IND vs ENG: ಒಂದು ದಿನ ಮುಂಚಿತವಾಗಿ 3ನೇ ಟೆಸ್ಟ್​ಗೆ ಆಡುವ ಬಳಗ ಪ್ರಕಟಿಸಿದ ಇಂಗ್ಲೆಂಡ್​ - Vistara News

ಕ್ರೀಡೆ

IND vs ENG: ಒಂದು ದಿನ ಮುಂಚಿತವಾಗಿ 3ನೇ ಟೆಸ್ಟ್​ಗೆ ಆಡುವ ಬಳಗ ಪ್ರಕಟಿಸಿದ ಇಂಗ್ಲೆಂಡ್​

ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು, ಆಫ್-ಸ್ಪಿನ್ನರ್ ಶೋಯೆಬ್ ಬದಲಿಗೆ ಮಾರ್ಕ್ ವುಡ್ ಅವರನ್ನು ಮತ್ತೆ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

VISTARANEWS.COM


on

England playing XI
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಜ್​ಕೋಟ್​: ಭಾರತ ವಿರುದ್ಧದ ಮೂರನೇ ಟೆಸ್ಟ್(India vs England 3rd Test)​ ಪಂದ್ಯಕ್ಕೆ ಪ್ರವಾಸಿ ಇಂಗ್ಲೆಂಡ್​ ಒಂದು ದಿನ ಮುಂಚಿತವಾಗಿಯೇ ತನ್ನ ಆಡುವ ಬಳಗವನ್ನು ಪ್ರಕಟಿಸಿದೆ. ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು, ಆಫ್-ಸ್ಪಿನ್ನರ್ ಶೋಯೆಬ್ ಬದಲಿಗೆ ಮಾರ್ಕ್ ವುಡ್ ಅವರನ್ನು ಮತ್ತೆ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ವಿಶಾಖಪಟ್ಟಣಂನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಪಾಕಿಸ್ತಾನ ಮೂಲಕ ಇಂಗ್ಲೆಂಡ್​ ಸ್ಪಿನ್ನರ್​ ಬಶೀರ್ ಪದಾರ್ಪಣೆ ಮಾಡಿದ್ದರು. ಮಾರ್ಕ್​ ವುಡ್​ ಸೇರ್ಪಡೆಯಿಂದ ತಂಡದಲ್ಲಿ 2 ವೇಗಿಗಳು ಕಾಣಿಸಿಕೊಂಡಿದ್ದಾರೆ. ಮೊದಲೆಡರು ಪಂದ್ಯಗಳಲ್ಲಿ ಕೇವಲ ಒಂದು ವೇಗಿಯನ್ನು ಮಾತ್ರ ಇಂಗ್ಲೆಂಡ್​ ಕಣಕ್ಕಿಳಿಸಿತ್ತು.

ಬಶೀರ್ ಮೊದಲ ಇನ್ನಿಂಗ್ಸ್‌ನಲ್ಲಿ ಮೂರು ವಿಕೆಟ್‌ಗಳೊಂದಿಗೆ ಚೊಚ್ಚಲ ಪಂದ್ಯದಲ್ಲೇ ನಾಲ್ಕು ವಿಕೆಟ್ ಪಡೆದ್ದರು. ಆದಾಗ್ಯೂ, ಟಾಮ್ ಹಾರ್ಟ್ಲಿ ಮತ್ತು ರೆಹಾನ್ ಅಹ್ಮದ್ ಉತ್ತಮ ಪ್ರದರ್ಶನ ನೀಡುವುದರೊಂದಿಗೆ ಮತ್ತು ಆಫ್-ಸ್ಪಿನ್ನರ್ ಪಾತ್ರದಲ್ಲಿ ಜೋ ರೂಟ್ ತಂಡದಲ್ಲಿರುವ ಕಾರಣ ಬಶೀರ್ ಅವರನ್ನು ಕೈಬಿಡಲಾಗಿದೆ. ರಾಜ್​ಕೋಟ್​ನ ಪಿಚ್​ ಫ್ಲಾಟ್ ವಿಕೆಟ್ ಆಗಿರುವುದರಿಂದ ಇಂಗ್ಲೆಂಡ್​ ಹೆಚ್ಚುವರಿ ವೇಗಿಗೆ ಮಣೆ ಹಾಕಿದಂತಿದೆ. ಜೇಮ್ಸ್​ ಆ್ಯಂಡರ್ಸನ್ 700 ವಿಕೆಟ್​ಗಳ ಸನಿಹವಿದ್ದು ಈ ಮೈಲಿಗಲ್ಲು ತಲುಪಲು ಅವರಿಗೆ 5 ವಿಕೆಟ್​ ಅಗತ್ಯವಿದೆ.

ಇದನ್ನೂ ಓದಿ IND vs ENG: ಮೂರನೇ ಪಂದ್ಯದಲ್ಲಿ ಜುರೆಲ್‌, ಸರ್ಫ್‌ರಾಜ್‌ ಪದಾರ್ಪಣೆ ಖಚಿತ; ಇಲ್ಲಿದೆ ವಿಡಿಯೊ

ಇಂಗ್ಲೆಂಡ್​ ಆಡುವ ಬಳಗ


ಝಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್(ನಾಯಕ), ಬೆನ್ ಫೋಕ್ಸ್(ವಿಕೆಟ್​ ಕೀಪರ್​), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಜೇಮ್ಸ್ ಆ್ಯಂಡರ್ಸನ್, ಮಾರ್ಕ್ ವುಡ್.

ಭಾರತಕ್ಕೆ ಗಾಯದ ಚಿಂತೆ

ಮೂರನೇ ಟೆಸ್ಟ್​(India vs England 3rd Test) ಪಂದ್ಯಕ್ಕಾಗಿ ಟೀಮ್​ ಇಂಡಿಯಾ(Team India) ನೂತನ ಸ್ವರೂಪದ ತಂಡವನ್ನು ಆರಿಸಿ ಕಣಕ್ಕಿಳಿಯುವ ಅನಿವಾರ್ಯತೆಗೆ ಸಿಲುಕಿದೆ. ಇದಕ್ಕೆ ಕಾರಣ ಗಾಯದಿಂದ ಅನುಭವಿ ಆಟಗಾರರು ಅಲಭ್ಯರಾಗಿರುವುದು. ಹೀಗಾಗಿ ಈ ಪಂದ್ಯದಲ್ಲಿ ಕನಿಷ್ಠ 2 ಮಂದಿ ಭಾರತ ಪರ ಟೆಸ್ಟ್​ ಕ್ಯಾಪ್​ ಪಡೆಯುವುದು ಪಕ್ಕಾ ಎನ್ನಬಹುದು.

ವಿಕೆಟ್‌ ಕೀಪರ್‌ ಧ್ರುವ ಜುರೆಲ್‌(Dhruv Jurel) ಮತ್ತು ಮುಂಬೈ ಬ್ಯಾಟರ್‌ ಸರ್ಫರಾಜ್‌ ಖಾನ್‌(Sarfaraz Khan) ಟೆಸ್ಟ್‌ ಪದಾರ್ಪಣೆ ಮಾಡುವುದು ಬಹುತೇಕ ಖಚಿತಗೊಂಡಿದೆ. ಇಬ್ಬರೂ ಆಟಗಾರರು ಕೂಡ ಭಾರತ ತಂಡದೊಂದಿಗೆ ಮಂಗಳವಾರ ಮತ್ತು ಬುಧವಾರ ಸುದೀರ್ಘ‌ ಅಭ್ಯಾಸ ನಡೆಸಿದ್ದಾರೆ. ಅಲ್ಲದೆ ಬಿಸಿಸಿಐ ಬುಧವಾರ ಜುರೆಲ್​ ಅವರನ್ನು ವಿಶೇಷ ಸಂದರ್ಶನ ಮಾಡುವ ಮೂಲಕ ಭಾರತದ ಜೆರ್ಸಿಯಲ್ಲಿ ಫೋಟೊ ಶೂಟ್​ ಕೂಡ ಮಾಡಿದೆ. ಇದನೆಲ್ಲ ನೋಡುವಾಗ ಅವರು ನಾಳೆಯ ಪಂದ್ಯದಲ್ಲಿ ಆಡುವುದು ಖಚಿತ ಎನ್ನಬಹುದು.

