Site icon Vistara News

Droupadi Murmu: ಸೈನಾ ನೆಹ್ವಾಲ್ ಜತೆ ಬ್ಯಾಡ್ಮಿಂಟನ್ ಆಡಿದ ರಾಷ್ಟ್ರಪತಿ ಮುರ್ಮು

Droupadi Murmu

Droupadi Murmu: President Murmu, Saina Nehwal engage in badminton duel at Rashtrapati Bhavan

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರು ಅನುಭವಿ ಬ್ಯಾಡ್ಮಿಂಟನ್​ ಆಟಗಾರ್ತಿ, ಒಲಿಂಪಿಕ್ಸ್​ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್(Saina Nehwal)​ ಜತೆ ಸೌಹಾರ್ದ ಬ್ಯಾಡ್ಮಿಂಟನ್​ ಪಂದ್ಯವನ್ನಾಡುವ ಮೂಲಕ ಗಮನಸೆಳೆದಿದ್ದಾರೆ. ಈ ಮೂಲಕ ತಮ್ಮ ತಮಗೆ ಕ್ರೀಡೆಯ ಮೇಲಿರುವ ಉತ್ಸಾಹವನ್ನು ತೋರಿಸಿಕೊಟ್ಟಿದ್ದಾರೆ. ಮುರ್ಮು ಅವರು ಅದ್ಭುತವಾಗಿ ಶಟಲ್​​ ಆಡುತ್ತಿರುವ ವಿಡಿಯೊ ವೈರಲ್​ ಆಗಿದೆ.

ರಾಷ್ಟ್ರಪತಿ ಭವನದಲ್ಲಿ ಬುಧವಾರ ರಾತ್ರಿ ನಡೆದಿದ್ದ ಕ್ರೀಡಾ ಕಾರ್ಯಕ್ರಮದ ವೇಳೆ ಮರ್ಮು ಅವರು ಬ್ಯಾಡ್ಮಿಂಟನ್ ಆಡಿದರು. ಎರದುರಾಳಿ ಸೈನಾ ವಿರುದ್ಧ ಒಂದು ಅಂಕ ಗಳಿಸುವ ತಮ್ಮ ಸಾಮರ್ಥ್ಯ ಪ್ರದಶಿರ್ಸಿಸಿದರು. ಮುರ್ಮು ಅವರು ಅಂಕ ಗಳಿಸುತ್ತಿಂದತೆ ನೆರದಿದ್ದ ಕ್ರೀಡಾಪಟುಗಳು ಜೋರಾಗಿ ಚಪ್ಪಾಳೆ ತಟ್ಟುತ್ತ ಅವರನ್ನು ಪ್ರೋತ್ಸಾಹಿಸಿದರು. ಸೈನಾ ಮತ್ತು ಮುರ್ಮು ಬ್ಯಾಡ್ಮಿಂಟನ್​ ಆಡುತ್ತಿರುವ ವಿಡಿಯೊವನ್ನು ರಾಷ್ಟ್ರಪತಿ ಭವನ ಅಧಿಕೃತ ಫೇಸ್​ಬುಕ್ ಮತ್ತು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದೆ.

ಒಲಿಂಪಿಕ್ಸ್​ ಕ್ರೀಡಾಪಟುಗಳಿಗೆ ಶುಭ ಕೋರಿದ್ದ ಮುರ್ಮು

ಕೆಲವು ದಿನಗಳ ಹಿಂದೆ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ್ದ ವೇಳೆ ಮುರ್ಮು ಅವರು ಜುಲೈ 26ರಿಂದ ಆರಂಭಗೊಳ್ಳಲಿರುವ ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಎಲ್ಲ ಭಾರತೀಯ ಆ್ಯತ್ಲೀಟ್‌ಗಳಿಗೆ(athletes)ಶುಭಾಶಯ ಕೋರಿದ್ದರು. ಪದಕ ಗೆದ್ದು ದೇಶದ ಕೀರ್ತಿ ಹೆಚ್ಚಿಸುವಂತಾಗಲಿ ಎಂದು ಹಾರೈಸಿದ್ದರು. 21 ಶೂಟರ್‌ಗಳು ಸೇರಿದಂತೆ 100ಕ್ಕೂ ಹೆಚ್ಚು ಕ್ರೀಡಾಪಟುಗಳು ಪ್ಯಾರಿಸ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದಾರೆ.

ಇದನ್ನೂ ಓದಿ Puri Jagannath Yatra: ಪುರಿ ಜಗನ್ನಾಥನ ಅದ್ದೂರಿ ರಥಯಾತ್ರೆ; ರಾಷ್ಟ್ರಪತಿ ಮುರ್ಮು ಉಪಸ್ಥಿತಿ

‘ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸುವ ಪ್ರತಿಯೊಬ್ಬ ಕ್ರೀಡಾಪಟುವಿಗೆ ನನ್ನ ಶುಭ ಹಾರೈಕೆಗಳು. ಈ ಸಾಧನೆಗಳನ್ನು ಮತ್ತಷ್ಟು ಮುಂದುವರಿಸಲು, ಭಾರತ ಒಲಿಂಪಿಕ್ ಅಸೋಸಿಯೇಷನ್ (ಐಒಎ) 2036ರ ಒಲಿಂಪಿಕ್ ಕೂಟದ ಆತಿಥ್ಯ ವಹಿಸಲು ಸಿದ್ಧತೆ ನಡೆಸುತ್ತಿದೆ’ ಎಂದು ಹೇಳಿದ್ದರು.

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪದಕ ಗೆಲ್ಲುವುದು ಭಾರತದ ಪ್ರಮುಖ ಗುರಿಯಾಗಿದೆ. ಟೋಕಿಯೊದಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಐಒಸಿ ಮುಖ್ಯಸ್ಥ ಥಾಮಸ್ ಬಾಚ್ ಅವರ ಪ್ರೋತ್ಸಾಹದಿಂದ ಭಾರತವು 2036ರ ಕ್ರೀಡಾಕೂಟದ ಆತಿಥ್ಯಕ್ಕೆ ಬಿಡ್ ಸಲ್ಲಿಸಲಿದೆ. ಆದರೆ, ಸೌದಿ ಅರೇಬಿಯಾ, ಇಂಡೊನೇಷ್ಯಾ ಮತ್ತು ಕತಾರ್ ನಂತಹ ಪ್ರಬಲ ದೇಶಗಳಿಂದ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.

ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳಿಗೆ ಮನೆಯ ತಾವರಣವನ್ನು ಕಲ್ಪಿಸಲು ಇದರ ಉದ್ದೇಶದಿಂದ ರಿಲಯನ್ಸ್‌ ಸಂಸ್ಥೆ “ಇಂಡಿಯಾ ಹೌಸ್​”(India House)​ ಎಂಬ ವಿಶೇಷ ವ್ಯವಸ್ಥೆಯೊಂದನ್ನು ಮಾಡಿದೆ. ಭಾರತೀಯ ಕ್ರೀಡಾಪಟುಗಳು ಇದರಲ್ಲೇ ಉಳಿದುಕೊಳ್ಳಲಿದ್ದಾರೆ.

Exit mobile version