Site icon Vistara News

Rohit Sharma: ಪತ್ರಕರ್ತನ ಪ್ರಶ್ನೆಗೆ ಗರಂ ಆದ ರೋಹಿತ್​ ಶರ್ಮ; ವಿಡಿಯೊ ವೈರಲ್​

Rohit Sharma

ಬೆಂಗಳೂರು: ಏಕದಿನ ವಿಶ್ವಕಪ್​ಗೆ(ICC World Cup) ಮಂಗಳವಾರ ಭಾರತ ತಂಡ ಪ್ರಕಟಗೊಂಡಿದೆ. ಇದೇ ವೇಳೆ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ(Rohit Sharma) ತನ್ನದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ. ಅನಗತ್ಯ ಪ್ರಶ್ನೆಯನ್ನು ಏಕೆ ಕೇಳುತ್ತೀರ, ಈಗಾಗಲೇ ಈ ಪ್ರಶ್ನೆಯನ್ನು ಹಲವು ಬಾರಿ ಕೇಳಿದ್ದೀರ ಎಂದು ಜಾಡಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.)viral video)

ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಹಲವು ಪತ್ರಕರ್ತರು ಭಾರತ ತಂಡದ ಸಂಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದರು. ಆದರೆ ಈ ವೇಳೆ ಒಬ್ಬರು ರೋಹಿತ್​ ಬಳಿ ಅನಗತ್ಯ ಪ್ರಶ್ನೆಯನ್ನು ಮಾಡಿದರು. ಇದರಿಂದ ಕೋಪಗೊಂಡ ರೋಹಿತ್​, ನಿಮಗೆ ಬೇರೆ ಕೆಲಸವಿಲ್ಲವೇ ಎಷ್ಟು ಸಾರಿ ಇದೇ ಪ್ರಶ್ನೆಯನ್ನು ಕೇಳುತ್ತೀರಾ ಈಗಾಗಕಲೇ ಹಲವು ಬಾರಿ ಈ ಪ್ರಶ್ನೆಗೆ ಉತ್ತರಿಸಿದ್ದೇನೆ. ಮತ್ತದೇ ಪ್ರಶ್ನೆಯನ್ನು ಕೇಳುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಕೇಳಿ ತಮ್ಮ ಸಿಟ್ಟನ್ನು ಹೊರಹಾಕಿದರು.

ರೋಹಿತ್​ ಹೇಳಿದ್ದೇನು?

“ನಮ್ಮ ಗಮನ ಏನಿದ್ದರೂ ವಿಶ್ವಕಪ್​ ಗೆಲ್ಲುವುದು. ಈ ರೀತಿಯ ಪ್ರಶ್ನೆಗಳಿಗೆ ಉತ್ತರಿಸುವುದಲ್ಲ. ಇಂಥ ಪ್ರಶ್ನೆಗಳಿಗೆ ನಾನು ಉತ್ತರಿಸುವುದಿಲ್ಲ. ನಾವು ವೃತ್ತಿಪರ ಆಟಗಾರರು ಹಾಗೂ ಏನು ಮಾಡಬೇಕೆಂದು ನಮ್ಮ ತಂಡದ ಸದಸ್ಯರಿಗೆ ತಿಳಿದಿದೆ. ನಮ್ಮ ತಂಡದ ಬಗ್ಗೆ ಹೊರಗೇನು ಮಾತನಾಡುತ್ತಾರೆ ಎನ್ನುವುದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ನಮ್ಮ ತಂಡದಲ್ಲಿರುವ ಎಲ್ಲ ಆಟಗಾರರು ವೃತ್ತಿಪರತೆಯನ್ನು ಹೊಂದಿದ್ದಾರೆ. ಹೀಗಾಗಿ ಇಂತಹ ಪ್ರಶ್ನೆಗಳನ್ನು ನನ್ನ ಬಳಿ ಕೇಳಬೇಡಿ. ಸಾಧ್ಯವಾದಷ್ಟು ಅತ್ಯುತ್ತಮವಾದ ತಂಡ ಸಂಯೋಜನೆಯನ್ನು ಮಾಡಲಾಗಿದೆ” ಎಂದು ರೋಹಿತ್​ ಖಾರವಾಗಿ ಉತ್ತರಿಸಿದ್ದಾರೆ.

