T20 World Cup | ಪಾಕಿಸ್ತಾನ ತಂಡವನ್ನು ಮಣಿಸಿದ ಇಂಗ್ಲೆಂಡ್‌ ಟಿ20 ವಿಶ್ವ ಚಾಂಪಿಯನ್‌ - Vistara News

T20 ವಿಶ್ವಕಪ್

T20 World Cup | ಪಾಕಿಸ್ತಾನ ತಂಡವನ್ನು ಮಣಿಸಿದ ಇಂಗ್ಲೆಂಡ್‌ ಟಿ20 ವಿಶ್ವ ಚಾಂಪಿಯನ್‌

ಪಾಕಿಸ್ತಾನ ತಂಡವನ್ನು ಫೈನಲ್‌ನಲ್ಲಿ ಬಗ್ಗುಬಡಿದ ಇಂಗ್ಲೆಂಡ್‌ ತಂಡ ಟಿ20 ವಿಶ್ವ ಕಪ್‌ ಟ್ರೋಫಿ ತನ್ನದಾಗಿಸಿಕೊಂಡಿತು.

VISTARANEWS.COM


on

t20 world cup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೆಲ್ಬೋರ್ನ್‌ : ಫೈನಲ್‌ ಹಣಾಹಣಿಯಲ್ಲಿ ಪಾಕಿಸ್ತಾನ ವಿರುದ್ಧ ೫ ವಿಕೆಟ್‌ಗಳ ಗೆಲುವು ಸಾಧಿಸಿದ ಇಂಗ್ಲೆಂಡ್‌ ತಂಡ ಟಿ೨೦ ವಿಶ್ವ ಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಆಂಗ್ಲರ ಪಡೆಗೆ ಇದು ಎರಡನೇ ಚುಟುಕು ಕ್ರಿಕೆಟ್‌ನ ವಿಶ್ವ ಕಪ್‌ ಆಗಿದ್ದು, ಈ ಹಿಂದೆ ೨೦೧೦ರಲ್ಲಿ ಇಂಗ್ಲೆಂಡ್‌ ತಂಡ ಚಾಂಪಿಯನ್‌ಪಟ್ಟ ಅಲಂಕರಿಸಿತ್ತು. ಅದೇ ರೀತಿ ೧೨ ವರ್ಷಗಳ ಅವಧಿಯಲ್ಲಿ ಮೂರನೇ ವಿಶ್ವ ಕಪ್‌ ಟ್ರೋಫಿ ಗೆದ್ದಂತಾಗಿದೆ. ೨೦೧೯ರಲ್ಲಿ ಇಯಾನ್‌ ಮಾರ್ಗನ್‌ ನೇತೃತ್ವದ ಇಂಗ್ಲೆಂಡ್ ತಂಡ ಏಕ ದಿನ ವಿಶ್ವ ಕಪ್‌ ಗೆದ್ದಿತ್ತು. ಹಾಲಿ ನಾಯಕ ಜೋಸ್‌ ಬಟ್ಲರ್‌ಗೆ ಚೊಚ್ಚಲ ನಾಯಕತ್ವದಲ್ಲೇ ವಿಶ್ವ ಕಪ್‌ ಲಭಿಸಿದ್ದು, ಈ ಮೂಲಕವೂ ಅವರು ದಾಖಲೆ ಮಾಡಿದ್ದರು.

ಮೆಲ್ಬೋರ್ನ್‌ ಕ್ರಿಕೆಟ್‌ ಗ್ರೌಂಡ್‌ನಲ್ಲಿ ಭಾನುವಾರ ನಡೆದ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌ ತಂಡದ ನಾಯಕ ಜೋಸ್‌ ಬಟ್ಲರ್‌ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರೆ, ಮೊದಲು ಬ್ಯಾಟ್‌ ಮಾಡಿದ ಪಾಕಿಸ್ತಾನ ತಂಡ ನಿಗದಿತ ೨೦ ಓವರ್‌ಗಳಲ್ಲಿ ೮ ವಿಕೆಟ್‌ಗೆ ೧೩೭ ರನ್ ಬಾರಿಸಿತು. ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಇನ್ನೂ ಒಂದು ಓವರ್‌ ಬಾಕಿ ಇರುವಂತೆಯೇ ೫ ವಿಕೆಟ್‌ ನಷ್ಟಕ್ಕೆ ೧೩೮ ರನ್‌ ಬಾರಿಸಿ ಜಯಶಾಲಿಯಾಯಿತು.

ಸಣ್ಣ ಮೊತ್ತದ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ತಂಡ ಅಲೆಕ್ಸ್ ಹೇಲ್ಸ್‌ (೧) ಅವರ ವಿಕೆಟ್‌ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತಕ್ಕೆ ಒಳಗಾಯಿತು. ಬಟ್ಲರ್‌ ಕೂಡ (೨೬) ಬೇಗ ವಿಕೆಟ್ ಒಪ್ಪಿಸಿದರು. ಫಿಲ್ ಸಾಲ್ಟ್‌(೧೦), ಹ್ಯಾರಿ ಬ್ರೂಕ್‌ (೨೦) ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಈ ವೇಳೆ ಆಲ್‌ರೌಂಡರ್‌ ಬೆನ್‌ ಸ್ಟೋಕ್ಸ್‌ (೫೨*) ತಂಡವನ್ನು ಕಾಪಾಡಿದರು. ಮೊಯೀನ್‌ ಅಲಿ ೧೯ ರನ್ ಕೊಡುಗೆ ಕೊಟ್ಟರು.

