IND vs AFGHAN | ಆಫ್ಘನ್‌ ವಿರುದ್ಧವಾದರೂ ಗೆದ್ದು ಮರ್ಯಾದೆ ಉಳಿಸಿಕೊಳ್ಳುವುದೇ ಟೀಮ್‌ ಇಂಡಿಯಾ? - Vistara News

ಕ್ರಿಕೆಟ್

IND vs AFGHAN | ಆಫ್ಘನ್‌ ವಿರುದ್ಧವಾದರೂ ಗೆದ್ದು ಮರ್ಯಾದೆ ಉಳಿಸಿಕೊಳ್ಳುವುದೇ ಟೀಮ್‌ ಇಂಡಿಯಾ?

ಏಷ್ಯಾ ಕಪ್‌ನ ಸೂಪರ್-4 ಹಣಾಹಣಿಯ ತನ್ನ ಕೊನೇ ಪಂದ್ಯದಲ್ಲಿ ಭಾರತ ತಂಡ ಸೆಪ್ಟೆಂಬರ್‌ 8ರಂದು ಅಫಘಾನಿಸ್ತಾನ ತಂಡಕ್ಕೆ (IND vs AFGHAN) ಎದುರಾಗಲಿದೆ.

VISTARANEWS.COM


on

Asia Cup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ : ಏಷ್ಯಾ ಕಪ್‌ ಟೂರ್ನಿಯಲ್ಲಿ ಫೈನಲ್‌ಗೇರುವ ಅವಕಾಶ ಕಳೆದುಕೊಂಡಿರುವ ಭಾರತ ತಂಡ, ಸೂಪರ್-೪ ಹಂತದ ಕೊನೇ ಪಂದ್ಯದಲ್ಲಿ ಗುರುವಾರ (ಸೆಪ್ಟೆಂಬರ್ ೮) ಅಫಘಾನಿಸ್ತಾನ ತಂಡಕ್ಕೆ (IND vs AFGHAN) ಎದುರಾಗಲಿದೆ. ಅತ್ತ ಆಫ್ಘನ್‌ ಬಳಗವೂ ಪಾಕಿಸ್ತಾನ ವಿರುದ್ಧ ವೀರೋಚಿತ ಸೋಲು ಕಂಡಿರುವ ಕಾರಣ ಆ ತಂಡವೂ ಫೈನಲ್‌ ಅವಕಾಶ ಕಳೆದುಕೊಂಡಿದೆ. ಹೀಗಾಗಿ ಈ ಹಣಾಹಣಿ ಉಭಯ ತಂಡಗಳಿಗೆ ಅನೌಪಚಾರಿಕ ಎನಿಸಿಕೊಳ್ಳಲಿದೆ.

ಸೂಪರ್‌-೪ ಹಂತದ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಸೋಲು ಕಂಡಿದ್ದ ರೋಹಿತ್‌ ಬಳಗ, ನಂತರದ ಎದುರಾಳಿ ಶ್ರೀಲಂಕಾ ವಿರುದ್ಧವೂ ಪರಾಜಯಗೊಂಡಿತ್ತು. ಹೀಗಾಗಿ ಫೈನಲ್‌ ಅವಕಾಶ ನಷ್ಟ ಮಾಡಿಕೊಂಡಿದೆ ಏಳು ಬಾರಿಯ ಚಾಂಪಿಯನ್‌ ತಂಡ ಭಾರತ. ಕಳೆದ ಕೆಲವು ಸಮಯಗಳಿಂದ ಸೀಮಿತ ಓವರ್‌ಗಳ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದ ಹಾಗೂ ಮುಂಬರುವ ಟಿ೨೦ ವಿಶ್ವ ಕಪ್‌ಗೆ ಸಜ್ಜಾಗುತ್ತಿದ್ದ ಟೀಮ್ ಇಂಡಿಯಾಗೆ ಇದರಿಂದ ಹಿನ್ನಡೆ ಉಂಟಾಗಿದೆ. ಹೀಗಾಗಿ ಅಫಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಗೆದ್ದು ಮರ್ಯಾದೆ ಉಳಿಸಿಕೊಳ್ಳುವ ಜತೆಗೆ ಚೇತರಿಕೆ ಕಂಡುಕೊಳ್ಳಬೇಕಾಗಿದೆ.

ಬದಲಾವಣೆ

ಈ ಹಿಂದಿನ ಪಂದ್ಯಗಳ ಪ್ರದರ್ಶನದ ಆಧಾರದಲ್ಲಿ ಟೀಮ್‌ ಇಂಡಿಯಾದಲ್ಲಿ ಕೆಲವು ಬದಲಾವಣೆ ಮಾಡುವ ಸಾಧ್ಯತೆಗಳಿವೆ. ಪ್ರಮುಖವಾಗಿ ಅರಂಭಿಕ ಬ್ಯಾಟರ್‌ ಕೆ. ಎಲ್‌. ರಾಹುಲ್ ಅವರನ್ನು ಬೆಂಚು ಕಾಯಿಸಿ, ದಿನೇಶ್ ಕಾರ್ತಿಕ್‌ಗೆ ಅವಕಾಶ ನೀಡಬಹುದು. ಸ್ಪಿನ್ನರ್ ಅಕ್ಷರ್‌ ಪಟೇಲ್ ತಂಡದಲ್ಲಿ ಸ್ಥಾನ ಪಡೆಯಲಿದ್ದು, ಅವರಿಗೆ ಯಜ್ವೇಂದ್ರ ಸ್ಥಾನ ಬಿಟ್ಟುಕೊಡಬೇಕಾಗಹುದು. ಅಂತೆಯೇ ದೀಪಕ್‌ ಚಾಹರ್‌ ಅವಕಾಶ ಪಡೆದರೆ ಭುವನೇಶ್ವರ್ ಕುಮಾರ್‌ ಅಥವಾ ಅರ್ಶ್‌ದೀಪ್‌ ಸಿಂಗ್ ಚಾನ್ಸ್‌ ಕೊಡಬೇಕಾಗುತ್ತದೆ.

ಅಫಘಾನಿಸ್ತಾನ ತಂಡಕ್ಕೆ ಬೌಲರ್‌ಗಳೇ ಆಧಾರ. ಮುಜೀಬ್‌ ಉರ್‌ ರಹ್ಮಾನ್‌ ಹಾಗೂ ರಶೀದ್‌ ಖಾನ್‌ ಬೌಲಿಂಗ್‌ನಲ್ಲಿ ಪ್ರಭಾವಿಗಳು. ಹಜರುತುಲ್ಲಾ ಜಜೈ, ರಹಮನುಲ್ಲಾ ಗುರ್ಜಬ್‌ ಉತ್ತಮ ಫಾರ್ಮ್‌ನಲ್ಲಿದ್ದು ಎದುರಾಳಿ ಬೌಲರ್‌ಗಳನ್ನು ಬೆದರಿಸಬಲ್ಲರು. ಸೀಮಿತ ಓವರ್‌ಗಳ ಪಂದ್ಯದಲ್ಲಿ ಅಫಘಾನಿಸ್ತಾನ ತಂಡ ಬಲಿಷ್ಠವಾಗಿದ್ದು, ಭಾರತಕ್ಕೆ ಪ್ರಬಲ ಪೈಪೋಟಿ ನೀಡುವ ಸಾಧ್ಯತೆಗಳಿವೆ.

ಪಿಚ್ ಹೇಗಿದೆ

ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಮ್‌ನಲ್ಲಿ ಪಂದ್ಯ ನಡೆಯಲಿದೆ. ಇದುವರೆಗಿನ ಪಂದ್ಯಗಳ ಫಲಿತಾಂಶವನ್ನು ಅವಲೋಕಿಸಿದರೆ ಸ್ಪರ್ಧಾತ್ಮಕ ಪಿಚ್ ಸಿದ್ಧಪಡಿಸಲಾಗಿದೆ. ಆರಂಭದಲ್ಲಿ ಬೌಲರ್‌ಗಳಿಗೆ ನೆರವಾಗಿ ಎರಡನೆ ಇನಿಂಗ್ಸ್‌ನಲ್ಲಿ ಬ್ಯಾಟರ್‌ಗಳಿಗೆ ಒಲಿಯುತ್ತದೆ. ಟಾಸ್‌ ಗೆದ್ದ ತಂಡ ಫೀಲ್ಡಿಂಗ್ ಅನ್ನೇ ನೆಚ್ಚಿಕೊಳ್ಳಬೇಕಾಗುತ್ತದೆ.