“15 ಜನರನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕಾಗಿರುವುದರಿಂದ ಇಲ್ಲಿ ಹೆಚ್ಚಿನ ಅಚ್ಚರಿಗಳಿಲ್ಲ. ಈ ಪೈಕಿ ಆಯ್ಕೆಯಾಗದ ಕೆಲವರಿಗೆ ತುಂಬಾ ನಿರಾಸೆಯಾಗಿರುವುದು ನಿಜ. ಆದರೆ ಆಯ್ಕೆಗೂ ಮಿತಿ ಇದೆ. ಹೀಗಾಗಿ ಏನು ಮಾಡಲು ಸಾಧ್ಯವಿಲ್ಲ. ನಾನು ಈ ಸ್ಥಿತಿಯನ್ನು ಅನುಭವಿಸಿದ್ದೇನೆ. ಆ ಪರಿಸ್ಥಿತಿ ಹೇಗಿರುತ್ತದೆ ಎಂದು ನನಗೂ ತಿಳಿದಿದೆ. ಆಯ್ಕೆಯಾದ ಎಲ್ಲ 15 ಮಂದಿಯೂ ಬಲಿಷ್ಠ ಆಟಗಾರರೆ ಇದರಲ್ಲಿ ಯಾವುದೇ ಅನುಮಾನ ಬೇಡ” ಎಂದು ಹೇಳಿದರು.

ಇದನ್ನೂ ಓದಿ ICC World Cup: ಏಕದಿನ ವಿಶ್ವಕಪ್​ಗೆ ಭಾರತ ತಂಡ ಪ್ರಕಟ; ತಂಡದಲ್ಲಿ ಏಕೈಕ ಕನ್ನಡಿಗ

ಐಪಿಎಲ್ ಸಂದರ್ಭದಲ್ಲಿ ತೊಡೆಯ ಗಾಯದಿಂದ ಬಳಲಿದ್ದ ರಾಹುಲ್ ಶಸ್ತ್ರಚಿಕಿತ್ಸೆ ಪಡೆದಿದ್ದರು. ನಂತರ ಎನ್‌ಸಿಎನಲ್ಲಿ ಪುನಶ್ಚೇತನ ಶಿಬಿರದಲ್ಲಿದ್ದರು. ಏಷ್ಯಾ ಕಪ್ ಟೂರ್ನಿಯಲ್ಲಿ ಆಡುವ ತಂಡಕ್ಕೆ ಆಯ್ಕೆಯಾಗಿದ್ದರೂ, ಮೊದಲೆರಡು ಪಂದ್ಯಗಳಿಂದ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಸೂಪರ್​ 4ನಲ್ಲಿ ಅವರು ಕಣಕ್ಕಿಳಿಯುವ ಸಾಧ್ಯತೆ ಇದೆ.

ಭಾರತ ತಂಡ

ರೋಹಿತ್‌ ಶರ್ಮಾ (ನಾಯಕ), ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆ.ಎಲ್‌.ರಾಹುಲ್‌, ಹಾರ್ದಿಕ್‌ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಜಸ್‌ಪ್ರಿತ್‌ ಬುಮ್ರಾ, ಕುಲದೀಪ್‌ ಯಾದವ್‌, ಮೊಹಮ್ಮದ್‌ ಸಿರಾಜ್‌, ಮೊಹಮ್ಮದ್‌ ಶಮಿ, ಇಶಾನ್‌ ಕಿಶನ್‌, ಶಾರ್ದೂಲ್‌ ಠಾಕೂರ್‌, ಅಕ್ಷರ್​ ಪಟೇಲ್‌, ಸೂರ್ಯಕುಮಾರ್‌ ಯಾದವ್​.

Exit mobile version