ಧರ್ಮಶಾಲಾ: ಭಾರತ ವಿರುದ್ಧ ನಾಳೆಯಿಂದ ಧರ್ಮಶಾಲಾದಲ್ಲಿ ಆರಂಭಗೊಳ್ಳಲಿರುವ 5ನೇ ಹಾಗೂ ಅಂತಿಮ ಟೆಸ್ಟ್(IND vs ENG 5th Test) ಪಂದ್ಯಕ್ಕೆ ಪ್ರವಾಸಿ ಇಂಗ್ಲೆಂಡ್ ತನ್ನ ಆಡುವ ಬಳಗವನ್ನು ಪ್ರಕಟಿಸಿದೆ. ಒಂದು ಬದಲಾವಣೆ ಮಾಡಿದ್ದು, ಓಲಿ ರಾಬಿನ್ಸನ್(Ollie Robinson) ಬದಲಿಗೆ ಮಾರ್ಕ್ ವುಡ್(Mark Wood) ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಬೇರ್ಸ್ಟೊಗೂ 100ನೇ ಪಂದ್ಯ
5ನೇ ಟೆಸ್ಟ್ ಪಂದ್ಯ ಜಾನಿ ಬೇರ್ಸ್ಟೊ(Jonny Bairstow) ಮತ್ತು ರವಿಚಂದ್ರನ್ ಅಶ್ವಿನ್(Ravichandran Ashwin) ಅವರಿಗೆ ವಿಶೇಷ ಪಂದ್ಯವಾಗಲಿದೆ. ಉಭಯ ಆಟಗಾರರಿಗೂ ಇದು 100ನೇ ಟೆಸ್ಟ್ ಪಂದ್ಯವಾಗಿದೆ. ಹೊಡಿಬಡಿ ಆಟಕ್ಕೆ ಖ್ಯಾತಿ ಪಡೆದಿರುವ ಬೇರ್ಸ್ಟೊ ಈ ಬಾರಿ ತೀರಾ ಕಳಪೆ ಪ್ರದರ್ಶನ ತೋರಿದ್ದಾರೆ. ಭಾರತ ವಿರುದ್ಧ ಆಡಿದ 4 ಪಂದ್ಯಗಳಲ್ಲಿ ಕೇವಲ 21 ಸರಾಸರಿಯಲ್ಲಿ 170 ರನ್ ಮಾತ್ರ ಗಳಿಸಿದ್ದಾರೆ. ಅವರು ಇಂಗ್ಲೆಂಡ್ ವಿರುದ್ಧ 100ನೇ ಟೆಸ್ಟ್ ಆಡಿದ 17ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ. ಈ ಸ್ಮರಣೀಯ ಪಂದ್ಯದಲ್ಲಾದರೂ ಬೇರ್ಸ್ಟೊ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ತೋರುತ್ತಾರೋ ಎಂದು ಕಾದು ನೋಡಬೇಕಿದೆ. 99 ಟೆಸ್ಟ್‌ಗಳಲ್ಲಿ, ಬೈರ್‌ಸ್ಟೋ 36.42 ಸರಾಸರಿಯಲ್ಲಿ 12 ಶತಕ ಮತ್ತು 26 ಅರ್ಧಶತಕಗಳನ್ನು ಒಳಗೊಂಡಂತೆ 5974 ರನ್ ಗಳಿಸಿದ್ದಾರೆ.
We make one change for the final match of the series 🔁
— England Cricket (@englandcricket) March 6, 2024
🇮🇳 #INDvENG 🏴 | #EnglandCricket
ಇಂಗ್ಲೆಂಡ್ ಆಡುವ ಬಳಗ
ಝಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಜಾನಿ ಬೇರ್ಸ್ಟೊ, ಬೆನ್ ಸ್ಟೋಕ್ಸ್(ನಾಯಕ), ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಮಾರ್ಕ್ ವುಡ್, ಜೇಮ್ಸ್ ಆ್ಯಂಡರ್ಸನ್, ಶೋಯೆಬ್ ಬಶೀರ್.
ಪಂದ್ಯಕ್ಕೆ ಮಂಜಿನ ಕಾಟ
ಪಂದ್ಯ ನಡೆಯುವ ಹಿಮಾಚಲ ಪ್ರದೇಶದ ಧರ್ಮಶಾಲಾ(Dharamshala)ದಲ್ಲಿ ಭಾರಿ ಮಂಜಿನ ಮತ್ತು ಮಳೆಯ ಸಮಸ್ಯೆ ಎದುರಾಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಂದ್ಯದ ಸಮಯದಲ್ಲಿ ತಾಪಮಾನವು 1 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹೀಳಿದೆ. ಹೀಗಾಗಿ ಪಂದ್ಯ ನಡೆಯುವುದು ಅನುಮಾನ ಎನ್ನಲಾಗಿದೆ.
ಇದನ್ನೂ ಓದಿ ICC Test Rankings: ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರ 10ರೊಳಗೆ ಸ್ಥಾನ ಪಡೆದ ಜೈಸ್ವಾಲ್
ಇಲ್ಲಿ ನಡೆಯುತ್ತಿರುವ 2 ಟೆಸ್ಟ್ ಪಂದ್ಯ ಇದಾಗಿದೆ. ಇಲ್ಲಿ ಮೊದಲ ಟೆಸ್ಟ್ ನಡೆದದ್ದು 2017ರಲ್ಲಿ. ಭಾರತ-ಆಸ್ಟೇಲಿಯಾ ನಡುವೆ. ಹಿಮಾಲಯ ಶ್ರೇಣಿಯಲ್ಲಿ ತಲೆಯೆತ್ತಿ ನಿಂತಿರುವ ಈ ಸ್ಟೇಡಿಯಂ ಪ್ರಕೃತಿಗೆ ತೆರೆದುಕೊಂಡಿರುವುದರಿಂದ ಇಲ್ಲಿ ಸದಾ ಗಾಳಿ ಬೀಸುತ್ತಲೇ ಇರುತ್ತದೆ. ಈ ಕಾರಣಕ್ಕಾಗಿಯೇ ಇದು ಪೇಸ್ ಬೌಲಿಂಗ್ ಸ್ವರ್ಗವೆನಿಸಿದೆ.
ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂ (ಎಚ್‌ಪಿಸಿಎ) ಪ್ರಕೃತಿಯ ಅತ್ಯಂತ ರಮಣೀಯ ಸ್ಟೇಡಿಯಂ ಆಗಿದ್ದು, ಹಿಮಾಲಯ ಶ್ರೇಣಿಯಲ್ಲಿ ತಲೆಯೆತ್ತಿ ನಿಂತಿದೆ. ಸಮುದ್ರ ಮಟ್ಟದಿಂದ 1,317 ಮೀ. ಎತ್ತರದಲ್ಲಿದೆ. ಅಡಿಲೇಡ್ ಓವಲ್, ನ್ಯೂಲ್ಯಾಂಡ್ಸ್ ಸ್ಟೇಡಿಯಂಗಳಂತೆ ಇದು ಕೂಡ ಚಿತ್ರಸದೃಶವಾಗಿದೆ. 23 ಸಾವಿರದಷ್ಟು ವೀಕ್ಷಕರ ಸಾಮರ್ಥ್ಯ ಹೊಂದಿದೆ.