ಗಾಯಗೊಂಡು ಸರಣಿಯಿಂದಲೇ ಹೊರಬಿದ್ದಿರುವ ಶ್ರೇಯಸ್‌ ಅಯ್ಯರ್‌ ಸ್ಥಾನ ಮತ್ತು ಫಿಟ್​ನೆಸ್​ ಪಾಸ್​ ಆಗದ ಕಾರಣ ಮೂರನೇ ಪಂದ್ಯದಿಂದ ಡ್ರಾಪ್ ಔಟ್​ ಆಗಿರುವ ಕೆ.ಎಲ್​ ರಾಹುಲ್​ ಕ್ರಮಾಂಕವೂ ಖಾಲಿ ಇದೆ. ಈ 2 ಸ್ಥಾನಗಳ ಪೈಕಿ ಒಂದು ಸ್ಥಾನ ಸರ್ಫರಾಜ್‌ ಖಾನ್​ಗೆ ಸಿಗುವು ಪಕ್ಕಾ ಆಗಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

Neeraj Chopra: 2 ತಿಂಗಳು ವಿದೇಶದಲ್ಲಿ ಕಠಿಣ ತರಬೇತಿ ಪಡೆಯಲಿದ್ದಾರೆ ನೀರಜ್ ಚೋಪ್ರಾ

Neeraj Chopra: ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ಸ್‌ನಲ್ಲಿ ಟ್ರ್ಯಾಕ್ ಮತ್ತು ಫೀಲ್ಡ್ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದ ನೀರಜ್​ ಚೋಪ್ರಾ ಜುಲೈ 28 ರವರೆಗೆ ಯುರೋಪ್‌ನ ವಿವಿಧ ಸ್ಥಳಗಳಲ್ಲಿ ತರಬೇತಿ ಪಡೆಯಲಿದ್ದಾರೆ. ಕ್ರೀಡಾ ಸಚಿವಾಲಯದ ಮಹತ್ವದ ಯೋಜನೆಯಾದ ‘ಟಾರ್ಗೆಟ್ ಒಲಂಪಿಕ್ ಪೋಡಿಯಂ’ ಅಡಿಯಲ್ಲಿ ಅವರಿಗೆ ಈ ವಿದೇಶಿ ತರಬೇತಿಯ ವೆಚ್ಚವನ್ನು ಭರಿಸಲಾಗುತ್ತದೆ.

VISTARANEWS.COM


on

Neeraj Chopra
Koo

ನವದೆಹಲಿ: ಮಹತ್ವದ ಕ್ರೀಡಾಕೂಟವಾದ ಪ್ಯಾರಿಸ್ ಒಲಿಂಪಿಕ್ಸ್(​Paris Olympics 2024) ಆರಂಭಕ್ಕೆ ಇನ್ನು ಒಂದುವರೆ ತಿಂಗಳು ಮಾತ್ರ ಬಾಕಿ ಉಳಿದಿವೆ. ಈ ಕ್ರೀಡಾಕೂಟದ ಸಿದ್ಧತೆಯಾಗಿ ಟೋಕಿಯೊ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ ಭಾರತದ ಸ್ಟಾರ್​ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ(Neeraj Chopra) ಅವರು ಕೋಚ್ ಕ್ಲಾಸ್ ಬಾರ್ಟೋನಿಯೆಟ್ಜ್ ಮತ್ತು ಫಿಸಿಯೋ ಇಶಾನ್ ಮಾರ್ವಾಹಾ ಅವರೊಂದಿಗೆ 60 ದಿನ ಯುರೋಪ್‌ನಲ್ಲಿ ತರಬೇತಿ ಪಡೆಯಲಿದ್ದಾರೆ.

ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ಸ್‌ನಲ್ಲಿ ಟ್ರ್ಯಾಕ್ ಮತ್ತು ಫೀಲ್ಡ್ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದ ನೀರಜ್​ ಚೋಪ್ರಾ ಜುಲೈ 28 ರವರೆಗೆ ಯುರೋಪ್‌ನ ವಿವಿಧ ಸ್ಥಳಗಳಲ್ಲಿ ತರಬೇತಿ ಪಡೆಯಲಿದ್ದಾರೆ. ಕ್ರೀಡಾ ಸಚಿವಾಲಯದ ಮಹತ್ವದ ಯೋಜನೆಯಾದ ‘ಟಾರ್ಗೆಟ್ ಒಲಂಪಿಕ್ ಪೋಡಿಯಂ’ ಅಡಿಯಲ್ಲಿ ಅವರಿಗೆ ಈ ವಿದೇಶಿ ತರಬೇತಿಯ ವೆಚ್ಚವನ್ನು ಭರಿಸಲಾಗುತ್ತದೆ.

“ನಾನು ಕಠಿಣ ತರಬೇತಿ ಪಡೆಯುತ್ತಿದ್ದೇನೆ ಮತ್ತು ಉತ್ತಮ ಭಾವನೆ ಹೊಂದಿದ್ದೇನೆ. ನನ್ನ ಸಾಮರ್ಥ್ಯದ ಅತ್ಯುತ್ತಮ ಪ್ರದರ್ಶನವನ್ನು ನಾನು ಇನ್ನೂ ಮಾಡಿಲ್ಲ ಎಂದು ನಾನು ಭಾವಿಸುತ್ತೇನೆ. ಇದಕ್ಕಾಗಿ ನಾನು ಹಿಂದೆಂದೂ ತಯಾರಿಸಿದ ಅತ್ಯುತ್ತಮ ತಯಾರಿಯಾನ್ನು ನಡೆಸಲಿದ್ದೇನೆ. ಇದು ಮುಂದಿನ ದಿನಗಳಲ್ಲಿ ಉತ್ತಮಗೊಳ್ಳುತ್ತದೆ ಎಂಬ ವಿಶ್ವಾಸವಿದೆ. ನಾನು ನನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳುತ್ತೇನೆ. ಈ ಸ್ಪರ್ಧೆಯನ್ನು ಆನಂದಿಸುತ್ತೇನೆ” ಎಂದು ನೀರಜ್ ಹೇಳಿದರು.

ಕಳೆದ ತಿಂಗಳು ಭುನೇಶ್ವರದಲ್ಲಿ ನಡೆದಿದ್ದ ಫೆಡರೇಷನ್ ಕಪ್‌ನಲ್ಲಿ(Federation Cup) ಕಣಕ್ಕಿಳಿದ್ದ ನೀರಜ್ ಚೋಪ್ರಾ(82.27 ಮೀ.), ಕನ್ನಡಿಗ ಡಿಪಿ ಮನು ಅವರಿಂದ ತೀವ್ರ ಪೈಪೋಟಿ ಎದುರಿಸಿ ಚಿನ್ನದ ಪದಕ ಗೆದ್ದಿದ್ದರು. ನೀರಜ್​ ಚೋಪ್ರಾ ಕಳೆದ ವರ್ಷ ನಡೆದಿದ್ದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದರು. ಅಲ್ಲದೆ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಗೆದ್ದಿದ್ದರು. ಒಲಿಂಪಿಕ್ಸ್‌ನ ಟ್ರ್ಯಾಕ್‌ ಇವೆಂಟ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ.

ನೀರಜ್​ರ ಇದುವರೆಗಿನ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದು. ಈ ಎಸೆತವನ್ನು 2022ರ ಸ್ಟಾಕ್​ಹೋಮ್​ ಡೈಮಂಡ್​ ಲೀಗ್​ನಲ್ಲಿ ಎಸೆದಿದ್ದರು. ಅಭ್ಯಾಸದ ವೇಳೆ ಈಗಾಗಲೆ ನೀರಜ್​ ಹಲವು ಬಾರಿ 90 ಮೀ. ಗಡಿ ದಾಟಿದ್ದಾರೆ. ಆದರೆ, ಸ್ಪರ್ಧೆಗಳಲ್ಲಿ ಇದು ಸಾಧ್ಯವಾಗಿರಲಿಲ್ಲ. ಈ ಬಾರಿ ಸ್ಪರ್ಧೆಯಲ್ಲಿಯೂ ಇದನ್ನು ಸಾಧಿಸಲಿದ್ದೇನೆ ಎಂದು ನೀರಜ್​ ಹೇಳಿದ್ದಾರೆ.

ಇದನ್ನೂ ಓದಿ Paris Olympics 2024: ಒಲಿಂಪಿಕ್ಸ್‌ಗೆ‌ ಅರ್ಹತೆ ಪಡೆದ ಬಾಕ್ಸರ್ ನಿಶಾಂತ್ ದೇವ್

ಚಿನ್ನದ ವಿಶ್ವಾಸದಲ್ಲಿ ಕೋಚ್​


ನೀರಜ್ ಅವರ ಮೊದಲ ಕೋಚ್​ ಕಾಶಿನಾಥ್ ನಾಯ್ಕ್ ಅವರು ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್​ನಲ್ಲಿಯೂ(neeraj chopra paris olympics) ನೀರಜ್​ ಚಿನ್ನದ ಪದಕ ಗೆಲ್ಲಲಿದ್ದಾರೆ ಎಂದು ಇತ್ತೀಚೆಗೆ ಸಂದರ್ಶನವೊಂದಲ್ಲಿ ಭವಿಷ್ಯ ನುಡಿದಿದ್ದರು.

