ವೆಲ್ಲಿಂಗ್ಟನ್: ನ್ಯೂಜಿಲ್ಯಾಂಡ್(ENG VS NZ) ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಯುವ ಆಟಗಾರ ಹ್ಯಾರಿ ಬ್ರೂಕ್(harry brook) ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ. ಈ ಮೂಲಕ ಭಾರತದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದರು.
ವೆಲ್ಲಿಂಗ್ಟನ್ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ಮೊದಲ ದಿನದಾಟದ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 315 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದೆ. ಮೊದಲ ದಿನವೇ ಅಜೇಯ ಶತಕ ಬಾರಿಸಿದ ಹ್ಯಾರಿ ಬ್ರೂಕ್ ಅತಿ ಕಡಿಮೆ ಇನಿಂಗ್ಸ್ನಲ್ಲಿ 800 ರನ್ ಗಡಿ ದಾಟಿದ ಮೊದಲ ಆಟಗಾರ ಎಂಬ ನೂತನ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದರು.
ಇದಕ್ಕೂ ಮುನ್ನ ಈ ದಾಖಲೆ ವಿನೋದ್ ಕಾಂಬ್ಳಿ ಹೆಸರಲ್ಲಿತ್ತು. ಕಾಂಬ್ಳಿ 9 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ 798 ರನ್ ಗಳಿಸಿದ್ದರು. ಆದರೆ ಬ್ರೂಕ್ 9ನೇ ಇನಿಂಗ್ಸ್ನಲ್ಲಿ 807 ರನ್ ಬಾರಿಸಿ ಈ ದಾಖಲೆಯನ್ನು ಮುರಿದರು.
ಇದನ್ನೂ ಓದಿ ENG VS NZ: ಕಿವೀಸ್ನಲ್ಲಿ 15 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್
ಸದ್ಯ ಜೋ ರೂಟ್(101*) ಮತ್ತು ಬ್ರೂಕ್(184*) ಅಜೇಯ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಬಿರುಸಿನ ಬ್ಯಾಟಿಂಗ್ ನಡೆಸುತ್ತಿರುವ ಬ್ರೂಕ್ ದ್ವಿತೀಯ ದಿನದಾಟದಲ್ಲಿ ಶಕತವನ್ನು ದ್ವಿಶತಕವಾಗಿ ಪರಿವರ್ತಿಸಿದರೂ ಅಚ್ಚರಿಯಿಲ್ಲ.