ನಾಗ್ಪುರ: ಭಾರತ(IND VS AUS) ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ 4 ಪಂದ್ಯಗಳ ಬಾರ್ಡರ್-ಗವಾಸ್ಕರ್(Border Gavaskar Trophy) ಟೆಸ್ಟ್ ಸರಣಿಗೆ ದಿನಗಣನೆ ಆರಂಭವಾಗಿದೆ. ಉಭಯ ತಂಡಗಳ ವಿರುದ್ಧದ ಮೊದಲ ಪಂದ್ಯ ಫೆಬ್ರವರಿ 9 ರಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್(dinesh karthik) ಕಾಣಿಸಿಕೊಳ್ಳಲಿದ್ದಾರೆ.
ದಿನೇಶ್ ಕಾರ್ತಿಕ್ ಅವರು ಟ್ವೀಟ್ ಮೂಲಕ ತಾವು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಸಿದ್ಧನಾಗಿದ್ದೇನೆ ಎಂದು ಹೇಳಿದ್ದಾರೆ. ಆದರೆ ಅವರು ಆಟಗಾರನ ಬದಲಾಗಿ ವೀಕ್ಷಕ ವಿವರಣೆಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಕಳೆದ ವರ್ಷ ಆಸ್ಟ್ರೇಲಿಯಾದಲ್ಲಿ ನಡೆದ ಐಸಿಸಿ ಟಿ20 ವಿಶ್ವ ಕಪ್ ಟೂರ್ನಿಯಲ್ಲಿ ಭಾರತ ಪರ ಕಣಕ್ಕಿಳಿದಿದ್ದ ಅವರು ಇದಾದ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಇದೀಗ ತಾವು ಟೆಸ್ಟ್ ಕ್ರಿಕೆಟ್‌ಗೆ ಆಸ್ಟ್ರೇಲಿಯಾ ವಿರುದ್ದವೇ ಪಾದಾರ್ಪಣೆ ಮಾಡಿದ ಕ್ಷಣವನ್ನು ಮೆಲುಕು ಹಾಕಿದ್ದಾರೆ. “ನಾನು ಭಾರತದಲ್ಲಿ ಆಸ್ಟ್ರೇಲಿಯಾ ವಿರುದ್ದ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದೆ. ಇದೀಗ ಮತ್ತೊಮ್ಮೆ ಈ ಕ್ಷಣ ಎದುರು ಬಂದಿದೆ” ಎಂದು ಕಾರ್ತಿಕ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ IND VS AUS: ಬಗೆಹರಿದ ಉಸ್ಮಾನ್ ಖವಾಜಾ ವೀಸಾ ಸಮಸ್ಯೆ; ಭಾರತಕ್ಕೆ ಬರಲು ಗ್ರೀನ್ ಸಿಗ್ನಲ್
ದಿನೇಶ್ ಕಾರ್ತಿಕ್ ಅವರು ಟ್ವೀಟ್ ಮಾಡುತ್ತಿದ್ದಂತೆ ಕೆಲವು ನೆಟ್ಟಿಗರು ತಮಾಷೆಯ ಕಾಮೆಂಟ್ ಮಾಡಿದ್ದಾರೆ. ರಿಷಭ್ ಪಂತ್ ಅವರ ಬದಲು ಕೀಪಿಂಗ್ ಮಾಡಲಿದ್ದೀರಾ ಎಂದಿದ್ದಾರೆ ಇನ್ನು ಕೆಲವರು ತಾವು ಕ್ರಿಕೆಟ್ ಬಿಟ್ಟು ಕಾಮೆಂಟ್ರಿಯನ್ನು ಮುಂದುವರಿಸಿ ಎಂದು ಹೇಳಿದ್ದಾರೆ.