“ನಾನು 2015 ರಿಂದ ನೀರಜ್​ ಜತೆ ಕೆಲಸ ಮಾಡುತ್ತಿದ್ದೇನೆ. ಅವರ ಛಲವನ್ನು ಮೆಚ್ಚಲೇ ಬೇಕು.​ ಸಾಧಿಸುವ ಛಲವೇ ಅವರನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ಅತ್ಯಂತ ಶಿಸ್ತಿನ ಕ್ರೀಡಾಪಟು ಕೂಡ ಆಗಿದ್ದಾರೆ. 90 ಮೀ. ದೂರ ಜಾವೆಲಿನ್​ ಎಸೆಯುವದು ಪ್ರಮುಖ ಗುರಿ ಎಂದು ನೀರಜ್​ ಈಗಾಗಲೇ ಹೇಳಿದ್ದಾರೆ. ಹೇಳಿದಂತೆ ಅವರು ಈ ದೂರವನ್ನು ಕ್ರಮಿಸುವ ವಿಶ್ವಾಸ ನನ್ನಲ್ಲಿದೆ” ಎಂದು ಹೇಳಿದ್ದರು.

Continue Reading

ಕ್ರೀಡೆ

Paris Olympics 2024: ಒಲಿಂಪಿಕ್ಸ್‌ಗೆ‌ ಅರ್ಹತೆ ಪಡೆದ ಬಾಕ್ಸರ್ ನಿಶಾಂತ್ ದೇವ್

Paris Olympics 2024: ಏಕಪಕ್ಷಿಯವಾಗಿ ಸಾಗಿದ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಭಾರತೀಯ ಬಾಕ್ಸರ್​ನ ಬಲಿಷ್ಠ ಪಂಚ್​ಗಳಿಗೆ ತಡೆಯೊಡ್ಡುವಲ್ಲಿ ಮೊಲ್ಡೊವಾದ ವಸಿಲೆ ಸೆಬೊಟಾರಿ ಸಂಪೂರ್ಣವಾಗಿ ವಿಫಲರಾದರು. ಗೆಲುವಿನ ಅಂತರ 5-0. ಮತ್ತೊಂದೆಡೆ ಮಹಿಳೆಯರ 60 ಕೆಜಿ ವಿಭಾಗದಲ್ಲಿ ಮಾಜಿ ಯೂತ್ ವರ್ಲ್ಡ್ ಚಾಂಪಿಯನ್ ಭಾರತದ ಅಂಕುಶಿತಾ ಬೊರೊ ಸೋಲು ಕಂಡರು.

VISTARANEWS.COM


on

Paris Olympics 2024
Koo

ನವದೆಹಲಿ: ಭಾರತದ ಬಾಕ್ಸರ್ ನಿಶಾಂತ್ ದೇವ್ ಅವರು ಥಾಯ್ಲೆಂಡ್‌ನ ಬ್ಯಾಂಕಾಕ್‌ನಲ್ಲಿ ನಡೆದ ಬಾಕ್ಸಿಂಗ್ ಒಲಿಂಪಿಕ್ಸ್‌ ಅರ್ಹತಾ ಪಂದ್ಯದಲ್ಲಿ ಸೆಮಿಫೈನಲ್‌ ಪ್ರವೇಶಿಸುವ ಮೂಲಕ 2024ರ ಪ್ಯಾರಿಸ್(Paris Olympics 2024) ಕ್ರೀಡಾಕೂಟಕ್ಕೆ ಟಿಕೆಟ್‌ ಪಡೆದುಕೊಂಡಿದ್ದಾರೆ. ನಿಶಾಂತ್‌ ದೇವ್‌(Nishant Dev) ಅವರು ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಮೊದಲ ಭಾರತೀಯ ಪುರುಷ ಬಾಕ್ಸರ್​ ಆಗಿದ್ದಾರೆ. ಒಟ್ಟಾರೆಯಾಗಿ 4ನೇ ಬಾಕ್ಸರ್ ಆಗಿದ್ದಾರೆ. ಮಹಿಳಾ ಬಾಕ್ಸರ್‌ಗಳಾದ ನಿಖತ್ ಜರೀನ್ (50 ಕೆಜಿ), ಪ್ರೀತ್ ಪವಾರ್ (54 ಕೆಜಿ) ಮತ್ತು ಲೊವ್ಲಿನಾ ಬೊರ್ಗೊಹೈನ್ (75 ಕೆಜಿ) ಈಗಾಗಲೇ ಪ್ಯಾರಿಸ್‌ಗೆ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

ಏಕಪಕ್ಷಿಯವಾಗಿ ಸಾಗಿದ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಭಾರತೀಯ ಬಾಕ್ಸರ್​ನ ಬಲಿಷ್ಠ ಪಂಚ್​ಗಳಿಗೆ ತಡೆಯೊಡ್ಡುವಲ್ಲಿ ಮೊಲ್ಡೊವಾದ ವಸಿಲೆ ಸೆಬೊಟಾರಿ ಸಂಪೂರ್ಣವಾಗಿ ವಿಫಲರಾದರು. ಗೆಲುವಿನ ಅಂತರ 5-0. ಮತ್ತೊಂದೆಡೆ ಮಹಿಳೆಯರ 60 ಕೆಜಿ ವಿಭಾಗದಲ್ಲಿ ಮಾಜಿ ಯೂತ್ ವರ್ಲ್ಡ್ ಚಾಂಪಿಯನ್ ಭಾರತದ ಅಂಕುಶಿತಾ ಬೊರೊ ಅವರು ಕ್ವಾರ್ಟರ್ ಫೈನಲ್‌ನಲ್ಲಿ ಸ್ವೀಡನ್‌ನ ಮಾಜಿ ಯುರೋಪಿಯನ್‌ ಗೇಮ್ಸ್‌ ಕಂಚಿನ ಪದಕ ವಿಜೇತೆ ಆಗ್ನೆಸ್ ಅಲೆಕ್ಸಿಸ್ಸನ್ ವಿರುದ್ಧ 2-3 ಅಂಕಗಳ ಅಂತರದ ಸೋಲು ಕಾಣುವ ಒಲಿಂಪಿಕ್ಸ್​ ಟಿಕೆಟ್​ ಪಡೆಯುವಲ್ಲಿ ವಿಫಲವಾದರು. ಪ್ಯಾರಿಸ್ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಟ ಜುಲೈ 26ರಿಂದ ಆರಂಭಗೊಳ್ಳಲಿದೆ.

ಚಿನ್ನ ಗೆದ್ದ ಬಾಕ್ಸರ್​ಗಳಿಗೆ ಸಿಗಲಿದೆ ಭಾರೀ ನಗದು ಬಹುಮಾನ


ಕೆಲವು ತಿಂಗಳ ಹಿಂದೆ ವಿಶ್ವ ಅಥ್ಲೆಟಿಕ್ (ಡಬ್ಲ್ಯುಎ) ಸಂಸ್ಥೆ ಟ್ರ್ಯಾಕ್ ಮತ್ತು ಫೀಲ್ಡ್(track & field gold medallists) ವಿಭಾಗದಲ್ಲಿ ಚಿನ್ನ ಜಯಿಸುವ ಅಥ್ಲೀಟ್‌ಗಳಿಗೆ 41.60 ಲಕ್ಷ ನಗದು ಪ್ರಶಸ್ತಿ ನೀಡುವುದಾಗಿ ಪ್ರಕಟಿಸಿತ್ತು. ಇದೀಗ ಅಂತರರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ (International Boxing Association) ಕೂಡ ಮಹತ್ವದ ನಿರ್ಧಾರ ಕೈಗೊಂಡಿದ್ದು, ಚಿನ್ನ ಗೆಲ್ಲುವ ಪ್ರತಿಯೊಬ್ಬ ಬಾಕ್ಸರ್​ಗಳಿಗೆ 41.68 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಜತೆಗೆ ಕೋಚ್‌, ರಾಷ್ಟ್ರೀಯ ತಂಡಗಳಿಗೆ 10 ಲಕ್ಷ ನೀಡುವುದಾಗಿಯೂ ಪ್ರಕಟಿಸಿದೆ.

