ಬೆಂಗಳೂರು: 2023ರಲ್ಲಿ ಭಾರತ (Team India) ಹಾಗೂ ಆಸ್ಟ್ರೇಲಿಯಾ ನಡುವಿನ 8 ಸೀಮಿತ ಓವರ್ಗಳ ಪಂದ್ಯಗಳ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಖಚಿತಪಡಿಸಿದೆ. ಐಸಿಸಿ ಏಕದಿನ ವಿಶ್ವಕಪ್ 2023 ಕ್ಕೆ ಮುಂಚಿತವಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸರಣಿಯು ನಡೆಯಲಿದೆ. ಬಿಸಿಸಿಐ ಮಾಧ್ಯಮ ಹಕ್ಕುಗಳ ಒಪ್ಪಂದದ ಅವಧಿಯೊಂದಿಗೆ ಈ ಸರಣಿಯು ಪ್ರಕಟಗೊಳ್ಳಲಿದೆ. ಆಗಸ್ಟ್ ಅಂತ್ಯದ ವೇಳೆಗೆ ಬಿಸಿಸಿಐ ಮಾಧ್ಯಮ ಹಕ್ಕುಗಳ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಬಿಸಿಸಿಐ ಜೂನ್ 7ರಂದು ನಡೆಸಿದ ಸಭೆಯಲ್ಲಿ ಜಯ್ ಶಾ ದೃಢಪಡಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಎಂಟು ವೈಟ್ ಬಾಲ್ ಕ್ರಿಕೆಟ್ ಪಂದ್ಯಗಳ ಜತೆಗೆ ಹೊಸ ಮಾಧ್ಯಮ ಹಕ್ಕುಗಳ ಒಪ್ಪಂದ ನಡೆಯಲಿದೆ. ವಿಶ್ವಕಪ್ 2023ರ ಸಿದ್ಧತೆಗಳ ಭಾಗವಾಗಿ ಸೆಪ್ಟೆಂಬರ್ನಲ್ಲಿ ಮೂರು ಏಕದಿನ ಅಂತರರಾಷ್ಟ್ರೀಯ ಪಂದ್ಯಗಳು ನಡೆಯಲಿವೆ ಎಂದು ಬಿಸಿಸಿಐ ಹೇಳಿದೆ.
ಏಕದಿನ ವಿಶ್ವಕಪ್ ನಂತರ ಡಿಸೆಂಬರ್ನಲ್ಲಿ ಐದು ಟಿ20 ಪಂದ್ಯಗಳು ನಡೆಯಲಿವೆ. ಈ ಸರಣಿ ಮೂಲಕ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಭರ್ಜರಿ ತಯಾರಿ ನಡೆಸಲಿದೆ. ಏಕದಿನ ಸರಣಿಯ ನಂತರ, ಅಕ್ಟೋಬರ್ 8ರಂದು ಚೆನ್ನೈನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ 2023ರಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ. ವಿಶ್ವದ ಅತ್ಯುತ್ತಮ 50 ಓವರ್ಗಳ ಎರಡು ತಂಡಗಳು ಪಂದ್ಯಾವಳಿಯಲ್ಲಿ ಗೆಲುವಿಗಾಗಿ ಸೆಣಸಾಡಲಿವೆ.
ಇದನ್ನೂ ಓದಿ : IND vs WI: ದಿಗ್ಗಜ ಸರ್ ಗ್ಯಾರಿ ಸೋಬರ್ಸ್ ಭೇಟಿಯಾದ ಟೀಮ್ ಇಂಡಿಯಾ ಆಟಗಾರರು
ಐದು ಬಾರಿ ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8ರಂದು ಭಾರತ ತನ್ನ ಮೊದಲ ವಿಶ್ವಕಪ್ ಪಂದ್ಯವನ್ನು ಆಡಲಿದ್ದು, ಎಲ್ಲರ ಕಣ್ಣುಗಳು ಚೆನ್ನೈ ಪಂದ್ಯದ ಮೇಲೆ ನೆಟ್ಟಿವೆ. ರೋಹಿತ್ ಶರ್ಮಾ ನೇತೃತ್ವದ ತಂಡ ಗೆಲುವಿಗಾಗಿ ಸೆಣಸಾಡಲಿದೆ. ಈ ಪಂದ್ಯದೊಂದಿಗೆ ಭಾರತ ತಂಡ ತನ್ನ ಅಭಿಯಾನ ಆರಂಭಿಸಲಿದೆ. ಪಂ ದ್ಯಾವಳಿಯಲ್ಲಿ ಆತಿಥೇಯರ ವಿಶ್ವಕಪ್ ಅಭಿಯಾನವು ಈ ಪಂದ್ಯದಲ್ಲಿ ಗೆಲುವಿನೊಂದಿಗೆ ಆರಂಭವಾಗಲಿ ಎಂದು ಅಭಿಮಾನಿಗಳು ಬಯಸಿದ್ದಾರೆ.
2011ರಲ್ಲಿ ಭಾರತ ತಂಡ ಏಕ ದಿನ ವಿಶ್ವ ಕಪ್ ಗೆದ್ದ ಬಳಿಕ ಐಸಿಸಿ ವಿಶ್ವ ಕಪ್ ಟ್ರೋಫಿ ಗೆದ್ದಿಲ್ಲ. ಹೀಗಾಗಿ ತವರಿನಲ್ಲಿ ನಡೆಯಲಿರುವ ಈ ಸರಣಿ ಹೆಚ್ಚಿನ ಕುತೂಲಹ ಮೂಡಿಸಿದೆ.