ಪಾಕ್​ಗೆ ಆರಂಭಿಕ ಆಘಾತ

ನ್ಯೂಜಿಲೆಂಡ್​ ವಿರುದ್ಧದ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್​ ಮೂಲಕ ಅರ್ಧಶತಕ ಸಿಡಿಸಿ ಮಿಂಚಿದ್ದ ಆರಂಭಿಕ ಆಟಗಾರ ಮೊಹಮ್ಮದ್​ ರಿಜ್ವಾನ್​ ಈ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಎಡವಿದರು. ಕೇವಲ 15 ರನ್​ಗೆ ಆಟ ಮುಗಿಸಿದರು. ಈ ವಿಕೆಟ್​ ಪತನದ ಬಳಿಕ ಆಡಲಿಳಿದ ಮೊಹಮ್ಮದ್​ ಹ್ಯಾರಿಸ್(8)​ ಕೂಡ ಹೆಚ್ಚು ಹೊತ್ತು ಕ್ರೀಸ್​ ಆಕ್ರಮಿಸಲು ವಿಫಲರಾದರು. ತಂಡದ ಮೊತ್ತ 50ರ ಗಡಿ ದಾಟುವ ಮೊದಲೇ ಪ್ರಮುಖ ಎರಡು ವಿಕೆಟ್​ ಕಳೆದುಕೊಂಡು ಪಾಕ್​ ಆರಂಭಿಕ ಆಘಾತಕ್ಕೆ ಸಿಲುಕಿತು.

ಆರಂಭಿಕ ಎರಡು ವಿಕೆಟ್​ ಕಳೆದು ಕೊಂಡು ಸಂಕಷ್ಟಕ್ಕೆ ಸಿಲುಕಿದ ಪಾಕಿಸ್ತಾನ ತಂಡಕ್ಕೆ ನೆರವಾದದ್ದು ನಾಯಕ ಬಾಬರ್​ ಅಜಂ. ತಾಳ್ಮೆಯುತ ಬ್ಯಾಟಿಂಗ್​ ಮೂಲಕ ತಂಡದ ಮೊತ್ತವನ್ನು ಹಿಗ್ಗಿಸುವ ಪ್ರಯತ್ನ ಮಾಡಿದರು. ಆದರೆ ಇವರ ಆಟವೂ ಹೆಚ್ಚು ಕಾಲ ನಡೆಯಲಿಲ್ಲ. ಆದಿಲ್​ ರಶೀದ್​ ಅವರ ಎಸೆತವನ್ನು ಲಾಂಗ್​ ಆನ್​ ಕಡೆಗೆ ಬಾರಿಸುವ ಯತ್ನದಲ್ಲಿ ಬೆನ್​ ಸ್ಟೋಕ್ಸ್​ಗೆ ಕ್ಯಾಚ್​ ನೀಡಿ ಔಟಾದರು. ಅವರ ಗಳಿಕೆ 32 ರನ್​ಗೆ ಕೊನೆಕೊಂಡಿತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್​ ನಡೆಸಿದ ಶಾನ್​ ಮಸೂದ್​(38) ಮತ್ತು ಶಾದಾಬ್​ ಖಾನ್​(20) ಸಾಹಸದಿಂದ ತಂಡ ಸ್ಪರ್ಧಾತ್ಮಕ ಮೊತ್ತ ಗಳಿಸಿತು.

ಸಂಕ್ಷಿಪ್ತ ಸ್ಕೋರ್​

ಪಾಕಿಸ್ತಾನ: 20 ಓವರ್​ಗಳಲ್ಲಿ 8 ವಿಕೆಟ್​ಗೆ 137 (ಬಾಬರ್​ ಅಜಂ 32, ಶಾನ್​ ಮಸೂದ್​ 38, ಆದಿಲ್​ ರಶೀದ್​ 22ಕ್ಕೆ2, ಸ್ಯಾಮ್​ ಕರನ್​​ 12ಕ್ಕೆ 3).

ಇಂಗ್ಲೆಂಡ್‌ : ೧೦ ಓವರ್‌ಗಳಲ್ಲಿ ೫ ವಿಕೆಟ್‌ಗೆ ೧೩೮ (ಬೆನ್‌ ಸ್ಟೋಕ್ಸ್‌ ೫೨*, ಜೋಸ್‌ ಬಟ್ಲರ್‌ ೨೬; ಹ್ಯಾರಿಸ್‌ ರವೂಫ್‌ ೨೩ಕ್ಕೆ೨).

ಇದನ್ನೂ ಓದಿ | PAK VS ENG | ಅಲ್ಪ ಮೊತ್ತಕ್ಕೆ ಕುಸಿದ ಪಾಕಿಸ್ತಾನ; ಇಂಗ್ಲೆಂಡ್​ ಗೆಲುವಿಗೆ 138 ರನ್​ ಗುರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Karnataka Assembly: ಬಿಜೆಪಿಯಿಂದಲೇ ರಾಹುಲ್​ಗೆ ಶ್ಲಾಘನೆ; ಸದನದಲ್ಲಿ ಅಭಿನಂದನೆಗೆ ನಿರ್ಣಯ

Karnataka Assembly: ದ್ರಾವಿಡ್ ಅವರಿಗೆ “ಭಾರತ ರತ್ನ” ಪ್ರಶಸ್ತಿಯಿಂದ ಗೌರವಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುನೀಲ್ ಗವಾಸ್ಕರ್ ಒತ್ತಾಯಿಸಿದ್ದರು. “ಭಾರತ ಸರಕಾರವು ದ್ರಾವಿಡ್​ಗೆ ಭಾರತ ರತ್ನ ಪ್ರಶಸ್ತಿಯಿಂದ ಗೌರವಿಸಿದರೆ ಅದು ಅವರಿಗೆ ಸಲ್ಲುವ ಸೂಕ್ತ ಗೌರವವಾಗುತ್ತದೆ. ಈ ಗೌರವಕ್ಕೆ ಅವರು ಸಂಪೂರ್ಣವಾಗಿ ಅರ್ಹರಾಗಿದ್ದಾರೆ ಎಂದು ಕೇಳಿದ್ದರು.

VISTARANEWS.COM


on

Karnataka Assembly
Koo

ಬೆಂಗಳೂರು: ಟಿ20 ವಿಶ್ವಕಪ್‌ ವಿಜೇತ ಭಾರತ ತಂಡದ ಕೋಚ್‌, ಕನ್ನಡಿಗ ರಾಹುಲ್‌ ದ್ರಾವಿಡ್‌(Rahul Dravid) ಅವರಿಗೆ ಅಭಿನಂದಿಸುವ ನಿರ್ಣಯವನ್ನು ವಿಧಾನಸಭೆ ತೆಗೆದುಕೊಳ್ಳಬೇಕೆಂದು ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್(S. Suresh Kumar) ಆಗ್ರಹಿಸಿದ್ದಾರೆ. ಇದಕ್ಕೆ ಸ್ಪೀಕರ್‌ ಯು.ಟಿ. ಖಾದರ್‌(U. T. Khader) ಸಹಮತ ವ್ಯಕ್ತಪಡಿಸಿ ಈ ನಿರ್ಣಯವನ್ನು ಅಂಗೀಕರಿಸಿದ್ದಾರೆ.

