Site icon Vistara News

Election Results 2024: 5 ಬಾರಿಯ ಸಂಸದನ ವಿರುದ್ಧ ಚೊಚ್ಚಲ ಪ್ರಯತ್ನದಲ್ಲೇ ಭರ್ಜರಿ ಗೆಲುವು ಸಾಧಿಸಿದ ಯೂಸುಫ್ ಪಠಾಣ್

Election Results 2024

Election Results 2024: Debutant Yusuf Pathan set to oust 5-time MP Adhir Chowdhury

ಕೋಲ್ಕತ್ತಾ: ಭಾರತ ಕ್ರಿಕೆಟ್​ ತಂಡದ ಮಾಜಿ ಕ್ರಿಕೆಟಿಗ, ವಿಶ್ವಕಪ್​ ತಂಡದ ಸದಸ್ಯ ಯೂಸುಫ್ ಪಠಾಣ್(Yusuf Pathan) ಅವರು ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಟಿಎಂಸಿ(TMC) ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್, ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ 5 ಬಾರಿಯ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ(Adhir Chowdhury)ಯನ್ನು ಮಣಿಸಿದ್ದಾರೆ.

ಯೂಸುಫ್ ಪಠಾಣ್ 5,18,066 ಮತಗಳನ್ನು ಪಡೆದರೆ, ತಮ್ಮ ಸಮೀಪದ ಪ್ರತಿಸ್ಪರ್ಧಿ ರಂಜನ್ ಚೌಧರಿ 4,32,340 ಮತಗಳನ್ನು ಮಾತ್ರ ಪಡೆದರು. ಈ ಮೂಲಕ ಯೂಸುಫ್ ಪಠಾಣ್ 85,726 ಮತಗಳ ಅಂತರದಿಂದ ಗೆದ್ದು ಬೀಗಿದರು.

ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿ, ಸಚಿವರ ಮಾತಿಗೆ ಅಡ್ಡಿಪಡಿಸಿದ ಆರೋಪದ ಹಿನ್ನಲೆಯಲ್ಲಿ ಅಧೀರ್ ರಂಜನ್ ಚೌಧರಿ ಅವರನ್ನು ಸದನದಿಂದ ಸಸ್ಪೆಂಡ್ ಮಾಡಲಾಗಿತ್ತು. ಕಾಂಗ್ರೆಸ್ ಸಂಸದೀಯ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಸಸ್ಪೆಂಡ್ ಮಾಡುವ ನಿರ್ಣಯವನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಮಂಡಿಸಿದ್ದರು.

ಇದನ್ನೂ ಓದಿ Election Results 2024: ಎಕ್ಸಿಟ್‌ ಪೋಲ್‌ಗಳಿಗೆ ತೀವ್ರ ಮುಖಭಂಗ; ನಂಬಿದ ಹೂಡಿಕೆದಾರರಿಗೆ 40 ಲಕ್ಷ ಕೋಟಿ ರೂ. ನಷ್ಟ!

ಮೂಲತಃ ಗುಜರಾತ್‌ನವರಾದ ಯೂಸುಫ್ ಪಠಾಣ್ ಐಪಿಎಲ್​ನಲ್ಲಿ ಕೆಕೆಆರ್​ ತಂಡದ ಪರ ಹಲವು ವರ್ಷಗಳ ಕಾಲ ಆಡಿದ್ದರು. ಅಲ್ಲದೆ ತಂಡದ ಪ್ರಧಾನ ಆಟಗಾರನಾಗಿ ಗುರುತಿಸಿಕೊಂಡಿದ್ದರು. ಹೀಗಾಗಿ ಅವರಿಗೆ ಬಂಗಾಳದಾದ್ಯಂತ ಯೂಸುಫ್​ಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಇದೇ ಕಾರಣದಿಂದ ಅವರಿಗೆ ಪಶ್ಚಿಮ ಬಂಗಾಳದಿಂದ ಟಿಎಂಸಿ ಟಿಕೆಟ್​ ನೀಡಿತ್ತು. ಇದೀಗ ಮೊದಲ ಪ್ರಯತ್ನದಲ್ಲೇ ಅವರು ಗೆದ್ದು ಬೀಗಿದ್ದಾರೆ.

ವಿಶ್ವಕಪ್‌ ಹೀರೋ


ಪಠಾಣ್‌ ಸೋದರರಲ್ಲಿ ಹಿರಿಯರಾದ ಯೂಸುಫ್ ಪಠಾಣ್‌ ಹೊಡಿಬಡಿ ಆಟಕ್ಕೆ ಖ್ಯಾತರಾಗಿದ್ದರು. 2007ರ ಚೊಚ್ಚಲ ಟಿ20 ವಿಶ್ವಕಪ್‌, 2011ರ ವಿಶ್ವಕಪ್‌, ಕೆಕೆಆರ್‌ನ ಐಪಿಎಲ್‌ ಗೆಲುವಿನ ವೇಳೆ ತಂಡದ ಸ್ಟಾರ್‌ ಆಟಗಾರನಾಗಿ ಮಿಂಚಿದ್ದು ಯೂಸುಫ್ ಹೆಗ್ಗಳಿಕೆ. 2021ರಲ್ಲಿ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು.

ಪಠಾಣ್‌ ಸೋದರರಲ್ಲಿ ಹಿರಿಯರಾದ ಯೂಸುಫ್ ಪಠಾಣ್‌ ಹೊಡಿಬಡಿ ಆಟಕ್ಕೆ ಖ್ಯಾತರಾಗಿದ್ದರು. 2007ರ ಚೊಚ್ಚಲ ಟಿ20 ವಿಶ್ವಕಪ್‌, 2011ರ ವಿಶ್ವಕಪ್‌, ಕೆಕೆಆರ್‌ನ ಐಪಿಎಲ್‌ ಗೆಲುವಿನ ವೇಳೆ ತಂಡದ ಸ್ಟಾರ್‌ ಆಟಗಾರನಾಗಿ ಮಿಂಚಿದ್ದು ಯೂಸುಫ್ ಹೆಗ್ಗಳಿಕೆ. 2021ರಲ್ಲಿ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಯೂಸುಫ್ ಪಠಾಣ್‌ 57 ಏಕದಿನ ಪಂದ್ಯಗಳಿಂದ 810 ರನ್‌ ಹೊಡೆದಿದ್ದಾರೆ. 2 ಶತಕ, 3 ಅರ್ಧ ಶತಕ ಇದರಲ್ಲಿ ಒಳಗೊಂಡಿದೆ. 22 ಟಿ20 ಪಂದ್ಯಗಳಿಂದ 236 ರನ್‌ ಬಾರಿಸಿದ್ದಾರೆ. 2012ರಲ್ಲಿ ಭಾರತವನ್ನು ಕೊನೆಯ ಸಲ ಪ್ರತಿನಿಧಿಸಿದ್ದರು.

Exit mobile version