ಇಲ್ಲಿ ಗಮನಿಸಬೇಕದ ವಿಚಾರವೆಂದರೆ ಹಣಕಾಸು ವಿಷಯದಲ್ಲಿ ಪಾರದರ್ಶಕತೆ ಕಾಪಾಡದ ಕಾರಣಕ್ಕೆ ಐಒಸಿ, ಬಾಕ್ಸಿಂಗ್ ಸಂಸ್ಥೆಯನ್ನು ನಿರ್ಬಂಧಿಸಿದೆ. 2020ರ ಟೋಕಿಯೊ ಒಲಿಂಪಿಕ್ಸ್‌ ಬಾಕ್ಸಿಂಗ್ ಸ್ಪರ್ಧೆಗಳನ್ನು ಐಬಿಎ(IBA) ನೆರವಿಲ್ಲದೇ ಐಒಸಿಯೇ ಸಂಘಟಿಸಿತ್ತು. ಕ್ರೀಡಾ ಸಂಸ್ಥೆಗಳು ನೀಡುವ ಬಹುಮಾನ ಹಣಕ್ಕೂ ಐಒಸಿ ಸಮ್ಮತಿ ನೀಡಿಲ್ಲ.

ಇದನ್ನೂ ಓದಿ Paris Olympics 2024: ಚಿನ್ನ ಗೆದ್ದ ಬಾಕ್ಸರ್​ಗಳಿಗೆ ಸಿಗಲಿದೆ ಭಾರೀ ನಗದು ಬಹುಮಾನ; ಮಹತ್ವದ ನಿರ್ಧಾರ ಕೈಗೊಂಡ ಐಬಿಎ

ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ಪ್ಯಾರಿಸ್​ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ ನೀಡಲಾಗುವುದು. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.

ಬೋಟ್‌ಗಳಲ್ಲೇ ಪರೇಡ್

ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Continue Reading

ಪ್ರಮುಖ ಸುದ್ದಿ

Virat kohli : ಕಡೆಗಣಿಸುವ ಹೇಳಿಕೆ ನೀಡಿ ಕೊಹ್ಲಿಗೆ ಮತ್ತೆ ಅವಮಾನ ಮಾಡಿದ ಅಂಬಾಟಿ ರಾಯುಡು

Virat kohli : ಐಪಿಎಲ್ 2024 ರ ಸಮಯದಲ್ಲಿ ಕೊಹ್ಲಿ ಬಗ್ಗೆ ಕಳಪೆ ಹೇಳಿಕೆಗಳೊಂದಿಗೆ ವಿವಾದವನ್ನು ಹುಟ್ಟುಹಾಕಿದ ನಂತರ, ಭಾರತದ ಮಾಜಿ ಬ್ಯಾಟರ್​ ಜೂನ್ 2 ರಿಂದ ಪ್ರಾರಂಭವಾಗುವ ಟಿ 20 ವಿಶ್ವಕಪ್ 2024ನಲ್ಲಿಯೂ ಕೊಹ್ಲಿಯನ್ನು ಕಡೆಗಣಿಸುವ ಹೇಳಿಕೆ ನೀಡಿದ್ದಾರೆ.

VISTARANEWS.COM


on

Virat Kohli
Koo

ನವದೆಹಲಿ: ಭಾರತದ ಮಾಜಿ ಬ್ಯಾಟರ್ ಮತ್ತು ಆರು ಬಾರಿ ಐಪಿಎಲ್ ವಿಜೇತ ಅಂಬಾಟಿ ರಾಯುಡು ಕಳೆದ ಕೆಲವು ವಾರಗಳಿಂದ ವಿರಾಟ್ ಕೊಹ್ಲಿ (Virat kohli) ಅವರ ಅಭಿಮಾನಿಗಳ ರೇಡಾರ್ನಲ್ಲಿದ್ದಾರೆ ಮತ್ತು ಟೀಮ್ ಇಂಡಿಯಾದ ಬ್ಯಾಟಿಂಗ್ ಮಾಂತ್ರಿಕನನ್ನು ಅನಗತ್ಯವಾಗಿ ಟೀಕಿಸಿದ್ದಕ್ಕಾಗಿ ಫಲ ಅನುಭವಿಸುತ್ತಿದ್ದಾರೆ. ಟೀಕೆಗಳ ಹೊರತಾಗಿಯೂ, ರಾಯುಡು ಮತ್ತೊಮ್ಮೆ ಕೊಹ್ಲಿ ಬಗ್ಗೆ ತಮ್ಮ ಉದಾಸೀನ ಭಾವ ವ್ಯಕ್ತಪಡಿಸಿದ್ದಾರೆ. ಮುಂಬರುವ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ (T20 World Cup) ಭಾರತೀಯ ಕ್ರಿಕೆಟ್ ತಂಡದ ಪರ ಕೊಹ್ಲಿ ಅತಿ ಹೆಚ್ಚು ರನ್ ಗಳಿಸುವುದಿಲ್ಲ ಎಂದು ಹೇಳಿದ್ದಾರೆ.

ಐಪಿಎಲ್ 2024 ರ ಸಮಯದಲ್ಲಿ ಕೊಹ್ಲಿ ಬಗ್ಗೆ ಕಳಪೆ ಹೇಳಿಕೆಗಳೊಂದಿಗೆ ವಿವಾದವನ್ನು ಹುಟ್ಟುಹಾಕಿದ ನಂತರ, ಭಾರತದ ಮಾಜಿ ಬ್ಯಾಟರ್​ ಜೂನ್ 2 ರಿಂದ ಪ್ರಾರಂಭವಾಗುವ ಟಿ 20 ವಿಶ್ವಕಪ್ 2024ನಲ್ಲಿಯೂ ಕೊಹ್ಲಿಯನ್ನು ಕಡೆಗಣಿಸುವ ಹೇಳಿಕೆ ನೀಡಿದ್ದಾರೆ.

ಕೊಹ್ಲಿ ಅಲ್ಲ ಎಂದ ಅಂಬಾಟಿ

ಯುಎಸ್ಎ ಮತ್ತು ಕೆರಿಬಿಯನ್​ನಲ್ಲಿ ನಡೆಯುವ ಪಂದ್ಯಾವಳಿಯಲ್ಲಿ ಸೂರ್ಯಕುಮಾರ್​ ಭಾರತ ಪರ ಅತಿ ಹೆಚ್ಚು ರನ್​ ಗಳಿಸಲಿದ್ದಾರೆ ಎಂದು ಹೇಳಿದ್ದಾರೆ. ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಅವರು 2024ರ ಟಿ 20 ವಿಶ್ವಕಪ್​​ನಲ್ಲಿ ಭಾರತದ ಪ್ರಭಾವಿ ಆಟಗಾರರು ಎಂದು ಹೇಳಿದ್ದಾರೆ. ಆದರೆ, ಕೊಹ್ಲಿ ಅಲ್ಲ ಎಂದಿದ್ದಾರೆ.

ರಾಯುಡು ತಮ್ಮ ಮಾಜಿ ಮುಂಬೈ ಇಂಡಿಯನ್ಸ್​ ಸಹ ಆಟಗಾರ ಮತ್ತು ಭಾರತ ತಂಡದ ನಾಯಕ ರೋಹಿತ್ ಅವರನ್ನು ತಮ್ಮ ಆದ್ಯತೆಯ ಆಯ್ಕೆ ಎಂದು ಹೆಸರಿಸಿದ್ದಾರೆ. ಈ ಮೆಗಾ ಈವೆಂಟ್​ನಲ್ಲಿ ರೋಹಿತ್ ಭಾರತದ ನಾಯಕನಾಗಿ ಮಿಂಚುತ್ತಾರೆ ಎಂದು ಅವರು ನಂಬಿದ್ದಾರೆ.

ಮುಂಬರುವ ಟಿ 20 ವಿಶ್ವಕಪ್ 2024 ರಲ್ಲಿ ಭಾರತಕ್ಕಾಗಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂದು ರಾಯುಡು ಹೆಸರಿಸಿದ್ದಾರೆ, ಪಂದ್ಯಾವಳಿಯ ಇತಿಹಾಸದಲ್ಲಿ ಭಾರತೀಯ ನಾಯಕ ಎಂದಿಗೂ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿಲ್ಲ.

ರಾಯುಡು ಅವರ ಆಯ್ಕೆಯು ಕೆಲವು ಅಭಿಮಾನಿಗಳನ್ನು ಕೆರಳಿಸಬಹುದು. ವಿಶೇಷವಾಗಿ ಕೊಹ್ಲಿಯನ್ನು ನಿರ್ಲಕ್ಷಿಸಿದ್ದಕ್ಕಾಗಿ ಪ್ರತಿಕ್ರಿಯೆ ಪಡೆಯಲಿದ್ದಾರೆ. ಕೊಹ್ಲಿ ಐಪಿಎಲ್ 2024 ರಲ್ಲಿ ರೆಡ್-ಹಾಟ್ ಫಾರ್ಮ್​ನಲ್ಲಿದ್ದರು. ಅವರ 742 ರನ್ ಬಾರಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದರು. ಆದರೆ ರೋಹಿತ್ ಆಡಿರಲಿಲ್ಲ.

