T20 World Cup | ಅಘಫಾನಿಸ್ತಾನ ಬಳಗದ ವಿರುದ್ಧ ಇಂಗ್ಲೆಂಡ್‌ ತಂಡಕ್ಕೆ 5 ವಿಕೆಟ್‌ ಭರ್ಜರಿ ಜಯ - Vistara News

T20 ವಿಶ್ವಕಪ್

T20 World Cup | ಅಘಫಾನಿಸ್ತಾನ ಬಳಗದ ವಿರುದ್ಧ ಇಂಗ್ಲೆಂಡ್‌ ತಂಡಕ್ಕೆ 5 ವಿಕೆಟ್‌ ಭರ್ಜರಿ ಜಯ

ಟಿ20 ವಿಶ್ವ ಕಪ್‌ನ ಸೂಪರ್‌-12 ಹಂತದ ತನ್ನ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡ ಅಫಘಾನಿಸ್ತಾನ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿದೆ.

VISTARANEWS.COM


on

T20 world cup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪರ್ತ್‌ : ಸ್ಯಾಮ್‌ ಕರ್ರನ್‌ (೧೦ ರನ್‌ಗಳಿಗೆ ೫ ವಿಕೆಟ್‌) ಅವರ ಮಾರಕ ಬೌಲಿಂಗ್‌ ದಾಳಿಯ ನೆರವಿನೊಂದಿಗೆ ಮಿಂಚಿದ ಇಂಗ್ಲೆಂಡ್‌ ತಂಡ ಟಿ೨೦ ವಿಶ್ವ ಕಪ್‌ನ (T20 World Cup) ಗುಂಪು ೧ರ ತನ್ನ ಮೊದಲ ಪಂದ್ಯದಲ್ಲಿ ಅಫಘಾನಿಸ್ತಾನ ವಿರುದ್ಧ ೫ ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಇಂಗ್ಲೆಂಡ್ ಪರ ಬ್ಯಾಟಿಂಗ್‌ನಲ್ಲಿ ಲಿಯಾಮ್‌ ಲಿವಿಂಗ್‌ಸ್ಟನ್‌ ಅಜೇಯ ೨೯ ರನ್‌ ಬಾರಿಸಿದರು.

ಪರ್ತ್‌ ಸ್ಟೇಡಿಯಮ್‌ನಲ್ಲಿ ನಡೆದ ದಿನದ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್‌ ತಂಡ ಫೀಲ್ಡಿಂಗ್ ಅಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್‌ ಮಾಡಿದ ಅಫಘಾನಿಸ್ತಾನ ತಂಡ ೧೯.೪ ಓವರ್‌ಗಳಲ್ಲಿ ೧೧೨ ರನ್‌ಗಳಿಗೆ ಆಲ್‌ಔಟ್‌ ಆಯಿತು. ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ತಂಡ ೧೮.೧ ಓವರ್‌ಗಳಲ್ಲಿ ೫ ವಿಕೆಟ್‌ ನಷ್ಟಕ್ಕೆ ೧೧೩ ರನ್‌ ಬಾರಿಸಿ ವಿಜಯೋತ್ಸವ ಆಚರಿಸಿತು.

ಮೊದಲು ಬ್ಯಾಟ್‌ ಮಾಡಿದ ಆಫ್ಘನ್‌ ತಂಡ ಇಂಗ್ಲೆಂಡ್‌ ಬೌಲರ್‌ಗಳ ದಾಳಿಗೆ ತತ್ತರಿಸಿತು. ಆದಾಗ್ಯೂ ಇಬ್ರಾಹಿಮ್‌ ಜದ್ರಾನ್ (೩೨) ಹಾಗೂ ಉಸ್ಮಾನ್‌ ಘನಿ (೩೦) ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಆಧಾರವಾದರು. ಆದರೆ, ಉಳಿದ ಬ್ಯಾಟರ್‌ಗಳಿಂದ ಹೆಚ್ಚಿನ ನೆರವು ಲಭಿಸಲಿಲ್ಲ.

ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ತಂಡಕ್ಕೂ ಇಂಗ್ಲೆಂಡ್‌ ಬೌಲರ್‌ಗಳು ಬೆದರಿಕೆಯೊಡ್ಡಿದರು. ಆದರೆ, ಲಿವಿಂಗ್‌ಸ್ಟನ್‌ ತಂಡಕ್ಕೆ ಗೆಲುವು ತಂದುಕೊಟ್ಟರು.

