 2023 : ಯುಪಿ ವಿರುದ್ಧ ಟಾಸ್​ ಗೆದ್ದ ಡೆಲ್ಲಿ ತಂಡದಿಂದ ಫೀಲ್ಡಿಂಗ್ ಆಯ್ಕೆ

Delhi team won the toss against UP and chose fielding

#image_title

ಮುಂಬಯಿ: ಮಹಿಳೆಯರ ಪ್ರೀಮಿಯರ್​ ಲೀಗ್​ 20ನೇ ಪಂದ್ಯದಲ್ಲಿ ಯುಪಿ ವಿರುದ್ಧ ಟಾಸ್ ಗೆದ್ದಿರುವ ಡೆಲ್ಲಿ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಸೋಮವಾರ ನಡೆದ ಹಣಾಹಣಿಯಲ್ಲಿ ಮುಂಬಯಿ ವಿರುದ್ಧ ಭರ್ಜರಿ 9 ವಿಕೆಟ್ ವಿಜಯ ಸಾಧಿಸಿತ್ತು. ಆ ಪಂದ್ಯದಲ್ಲೂ ಡೆಲ್ಲಿ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಹೀಗಾಗಿ ಮತ್ತೆ ಮೊದಲು ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ ಡೆಲ್ಲಿ ನಾಯಕಿ ಮೆಗ್​ ಲ್ಯಾನಿಂಗ್​.

ಬ್ರಬೊರ್ನ್​ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ಈ ಪಂದ್ಯ ಆಯೋಜನೆಗೊಂಡಿದೆ. ಡೆಲ್ಲಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆಧರೆ, ಆದರೆ, ಯುಪಿ ವಾರಿಯರ್ಸ್​ ತಂಡದ ಗ್ರೇಸ್​ ಹ್ಯಾರಿಸ್​, ರಾಜೇಶ್ವರಿ ಗಾಯಕ್ವಾಡ್​, ದೇವಿಕಾ ವೈದ್ಯ ಆಡುತ್ತಿಲ್ಲ. ಎಸ್​ ಯಶಶ್ರೀ, ಶ್ವೇತಾ ಸೆಹ್ರಾವತ್​, ಶಬ್ನಿಮ್​ ಇಸ್ಮಾಯಿಲ್ ತಂಡಕ್ಕೆ ಸೇರಿಕೊಂಡಿದ್ದಾರೆ.

ಸೋಲಿನೊಂದಿಗೆ ಅಭಿಯಾನ ಮುಗಿಸಿದ ಆರ್​ಸಿಬಿ

ದಿನದ ಮೊದಲ ಪಂದ್ಯದಲ್ಲಿ ಆರ್​ಸಿಬಿ ತಂಡ ಸೋಲು ಕಂಡಿತು. ಮುಂಬೈ ಇಂಡಿಯನ್ಸ್​ ವಿರುದ್ಧದ ಅಂತಿಮ ಲೀಗ್​ ಪಂದ್ಯದಲ್ಲಿ 4 ವಿಕೆಟ್​ಗಳ ಸೋಲು ಕಂಡಿದೆ. ಮುಂಬೈ ಇಂಡಿಯನ್ಸ್​ ಈ ಗೆಲುವಿನೊಂದಿಗೆ ಮತ್ತೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.

ಮುಂಬಯಿಯ ಡಿ.ವೈ. ಪಾಟೀಲ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಡಬಲ್ ಹೆಡರ್​​ ಮುಖಾಮುಖಿಯ ಮೊದಲ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ ರಿಚಾ ಘೋಷ್​ ಮತ್ತು ಎಲ್ಲಿಸ್​ ಪೆರ್ರಿ ಅವರ ಸಣ್ಣ ಹೋರಾಟದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 125 ರನ್​ ಬಾರಿಸಿತು. ಮುಂಬೈ ಇಂಡಿಯನ್ಸ್​ 16.3 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 129 ರನ್​ ಬಾರಿಸಿ ಗೆಲುವು ದಾಖಲಿಸಿತು.

ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ಆರ್​ಸಿಬಿ ಆರಂಭಿಕ ಆಘಾತ ಕಂಡಿತು. ಗುಜರಾತ್​ ಜೈಂಟ್ಸ್​ ವಿರುದ್ಧ ಸಿಡಿಲಬ್ಬರ ಬ್ಯಾಟಿಂಗ್​ ನಡೆಸಿ ನಡುಕ ಹುಟ್ಟಿಸಿದ್ದ ನ್ಯೂಜಿಲ್ಯಾಂಡ್​ನ ಸ್ಟಾರ್​ ಆಲ್​ ರೌಂಡರ್​ ಸೋಫಿ ಡಿವೈನ್​ ಅವರು ಈ ಪಂದ್ಯದಲ್ಲಿ ರನೌಟ್​ ಸಂಕಟಕ್ಕೆ ಸಿಲುಕಿದರು. ಇಲ್ಲದ ರನ್ ಕದಿಯಲೆತ್ನಿಸಿ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಅನುಭವಿಸಿದರು.

ನಾಯಕಿ ಸ್ಮೃತಿ ಮಂಧಾನ ಅವರ ಆಟ ಈ ಪಂದ್ಯದಲ್ಲಿಯೂ ಮಂದ ಗತಿಯಿಂದ ಕೂಡಿತ್ತು. 25 ಎಸೆತ ಎದುರಿಸಿ 24 ರನ್​ ಗಳಿಸಿದರು. ಇದರೊಂದಿಗೆ ಈ ಬಾರಿಯ ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ ಮಂಧಾನ ಸಂಪೂರ್ಣ ವೈಫಲ್ಯ ಕಂಡಂತಾಯಿತು. ಈ ಮೂಲಕ ಮುಂದಿನ ಬಾರಿಯ ಆವೃತ್ತಿಯಲ್ಲಿ ಅವರು ಆರ್​ಸಿಬಿ ತಂಡದಲ್ಲಿಯೇ ಉಳಿಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

Exit mobile version