ಟಿ 20 ವಿಶ್ವಕಪ್​ನಲ್ಲಿ ಕೊಹ್ಲಿಯ ಸಾಧನೆ


ಎಂಐ ಆರಂಭಿಕ ಆಟಗಾರ ರೋಹಿತ್​ ಐಪಿಎಲ್ 2024 ರಲ್ಲಿ 400 ಕ್ಕೂ ಹೆಚ್ಚು ರನ್ ಗಳಿಸಿದ್ದರು. ಆದರೆ ಅವರು ಋತುವಿನಾದ್ಯಂತ ಸರಿಯಾಗಿ ಆಡಿಲ್ಲ ಮತ್ತೊಂದೆಡೆ, ಕೊಹ್ಲಿ ಟಿ 20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದವರಾಗಿದ್ದಾರೆ, 27 ಪಂದ್ಯಗಳಲ್ಲಿ 1141 ರನ್, 81.50 ಪ್ರಭಾವಶಾಲಿ ಸರಾಸರಿ ಮತ್ತು 131.30 ಸ್ಟ್ರೈಕ್ ರೇಟ್ ಹೊಂದಿದ್ದರೆ.

ಇದನ್ನೂ ಓದಿ: T20 World Cup 2024 : ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಕ್ರಿಕೆಟಿಗರು ಈಗ ಎಲ್ಲಿದ್ದಾರೆ?

ಮಹೇಲ ಜಯವರ್ಧನೆ (1016) ಮತ್ತು ಕ್ರಿಸ್ ಗೇಲ್ (965) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದರೆ, ರೋಹಿತ್ 39 ಪಂದ್ಯಗಳಲ್ಲಿ 963 ರನ್ ಗಳಿಸಿ ಟಿ 20 ವಿಶ್ವಕಪ್ ನಲ್ಲಿ ನಾಲ್ಕನೇ ಅತಿ ಹೆಚ್ಚು ರನ್ ಗಳಿಸಿದವರಾಗಿದ್ದಾರೆ. 2022ರ ಟಿ20 ವಿಶ್ವಕಪ್​ನಲ್ಲಿ ಕೊಹ್ಲಿ 296 ರನ್ ಗಳಿಸುವ ಮೂಲಕ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದರು.

ಭಾರತ ತಂಡ ಜೂನ್ 5ರಂದು ನ್ಯೂಯಾರ್ಕ್​ನಲ್ಲಿ ಐರ್ಲೆಂಡ್ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದ್ದು, ಜೂನ್ 9ರಂದು ಪಾಕಿಸ್ತಾನ ವಿರುದ್ಧ ಸೆಣಸಲಿದೆ. ಮೆನ್ ಇನ್ ಬ್ಲೂ ಈಗಾಗಲೇ ಯುಎಸ್ಎಯಲ್ಲಿ ತರಬೇತಿಯನ್ನು ಪ್ರಾರಂಭಿಸಿದೆ, ಮತ್ತು ಜೂನ್ 1 ರಂದು ಬಾಂಗ್ಲಾದೇಶ ವಿರುದ್ಧದ ಏಕೈಕ ಅಭ್ಯಾಸ ಪಂದ್ಯಕ್ಕೆ ಮುಂಚಿತವಾಗಿ ಕೊಹ್ಲಿ ಶೀಘ್ರದಲ್ಲೇ ನ್ಯೂಯಾರ್ಕ್ನಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ.

Continue Reading

ಕ್ರೀಡೆ

T20 World Cup 2024 : ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಕ್ರಿಕೆಟಿಗರು ಈಗ ಎಲ್ಲಿದ್ದಾರೆ?

T20 World Cup : ಧೋನಿಗೂ ಹೊಸ ಅನುಭವಾಗಿತ್ತು. ಅಲ್ಲದೆ ಟೂರ್ನಿಗಾಗಿ ದಕ್ಷಿಣ ಆಫ್ರಿಕಾಕ್ಕೆ ಹೋಗಿದ್ದ ಭಾರತ ತಂಡಕ್ಕೆ ಕೋಚ್​​ ಕೂಡ ಇರಲಿಲ್ಲ. ಲಾಲ್ ಚಂದ್ ರಜಪೂತ್ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದು. ಆದರೂ ಭಾರತ ತಂಡ ಕಪ್​ ಗೆದ್ದಿತ್ತು. ಜೋಹಾನ್ಸ್ ಬರ್ಗ್ ನಲ್ಲಿ ನಡೆದ ಫೈನಲ್ ನಲ್ಲಿ ಪಾಕಿಸ್ತಾನವನ್ನು ಐದು ರನ್ ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿತ್ತು.

VISTARANEWS.COM


on

T20 World Cup
Koo

ಬೆಂಗಳೂರು: 2007ರಲ್ಲಿ ಎಂ.ಎಸ್.ಧೋನಿ ನಾಯಕತ್ವದಲ್ಲಿ ಭಾರತ ತಂಡ ಮೊದಲ ಬಾರಿಗೆ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿತ್ತು. ಸಚಿನ್ ತೆಂಡೂಲ್ಕರ್ ಸೇರಿದಂತೆ ಕೆಲವು ಹಿರಿಯ ಆಟಗಾರರು ಈ ಟೂರ್ನಿಯಲ್ಲಿ ಪಾಲ್ಗೊಂಡಿರಲಿಲ್ಲ. ಹೀಗಾಗಿ ಮೆನ್ ಇನ್ ಬ್ಲೂ ಅನನುಭವಿ ತಂಡವಾಗಿತ್ತು. ಅದೇ ರೀತಿ ಧೋನಿಗೂ ಹೊಸ ಅನುಭವಾಗಿತ್ತು. ಅಲ್ಲದೆ ಟೂರ್ನಿಗಾಗಿ ದಕ್ಷಿಣ ಆಫ್ರಿಕಾಕ್ಕೆ ಹೋಗಿದ್ದ ಭಾರತ ತಂಡಕ್ಕೆ ಕೋಚ್​​ ಕೂಡ ಇರಲಿಲ್ಲ. ಲಾಲ್ ಚಂದ್ ರಜಪೂತ್ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದು. ಆದರೂ ಭಾರತ ತಂಡ ಕಪ್​ ಗೆದ್ದಿತ್ತು. ಜೋಹಾನ್ಸ್ ಬರ್ಗ್ ನಲ್ಲಿ ನಡೆದ ಫೈನಲ್ ನಲ್ಲಿ ಪಾಕಿಸ್ತಾನವನ್ನು ಐದು ರನ್ ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿತ್ತು.

ವೆಸ್ಟ್ ಇಂಡೀಸ್ ಮತ್ತು ಯುಎಸ್ಎಯಲ್ಲಿ ಮುಂದಿನ ತಿಂಗಳು ನಡೆಯಲಿರುವ ಟಿ 20 ವಿಶ್ವಕಪ್ 2024 ರಲ್ಲಿ ಭಾರತವು ತನ್ನ ಎರಡನೇ ಪ್ರಶಸ್ತಿಯನ್ನು ಗೆಲ್ಲಲು ತಯಾರಿ ನಡೆಸುತ್ತಿತ್ತಿದೆ. ಈ ಹಿನ್ನೆಲೆಯಲ್ಲಿ ಉದ್ಘಾಟನಾ ಆವೃತ್ತಿಯಲ್ಲಿ ಆಡಿದ ಭಾರತ ತಂಡದ ಆಟಗಾರರ ಪ್ರದರ್ಶನ ಮತ್ತು ಅವರು ಈಗ ಏನು ಮಾಡುತ್ತಿದ್ದಾರೆ ಎಂಬುದನ್ನು ಗಮನಿಸೋಣ.

ಪಿಯೂಷ್​ ಚಾವ್ಲಾ

2007 ರ ಟಿ 20 ವಿಶ್ವಕಪ್​​ ನಿಯೋಗದಲ್ಲಿದ್ದು ಒಂದೇ ಒಂದು ಪಂದ್ಯವನ್ನು ಆಡಲು ಸಾಧ್ಯವಾಗದ ಏಕೈಕ ಆಟಗಾರ ಲೆಗ್-ಸ್ಪಿನ್ನರ್ ಪಿಯೂಷ್​ ಚಾವ್ಲಾ. ಚಾವ್ಲಾ 2011 ರಲ್ಲಿ ಭಾರತದ ಏಕದಿನ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು ಆದರೆ ಕೇವಲ ಮೂರು ಪಂದ್ಯಗಳನ್ನು ಆಡಿದ್ದರು. 35ರ ಹರೆಯದ ಚಾವ್ಲಾ ವೃತ್ತಿಪರ ಕ್ರಿಕೆಟ್​ನಲ್ಲಿದ್ದಾರೆ. ಐಪಿಎಲ್​ 2024 ರಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿದ್ದರು. 11 ಪಂದ್ಯಗಳಲ್ಲಿ 24ರ ಸರಾಸರಿಯಲ್ಲಿ 13 ವಿಕೆಟ್ ಪಡೆದಿದ್ದಾರೆ.