ಸ್ಕೋರ್‌ ವಿವರ

ಅಫಘಾನಿಸ್ತಾನ : ೧೯.೪ ಓವರ್‌ಗಳಲ್ಲಿ ೧೧೨ (ಇಬ್ರಾಹಿಮ್‌ ಜದ್ರಾನ್‌ ೩೨, ಉಸ್ಮಾನ್‌ ಘನಿ ೩೦, ಸ್ಯಾಮ್‌ ಕರ್ರನ್‌ ೧೦ಕ್ಕೆ೫).

ಇಂಗ್ಲೆಂಡ್‌: ೧೮.೧ ಓವರ್‌ಗಳಲ್ಲಿ ೫ ವಿಕೆಟ್‌ಗೆ ೧೧೩ (ಲಿಯಾಮ್‌ ಲಿವಿಂಗ್‌ಸ್ಟನ್‌ ೨೯, ಅಲೆಕ್ಸ್‌ ಹೇಲ್ಸ್ ೧೯; ಮೊಹಮ್ಮದ್‌ ನಬಿ ೧೬ಕ್ಕೆ೧).

ಇದನ್ನೂ ಓದಿ | T20 World Cup | ಮೊದಲ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೆ 89 ರನ್‌ ಹೀನಾಯ ಸೋಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ಗೆ ಉಸೇನ್‌ ಬೋಲ್ಟ್ ಬ್ರ್ಯಾಂಡ್‌ ಅಂಬಾಸಿಡರ್

T20 World Cup 2024: ಜಮೈಕಾದ ಉಸೇನ್‌ ಬೋಲ್ಟ್(Usain Bolt) ಅವರನ್ನು ಐಸಿಸಿ ಪುರುಷರ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಬ್ರ್ಯಾಂಡ್‌ ಅಂಬಾಸಿಡರ್ ಆಗಿ ನೇಮಕಮಾಡಲಾಗಿದೆ.

VISTARANEWS.COM


on

T20 World Cup 2024
Koo

ದುಬೈ: ಖ್ಯಾತ ಸ್ಟ್ರಿಂಟರ್‌, 8 ಒಲಿಂಪಿಕ್​ ಚಿನ್ನದ ಪದಕ ವಿಜೇತ,​ ಜಮೈಕಾದ ಉಸೇನ್‌ ಬೋಲ್ಟ್(Usain Bolt) ಅವರನ್ನು ಐಸಿಸಿ ಪುರುಷರ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಬ್ರ್ಯಾಂಡ್‌ ಅಂಬಾಸಿಡರ್ ಆಗಿ ನೇಮಕಮಾಡಲಾಗಿದೆ. ವಿಶ್ವಕಪ್​ ಟೂರ್ನಿ ಜೂನ್​ 1ರಿಂದ 29ರ ತನಕ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿದೆ. ಒಟ್ಟು 55 ಪಂದ್ಯಗಳು ಇರಲಿದೆ.

‘ಕ್ರಿಕೆಟ್ ಜೀವನದ ಭಾಗವಾಗಿರುವ ಕೆರಿಬಿಯನ್‌ನಿಂದ ಬಂದಿರುವ ಈ ಕ್ರೀಡೆಯು ನನ್ನ ಹೃದಯದಲ್ಲಿ ಯಾವಾಗಲೂ ವಿಶೇಷ ಸ್ಥಾನವನ್ನು ಪಡೆದಿದೆ ಮತ್ತು ಅಂತಹ ಪ್ರತಿಷ್ಠಿತ ಪಂದ್ಯಾವಳಿಯ ಭಾಗವಾಗಿರಲು ನನಗೆ ಗೌರವವಿದೆ’ ಎಂದು ಬೋಲ್ಟ್ ಐಸಿಸಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ವಿಶ್ವಕಪ್‌ಗೆ ನನ್ನ ಶಕ್ತಿ ಮತ್ತು ಉತ್ಸಾಹವನ್ನು ತರಲು ಮತ್ತು ಜಾಗತಿಕವಾಗಿ ಕ್ರಿಕೆಟ್ ಬೆಳವಣಿಗೆಗೆ ಕೊಡುಗೆ ನೀಡಲು ನಾನು ಎದುರು ನೋಡುತ್ತಿದ್ದೇನೆ” ಎಂದಿ ಬೋಲ್ಟ್​ ಹೇಳಿದರು.

ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ; ರಣಜಿ ತಂಡ ಕಾಣಲ್ಲವೇ ಎಂದ ಮೋಹನ್‌ದಾಸ್‌ ಪೈ

ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ.
ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

Continue Reading

ಕ್ರಿಕೆಟ್

T20 World Cup 2024: ಟಿ20 ವಿಶ್ವಕಪ್​ಗೆ ಭಾರತ ತಂಡ ಪ್ರಕಟಿಸಲು ಮುಹೂರ್ತ ಫಿಕ್ಸ್‌​; ಈ ದಿನ ಘೋಷಣೆ

T20 World Cup 2024: ಸದ್ಯಕ್ಕೆ ಆರಂಭಿಕ ಸ್ಥಾನಕ್ಕೆ ಶುಭಮನ್​ ಗಿಲ್​, ಯಶಸ್ವಿ ಜೈಸ್ವಾಲ್​ ಮತ್ತು ಅಭಿಷೇಕ್​ ಶರ್ಮ, ಆಲ್​ರೌಂಡರ್​ ಕೋಟಾದಲ್ಲಿ ಶಿವಂ ದುಬೆ ಮತ್ತು ಹಾರ್ದಿಕ್​ ಪಾಂಡ್ಯ ನಡುವೆ ತೀವ್ರ ಪೈಪೋಟಿ ಇದೆ. ರೋಹಿತ್​ ಶರ್ಮ ಜತೆ ಕೊಹ್ಲಿ ಇನಿಂಗ್ಸ್​ ಆರಂಭಿಸಲಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ.

VISTARANEWS.COM


on

T20 World Cup 2024
Koo

ಮುಂಬಯಿ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್ ಜಂಟಿ ಆತಿಥ್ಯದಲ್ಲಿ ಜೂನ್​ 1 ರಿಂದ ಆರಂಭಗೊಳ್ಳಲಿರುವ ಐಸಿಸಿ ಟಿ20 ವಿಶ್ವಕಪ್​ ಟೂರ್ನಿಗೆ(T20 World Cup 2024) ತಂಡ ಪ್ರಕಟಿಸಲು ಮೇ 1 ಅಂತಿಮ ದಿನವಾಗಿದೆ. ಹೀಗಾಗಿ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ 20 ದೇಶಗಳು ಬಲಿಷ್ಠ ತಂಡವನ್ನು ರಚಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ. ಭಾರತ ತಂಡ(t20 world cup 2024 india squad) ಏಪ್ರಿಲ್ 28 ಅಥವಾ 29ರಂದು ಪ್ರಕಟಗೊಳ್ಳಲಿದೆ ಎಂದು ಕ್ರಿಕ್​ಇನ್ಫೋ ವರದಿ ಮಾಡಿದೆ.

ಏಪ್ರಿಲ್​ 27ರಂದು ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಐಪಿಎಲ್ ಪಂದ್ಯ ನಡೆಯಲಿದೆ. ಇದೇ ಸಂದರ್ಭದಲ್ಲಿ ಸಭೆ ನಡೆಯಲಿದ್ದು, ಬಳಿಕ ಟೀಮ್​ ಇಂಡಿಯಾ ನಾಯಕ ರೋಹಿತ್ ಶರ್ಮ ಮತ್ತು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಜತೆಗೂಡಿ ತಂಡವನ್ನು ಘೋಷಣೆ ಮಾಡಲಿದ್ದಾರೆ ಎಂದು ಕ್ರಿಕ್​ಇನ್ಫೋ ತಿಳಿಸಿದೆ.

ಕಳೆದ ವಾರ ಕೆಲ ಮಾಧ್ಯಗಳಲ್ಲಿ ವರದಿಯಾದ ಪ್ರಕಾರ ಯಾವುದೇ ಹೊಸ ಮುಖಗಳಿಗೆ ಮಣೆ ಹಾಕದಿರಲು ಬಿಸಿಸಿಐ ನಿರ್ಧರಿಸಿದೆ ಎಂದು ಹೇಳಲಾಗಿತ್ತು. ಹೀಗಾಗಿ ಹಿರಿಯ ಆಟಗಾರರಾದ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ, ಸೂರ್ಯಕುಮಾರ್​ ಯಾದವ್​, ರವೀಂದ್ರ ಜಡೇಜಾ, ಕುಲ್​ದೀಪ್​ ಯಾದವ್​ ಮೊಹಮ್ಮದ್​ ಸಿರಾಜ್​ ಜತೆ ಯುವ ಆಟಗಾರರಾದ ಅರ್ಶ್​ದೀಪ್​ ಸಿಂಗ್, ರಿಂಕು ಸಿಂಗ್​​ ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ.

ಸದ್ಯಕ್ಕೆ ಆರಂಭಿಕ ಸ್ಥಾನಕ್ಕೆ ಶುಭಮನ್​ ಗಿಲ್​, ಯಶಸ್ವಿ ಜೈಸ್ವಾಲ್​ ಮತ್ತು ಅಭಿಷೇಕ್​ ಶರ್ಮ, ಆಲ್​ರೌಂಡರ್​ ಕೋಟಾದಲ್ಲಿ ಶಿವಂ ದುಬೆ ಮತ್ತು ಹಾರ್ದಿಕ್​ ಪಾಂಡ್ಯ ನಡುವೆ ತೀವ್ರ ಪೈಪೋಟಿ ಇದೆ. ರೋಹಿತ್​ ಶರ್ಮ ಜತೆ ಕೊಹ್ಲಿ ಇನಿಂಗ್ಸ್​ ಆರಂಭಿಸಲಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ; ರಣಜಿ ತಂಡ ಕಾಣಲ್ಲವೇ ಎಂದ ಮೋಹನ್‌ದಾಸ್‌ ಪೈ

ರಿಷಭ್​ ಪಂತ್​ ಅವರು ಮೊದಲ ಆಯ್ಕೆಯ ವಿಕೆಟ್​ ಕೀಪರ್​ ಆಗಿದ್ದರೆ, 2ನೇ ಕೀಪರ್ ಆಯ್ಕೆಗೆ ಒಟ್ಟು 4 ಮಂದಿ ಆಟಗಾರರ ನಡುವೆ ತೀವ್ರ ಸ್ಪರ್ಧೆ ಇದೆ. ರಾಹುಲ್​, ಜಿತೇಶ್​ ಶರ್ಮ, ಇಶಾನ್​ ಕಿಶನ್​ ಮತ್ತು ಸಂಜು ಸ್ಯಾಮ್ಸನ್ ಇವರಲ್ಲಿ ಒಬ್ಬರು ಆಯ್ಕೆಯಾಗಬಹುದು. ಈ ಬಾರಿಯ ಐಪಿಎಲ್‌ನಲ್ಲಿ ಶರವೇಗದ ಎಸೆತಗಳ ಮೂಲಕ ಭಾರೀ ಸಂಚಲನ ಮೂಡಿಸಿದ ಲಕ್ನೋ ತಂಡದ ಮಾಯಾಂಕ್‌ ಯಾದವ್‌ ಮತ್ತು ಹರ್ಷಿತ್​ ರಾಣಾ ಮೀಸಲು ಬೌಲರ್​ಗಳಾಗಿ ತಂಡದೊಂದಿಗೆ ಪ್ರಯಾಣಿಸಬಹುದು. ರವಿಚಂದ್ರನ್ ಅಶ್ವಿನ್ ಮತ್ತು ಶ್ರೇಯಸ್​ ಅಯ್ಯರ್​ಗೆ ಸ್ಥಾನ ಸಿಗುವುದು ಬಹುತೇಕ ಡೌಟ್​ ಎನ್ನಲಾಗಿದೆ.

ಈಗಾಗಲೇ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ.

Continue Reading

T20 ವಿಶ್ವಕಪ್

T20 World Cup 2024: ಟಿ20 ವಿಶ್ವಕಪ್​ನಲ್ಲಿ ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ; ರಣಜಿ ತಂಡ ಕಾಣಲ್ಲವೇ ಎಂದ ಮೋಹನ್‌ದಾಸ್‌ ಪೈ

T20 World Cup 2024: ಕರ್ನಾಟಕದ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು, ಬಡವರಿಗೆ ವಿದ್ಯಾರ್ಥಿ ವೇತನಗಳಿಗೆ ಏಕೆ ಕೆಎಂಎಫ್‌ ಪ್ರಾಯೋಜಕತ್ವವನ್ನು ನೀಡಬಾರದು? ಕೆಎಂಎಫ್ ಕನ್ನಡಿಗ ತೆರಿಗೆದಾರರ ಹಣ, ಸಬ್ಸಿಡಿ ಮತ್ತು ಬಜೆಟ್‌ನಿಂದ ಧನಸಹಾಯವನ್ನು ಪಡೆದುಕೊಳ್ಳುತ್ತದೆ. ಆದರೆ, ಯಾರಿಗೂ ಗೊತ್ತಿಲ್ಲದ ವಿದೇಶಿ ತಂಡಗಳಿಗೆ ಖರ್ಚು ಮಾಡಲು ಹೊರಟಿದೆ” ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಈ ಬಗ್ಗೆ ಟ್ಯಾಗ್‌ ಮಾಡಿದ್ದಾರೆ.