ಭಾರತ ತಂಡ 17 ವರ್ಷಗಳ ಬಳಿಕ 2ನೇ ಟಿ20 ವಿಶ್ವಕಪ್​ ಗೆಲ್ಲುವಂತಾಗಲು ಕೋಚ್​ ರಾಹುಲ್‌ ದ್ರಾವಿಡ್‌ ಅವರ ತರಬೇತಿ ಹಾಗೂ ಮಾರ್ಗದರ್ಶನವೂ ಮಹತ್ವದ ಪಾತ್ರ ವಹಿಸಿದೆ. ಹೀಗಾಗಿ ಈ ಸದನ ಒಕ್ಕೊರಲಿನಿಂದ ಅವರನ್ನು ಅಭಿನಂದಿಸುವ ನಿರ್ಣಯ ತೆಗೆದುಕೊಳ್ಳಬೇಕು ಎಂದು ಸುರೇಶ್‌ ಕುಮಾರ್‌ ಹೇಳಿದರು. ಇದಕ್ಕೆ ಸಹಮತ ವ್ಯಕ್ತಪಡಿಸಿದ ಸ್ಪೀಕರ್‌ ಯು.ಟಿ. ಖಾದರ್‌, “ಈ ಬಗ್ಗೆ ಈಗಾಗಲೇ ಚರ್ಚಿಸಲಾಗಿದೆ. ದ್ರಾವಿಡ್‌ ಅವರನ್ನು ಅಭಿನಂದಿಸುವ ನಿರ್ಣಯವನ್ನು ತಕ್ಷಣ ಮಂಡಿಸುವುದಕ್ಕೆ ಸೂಚನೆ ನೀಡಲಾಗುವುದು’ ಎಂದರು.

ಕಳೆದ ವಾರ ಬೆಂಗಳೂರಿನ(Bengaluru) ಕ್ರಿಕೆಟ್​ ಅಕಾಡೆಮಿಯ ವಿದ್ಯಾರ್ಥಿಗಳು ಗಾರ್ಡ್‌ ಆಫ್‌ ಹಾನರ್‌ (ಗೌರವ ವಂದನೆ) ಮೂಲಕ(guard of honour) ದ್ರಾವಿಡ್​ಗೆ ಅಭಿನಂದಿಸಿದ್ದರು.

ರಾಹುಲ್​ ದ್ರಾವಿಡ್​ ಅವರು ಎನ್​ಸಿಎ ಕ್ರಿಕೆಟ್​ ಅಕಾಡೆಮಿಗೆ(cricket academy in Bengaluru) ಆಗಮಿಸುತ್ತಿದ್ದಂತೆ ಅಧಿಕಾರಿಗಳು ಮತ್ತು ಇಲ್ಲಿ ಕ್ರಿಕೆಟ್​ ಅಭ್ಯಾಸ ನಡೆಸುತ್ತಿರುವ ವಿದ್ಯಾರ್ಥಿಗಳು ಬ್ಯಾಟ್​ ಎತ್ತಿ ಗಾರ್ಡ್‌ ಆಫ್‌ ಹಾನರ್‌ ಮೂಲಕ ಗೌರವ ಸಲ್ಲಿಸಿದರು. ದ್ರಾವಿಡ್​ ಕೂಡ ಸಂತಸದಿಂದಲೇ ಎಲ್ಲರ ಕೈ ಕುಲುಕಿ ಧನ್ಯವಾದ ತಿಳಿಸಿದ್ದರು.

ದ್ರಾವಿಡ್​ಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಒತ್ತಾಯಿಸಿದ ಗವಾಸ್ಕರ್


ಪ್ರಧಾನ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಅವರಿಗೆ “ಭಾರತ ರತ್ನ” ಪ್ರಶಸ್ತಿಯಿಂದ ಗೌರವಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುನೀಲ್ ಗವಾಸ್ಕರ್ ಒತ್ತಾಯಿಸಿದ್ದರು. “ಭಾರತ ಸರಕಾರವು ದ್ರಾವಿಡ್​ಗೆ ಭಾರತ ರತ್ನ ಪ್ರಶಸ್ತಿಯಿಂದ ಗೌರವಿಸಿದರೆ ಅದು ಅವರಿಗೆ ಸಲ್ಲುವ ಸೂಕ್ತ ಗೌರವವಾಗುತ್ತದೆ. ಈ ಗೌರವಕ್ಕೆ ಅವರು ಸಂಪೂರ್ಣವಾಗಿ ಅರ್ಹರಾಗಿದ್ದಾರೆ ಎಂದು ಕೇಳಿದ್ದರು.

ಇದನ್ನೂ ಓದಿ Rahul Dravid : ತಮಗೆ ನೀಡಿದ 2.5 ಕೋಟಿ ರೂಪಾಯಿ ನಿರಾಕರಿಸಿ ಸಮಾನತೆ ತತ್ವ ಸಾರಿದ ರಾಹುಲ್ ದ್ರಾವಿಡ್​

ದ್ರಾವಿಡ್​ ಆಟಗಾರರಾಗಿ ಮತ್ತು ತಂಡದ ನಾಯಕರಾಗಿ ವಿದೇಶಗಳಲ್ಲಿ ಭಾರತಕ್ಕೆ ಗೆಲುವು ತಂದು ಕೊಟ್ಟಿದ್ದಾರೆ. ವೆಸ್ಟ್ ಇಂಡೀಸ್​ನಲ್ಲಿ ಗೆಲ್ಲುವುದು ಅಸಾಧ್ಯ ಎಂಬ ಕಾಲದಲ್ಲಿ ಅವರು ಭಾರತಕ್ಕೆ ಸರಣಿ ಗೆಲುವನ್ನು ತಂದಿದ್ದಾರೆ. ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿಗಳನ್ನು ಗೆದ್ದಿರುವ ಕೇವಲ ಮೂರು ಭಾರತೀಯ ನಾಯಕರ ಪೈಕಿ ಅವರು ಕೂಡ ಒಬ್ಬರಾಗಿದ್ದಾರೆ. ಈ ಹಿಂದೆ, ಅವರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷರಾಗಿ ಅತ್ಯುತ್ತಮ ಕ್ರಿಕೆಟ್ ಪ್ರತಿಭೆಗಳನ್ನು ಹೊರತಂದಿದ್ದಾರೆ. ಬಳಿಕ ಭಾರತೀಯ ಹಿರಿಯರ ಕ್ರಿಕೆಟ್ ತಂಡದ ಕೋಚ್ ಆಗಿ ಉತ್ತಮ ನಿರ್ವಹಣೆ ನೀಡಿದ್ದಾರೆ ಎಂದು ಗವಾಸ್ಕರ್​ ಬರೆದುಕೊಂಡಿದ್ದಾರೆ.