ಅಜಿತ್ ಅಗರ್ಕರ್​

ಅಗರ್ಕರ್ ಭಾರತೀಯ ತಂಡದಲ್ಲಿದ್ದ ಅತ್ಯಂತ ಅನುಭವಿ ವೇಗಿಯಾಗಿದ್ದರು. ಆದಾಗ್ಯೂ, ಅವರು ಕೇವಲ ಒಂದೆರಡು ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದರು ಮತ್ತು ಪಾಕಿಸ್ತಾನ ವಿರುದ್ಧ ಕೇವಲ ಒಂದು ವಿಕೆಟ್ ಪಡೆದಿದ್ದರು. ಮುಂಬೈ ಕ್ರಿಕೆಟಿಗ ಪ್ರಸ್ತುತ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಮುಖ್ಯ ಆಯ್ಕೆಗಾರರಾಗಿದ್ದಾರೆ.

ಯೂಸುಫ್ ಪಠಾಣ್​

ವಿನಾಶಕಾರಿ ಬಲಗೈ ಬ್ಯಾಟರ್​ ಯೂಸುಫ್​ ಪಠಾಣ್​ ಪಾಕಿಸ್ತಾನ ವಿರುದ್ಧದ ಫೈನಲ್​​ನಲ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ್ದರು. ಪಂದ್ಯದ ವೇಳೆ ಗಾಯಗೊಂಡ ವೀರೇಂದ್ರ ಸೆಹ್ವಾಗ್ ಬದಲಿಗೆ ಆಡಿದ ಅವರು ಎಂಟು ಎಸೆತಗಳಲ್ಲಿ 15 ರನ್ ಗಳಿಸಿದರು. ಫೆಬ್ರವರಿ 2021 ರಲ್ಲಿ ಎಲ್ಲಾ ರೀತಿಯ ಕ್ರಿಕೆಟ್​ನಿಂದ ನಿವೃತ್ತರಾಗಿದ್ದಾರೆ. ಯೂಸುಫ್ ಈ ವರ್ಷದ ಆರಂಭದಲ್ಲಿ ರಾಜಕೀಯಕ್ಕೆ ಕಾಲಿಟ್ಟದ್ದು, ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಬೆರ್ಹಾಂಪೋರ್ ಸ್ಥಾನದಿಂದ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.

ಇದನ್ನೂ ಓದಿ: T20 World Cup 2024: ಐನಾಕ್ಸ್‌ ದೈತ್ಯ ಪರದೆಯಲ್ಲೂ ಮೂಡಿಬರಲಿದೆ ಭಾರತದ ಪಂದ್ಯಗಳು

ದಿನೇಶ್ ಕಾರ್ತಿಕ್

ಧೋನಿ ವಿಕೆಟ್ ಕೀಪಿಂಗ್ ಗ್ಲೌಸ್ ಧರಿಸುತ್ತಿದ್ದ ಕಾರಣ ದಿನೇಶ್ ಕಾರ್ತಿಕ್ ಪಂದ್ಯಾವಳಿಯ ಮೊದಲಾರ್ಧದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿದ್ದರು. ಸ್ಪರ್ಧೆಯಲ್ಲಿ ಅವರ ಅತ್ಯಂತ ಸ್ಮರಣೀಯ ಕ್ಷಣವು ದಕ್ಷಿಣ ಆಫ್ರಿಕಾ ವಿರುದ್ಧ ಮೂಡಿ ಬಂತು ಅಲ್ಲಿ ಅವರು ಗ್ರೇಮ್ ಸ್ಮಿತ್ ಅವರನ್ನು ಔಟ್ ಮಾಡಲು ಅದ್ಭುತ ಡೈವಿಂಗ್ ಕ್ಯಾಚ್ ಪಡೆದಿದ್ದರು. ಇದು ಕ್ಯಾಚ್​ ಆಫ್​ದಿ ಟೂರ್ನಮೆಂಟ್ ಆಯಿತು. ಐಪಿಎಲ್ 2024 ರಲ್ಲಿ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿದ್ದು ಅವರಿಗದು ಕೊನೇ ಸೀಸನ್​. ಆದಾಗ್ಯೂ, ತಮಿಳುನಾಡು ಕ್ರಿಕೆಟಿಗ ಇನ್ನೂ ಅಧಿಕೃತವಾಗಿ ನಿವೃತ್ತಿ ಘೋಷಿಸಿಲ್ಲ. ಆದರೆ, ಕಾಮೆಂಟರಿ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಎಸ್ ಶ್ರೀಶಾಂತ್

ಎಸ್ ಶ್ರೀಶಾಂತ್ ಈ ವಿಶ್ವ ಕಪ್​​ನ ಏಳು ಪಂದ್ಯಗಳನ್ನು ಆಡಿದ್ದಾರೆ. 30.50 ಸರಾಸರಿ ಮತ್ತು 23 ಸ್ಟ್ರೈಕ್ ರೇಟ್​ನಲ್ಲಿ ಆರು ವಿಕೆಟ್​ ಪಡೆದಿದ್ದಾರೆ. ಕೇರಳದ ವೇಗದ ಬೌಲರ್ ಫೈನಲ್​​ನಲ್ಲಿ ಕೊನೆಯ ಓವರ್​ನಲ್ಲಿ ಮಿಸ್ಬಾ-ಉಲ್-ಹಕ್ ಅವರ ಪ್ರಮುಖ ಕ್ಯಾಚ್ ಪಡೆದು ಭಾರತಕ್ಕೆ ಪ್ರಶಸ್ತಿ ಗೆಲ್ಲಲು ಸಹಾಯ ಮಾಡಿದ್ದರು. 2013ರಲ್ಲಿ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಶ್ರೀಶಾಂತ್ ಆಜೀವ ನಿಷೇಧ ಎದುರಿಸಬೇಕಾಯಿತು. ನಂತರ ನಿಷೇಧವನ್ನು ಏಳು ವರ್ಷಗಳಿಗೆ ಇಳಿಸಲಾಯಿತು. ಹೀಗಾಗಿ ಅವರ ಕಕ್ರಿಕೆಟ್​ ವೃತ್ತಿ ಜೀವನ ಕಮರಿ ಹೋಯಿತು. ಅವರು 2021 ರಲ್ಲಿ ದೇಶೀಯ ಕ್ರಿಕೆಟ್​ಗೆ ಮರಳಿದರು ಮತ್ತು ಮುಂದಿನ ವರ್ಷ ನಿವೃತ್ತರಾದರು. ಇತ್ತೀಚೆಗೆ ಅವರು ವೀಕ್ಷಕ ವಿವರಣೆಗಾರ ಮತ್ತು ತಜ್ಞರಾಗಿ ಕೆಲಸ ಮಾಡುತ್ತಿದ್ದಾರೆ.

ಜೋಗಿಂದರ್ ಶರ್ಮಾ

ಬಲಗೈ ವೇಗಿ ಭಾರತ ತಂಡಕ್ಕೆ ಗೆಲುವು ತಂದುಕೊಟ್ಟವರು. ಫೈನಲ್​ನಲ್ಲಿ ಪಾಕಿಸ್ತಾನ ವಿರುದ್ಧ ಒತ್ತಡದ ಕೊನೆಯ ಓವರ್ ಎಸೆದಿದ್ದರು. ಮಿಸ್ಬಾ ಉಲ್ ಹಕ್ ವಿಕೆಟ್ ಪಡೆದು ಮಿಂಚಿದ್ದರು. ಜೋಗಿಂದರ್ ಹರಿಯಾಣ ಪೊಲೀಸ್ ಇಲಾಖೆಗೆ ಸೇರಿದ್ದಾರೆ ಪ್ರಸ್ತುತ ಅಂಬಾಲಾದ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಾರೆ.