VISTARANEWS.COM


on

T20 World Cup 2024 Mohandas Pai attack Karnataka Government regarding KMF Sponsorship
Koo

ಬೆಂಗಳೂರು: ವೆಸ್ಟ್​ ಇಂಡೀಸ್​ ಮತ್ತು ಅಮೆರಿಕ ಆತಿಥ್ಯದಲ್ಲಿ ಜೂನ್ 1 ರಿಂದ ಆರಂಭವಾಗಲಿರುವ ಪುರುಷರ ಟಿ20 ವಿಶ್ವಕಪ್​ ಟೂರ್ನಿಯಲ್ಲಿ (T20 World Cup 2024) ಕರ್ನಾಟಕ ಹಾಲು ಮಹಾ ಮಂಡಳಿ (KMF) 2 ತಂಡಗಳ ಪ್ರಾಯೋಜಕತ್ವವನ್ನು ಪಡೆದುಕೊಂಡಿದೆ. ಆದರೆ, ಇದಕ್ಕೆ ಅಪಸ್ವರ ಕೇಳಿಬಂದಿದ್ದು, ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದೆ. ಉದ್ಯಮಿ ಮೋಹನ್‌ದಾಸ್‌ ಪೈ (Mohandas Pai) ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕೆಎಂಎಫ್‌ಗೆ ಕರ್ನಾಟಕ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು ಕಾಣುವುದಿಲ್ಲವೇ? ಇವುಗಳಿಗೇಕೆ ಪ್ರಾಯೋಜಕತ್ವ ನೀಡಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ಕೆಎಂಎಫ್‌ನಿಂದ ವಿದೇಶಿ ಕ್ರಿಕೆಟ್ ತಂಡಗಳಿಗೆ ಪ್ರಾಯೊಜಕತ್ವ ಪಡೆದ ವಿಚಾರದ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋಹನ್‌ ದಾಸ್‌ ಪೈ, ಕರ್ನಾಟಕದ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು, ಬಡವರಿಗೆ ವಿದ್ಯಾರ್ಥಿ ವೇತನಗಳಿಗೆ ಏಕೆ ಕೆಎಂಎಫ್‌ ಪ್ರಾಯೋಜಕತ್ವವನ್ನು ನೀಡಬಾರದು? ಕೆಎಂಎಫ್ ಕನ್ನಡಿಗ ತೆರಿಗೆದಾರರ ಹಣ, ಸಬ್ಸಿಡಿ ಮತ್ತು ಬಜೆಟ್‌ನಿಂದ ಧನಸಹಾಯವನ್ನು ಪಡೆದುಕೊಳ್ಳುತ್ತದೆ. ಆದರೆ, ಯಾರಿಗೂ ಗೊತ್ತಿಲ್ಲದ ವಿದೇಶಿ ತಂಡಗಳಿಗೆ ಖರ್ಚು ಮಾಡಲು ಹೊರಟಿದೆ” ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಈ ಬಗ್ಗೆ ಟ್ಯಾಗ್‌ ಮಾಡಿದ್ದಾರೆ.

ಟಿ20 ವಿಶ್ವಕಪ್​ನಲ್ಲಿ 2 ತಂಡಗಳ ಪ್ರಾಯೋಜಕತ್ವ ಪಡೆದ ನಂದಿನಿ

ನಂದಿನಿ ಹೆಸರಿನಲ್ಲಿ ಡೈರಿ ಉತ್ಪನ್ನ ಮಾರಾಟ ಮಾಡುತ್ತಿರುವ ಕೆಎಂಎಫ್‌ ಟಿ20 ವಿಶ್ವಕಪ್​ನಲ್ಲಿ ಸ್ಕಾಟ್ಲೆಂಡ್ (Scotland) ಮತ್ತು ಐರ್ಲೆಂಡ್ (Ireland) ತಂಡಗಳ ಪ್ರಾಯೋಜಕತ್ವ ಪಡೆದಿದೆ. ಈ ಮೂಲಕ ಕೆಎಂಎಫ್‌ ಕ್ರಿಕೆಟ್‌ ಲೋಕಕ್ಕೆ ಕಾಲಿಟ್ಟು ನಂದಿನಿ(nandini milk) ಲೋಗೋವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡಲು ಮುಂದಾಗಿದೆ. ಜತೆಗೆ ಅಮೂಲ್‌ಗೆ ತೀವ್ರ ಪೈಪೋಟಿ ನೀಡಲಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ಒಪ್ಪಂದಕ್ಕೆ ಈಗಾಗಲೇ ಅಧಿಕೃತವಾಗಿ ಸಹಿ ಮಾಡಿದ್ದೇವೆ. ವಿಶ್ವಕಪ್‌ನಂತಹ ದೊಡ್ಡ ಟೂರ್ನಿಯಲ್ಲಿ ನಂದಿನಿ ಕಂಪೆನಿಯು ಪ್ರಾಯೋಜಕತ್ವ ಪಡೆದಿರುವುದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದರು.

ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳ ಎಡಗೈ ಮೇಲೆ ನಂದಿನಿ ಲೋಗೋ ಕಾಣಿಸಿಕೊಳ್ಳಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಇದನ್ನೂ ಓದಿ T20 World Cup: ಟಿ20 ವಿಶ್ವಕಪ್​ನಲ್ಲಿ ಈ ಆಟಗಾರರಿಗೆ ಅವಕಾಶ ಸಿಗುವುದು ಡೌಟ್​

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಏಪ್ರಿಲ್​ ಕೊನೆಯ ವಾರದಲ್ಲಿ ಭಾರತ ತಂಡ ಪ್ರಕಟಗೊಳ್ಳುವ ನಿರೀಕ್ಷೆ ಇದೆ.

ತಲಾ 2 ಅಭ್ಯಾಸ ಪಂದ್ಯ


ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

Continue Reading

ಕ್ರಿಕೆಟ್

Dinesh Karthik: ಟಿ20 ವಿಶ್ವಕಪ್​ ಆಡುವ ಇಂಗಿತ ವ್ಯಕ್ತಪಡಿಸಿದ ದಿನೇಶ್​ ಕಾರ್ತಿಕ್

Dinesh Karthik: ಕೆಕೆಆರ್​ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರ್ತಿಕ್​, ‘ಟೀಮ್​ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ನಾಯಕ ರೋಹಿತ್ ಶರ್ಮಾ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್​ ಏನೇ ನಿರ್ಧಾರ ಕೈಗೊಂಡರೂ ನಾನು ಗೌರವಿಸುತ್ತೇನೆ. ಒಂದೊಮ್ಮೆ ಟಿ20 ಆಡುವ ಅವಕಾಶ ಸಿಕ್ಕರೆ ಖಂಡಿತವಾಗಿಯೂ ಶ್ರೇಷ್ಠ ಪ್ರದರ್ಶನ ನೀಡುವ ವಿಶ್ವಾಸ ನನ್ನಲ್ಲಿದೆ. ಅವಕಾಶ ಸಿಕ್ಕದಿದ್ದರೂ ಬೇಸರವಿಲ್ಲ ಎಂದರು.

VISTARANEWS.COM


on

Dinesh Karthik
Koo

ಬೆಂಗಳೂರು: ಈ ಬಾರಿಯ ಐಪಿಎಲ್‌ನಲ್ಲಿ(IPL 2024) ಪ್ರಚಂಡ ಬ್ಯಾಟಿಂಗ್‌ ಪ್ರದರ್ಶಿಸುವ ಮೂಲಕ ಸುದ್ದಿಯಾಗುತ್ತಿರುವ ಆರ್​ಸಿಬಿ ತಂಡದ ಹಿರಿಯ ಆಟಗಾರ ದಿನೇಶ್​ ಕಾರ್ತಿಕ್​(Dinesh Karthik) ಅವರಿಗೆ ಈಗಾಗಲೇ ಅನೇಕ ದಿಗ್ಗಜ ಕ್ರಿಕೆಟಿಗರು ಇದೇ ಜೂನ್​ನಲ್ಲಿ ನಡೆಯುವ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಭಾರತ ಪರ ಆಡುವ ಅವಕಾಶ ನೀಡಬೇಕೆಂದು ಹೇಳಿದ್ದರು. ಇದೀಗ ಕಾರ್ತಿಕ್​ ಅವರೇ ಸ್ವತಃ ವಿಶ್ವಕಪ್​ ಆಡಬೇಕೆಂಬ ಇಂಗಿತ ವ್ಯಕ್ತಪಡಿಸಿದ್ದಾರೆ. ಅವಕಾಶ ಸಿಕ್ಕರೆ ಶೇ.100ಕ್ಕೆ 100ರಷ್ಟು ಆಡುವೆ. ಜೀವನದ ಈ ಹಂತದಲ್ಲಿ ನಾನು ಅಂತಹದೊಂದು ಅವಕಾಶಕ್ಕಾಗಿ ಎದುರು ನೋಡುತ್ತಿರುವೆ ಎಂದು ಹೇಳಿದರು.