1996ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ರಾಹುಲ್‌ ದ್ರಾವಿಡ್‌ 2012ರ ವರೆಗೆ ಭಾರತ ತಂಡದ ಪರವಾಗಿ ಆಡಿದ್ದರು. ಆದರೆ ವಿಶ್ವಕಪ್ ಎನ್ನುವುದು ಅವರಿಗೆ ಕನಸಾಗಿತ್ತು. ಈ ಕೊರಗು ಕೂಡ ಅವರಲ್ಲಿತ್ತು. ನಾಯಕನಾಗಿ, ಆಟಗಾರನಾಗಿ ಗೆಲ್ಲಲಾಗದ ವಿಶ್ವಕಪ್‌ ಅನ್ನು ತರಬೇತುದಾರನಾಗಿ ಗಳಿಸಿಕೊಂಡಿದ್ದಾರೆ. ಅದು ಕೂಡ ತಮ್ಮ ಕೊನೆಯ ಮಾರ್ಗದರ್ಶನದಲ್ಲಿ ಎನ್ನುವುದು ವಿಶೇಷ.

2007ರಲ್ಲಿ ವೆಸ್ಟ್​ ಇಂಡೀಸ್​ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ರಾಹುಲ್​ ದ್ರಾವಿಡ್​ ಅವರ ನಾಯಕತ್ವದಲ್ಲಿ ಭಾರತ ಅತ್ಯಂತ ಕಳಪೆ ಪ್ರದರ್ಶನ ತೋರುವ ಮೂಲಕ ಲೀಗ್​ ಹಂತದಿಂದಲೇ ನಿರ್ಗಮಿಸಿತ್ತು. ದುರ್ಬಲ ಬಾಂಗ್ಲಾದೇಶ ವಿರುದ್ದವೂ ಕೂಡ ಗೆಲುವು ಸಾಧಿಸಲು ಸಾಧ್ಯವಾಗ ಅವಮಾನಕ್ಕೆ ಸಿಲುಕಿತ್ತು. ಅಂದು ಅವಮಾನ ಎದುರಿಸಿದ ವಿಂಡೀಸ್​ ನೆಲದಲ್ಲೇ ಇದೀಗ ದ್ರಾವಿಡ್​ ತರಬೇತುದಾರನಾಗಿ ವಿಶ್ವಕಪ್​ ಕಪ್​ ಗೆದ್ದು ಸಂಭ್ರಮಿಸಿ ತಮ್ಮ ಎಲ್ಲ ಹಿಂದಿನ ನೋವನ್ನು ಮರೆತಿದ್ದಾರೆ. ಸದ್ಯ ಕೋಚ್​ ಹುದ್ದೆಯಿಂದ ಕೆಳಗಿಳಿದಿರುವ ದ್ರಾವಿಡ್​ ತಮ್ಮ ಇಬ್ಬರು ಮಕ್ಕಳ ಕ್ರಿಕೆಟ್​ ಭವಿಷ್ಯ ರೂಪಿಸುವಲ್ಲಿ ಹೆಚ್ಚಿನ ಕಾಳಜಿ ವಹಿಸಿಕೊಳ್ಳಬಹುದು.

Continue Reading

ಕ್ರೀಡೆ

T20 World Cup 2026: ಆತಿಥೇಯ ಭಾರತಕ್ಕೆ ಬೆದರಿಕೆಯೊಡ್ಡಿದ ಪಾಕಿಸ್ತಾನ ಕ್ರಿಕೆಟ್​ ಮಂಡಳಿ​

T20 World Cup 2026: 2026ರ ಟಿ20 ವಿಶ್ವಕಪ್​ ಟೂರ್ನಿಗೆ ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯ ವಹಿಸಿಕೊಂಡಿದೆ. ಭಾರತ ತಂಡ ಪಾಕ್​ ನೆಲದಲ್ಲಿ ಚಾಂಪಿಯನ್ಸ್​ ಟ್ರೋಫಿ ಆಡದೇ ಹೋದರೆ, ಭಾರತದಲ್ಲಿ ನಡೆಯುವ ಟಿ20 ವಿಶ್ವಕಪ್​ ಪಂದ್ಯವನ್ನು ಆಡಲು ಪಾಕ್ ತಂಡ ಸಿದ್ಧವಿಲ್ಲ ಎಂದು ಪಿಸಿಬಿ ಹೇಳಿರುವುದಾಗಿ ವರದಿಯಾಗಿದೆ.

VISTARANEWS.COM


on

T20 World Cup 2026: Pakistan to boycott 2026 T20 World Cup in India
Koo

ನವದೆಹಲಿ: ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯುವ ಚಾಂಪಿಯನ್ಸ್​ ಟ್ರೋಫಿಯಲ್ಲಿ(Champions Trophy 2025) ಆಡಲು ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲಿದೆಯಾ? ಅಥವಾ ಟೂರ್ನಿಯಿಂದ ಹಿಂದೆ ಸರಿಯಲಿದೆಯಾ? ಹೀಗೆ ಕಳೆದ ಹಲವು ದಿನಗಳಿಂದ ಚರ್ಚೆಗಳು ನಡೆಯುತ್ತಿವೆ. ಟೂರ್ನಿಯನ್ನು ಹೈಬ್ರೀಡ್​ ಮಾದರೊಯಲ್ಲಿ ನಡೆಸುವಂತೆ ಬಿಸಿಸಿಐ, ಐಸಿಸಿಗೆ ಒತ್ತಡ ಹಾಕುತ್ತಿದೆ ಎಂದು ಕೂಡ ವರದಿಯಾಗಿತ್ತು. ಇದೀಗ ಭಾರತ ಪಾಕ್​ಗೆ ತೆರಳದೇ ಇದ್ದರೆ, 2026ರಲ್ಲಿ(T20 World Cup 2026) ನಡೆಯುವ ಟಿ20 ವಿಶ್ವಕಪ್​ ಟೂರ್ನಿಯಿಂದ ಪಾಕ್​ ಹಿಂದೆ ಸರಿಯಲಿದೆ(Pakistan to boycott 2026 T20 World Cup) ಎಂದು ವರದಿಯಾಗಿದೆ.

2026ರ ಟಿ20 ವಿಶ್ವಕಪ್​ ಟೂರ್ನಿಗೆ ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯ ವಹಿಸಿಕೊಂಡಿದೆ. ಭಾರತ ತಂಡ ಪಾಕ್​ ನೆಲದಲ್ಲಿ ಚಾಂಪಿಯನ್ಸ್​ ಟ್ರೋಫಿ ಆಡದೇ ಹೋದರೆ, ಭಾರತದಲ್ಲಿ ನಡೆಯುವ ಟಿ20 ವಿಶ್ವಕಪ್​ ಪಂದ್ಯವನ್ನು ಆಡಲು ಪಾಕ್ ತಂಡ ಸಿದ್ಧವಿಲ್ಲ ಎಂದು ಪಿಸಿಬಿ ಹೇಳಿರುವುದಾಗಿ ವರದಿಯಾಗಿದೆ.

ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಭಾರತ ತಂಡ ಪಾಕ್​ಗೆ ಹೋಗುವುದಿಲ್ಲ ಎಂಬ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು ಬಿಸಿಸಿಐ ಅಥವಾ ಸರ್ಕಾರ ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

‘ಮುಂದಿನ ವರ್ಷ ನಡೆಯುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡ ಭಾಗವಹಿಸುವುದಿಲ್ಲ ಎಂದು ಕೆಲವು ವರದಿಗಳನ್ನು ನೋಡಿದ್ದೇನೆ. ಜತೆಗೆ ಭಾರತದ ಪಂದ್ಯಗಳನ್ನು ತಟಸ್ಥ ಸ್ಥಳಗಳಲ್ಲಿ ನಡೆಸುವಂತೆ ಬಿಸಿಸಿಐ, ಐಸಿಸಿ ಬಳಿ ಕೇಳಿಕೊಂಡಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಆದರೆ, ಬಿಸಿಸಿಐ ಇನ್ನೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ’ ಎಂದು ಹೇಳುವ ಮೂಲಕ ಶುಕ್ಲಾ ಈ ವಿಷಯಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ Champions Trophy 2025: ಚಾಂಪಿಯನ್ಸ್‌ ಟ್ರೋಫಿಯಿಂದ ಭಾರತ ಹಿಂದೆ ಸರಿದರೆ ಯಾವ ತಂಡಕ್ಕೆ ಸಿಗಲಿದೆ ಅವಕಾಶ?

ನವೆಂಬರ್ 2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ 150 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ ಭಾರತವು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಆಡಿಲ್ಲ. ಜೂನ್-ಜುಲೈ 2008 ರಲ್ಲಿ ಏಷ್ಯಾ ಕಪ್ ಸಮಯದಲ್ಲಿ ಭಾರತೀಯ ಕ್ರಿಕೆಟ್ ತಂಡವು ಕೊನೆಯ ಬಾರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸಿತ್ತು. ಭಾರತ ತಂಡವು ಪ್ರಯಾಣಿಸಲು ನಿರಾಕರಿಸಿದ ನಂತರ, ಕಳೆದ ವರ್ಷದ ಏಷ್ಯಾಕಪ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಯಿತ್ತು. ಕೇವಲ ನಾಲ್ಕು ಪಂದ್ಯಗಳನ್ನು ಪಾಕಿಸ್ತಾನದಲ್ಲಿ ನಡೆಸಿ ಉಳಿದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದಿದ್ದವು. ಭಾರತ ಎಲ್ಲ ಪಂದ್ಯಗಳನ್ನು ಲಂಕಾದಲ್ಲಿ ಆಡಿತ್ತು.

ಚಾಂಪಿಯನ್ಸ್​ ಟ್ರೋಫಿಯ ಯಶಸ್ಸಿಗೆ ಪಿಸಿಬಿ ಬದ್ಧವಾಗಿದ್ದರೂ, ಭದ್ರತಾ ಕಾರಣಗಳಿಂದಾಗಿ ಭಾರತವು ಭಾಗವಹಿಸದಿದ್ದರೆ, ಆಗ ಏಷ್ಯಾ ಕಪ್​ನಂತೆ​ ಹೈಬ್ರಿಡ್ ಮಾದರಿಯ ಮೊರೆ ಹೋಗಬೇಕಿದೆ. ಆದರೆ ಸ್ವತಂತ್ರ ಏಜೆನ್ಸಿಯೊಂದಿಗೆ ಸಮಾಲೋಚಿಸಿ ಸಮಗ್ರ ಭದ್ರತಾ ಮೌಲ್ಯಮಾಪನವನ್ನು ನಡೆಸಿ ಪಾಕಿಸ್ತಾನದಲ್ಲಿಯೇ ಟೂರ್ನಿ ನಡೆಸಿ ಎಂದು ಪಿಸಿಬಿ ಹೇಳುವ ಸಾಧ್ಯತೆಗಳಿವೆ. ಐಸಿಸಿ ಈ ವಿನಂತಿಯನ್ನು ಒಪ್ಪಿಕೊಂಡಿದೆ ಎಂದು ಇತ್ತೀಚಿನ ವರದಿಗಳು ಹೇಳಿವೆ. ಭಾರತ ಪಾಕ್​ನಲ್ಲಿ ಆಡಲಿದೆಯಾ ಅಥವಾ ಬಿಸಿಸಿಐ ಒತ್ತಾಯಕ್ಕೆ ಮಣಿದು ಟೂರ್ನಿ ಪಾಕ್​ ನಿಂದ ಶಿಫ್ಟ್​ ಆಗಲಿದೆಯಾ ಎನ್ನುವುದನ್ನು ಕಾದು ನೋಡಬೇಕಿದೆ.

Continue Reading

ಕ್ರೀಡೆ

Rohit Sharma: ವಿಶ್ವಕಪ್​ ಗೆದ್ದು ಬಂದ ರೋಹಿತ್​ಗೆ ಸರ್​ಪ್ರೈಸ್​ ಕೊಟ್ಟ ಬಾಲ್ಯದ ಗೆಳೆಯರು; ವಿಡಿಯೊ ವೈರಲ್​

Rohit Sharma: ಐತಿಹಾಸಿಕ ಗೆಲುವಿನ ಬಳಿಕ ನಾಯಕ ರೋಹಿತ್​ ಶರ್ಮ(Rohit Sharma) ಅವರು ಬಾರ್ಬಡೋಸ್​ ಕ್ರೀಡಾಂಗಣದ ಪಿಚ್​ನಲ್ಲಿನ ಮಣ್ಣನ್ನು ತಿಂದು ಧನ್ಯತಾ ಭಾವ ವ್ಯಕ್ತಪಡಿಸಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

VISTARANEWS.COM


on

Rohit Sharma
Koo

ಮುಂಬಯಿ: ಟಿ20 ವಿಶ್ವಕಪ್(T20 World Cup 2024)​ ಗೆದ್ದು ತವರಿಗೆ ಮರಳಿದ ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮಗೆ(Rohit Sharma) ತಮ್ಮ ಬಾಲ್ಯದ ಗೆಳೆಯರು(Rohit Sharma’s childhood friends) ವಿಶೇಷವಾಗಿ ವೆಲ್​ಕಮ್​ ಮಾಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ. ಗುರುವಾರ  ಮುಂಬೈಯಲ್ಲಿ ಟಿ20 ವಿಶ್ವಕಪ್(T20 World Cup) ಗೆದ್ದ ಭಾರತ ತಂಡದ ಆಟಗಾರರಿಗೆ ಭರ್ಜರಿಯಾಗಿ ಅಭಿನಂದಿಸಲಾಗಿತ್ತು. ಎಲ್ಲ ಕಾರ್ಯಕ್ರಮ ಮುಗಿದ ಬಳಿಕ ರೋಹಿತ್​ ಅವರು ಬಾಲ್ಯದ ಗೆಳೆಯರನ್ನು ಭೇಟಿ ಮಾಡಿದರು. ಈ ವೇಳೆ ಗೆಳೆಯರು ಸೆಲ್ಯೂಟ್​ ಹೊಡೆದು, ರೋಹಿತ್​ ಅವರನ್ನು ಭುಜದ ಮೇಲೆ ಹೊತ್ತುಕೊಂಡು ಸಂಭ್ರಮಿಸಿದರು. ಈ ವೇಳೆ​ ಟೀಮ್​ ಇಂಡಿಯಾ ಆಟಗಾರ, ರೋಹಿತ್​ ಅವರ ಆಪ್ತರಾಗಿರುವ ತಿಲಕ್​ ವರ್ಮಾ ಕೂಡ ಜತೆಗಿದ್ದರು. ಇವರು ಕೂಡ ಸೆಲ್ಯೂಟ್​ ಹೊಡೆದು ರೋಹಿತ್​ಗೆ ಗೌರವಿಸಿದ್ದಾರೆ.

ಬಾರ್ಬಡೋಸ್‌ನಿಂದ ಬುಧವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿದ್ದ ಭಾರತ ತಂಡವು ಗುರುವಾರ ಬೆಳಗ್ಗೆ ನವದೆಹಲಿಗೆ ಬಂದಿಳಿದಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಆತಿಥ್ಯ ಸ್ವೀಕರಿಸಿದ ನಂತರ ಮಧ್ಯಾಹ್ನ 3.42ಕ್ಕೆ ಮುಂಬೈಗೆ ಪ್ರಯಾಣ ಬೆಳೆಸಿತ್ತು. ಸಂಜೆ ಐದು ಗಂಟೆಯ ನಂತರ ವಿಮಾನವು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಸಾಗರೋಪಾದಿಯಲ್ಲಿ ಸೇರಿದ್ದ ಅಭಿಮಾನಿಗಳ ಗುಂಪಿನಲ್ಲಿ ಆಟಗಾರರು ತೆರೆದ ಬಸ್​ನಲ್ಲಿ ವಿಶ್ವಕಪ್​ ಟ್ರೋಫಿಯೊಂದಿಗೆ ರೋಡ್ ಶೋ ನಡೆಸಿದ್ದರು. ದಕ್ಷಿಣ ಮುಂಬೈನ ಮರೀನ್ ಡ್ರೈವ್‌ ಪ್ರದೇಶ ಸಾವಿರಾರು ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ತುಂಬಿ ಹೋಗಿತ್ತು.

ಇದನ್ನೂ ಓದಿ Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

ಐತಿಹಾಸಿಕ ಗೆಲುವಿನ ಬಳಿಕ ನಾಯಕ ರೋಹಿತ್​ ಶರ್ಮ(Rohit Sharma) ಅವರು ಬಾರ್ಬಡೋಸ್​ ಕ್ರೀಡಾಂಗಣದ ಪಿಚ್​ನಲ್ಲಿನ ಮಣ್ಣನ್ನು ತಿಂದು ಧನ್ಯತಾ ಭಾವ ವ್ಯಕ್ತಪಡಿಸಿದ್ದರು. ‘ಆ ವಿಷಯಗಳನ್ನು ನನ್ನಿಂದ ವಿವರಿಸಲು ಸಾಧ್ಯವಿಲ್ಲ ಎಂದು ಭಾವಿಸುತ್ತೇನೆ. ಏಕೆಂದರೆ, ಯಾವುದನ್ನೂ ನಾನು ಸ್ಕ್ರಿಪ್ಟ್ ಮಾಡಿಲ್ಲ. ನಾನು ಮೈದಾನಕ್ಕೆ ಇಳಿದಾಗ ಆ ಕ್ಷಣವನ್ನು ಅನುಭವಿಸುತ್ತಿದ್ದೆ. ಗೆಲುವು ತಂದು ಕೊಟ್ಟ ಈ ಪಿಚ್​ನ ಋಣವನ್ನು ಮರೆಯಲು ಸಾಧ್ಯವಿಲ್ಲ. ನನ್ನ ಜೀವನದುದ್ದಕ್ಕೂ ಈ ಪಿಚ್​ನ ಮಣ್ಣಿನ ನೆನಪನ್ನು ಇಟ್ಟು ಕೊಳ್ಳುವ ಸಲುವಾಗಿ ನಾನು ಪಿಚ್​ನ ಮಣ್ಣು ತಿಂದೆ” ಎಂದು ಹೇಳಿದ್ದರು.

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

Continue Reading

ಕ್ರಿಕೆಟ್

Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

Team India’s Victory Parade:ಕಿಕ್ಕಿರಿದು ಸೇರಿದ್ದ ಅಭಿಮಾನಿಗಳ ನೂಕು ನುಗ್ಗಲಿನಲ್ಲಿ ಹಲವರ ಚಪ್ಪಲಿಗಳು ಕಿತ್ತು ಹೋಗಿದೆ. ಶುಕ್ರವಾರ ಬೆಳಗ್ಗೆ ಮರೀನ್ ಡ್ರೈವ್‌ ಪ್ರೇಶದಲ್ಲಿ ಚಪ್ಪಲಿಗಳ ರಾಶಿಯೇ ಕಂಡು ಬಂದಿದೆ. ಸಾವಿರಾರು ಚಪ್ಪಳಿಗಳು ಬೀದಿಯಲ್ಲೇ ಅನಾಥವಾಗಿ ಬಿದ್ದಿದೆ.

VISTARANEWS.COM


on

Team India's Victory Parade
Koo

ಮುಂಬಯಿ: ಟಿ20 ವಿಶ್ವಕಪ್(T20 World Cup) ಗೆದ್ದ ಭಾರತ ಕ್ರಿಕೆಟ್ ತಂಡದ ಆಟಗಾರರಿಗೆ ನಿನ್ನೆ(ಗುರುವಾರ) ಮುಂಬೈಯಲ್ಲಿ ಭರ್ಜರಿಯಾಗಿ ಅಭಿನಂದಿಸಲಾಗಿತ್ತು. ತಂಡದ ಈ ವಿಜಯೋತ್ಸವದ(Team India’s Victory Parade) ವೇಳೆ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳ ಪೈಕಿ ಕೆಲವರಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಪ್ರಕರಣಗಳು ಇದೀಗ ವರದಿಯಾಗಿವೆ. ಸದ್ಯದ ಮಾಹಿತಿ ಪ್ರಕಾರ 11 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಸಾಗರೋಪಾದಿಯಲ್ಲಿ ಸೇರಿದ್ದ ಅಭಿಮಾನಿಗಳ ಗುಂಪಿನಲ್ಲಿ ಮಹಿಳೆಯೊಬ್ಬರು ಉಸಿರಾಟ ಸಮಸ್ಯೆಗೆ ಸಿಲುಕಿ ಬಳಿಕ ಪೊಲೀಸ್​ ಅಧಿಕಾರಿಯೊಬ್ಬರು ಮಹಿಳೆಯನ್ನು ತಮ್ಮ ಹೆಗಲ ಮೇಲೆ ಹೊತ್ತು ಸಾಗಿದ ದೃಶ್ಯ ಕೂಡ ವೈರಲ್​ ಆಗಿದೆ. ಒಟ್ಟು 9 ಮಂದಿ ಉಸಿರಾಟದ ಸಮಸ್ಯೆಗೆ ಸಿಲುಕಿ ಇಲ್ಲಿನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿ ತಿಳಿಸಿದೆ.

17 ವರ್ಷಗಳ ಬಳಿಕ 2ನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡದ ವಿಜಯೋತ್ಸವವನ್ನು ಗುರುವಾರ ಮುಂಬೈನಲ್ಲಿ ಏರ್ಪಡಿಸಲಾಗಿತ್ತು. ದಕ್ಷಿಣ ಮುಂಬೈನ ಮರೀನ್ ಡ್ರೈವ್‌ ಪ್ರದೇಶ ಸಾವಿರಾರು ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ತುಂಬಿ ಹೋಗಿತ್ತು.

ಕಿಕ್ಕಿರಿದು ಸೇರಿದ್ದ ಅಭಿಮಾನಿಗಳ ನೂಕು ನುಗ್ಗಲಿನಲ್ಲಿ ಹಲವರ ಚಪ್ಪಲಿಗಳು ಕಿತ್ತು ಹೋಗಿದೆ. ಶುಕ್ರವಾರ ಬೆಳಗ್ಗೆ ಮರೀನ್ ಡ್ರೈವ್‌ ಪ್ರೇಶದಲ್ಲಿ ಚಪ್ಪಲಿಗಳ ರಾಶಿಯೇ ಕಂಡು ಬಂದಿದೆ. ಸಾವಿರಾರು ಚಪ್ಪಳಿಗಳು ಬೀದಿಯಲ್ಲೇ ಅನಾಥವಾಗಿ ಬಿದ್ದಿದೆ.