ರಾಬಿನ್ ಉತ್ತಪ್ಪ

ರಾಬಿನ್ ಉತ್ತಪ್ಪ ಎಲ್ಲಾ ಏಳು ಪಂದ್ಯಗಳನ್ನು ಆಡಿದ್ದಾರೆ. ಆರು ಇನ್ನಿಂಗ್ಸ್​ಗಳಲಲ್ಲಿ 18.83 ಸರಾಸರಿ ಮತ್ತು 113 ಸ್ಟ್ರೈಕ್ ರೇಟ್​​ನಲ್ಲಿ 113 ರನ್ ಗಳಿಸಿದ್ದಾರೆ. ಅವರು ಗುಂಪು ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ನಿರ್ಣಾಯಕ ಅರ್ಧಶತಕ ಗಳಿಸಿದ್ದರು. ಉತ್ತಪ್ಪ ಸೆಪ್ಟೆಂಬರ್ 2022 ರಲ್ಲಿ ಕ್ರೀಡೆಗೆ ವಿದಾಯ ಹೇಳಿದ್ದಾರೆ. ಅಂದಿನಿಂದ ವೀಕ್ಷಕವಿವರಣೆಗಾರರಾಗಿ ಕೆಲಸ ಮಾಡುತ್ತಿದ್ದಾರೆ.

ಆರ್.ಪಿ.ಸಿಂಗ್

ಎಡಗೈ ವೇಗಿ 2007 ರ ಟಿ 20 ವಿಶ್ವಕಪ್​ನ ಭಾರತದ ಪರ ಪ್ರಮುಖ ವಿಕೆಟ್ ಪಡೆದ ಬೌಲರ್ ಆಗಿ ಹೊರಹೊಮ್ಮಿದ್ದಾರೆ. ಏಳು ಪಂದ್ಯಗಳಿಂದ 12.66 ಸರಾಸರಿ ಮತ್ತು 12 ಸ್ಟ್ರೈಕ್ ರೇಟ್ನೊಂದಿಗೆ 12 ವಿಕೆಟ್​​ ಪಡೆದಿದ್ದರು. ಪಂದ್ಯಾವಳಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಅವರು ಉಮರ್ ಗುಲ್ ನಂತರದ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ವೇಗಿ 13 ವಿಕೆಟ್ ಪಡೆದಿದ್ದರು. ಸೆಪ್ಟೆಂಬರ್ 2018 ರಲ್ಲಿ ಕ್ರಿಕೆಟ್​​ನಿಂದ ನಿವೃತ್ತರಾದ ನಂತರ ಆರ್​ಪಿ ಸಿಂಗ್ ಹಿಂದಿ ವೀಕ್ಷಕ ವಿವರಣೆ ನೀಡುತ್ತಿದ್ದಾರೆ.

ಇರ್ಫಾನ್ ಪಠಾಣ್

ಆಲ್​ರೌಂಡರ್​ ಬ್ಯಾಟಿಂಗ್​ನಲ್ಲಿ ಹೆಚ್ಚು ಪ್ರಭಾವ ಬೀರಲಿಲ್ಲ. ಆದರೆ ಚೆಂಡಿನೊಂದಿಗೆ ನಾಯಕ ಧೋನಿಗೆ ಉತ್ತಮ ಆಯ್ಕೆಯಾಗಿದ್ದರು. ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ನಿರ್ಣಾಯಕ ಮೂರು ವಿಕೆಟ್ ಸೇರಿದಂತೆ ಇರ್ಫಾನ್ ಆರು ಇನಿಂಗ್ಸ್​ಗಳಲ್ಲಿ 10 ವಿಕೆಟ್​ ಪಡೆದಿದ್ದರು. ಬರೋಡಾ ಕ್ರಿಕೆಟಿಗ 2020 ರಲ್ಲಿ ನಿವೃತ್ತರಾಗಿದ್ದಾರೆ. ಆದರೆ ಲೆಜೆಂಡ್ಸ್ ಲೀಗ್​​ನಲ್ಲಿ ಆಡುತ್ತಿದ್ದಾರೆ. ಅವರು ಅತ್ಯಂತ ಜನಪ್ರಿಯ ವಿಕ್ಷಕ ವಿವರಣೆಗಾರರಾಗಿದ್ದಾರೆ.

ರೋಹಿತ್ ಶರ್ಮಾ

ಪ್ರಸ್ತುತ ಭಾರತದ ನಾಯಕ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟಿ20 ಐ ಗೆ ಪಾದಾರ್ಪಣೆ ಮಾಡಿದ್ದರು. ಆದರೆ ಬ್ಯಾಟಿಂಗ್ ಮಾಡಲು ಸಾಧ್ಯವಾಗಿರಲಿಲ್ಲ. ತಮ್ಮ ಎರಡನೇ ಪ್ರದರ್ಶನದಲ್ಲಿ, ರೋಹಿತ್ ದಕ್ಷಿಣ ಆಫ್ರಿಕಾ ವಿರುದ್ಧ ಅಜೇಯ 40 ಎಸೆತಗಳಲ್ಲಿ ಅಜೇಯ 50 ರನ್ ಗಳಿಸಿ ಭಾರತಕ್ಕೆ 37 ರನ್​ಗಳ ಗೆಲುವು ತಂದುಕೊಟ್ಟರು. ಫೈನಲ್​​ಲ್ಲಿ ಮುಂಬೈ ಬ್ಯಾಟರ್​ 16 ಎಸೆತಗಳಲ್ಲಿ ಅಜೇಯ 30 ರನ್ ಗಳಿಸಿ ಭಾರತದ ಸ್ಕೋರ್​ 150 ರನ್ ಗಡಿ ದಾಟಲು ನೆರವಾಗಿದ್ದರು. ಮುಂಬರುವ ಟಿ 20 ವಿಶ್ವ ಕಪ್​ನಲ್ಲಿ ಅವರು ಭಾರತ ತಂಡದ ನೇತೃತ್ವ ವಹಿಸಿದ್ದಾರೆ.

ಹರ್ಭಜನ್ ಸಿಂಗ್

ಲೆಜೆಂಡರಿ ಆಫ್-ಸ್ಪಿನ್ನರ್ ಏಳು ಪಂದ್ಯಗಳಲ್ಲಿ ಏಳು ವಿಕೆಟ್​ ಪಡೆದಿದ್ದರು. ಅವರು 26 ಸರಾಸರಿ ಮತ್ತು 19.71 ಸ್ಟ್ರೈಕ್ ರೇಟ್ ನೊಂದಿಗೆ ಬೌಲಿಂಗ್ ಮಾಡಿದ್ದರು. ಅವರ ಎಕಾನಮಿ ರೇಟ್ 8 ಕ್ಕಿಂತ ಕಡಿಮೆ ಇತ್ತು. ಸ್ಪಿನ್ನರ್​ಗಳಿಗೆ ಅನುಕೂಲವಲ್ಲದ ಪಿಚ್​​ನಲ್ಲಿ ಉತ್ತಮ ಸಾಧನೆಯೇ ಆಗಿತ್ತು. ಹರ್ಭಜನ್ ಸಿಂಗ್ 2021 ರ ಡಿಸೆಂಬರ್​ನಲ್ಲಿ ನಿವೃತ್ತರಾದರು. ಹಿಂದಿ ಕಾಮೆಂಟರಿ ಸರ್ಕೀಟ್​ನ ಜನಪ್ರಿಯ ವ್ಯಕ್ತಿ. ಜತೆಗೆ ಆಪ್​ ಮೂಲಕ ರಾಜ್ಯಸಭೆಗೆ ಪ್ರವೇಶ ಮಾಡಿದ್ದಾರೆ.

ವೀರೇಂದ್ರ ಸೆಹ್ವಾಗ್

ಅಪ್ರತಿಮ ಆರಂಭಿಕ ಆಟಗಾರ ದೊಡ್ಡ ಸ್ಕೋರ್ ಮಾಡಲೇ ಇಲ್ಲ. ಆದರೆ ಕ್ಷಿಪ್ರ ಆರಂಭ ಕೊಟ್ಟಿದ್ದರು. ಐದು ಇನ್ನಿಂಗ್ಸ್ಗಳಲ್ಲಿ 26.60 ಸರಾಸರಿ ಮತ್ತು 138.54 ಸ್ಟ್ರೈಕ್ ರೇಟ್​​ನಲ್ಲಿ 133 ರನ್ ಗಳಿಸಿದ್ದಾರೆ. 2015 ರಲ್ಲಿ ಕ್ರಿಕೆಟ್ ವೃತ್ತಿಜೀವನಕ್ಕೆ ತೆರೆ ಎಳೆದ ನಂತರ, ಸೆಹ್ವಾಗ್ ವೀಕ್ಷಕ ವಿವರಣೆಗೆ ಹೆಸರುವಾಸಿಯಾಗಿದ್ದಾರೆ.

