ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಹಿರಿಯ ವಿಕೆಟ್ ಕೀಪರ್ ಕಮ್ ಬ್ಯಾಟರ್ ದಿನೇಶ್ ಕಾರ್ತಿಕ್(Dinesh Karthik) ಅವರು ಐಪಿಎಲ್ಗೆ(IPL 2024) ನಿವೃತ್ತಿ ಹೇಳಿದ್ದಾರೆ ಎಂದು ವರದಿಯಾಗಿದೆ. ಅವರು ಅಧಿಕೃತವಾಗಿ ಕ್ರಿಕೆಟ್ಗೆ ವಿದಾಯ ಹೇಳದಿದ್ದರೂ ಕೂಡ ನಿನ್ನೆ ನಡೆದ ರಾಜಸ್ಥಾನದದ ರಾಯಲ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯವೇ ಅವರಿಗೆ ವಿದಾಯ(dinesh karthik retirement) ಪಂದ್ಯ ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ಪಂದ್ಯ ಮುಕ್ತಾಯದ ಬಳಿಕ ಸಹ ಆಟಗಾರರು ಭಾವುಕರಾಗಿ ಕಾರ್ತಿಕ್ಗೆ ಮೈದಾನದಲ್ಲಿಯೇ ತಬ್ಬಿಕೊಂಡು ವಿದಾಯ ಹೇಳಿದಂತಿತ್ತು. ಅದರಲ್ಲೂ ವಿರಾಟ್ ಕೊಹ್ಲಿಯೊಂದಿಗೆ(virat kohli) ಭಾವುಕ ಆಲಿಂಗನವನ್ನು ಹಂಚಿಕೊಂಡರು.
ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನವೇ ತಮ್ಮ ನಿವೃತ್ತಿಯ ಬಗ್ಗೆ ದಿನೇಶ್ ಕಾರ್ತಿಕ್ ತುಟಿಬಿಚ್ಚಿದ್ದರು. 17 ವರ್ಷಗಳ ಐಪಿಎಲ್ ಜರ್ನಿಯಲ್ಲಿ ದಿನೇಶ್ ಕಾರ್ತಿಕ್ ಒಟ್ಟು 6 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಟ್ರೋಫಿ ಗೆದ್ದಿದ್ದರು. ಇದಾದ ಬಳಿಕ ಹಲವು ತಂಡಗಳ ಪರ ಆಡಿದರೂ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ.
2022ರ ಹರಾಜಿನಲ್ಲಿ ಕಾರ್ತಿಕ್ ಅವರು ಬರೋಬ್ಬರಿ 5.5 ಕೋಟಿ ರೂ. ಪಡೆದು ಆರ್ಸಿಬಿ ಕ್ಯಾಂಪ್ ಸೇರಿದ್ದರು. ಆ ಆವೃತ್ತಿಯಲ್ಲಿ ಕಾರ್ತಿಕ್ 14 ಇನ್ನಿಂಗ್ಸ್ ಗಳಲ್ಲಿ 287 ರನ್ ಬಾರಿಸಿದ್ದರು. ಜತೆಗೆ ತಂಡದಲ್ಲಿ ಫಿನಿಶರ್ ಪಾತ್ರವನ್ನು ನಿರ್ವಹಿಸಿದ್ದರು. ಇದೇ ಪ್ರದರ್ಶನ ಕಂಡು ಆಸ್ಟ್ರೇಲಿಯಾದಲ್ಲಿ ನಡೆದ ಕಂಡು ಟಿ20 ವಿಶ್ವಕಪ್ನಲ್ಲಿ ಭಾರತ ತಂಡದ ಆಡಿಸಲಾಗಿತ್ತು. ಆದರೆ ಇಲ್ಲಿ ಕಾರ್ತಿಕ್ ನಿರೀಕ್ಷಿತ ಮಟ್ಟದ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದರು. ಜತೆಗೆ ಕಳೆದ ಐಪಿಎಲ್ ಟೂರ್ನಿಯಲ್ಲಿ ಘೋರ ವೈಫಲ್ಯ ಎದುರಿಸಿದ್ದರು.
ಐಪಿಎಲ್ನಲ್ಲಿ ಧೋನಿ ಬಳಿಕ ಅತೀ ಹೆಚ್ಚು ಪಂದ್ಯವಾಡಿದ ದಾಖಲೆ ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದೆ. ಆರ್ಸಿಬಿಗೆ ಟ್ರೋಫಿ ಗೆದ್ದು ವಿದಾಯ ಹೇಳುವ ನಿರೀಕ್ಷೆಯಲ್ಲಿದ್ದ ಡಿಕೆ ಕನಸಿಗೆ ರಾಜಸ್ಥಾನ್ ರಾಯಲ್ಸ್ ಅಡ್ಡಗಾಲಿಕ್ಕಿತು. ದಿನೇಶ್ ಕಾರ್ತಿಕ್ 257 ಪಂದ್ಯಗಳಲ್ಲಿ 22 ಅರ್ಧಶತಕಗಳನ್ನು ಬಾರಿಸಿ 4,842 ರನ್ ಬಾರಿಸಿದ್ದಾರೆ. ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ 15 ಪಂದ್ಯಗಳಲ್ಲಿ 326 ರನ್ ಬಾರಿಸಿದ್ದಾರೆ.
ಇದನ್ನೂ ಓದಿ IPL 2024 : 17 ವರ್ಷ ಕಾದರೂ ಟ್ರೋಫಿ ಇಲ್ಲ: ಆರ್ಸಿಬಿ ಅಭಿಮಾನಿಗಳ ಕಾಯುವಿಕೆ ನಿರಂತರ
2004 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಪದಾರ್ಪಣೆ ಮಾಡಿದ ಕಾರ್ತಿಕ್ ಭಾರತ ಪರ 26 ಟೆಸ್ಟ್‌ಗಳನ್ನು ಆಡಿ 1025 ರನ್ ಗಳಿಸಿದ್ದಾರೆ. 57 ಕ್ಯಾಚ್‌ಗಳು ಮತ್ತು 6 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ. ಅವರು ತಮ್ಮ ಕೊನೆಯ ಟೆಸ್ಟ್ ಆಡಿದ್ದು 2018 ರಲ್ಲಿ. ಏಕದಿನದಲ್ಲಿ 94 ಪಂದ್ಯಗಳನ್ನು ಆಡಿ 1752 ರನ್ ಗಳಿಸಿದ್ದಾರೆ. 64 ಕ್ಯಾಚ್‌ಗಳು ಮತ್ತು 7 ಸ್ಟಂಪಿಂಗ್‌ಗಳನ್ನು ನಿರ್ವಹಿಸಿದ್ದಾರೆ. 60 ಟಿ20 ಪಂದ್ಯಗಳಿಂದ 686 ರನ್ ಗಳಿಸಿ, 30 ಕ್ಯಾಚ್‌ಗಳು ಮತ್ತು 8 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ.