ನವದೆಹಲಿ: ಮುಂದಿನ ತಿಂಗಳು ಸೆಪ್ಟೆಂಬರ್ 5ನೇ ತಾರೀಕಿನಿಂದ ದುಲೀಪ್ ಟ್ರೋಫಿ ಶುರುವಾಗಲಿದ್ದು, ಇಂದು ತಂಡಗಳನ್ನು ಪ್ರಕಟಿಸಲಾಗಿದೆ. ದುಲೀಪ್ ಟ್ರೋಫಿ(Duleep Trophy)ಯ ಎ ತಂಡಕ್ಕೆ ಶುಭಮನ್ ಗಿಲ್(Shubman Gill), ಬಿ ತಂಡಕ್ಕೆ ಅಭಿಮನ್ಯು ಈಶ್ವರನ್(Abhimanyu Easwaran), ಸಿ ತಂಡಕ್ಕೆ ರುತುರಾಜ್ ಗಾಯಕ್‌ವಾಡ್(Ruturaj Gaikwad) ಮತ್ತು ಡಿ ತಂಡಕ್ಕೆ ಶ್ರೇಯಸ್ ಅಯ್ಯರ್(Shreyas Iyer) ನಾಯಕರಾಗಿ ನೇಮಕಗೊಂಡಿದ್ದಾರೆ. ದುಲೀಪ್ ಟ್ರೋಫಿ ಸೆ.5ನೇ ತಾರೀಕಿನಿಂದ ಸೆ. 22ರ ತನಕ ನಡೆಯಲಿದೆ.
ಸೆಪ್ಟಂಬರ್ 5 ರಿಂದ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು ನಾಲ್ಕು ತಂಡಗಳು ಭಾಗವಹಿಸುತ್ತಿವೆ. ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ(Rohit Sharma) ಹಾಗೂ ವಿರಾಟ್ ಕೊಹ್ಲಿ(Virat Kohli) ದುಲೀಪ್ ಟ್ರೋಫಿಯಲ್ಲಿ ಆಡುವುದಿಲ್ಲ. ಇವರು ಈ ಹಿಂದೆಯೇ ಆಟ ಆಡುವುದಿಲ್ಲ ಎಂದು ಘೋಷಿಸಿದ್ದರು. ಇನ್ನು ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್ ಮತ್ತು ರಿಂಕು ಸಿಂಗ್ ಕೂಡ ಆಯ್ಕೆಯಾಗಲಿಲ್ಲ.
ತಂಡಗಳು ಹೀಗಿವೆ
ತಂಡ ಎ: ಶುಭಮನ್ ಗಿಲ್ (ನಾಯಕ), ಮಯಾಂಕ್ ಅಗರ್ವಾಲ್, ರಿಯಾನ್ ಪರಾಗ್, ಧ್ರುವ ಜುರೆಲ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಕುಲದೀಪ್ ಯಾದವ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಅವೇಶ್ ಖಾನ್, ವಿದ್ವತ್ ಕಾವೇರಪ್ಪ, ಕುಮಾರ್ ಕುಶಾಗ್ರ , ಶಾಶ್ವತ್ ರಾವತ್.
ತಂಡ ಬಿ: ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್, ರಿಷಭ್ ಪಂತ್, ಮುಶೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್, ಮುಖೇಶ್ ಕುಮಾರ್, ರಾಹುಲ್ ಚಾಹರ್, ಆರ್ ಸಾಯಿ ಕಿಶೋರ್, ಮೋಹಿತ್ ಅವಸ್ತಿ , ಎನ್ ಜಗದೀಸನ್ (ವಿಕೆಟ್ ಕೀಪರ್).
ತಂಡ ಸಿ: ರುತುರಾಜ್ ಗಾಯಕ್‌ವಾಡ್ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಬಿ ಇಂದ್ರಜಿತ್, ಹೃತಿಕ್ ಶೋಕೀನ್, ಮಾನವ್ ಸುತಾರ್, ಉಮ್ರಾನ್ ಮಲಿಕ್, ವೈಶಾಕ್ ವಿಜಯ್‌ಕುಮಾರ್, ಅನ್ಶುಲ್ ಖಂಬೋಜ್, ಹಿಮಾಂಶು ಚೌಹಾಣ್, ಮಯಾಂಕ್ ಮರ್ಕಂಡೆ (ವಿಕೆಟ್ ಕೀಪರ್), ಸಂದೀಪ್ ವಾರಿಯರ್.
ತಂಡ ಡಿ: ಶ್ರೇಯಸ್ ಲೈಯರ್ (ನಾಯಕ), ಅಥರ್ವ ಟೈಡೆ, ಯಶ್ ದುಬೆ, ದೇವದತ್ ಪಡಿಕ್ಕಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಕಿ ಭುಯಿ, ಸರನ್ಶ್ ಜೈನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಆದಿತ್ಯ ಠಾಕರೆ, ಹರ್ಷಿತ್ ರಾಣಾ, ತುಷಾರ್ ದೇಶಪಾಂಡೆ, ಆಕಾಶ್ ಸೇನ್‌ಗುಪ್ತ, ಕೆಎಸ್ (ವಿಕೆಟ್ ಕೀಪರ್), ಸೌರಭ್ ಕುಮಾರ್.
ಈ ಬಾರಿ ಯಾವೆಲ್ಲಾ ಆಟಗಾರರು ಮಿಸ್?
ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್, ಸಂಜು ಸಾಸ್ಮಾನ್, ಯುಜ್ವೇಂದ್ರ ಚಾಹಲ್, ಶಾರ್ದೂಲ್ ಠಾಕೂರ್ ಮತ್ತು ಹಾರ್ದಿಕ್ ಪಾಂಡ್ಯ ದುಲೀಪ್ ಟ್ರೋಫಿಯಲ್ಲಿ ಆಡುವುದನ್ನು ಕಾಣುವುದಿಲ್ಲ. ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ ಪೂಜಾರ ಕೂಡ ದುಲೀಪ್ ಟ್ರೋಫಿಯನ್ನು ಆಡುತ್ತಿಲ್ಲ.
ಇದನ್ನೂ ಓದಿ: Dodda Ganesh: ಕೀನ್ಯಾ ಕ್ರಿಕೆಟ್ ತಂಡಕ್ಕೆ ಕನ್ನಡಿಗ ದೊಡ್ಡ ಗಣೇಶ್ ನೂತನ ಕೋಚ್