“ವಿದಾಯದ ಅಂಜಿನಲ್ಲಿರುವ ಕಾಲಘಟ್ಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವುದು ಖಂಡಿತವಾಗಿಯೂ ನನ್ನ ಪಾಲಿನ ಹೆಮ್ಮೆ ಎನಿಸಲಿದೆ. ಟಿ20 ವಿಶ್ವಕಪ್‌ನಲ್ಲಿ ಭಾರತದ ಪರ ಆಡುವುದಕ್ಕಿಂತ ಮಿಗಿಲಾದ ಸಂಗತಿ ನನ್ನ ಬದುಕಿನಲ್ಲಿಲ್ಲ” ಎಂಬುದಾಗಿ ಕಾರ್ತಿಕ್‌ ಹೇಳಿದ್ದಾರೆ.

ಕೆಕೆಆರ್​ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರ್ತಿಕ್​, ‘ಟೀಮ್​ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ನಾಯಕ ರೋಹಿತ್ ಶರ್ಮಾ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್​ ಏನೇ ನಿರ್ಧಾರ ಕೈಗೊಂಡರೂ ನಾನು ಗೌರವಿಸುತ್ತೇನೆ. ಒಂದೊಮ್ಮೆ ಟಿ20 ಆಡುವ ಅವಕಾಶ ಸಿಕ್ಕರೆ ಖಂಡಿತವಾಗಿಯೂ ಶ್ರೇಷ್ಠ ಪ್ರದರ್ಶನ ನೀಡುವ ವಿಶ್ವಾಸ ನನ್ನಲ್ಲಿದೆ. ಅವಕಾಶ ಸಿಕ್ಕದಿದ್ದರೂ ಬೇಸರವಿಲ್ಲ ಎಂದರು.

ಇದನ್ನೂ ಓದಿ IPL 2024: ಇಂದು ಐಪಿಎಲ್​ನಲ್ಲಿ 2 ಪಂದ್ಯ; ಆರ್​ಸಿಬಿ-ಕೆಕೆಆರ್​ ಮೊದಲ ಮುಖಾಮುಖಿ

2022ರ ಹರಾಜಿನಲ್ಲಿ ಕಾರ್ತಿಕ್​ ಅವರು ಬರೋಬ್ಬರಿ 5.5 ಕೋಟಿ ರೂ. ಪಡೆದು ಆರ್​ಸಿಬಿ ಕ್ಯಾಂಪ್ ಸೇರಿದ್ದರು. ಆ ಆವೃತ್ತಿಯಲ್ಲಿ ಕಾರ್ತಿಕ್ 14 ಇನ್ನಿಂಗ್ಸ್ ಗಳಲ್ಲಿ 287 ರನ್ ಬಾರಿಸಿದ್ದರು. ಜತೆಗೆ ತಂಡದಲ್ಲಿ ಫಿನಿಶರ್ ಪಾತ್ರವನ್ನು ನಿರ್ವಹಿಸಿದ್ದರು. ಇದೇ ಪ್ರದರ್ಶನ ಕಂಡು 2022ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ ಅಚ್ಚರಿ ಎಂಬಂತೆ ಕಾರ್ತಿಗೆ ಅವಕಾಶ ನೀಡಲಾಗಿತ್ತು. ಆದರೆ ಅಲ್ಲಿ ನಿರೀಕ್ಷಿತಮಟ್ಟದ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದರು.

