ಅಡಿಲೇಡ್ : ಟಿ೨೦ ವಿಶ್ವ ಕಪ್ನ (T20 World Cup) ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮ ಟಾಸ್ ಸೋತಿದ್ದಾರೆ. ಟಾಸ್ ಗೆದ್ದಿರುವ ಎದುರಾಳಿ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ತಂಡ ಈ ಪಂದ್ಯದಲ್ಲಿ ಗೆದ್ದರೆ ಫೈನಲ್ಗೇರಲಿದ್ದು, ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಬೇಕಾಗುತ್ತದೆ.
ಟಾಸ್ ಸೋತ ಬಳಿಕ ಮಾತನಾಡಿದ ಭಾರತ ತಂಡದ ನಾಯಕ ರೋಹಿತ್ ಶರ್ಮ, ನಾವು ಟಾಸ್ ಗೆದ್ದಿದ್ದರೂ ಮೊದಲು ಬ್ಯಾಟ್ ಮಾಡಲು ಬಯಸಿದ್ದೆವು. ಟಾಸ್ ಸೋತರೂ ನಮಗೆ ಅದೇ ಅವಕಾಶ ಸಿಕ್ಕಿತು ಎಂದು ಹೇಳಿದ್ದಾರೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ರಿಷಭ್ ಪಂತ್ಗೆ ವಿಕೆಟ್ಕೀಪಿಂಗ್ ಹೊಣೆ ನೀಡಲಾಗಿದೆ. ಇಂಗ್ಲೆಂಡ್ ತಂಡದಲ್ಲಿ ಗಾಯದ ಸಮಸ್ಯೆಯಿಂದಾಗಿ ಎರಡು ಬದಲಾವಣೆ ಮಾಡಲಾಗಿದೆ. ಪ್ರಮುಖ ಬೌಲರ್ ಮಾರ್ಕ್ವುಡ್ ಹಾಗೂ ಸ್ಫೋಟಕ ಬ್ಯಾಟರ್ ಡೇವಿಡ್ ಮಲಾನ್ ತಂಡಕ್ಕೆ ಅಲಭ್ಯರಾಗಿದ್ದಾರೆ.
ತಂಡಗಳು
ಭಾರತ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಶ್ದೀಪ್ ಸಿಂಗ್.
ಇಂಗ್ಲೆಂಡ್: ಜಾಸ್ ಬಟ್ಲರ್ (ನಾಯಕ), ಅಲೆಕ್ಸ್ ಹೇಲ್ಸ್, ಫಿಪ್ ಸಾಲ್ಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್ಸ್ಟೋನ್, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್.
ಇದನ್ನೂ ಓದಿ | IND VS ENG | ಆಂಗ್ಲರನ್ನು ಸದೆಬಡಿದು ಫೈನಲ್ಗೆ ಎಂಟ್ರಿ ಕೊಟ್ಟೀತೇ ಟೀಮ್ ಇಂಡಿಯಾ?