ಗೌತಮ್ ಗಂಭೀರ್

ಗೌತಮ್ ಗಂಭೀರ್ ಆರು ಇನಿಂಗ್ಸ್​ಗಳಲ್ಲಿ 37.83 ಸರಾಸರಿಯಲ್ಲಿ 129.71 ಸ್ಟ್ರೈಕ್ ರೇಟ್​​ನಲ್ಲಿ 227 ರನ್ ಗಳಿಸುವ ಮೂಲಕ ಟೂರ್ನಿಯಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದರು. ಫೈನಲ್ ಪಂದ್ಯದಲ್ಲಿ 54 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಿಡಿಸಿ 75 ರನ್ ಬಾರಿಸಿದ್ದರು. ಮಾರ್ಚ್ 2019ರಲ್ಲಿ ನಿವೃತ್ತರಾದರು. ಗಂಭೀರ್ ರಾಜಕೀಯಕ್ಕೆ ಸೇರುವ ಮೊದಲು ವೀಕ್ಷಕವಿವರಣೆಗಾರರಾಗಿ ಕೆಲಸ ಮಾಡಿದ್ದಾರೆ. ಈ ವರ್ಷದ ಆರಂಭದಲ್ಲಿ, ಅವರು ತಮ್ಮ ಕೋಚಿಂಗ್ ವೃತ್ತಿಜೀವನದ ಮೇಲೆ ಗಮನ ಹರಿಸಲು ರಾಜಕೀಯವನ್ನು ತೊರೆದಿದ್ದಾರೆ. 2024ರಲ್ಲಿ ಅವರು ಕೆಕೆಆರ್​ ತಂಡಕ್ಕೆ ಮಾರ್ಗದರ್ಶಕರ ಪಾತ್ರದಲ್ಲಿ ಟ್ರೋಫಿ ಗೆದ್ದುಕೊಟ್ಟಿದ್ದಾರೆ.

ಯುವರಾಜ್ ಸಿಂಗ್

2007 ಮತ್ತು 2011ರಲ್ಲಿ ಭಾರತ ವಿಶ್ವಕಪ್ ಗೆಲ್ಲುವಲ್ಲಿ ಯುವರಾಜ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದರು. ಲೆಜೆಂಡರಿ ಆಲ್​ರೌಂಡರ್​ ಐದು ಇನ್ನಿಂಗ್ಸ್ಗಳಿಂದ 29.60 ಸರಾಸರಿಯಲ್ಲಿ 148 ರನ್ ಗಳಿಸಿದ್ದಾರೆ. ಅವರ ಸ್ಟ್ರೈಕ್ ರೇಟ್ 194.73 ಆಗಿತ್ತು. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸ್ಟುವರ್ಟ್ ಬ್ರಾಡ್ ಅವರ ಒಂದೇ ಓವರ್​ನಲ್ಲಿ ಅವರು ಬಾರಿಸಿದ ಆರು ಸಿಕ್ಸರ್​ಗಳು ಯುವರಾಜ್ ಅವರ ವೃತ್ತಿಜೀವನದ ಪ್ರಮುಖ ಘಟನೆ. ಎಡಗೈ ಬ್ಯಾಟರ್​ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್​ನಲ್ಲಿ 30 ಎಸೆತಗಳಲ್ಲಿ 70 ರನ್ ಗಳಿಸಿದ್ದರು. ಪಂಜಾಬ್ ಕ್ರಿಕೆಟಿಗ 2024 ರ ಟಿ 20 ವಿಶ್ವಕಪ್​​ನ ರಾಯಭಾರಿಗಳಲ್ಲಿ ಒಬ್ಬರು. 42 ವರ್ಷದ ಆಟಗಾರ ಜೂನ್ 2019 ರಲ್ಲಿ ನಿವೃತ್ತರಾದರು. ಅವರು ಪಂಜಾಬ್​​ನ ಯುವ ಕ್ರಿಕೆಟಿಗರಾದ ಶುಭ್ಮನ್ ಗಿಲ್ ಮತ್ತು ಅಭಿಷೇಕ್ ಶರ್ಮಾ ಅವರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

ಎಂಎಸ್ ಧೋನಿ

ಪಂದ್ಯಾವಳಿಯುದ್ದಕ್ಕೂ ಧೋನಿ ಇಡೀ ತಂಡವನ್ನು ಒಂದು ಶಕ್ತಿಯಾಗಿ ರೂಪಿಸಿದವರು ಧೋನಿ. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಧೋನಿ 33 ಎಸೆತಗಳಲ್ಲಿ 45 ರನ್ ಬಾರಿಸಿದ್ದರು. ಸೆಮಿಫೈನಲ್ನಲ್ಲಿ ಆಸೀಸ್ ವಿರುದ್ಧ ಅವರು 18 ಎಸೆತಗಳಲ್ಲಿ 36 ರನ್ ಗಳಿಸಿದ್ದು ಕೂಡ ಪ್ರಭಾವಶಾಲಿ ಇನ್ನಿಂಗ್ಸ್ . 2014ರ ಡಿಸೆಂಬರ್​ನಲ್ಲಿ ಧೋನಿ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಆದಾಗ್ಯೂ, ಅವರು ಆಗಸ್ಟ್ 2020 ರವರೆಗೆ ಕಿರು ಸ್ವರೂಪಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. 42ರ ಹರೆಯದ ಧೋನಿ ಇತ್ತೀಚೆಗೆ ಐಪಿಎಲ್ 2024ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು.

Continue Reading
Advertisement
Neeraj Chopra
ಕ್ರೀಡೆ3 mins ago

Neeraj Chopra: 2 ತಿಂಗಳು ವಿದೇಶದಲ್ಲಿ ಕಠಿಣ ತರಬೇತಿ ಪಡೆಯಲಿದ್ದಾರೆ ನೀರಜ್ ಚೋಪ್ರಾ

Neha Gowda is pregnant the actress shared the good news
ಕಿರುತೆರೆ12 mins ago

Neha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿ ಗೊಂಬೆ-ಚಂದನ್‌ ದಂಪತಿ

Vastu Tips
ಧಾರ್ಮಿಕ12 mins ago

Vastu Tips: ಮನೆಯ ಯಾವ ಕೋಣೆಗೆ ಯಾವ ಬಣ್ಣ ಇದ್ದರೆ ನೆಮ್ಮದಿ ಸಿಗುತ್ತದೆ? ವಾಸ್ತು ಸಲಹೆ ಹೀಗಿದೆ

prajwal revanna case mobile
ಪ್ರಮುಖ ಸುದ್ದಿ13 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲ್‌ ಮಂಗಮಾಯ! ಏನಂತಾರೆ ಪ್ರಜ್ವಲ್ಲು?

LPG Price Cut
ವಾಣಿಜ್ಯ21 mins ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ ಇಳಿಕೆ

Paris Olympics 2024
ಕ್ರೀಡೆ27 mins ago

Paris Olympics 2024: ಒಲಿಂಪಿಕ್ಸ್‌ಗೆ‌ ಅರ್ಹತೆ ಪಡೆದ ಬಾಕ್ಸರ್ ನಿಶಾಂತ್ ದೇವ್

Dolly Dhananjay kotee distribution rights held by KRG Studios
ಸ್ಯಾಂಡಲ್ ವುಡ್31 mins ago

Dolly Dhananjay: ಕೆಆರ್​ಜಿ ಸ್ಟುಡಿಯೋಸ್ ಪಾಲಾದ ‘ಕೋಟಿ‌’ ವಿತರಣಾ ಹಕ್ಕು; ರಿಲೀಸ್‌ಗೆ ಕೌಂಟ್‌ ಡೌನ್!

bhavani revanna case
ಪ್ರಮುಖ ಸುದ್ದಿ55 mins ago

Bhavani Revanna: `ಮನೆಗೆ ಬನ್ನಿʼ ಎಂದ ಭವಾನಿ ರೇವಣ್ಣ ಮನೆಯಲ್ಲಿಲ್ಲ! ಹಾಗಾದ್ರೆ ಎಲ್ಲಿ?

KCET Result 2024
ಬೆಂಗಳೂರು55 mins ago

KCET Result 2024 : ಜೂನ್‌ ಮೊದಲ ವಾರ ಸಿಇಟಿ ಪರೀಕ್ಷೆ ಫಲಿತಾಂಶ ಖಚಿತ!

Heat Wave
ದೇಶ1 hour ago

Heat Wave: ಬಿಹಾರದಲ್ಲಿ ಬಿಸಿಲಾಘಾತ; ಶಾಖಕ್ಕೆ 10 ಮತಗಟ್ಟೆ ಸಿಬ್ಬಂದಿ ಸೇರಿ 14 ಮಂದಿ ಬಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