ಮೆಲ್ಬೋರ್ನ್ : ಇಂಗ್ಲೆಂಡ್ ತಂಡದ ಆಲ್‌ರೌಂಡರ್ ಸ್ಯಾಮ್ ಕರನ್ ಹಾಲಿ ಆವೃತ್ತಿಯ ಟಿ೨೦ ವಿಶ್ವ ಕಪ್ (T20 World Cup) ಟೂರ್ನಿಯ ಶ್ರೇಷ್ಠ ಆಟಗಾರ ಪ್ರಶಸ್ತಿ ಗೆದ್ದಿದ್ದಾರೆ. ಈ ಮೂಲಕ ಅವರು ವಿರಾಟ್ ಕೊಹ್ಲಿ ಮಾಡಿದ್ದ ದಾಖಲೆಯೊಂದನ್ನು ಮುರಿದಿದ್ದಾರೆ. ೨೪ ವರ್ಷದ ಸ್ಯಾಮ್ ಟಿ೨೦ ವಿಶ್ವ ಕಪ್‌ನಲ್ಲಿ ಟೂರ್ನಿಯ ಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದ ಕಿರಿಯ ಆಟಗಾರ ಎನಿಸಿಕೊಂಡಿದ್ದಾರೆ. ಇದರೊಂದಿಗೆ ಅವರು ೨೫ ವರ್ಷವಿದ್ದಾಗ ವಿರಾಟ್ ಕೊಹ್ಲಿ ಮಾಡಿದ್ದ ದಾಖಲೆಯನ್ನು ಮುರಿದಿದ್ದಾರೆ.
ಸ್ಯಾಮ್ ಅವರು ಹಾಲಿ ಆವೃತ್ತಿಯ ವಿಶ್ವ ಕಪ್‌ನಲ್ಲಿ ಆಡಿದ ಆರು ಪಂದ್ಯಗಳಿಂದ ೧೩ ವಿಕೆಟ್ ಕಬಳಿಸಿದ್ದಾರೆ. ಅದರಲ್ಲೂ ಫೈನಲ್ ಪಂದ್ಯದಲ್ಲಿ ತಮ್ಮ ೪ ಓವರ್‌ಗಳ ಸ್ಪೆಲ್‌ನಲ್ಲಿ ೧೨ ರನ್ ನೀಡಿ ೩ ವಿಕೆಟ್ ಕಬಳಿಸಿದ್ದರು. ಅಲ್ಲದೆ, ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಐದು ವಿಕೆಟ್ ಗೊಂಚಲು ಪಡೆಯುವ ಮೂಲಕ ಸಾಧನೆ ಮಾಡಿದ್ದರು.
ಸ್ಯಾಮ್ ಕರನ್‌ಗೆ ಟೂರ್ನಿಯ ಶ್ರೇಷ್ಠ ಆಟಗಾರ ಪ್ರಶಸ್ತಿ ಲಭಿಸಿರುವುದು ಭಾರತ ತಂಡದ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದೆ. ಕರನ್‌ಗೆ ಪ್ರಶಸ್ತಿ ನೀಡದೇ ಹೋಗಿದ್ದರೆ ೬ ಪಂದ್ಯಗಳಿಂದ ೨೯೬ ರನ್ ಬಾರಿಸಿದ್ದ ವಿರಾಟ್ ಕೊಹ್ಲಿಗೆ ಲಭಿಸುತ್ತಿತ್ತು ಎನ್ನಲಾಗಿದೆ.
ತಮ್ಮ ಈ ಪ್ರದರ್ಶನಕ್ಕೆ ಐಪಿಎಲ್ ಕಾರಣ ಎಂಬದಾಗಿ ಹೇಳಿದ್ದಾರೆ. ಐಪಿಎಲ್‌ನಲ್ಲಿ ನಾನು ಉತ್ತಮ ಪ್ರದರ್ಶನ ನೀಡುವ ಮೂಲಕ ಗುರುತಿಸಿಕೊಂಡೆ. ಅಲ್ಲಿ ಸಾಕಷ್ಟು ಕಲಿತೆ ಎಂಬುದಾಗಿ ಹೇಳಿದ್ದಾರೆ.
ಇದನ್ನೂ ಓದಿ | Virat Kohli | ಟಿ20 ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ; ಏನಿದು ನೂತನ ರೆಕಾರ್ಡ್?