250ನೇ ಐಪಿಎಲ್​ ಪಂದ್ಯವನ್ನಾಡಲು ಸಜ್ಜು


ಇಂದು ನಡೆಯುವ ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ದಿನೇಶ್​ ಕಾರ್ತಿಕ್​ ಅವರು 250ನೇ ಐಪಿಎಲ್​ ಪಂದ್ಯವನ್ನಾಡಿದ ಸಾಧನೆ ಮಾಡಲಿದ್ದಾರೆ. ಈ ಸಾಧನೆ ಮಾಡಿದ ಮೂರನೇ ಆಟಗಾರ ಎಂಬ ಹಿರಿಮೆಗೂ ಪಾತ್ರರಾಗಲಿದ್ದಾರೆ. ಧೋನಿ ಮತ್ತು ರೋಹಿತ್​ ಮೊದಲಿಗರು. 249* ಪಂದ್ಯಗಳನ್ನು ಆಡಿರುವ ದಿನೇಶ್​ ಕಾರ್ತಿಕ್ 4742 ರನ್​ ಬಾರಿಸಿದ್ದಾರೆ. 22 ಅರ್ಧಶತಕ ಗಳಿಸಿದ್ದಾರೆ. 97 ರನ್​ ಗರಿಷ್ಠ ಮೊತ್ತವಾಗಿದೆ.

Continue Reading
Advertisement
Madhavi Latha
Lok Sabha Election 20249 mins ago

Kompella Madhavi Latha: ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಆಸ್ತಿ ಎಷ್ಟಿದೆ ನೋಡಿ!

Tamannaah Bhatia Summoned in Illegal IPL Streaming Case
South Cinema12 mins ago

Tamannaah Bhatia: ಐಪಿಎಲ್ ಸ್ಟ್ರೀಮಿಂಗ್ ಪ್ರಕರಣ; ನಟಿ ತಮನ್ನಾಗೆ ಸಮನ್ಸ್‌!

Kotak Bank
ದೇಶ21 mins ago

Kotak Bank: ಆರ್‌ಬಿಐ ನಿರ್ಬಂಧದ ಬೆನ್ನಲ್ಲೇ ಕೊಟಕ್‌ ಬ್ಯಾಂಕ್‌ ಷೇರು ಭಾರಿ ಕುಸಿತ; ಹೂಡಿಕೆದಾರರಿಗೆ ನಷ್ಟ!

Samsung India launched the 2nd edition of Samsung Innovation Campus
ದೇಶ29 mins ago

Samsung: ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ 2ನೇ ಆವೃತ್ತಿ ಪ್ರಾರಂಭಿಸಿದ ಸ್ಯಾಮ್‌ಸಂಗ್ ಇಂಡಿಯಾ

physical abuse women
ಬೆಂಗಳೂರು30 mins ago

Physical abuse : ಬೆಂಗಳೂರಲ್ಲಿ ಯುವತಿ ಕಿಡ್ನ್ಯಾಪ್; ಐವರು ಕಾಮುಕರಿಂದ ಅತ್ಯಾಚಾರ

Voter ID
Lok Sabha Election 202434 mins ago

Voter ID: ವೋಟರ್‌ ಐಡಿ ಕಾರ್ಡ್‌ ಸಿಕ್ಕಿಲ್ಲವೆ? ಡೋಂಟ್‌ ವರಿ. ಈ 12 ದಾಖಲೆಗಳಲ್ಲಿ ಒಂದಿದ್ದರೆ ಸಾಕು!

sahakara nagar robbery case
ಕ್ರೈಂ37 mins ago

Robbery Case: ಮನೆ ಮಾಲೀಕರಿಗೆ ಪಿಸ್ತೂಲ್ ತೋರಿಸಿ 40 ಲಕ್ಷ ರೂ. ದರೋಡೆ

Kiara Advani Joins Salaar 2
ಟಾಲಿವುಡ್46 mins ago

Kiara Advani: ಪ್ರಭಾಸ್ ನಟನೆಯ ʻಸಲಾರ್ 2ʼ ಸಿನಿಮಾದಲ್ಲಿ ಕಿಯಾರಾ ಆಡ್ವಾಣಿ?

IPL 2024
ಕ್ರೀಡೆ1 hour ago

IPL 2024: ಧೋನಿ, ಚೆನ್ನೈ ಪಂದ್ಯ ನೋಡಲು ದೆಹಲಿ ವರೆಗೂ ನಡೆದುಕೊಂಡು ಹೋಗುವೆ ಎಂದ ಶತಾಯುಷಿ ಅಭಿಮಾನಿ; ವಿಡಿಯೊ ವೈರಲ್​

Break Up
ದೇಶ1 hour ago

ಇದ್ದರೂ ಜತೆಗೆ, ಸತ್ತರೂ ಜತೆಗೆ; ಅಪಘಾತದಲ್ಲಿ ಪತ್ನಿ ಸಾವು, ನೊಂದ ಪತಿ ನೇಣಿಗೆ ಶರಣು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ5 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20245 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