ಬಾರ್ಬಡೋಸ್‌ನಿಂದ ಬುಧವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿದ್ದ ಭಾರತ ತಂಡವು ಗುರುವಾರ ಬೆಳಗ್ಗೆ ನವದೆಹಲಿಗೆ ಬಂದಿಳಿದಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಆತಿಥ್ಯ ಸ್ವೀಕರಿಸಿದ ನಂತರ ಮಧ್ಯಾಹ್ನ 3.42ಕ್ಕೆ ಮುಂಬೈಗೆ ಪ್ರಯಾಣ ಬೆಳೆಸಿತ್ತು. ಸಂಜೆ ಐದು ಗಂಟೆಯ ನಂತರ ವಿಮಾನವು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಆಟಗಾರರು ಬಂದೊಡನೆಯೇ ಕ್ರಿಕೆಟ್‌ ಪ್ರೇಮಿಗಳ ಜಯಘೋಷ ಮೊಳಗಿತು. ಅಭಿಮಾನಿಗಳ ಅಬ್ಬರಕ್ಕೆ ಅರಬ್ಬಿ ಸಮುದ್ರ ಕೂಡ ಒಂದು ಕ್ಷಣ ಸ್ಥಬ್ಧವಾಗಿತ್ತು. ವಿಶೇಷ ವಿನ್ಯಾಸದ ತೆರೆದ ವಾಹನದಲ್ಲಿ ವಿಶ್ವಕಪ್‌ ಟ್ರೋಫಿ ಹಿಡಿದು ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಬೂಮ್ರಾ, ಪಾಂಡ್ಯ, ಕೋಚ್‌ ರಾಹುಲ್‌ ದ್ರಾವಿಡ್‌ ಸೇರಿದಂತೆ ಎಲ್ಲ ಆಟಗಾರರು ವಿಜಯಯಾತ್ರೆಯ ಮೆರವಣಿಗೆಯಲ್ಲಿ ಭಾಗಿಯಾಗಿ ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಘೋಷಣೆ ಕೂಗಿ ಅಭಿನಂದನೆಗಳನ್ನು ಸಲ್ಲಿಸಿದರು.

ಇದನ್ನೂ ಓದಿ Team India: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಡುವುದು ನಮ್ಮ ಸಂಸ್ಕೃತಿಯಲ್ಲ ಎಂದು ತೋರಿಸಿಕೊಟ್ಟ ಟೀಮ್ ಇಂಡಿಯಾ​ ಕ್ರಿಕೆಟಿಗರು

ಜೂನ್ 29ರಂದು ಬಾರ್ಬಾಡೋಸ್‌ನಲ್ಲಿ ನಡೆದಿದ್ದ ಟೂರ್ನಿಯ ಫೈನಲ್‌ನಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ಎದುರು ಜಯಿಸಿತ್ತು. ಆದರೆ ಕೆರೀಬಿಯನ್ ದ್ವೀಪದಲ್ಲಿ ಚಂಡಮಾರುತ ಬೀಸಿದ್ದ ಕಾರಣ ವಿಮಾನಯಾನ ಸೌಲಭ್ಯ ರದ್ದಾಗಿತ್ತು. ಆದ್ದರಿಂದ ಬುಧವಾರದವರೆಗೂ ತಂಡವು ಬಾರ್ಬಾಡೋಸ್‌ನಲ್ಲಿಯೇ ಉಳಿದಿತ್ತು.

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

Continue Reading
Advertisement
Ratna Bhandar
ದೇಶ6 mins ago

Ratna Bhandar: ಒಂದೇ ವಾರದಲ್ಲಿ ಎರಡನೇ ಬಾರಿ ತೆರೆದ ಪುರಿ ಜಗನ್ನಾಥನ ʼರತ್ನ ಭಂಡಾರʼ

GT World Mall
ಪ್ರಮುಖ ಸುದ್ದಿ15 mins ago

GT World Mall : ಜಿಟಿ ಮಾಲ್​ ಏಳು ದಿನಗಳ ಕಾಲ ಬಂದ್​, ಮಾಲೀಕರಿಂದಲೇ ಸ್ವಯಂಪ್ರೇರಿತ ಕ್ರಮ

Viral Video
Latest17 mins ago

Viral Video: ಗರ್ಭಗುಡಿಗೆ ನುಗ್ಗಿ ದೇವರ ಕಿರೀಟಕ್ಕೇ ಕನ್ನ ಹಾಕಿದ ಕಳ್ಳ! ಪರಾರಿಯಾಗುವಾಗ ಮಾಡಿದ್ದೇನು? ವಿಡಿಯೊ ನೋಡಿ!

Dog Attacks
Latest31 mins ago

Dog Attacks: ಬಡಪಾಯಿ ಡೆಲಿವರಿ ಮ್ಯಾನ್‌ನನ್ನು ಭೀಕರವಾಗಿ ಕಚ್ಚಿದ ಶ್ರೀಮಂತರ ಮನೆಯ ನಾಯಿಗಳು; ವಿಡಿಯೊ ಇದೆ

Kashmir Encounter
ದೇಶ38 mins ago

Kashmir Encounter: ಕಾಶ್ಮೀರದಲ್ಲಿ ಮತ್ತೆ ಎನ್‌ಕೌಂಟರ್‌; ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

Monsoon star fashion Actress Mokshita Pai
ಫ್ಯಾಷನ್45 mins ago

Monsoon star fashion: ಮಾನ್ಸೂನ್‌ ಟ್ರಾವೆಲ್‌ ಫ್ಯಾಷನ್‌ಗೆ ಸೈ ಎಂದ ನಟಿ ಮೋಕ್ಷಿತಾ ಪೈ

KL Rahul
ಪ್ರಮುಖ ಸುದ್ದಿ49 mins ago

KL Rahul : ಕೊರಗಜ್ಜನ ಆದಿ ಸ್ಥಾನಕ್ಕೆಭೇಟಿ ನೀಡಿದ ಕೆ. ಎಲ್​ ರಾಹುಲ್​, ಅಥಿಯಾ ಶೆಟ್ಟಿ ದಂಪತಿ, ವಿಡಿಯೊ ವೈರಲ್

CT Ravi
ಪ್ರಮುಖ ಸುದ್ದಿ1 hour ago

Karnataka Job Reservation : ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಮೀಸಲು ವಿಚಾರ ಮುನ್ನೆಲೆಗೆ ತಂದ ಸರ್ಕಾರ; ಸಿಟಿ ರವಿ ಆರೋಪ

World's Largest Tribe
ವಿದೇಶ1 hour ago

Mashco Piro Tribe: ಮೊದಲ ಬಾರಿ ಹೊರ ಜಗತ್ತಿಗೆ ಕಾಣಿಸಿಕೊಂಡ ಮಾಶ್ಕೊ ಪಿರೋ ಬುಡಕಟ್ಟು ಸಮುದಾಯ!

Sensex Jump
ವಾಣಿಜ್ಯ1 hour ago

Sensex Jump: ಷೇರುಪೇಟೆಯಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಸೆನ್ಸೆಕ್ಸ್, 24,000 ಮೀರಿದ ನಿಫ್ಟಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