ಮುಂಬಯಿ: ದುಲೀಪ್ ಟ್ರೋಫಿ(Duleep Trophy) ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್(mohammed siraj) ಅನಾರೋಗ್ಯದ ಕಾರಣ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ನವದೀಪ್ ಸೈನಿ ಸ್ಥಾನ ಪಡೆದಿದ್ದಾರೆ. ಇದೇ ವೇಳೆ ಹಿರಿಯ ಆಟಗಾರ ರವೀಂದ್ರ ಜಡೇಜಾ(Ravindra Jadeja) ಅವರನ್ನು ಭಾರತ ‘ಬಿ’ ತಂಡದಿಂದ ಬಿಡುಗಡೆ ಮಾಡಲಾಗಿದೆ.
ವೃತ್ತಿಪರ ಕ್ರಿಕೆಟ್ಗೆ ಮರಳುವ ನಿರೀಕ್ಷೆಯಲ್ಲಿ ಜಮ್ಮ ಕಾಶ್ಮೀರದ ವೇಗಿ ಉಮ್ರಾನ್ ಮಲಿಕ್(Umran Malik) ಕೂಡ ಅನಾರೋಗ್ಯದ ಕಾರಣ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಉಮ್ರಾನ್ ಬದಲಿಗೆ ಮಧ್ಯಪ್ರದೇಶದ ಮಧ್ಯಮ ವೇಗಿ ಗೌರವ್ ಯಾದವ್ ಭಾರತ ‘ಸಿ’ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜಡೇಜಾ ಸ್ಥಾನಕ್ಕೆ ಬದಲಿ ಆಟಗಾರನನ್ನ ಹೆಸರಿಸಲಾಗಿಲ್ಲ. ಜಡೇಜಾ ದುಲೀಪ್ ಟ್ರೋಫಿಯಲ್ಲಿ ಕೇವಲ ಒಂದು ಪಂದ್ಯವನ್ನು ಆಡಿ ಬಳಿಕ ಬಾಂಗ್ಲಾದೇಶ ಟೆಸ್ಟ್ ಸರಣಿಗೆ ಮುಂಚಿತವಾಗಿ ಭಾರತ ಶಿಬಿರಕ್ಕೆ ತೆರಳಬೇಕಿತ್ತು. ಆದರೆ ಬಿಸಿಸಿಐ ಅವರಿಗೆ ಕೊನೆಯ ಕ್ಷಣದಲ್ಲಿ ವಿಶ್ರಾಂತಿ ನೀಡಿದೆ. ಭಾರತ ‘ಎ’ ತಂಡವನ್ನು ಶುಭಮನ್ ಗಿಲ್ ಮುನ್ನಡೆಸಿದರೆ, ‘ಡಿ’ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದಾರೆ.
ಭಾರತ ‘ಎ’ ತಂಡ
ಶುಭಮನ್ ಗಿಲ್ (ನಾಯಕ), ಮಯಾಂಕ್ ಅಗರ್ವಾಲ್, ರಿಯಾನ್ ಪರಾಗ್, ಧ್ರುವ ಜುರೆಲ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಕುಲದೀಪ್ ಯಾದವ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಅವೇಶ್ ಖಾನ್, ವಿದ್ವತ್ ಕಾವೇರಪ್ಪ, ಕುಮಾರ್ ಕುಶಾಗ್ರ , ಶಾಶ್ವತ್ ರಾವತ್.
ಭಾರತ ‘ಬಿ’ ತಂಡ
ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿ.ಕೀ), ಮುಷೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ (ಫಿಟ್‌ನೆಸ್ ಟೆಸ್ಟ್ ಅವಲಂಬನೆ), ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಯಶ್ ದಯಾಳ್, ಮುಖೇಶ್ ಕುಮಾರ್, ರಾಹುಲ್ ಚಹರ್, ಆರ್ ಸಾಯಿ ಕಿಶೋರ್, ಮೋಹಿತ್ ಆವಸ್ತಿ, ಎನ್ ಜಗದೀಸನ್ (ವಿ.ಕೀ)
ಇದನ್ನೂ ಓದಿ Natasa Stankovic: ಪಾಂಡ್ಯ ಜತೆಗಿನ ವಿಚ್ಛೇದನದ ಅಸಲಿ ಸತ್ಯ ಬಿಚ್ಚಿಟ್ಟ ನತಾಶ!
ಭಾರತ ‘ಸಿ’ ತಂಡ
ಋತುರಾಜ್ ಗಾಯಕ್ವಾಡ್ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಅಭಿಷೇಕ್ ಪೊರೆಲ್ (ವಿ.ಕೀ), ಸೂರ್ಯಕುಮಾರ್ ಯಾದವ್, ಬಿ ಇಂದ್ರಜಿತ್, ಹೃತಿಕ್ ಶೋಕೀನ್, ಮಾನವ್ ಸುತಾರ್, ಗೌರವ್ ಯಾದವ್, ವೈಶಾಕ್ ವಿಜಯ್‌ಕುಮಾರ್, ಅನ್ಶುಲ್ ಖಂಬೋಜ್, ಹಿಮಾಂಶು ಚೌಹಾಣ್, ಮಯಾಂಕ್ ಮಾರ್ಕಂಡೆ, ಆರ್ಯನ್ ಜುಯೆಲ್ (ವಿ.ಕೀ), ಸಂದೀಪ್ ವಾರಿಯರ್.
ಭಾರತ ‘ಡಿ’ ತಂಡ
ಶ್ರೇಯಸ್ ಅಯ್ಯರ್ (ನಾಯಕ), ಅಥರ್ವ ಟೈಡೆ, ಯಶ್ ದುಬೆ, ದೇವದತ್ ಪಡಿಕ್ಕಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಕಿ ಭುಯಿ, ಸರನ್ಶ್ ಜೈನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಆದಿತ್ಯ ಠಾಕರೆ, ಹರ್ಷಿತ್ ರಾಣಾ, ತುಷಾರ್ ದೇಶಪಾಂಡೆ, ಆಕಾಶ್ ಸೇನ್‌ಗುಪ್ತ, ಕೆಎಸ್ (ವಿಕೆಟ್ ಕೀಪರ್), ಸೌರಭ್ ಕುಮಾರ್.