ಸಂಭಾವ್ಯ ತಂಡಗಳು

ಭಾರತ: ರೋಹಿತ್‌ ಶರ್ಮ (ನಾಯಕ), ಸೂರ್ಯಕುಮಾರ್ ಯಾದವ್, ವಿರಾಟ್‌ ಕೊಹ್ಲಿ, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ದೀಪಕ್ ಹೂಡ, ದಿನೇಶ್‌ ಕಾರ್ತಿಕ್, ಅಕ್ಷರ್ ಪಟೇಲ್, ದೀಪಕ್ ಚಾಹರ್, ಭುವನೇಶ್ವರ್‌ ಕುಮಾರ್‌, ಆರ್. ಅಶ್ವಿನ್

ಅಫಘಾನಿಸ್ತಾನ : ಮೊಹಮ್ಮದ್ ನಬಿ (ನಾಯಕ), ಹಜರತುಲ್ಲಾ ಜಜೈ, ರಹಮಾನುಲ್ಲ ಗುರ್ಬಜ್, ಇಬ್ರಾಹಿಂ ಜದ್ರಾನ್, ನಜೀಬುಲ್ಲಾ ಜದ್ರಾನ್, ಕರೀಮ್ ಜನತ್, ರಶೀದ್ ಖಾನ್, ಅಜ್ಮತುಲ್ಲಾ ಒಮರ್ಜೈ, ನವೀನ್–ಉಲ್–ಹಕ್, ಮುಜೀಬ್ ಉರ್ ರಹಮಾನ್, ಫಜಲ್ ಹಕ್‌ ಫಾರೂಕಿ.

ಇದನ್ನೂ ಓದಿ | Asia Cup | ಪಾಕ್‌ ವಿರುದ್ಧ ರೋಚಕ ಪಂದ್ಯ ಸೋತ ಆಫ್ಘನ್‌, ಟೂರ್ನಿಯಿಂದಲೇ ಭಾರತ ಔಟ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Viral Video: ‘ಹಿಟ್​ ದಿ ಟಾರ್ಗೆಟ್’​ ಎಂದು ಬೌಲಿಂಗ್​ ಅಭ್ಯಾಸ ಆರಂಭಿಸಿದ ಮೊಹಮ್ಮದ್ ಶಮಿ

Viral Video: ಚೇತರಿಕೆಯ ಹಾದಿಯಲ್ಲಿರುವ ಶಮಿ  ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಗೆ ಪುನರಾಗಮನ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಗಾಯದಿಂದಾಗಿ ಶಮಿಗೆ ಈ ಬಾರಿ ಐಪಿಎಲ್​ ಸೇರಿ ಮಹತ್ವದ ಟಿ20 ವಿಶ್ವಕಪ್​ ಟೂರ್ನಿ ಕೈತಪ್ಪಿತ್ತು.

VISTARANEWS.COM


on

Viral Video
Koo

ಲಕ್ನೋ: ಪಾದದ ಶಸ್ತ್ರಚಿಕಿತ್ಸೆಗೆ(mohammed shami injury update) ಒಳಗಾಗಿ ಚೇತರಿಕೆ ಕಾಣುತ್ತಿರುವ ಭಾರತ ಕ್ರಿಕೆಟ್​ ತಂಡದ ಪ್ರಧಾನ​ ವೇಗಿ ಮೊಹಮ್ಮದ್ ಶಮಿ(Mohammed Shami) ಕ್ರಿಕೆಟ್​ಗೆ ಮರಳುವು ಸಿದ್ಧತೆಯಲ್ಲಿದ್ದಾರೆ. ತಮ್ಮ ನಿವಾಸದಲ್ಲೇ ನಿರ್ಮಿಸಲಾಗಿರುವ ಕ್ರಿಕೆಟ್​ ಪಿಚ್​ನಲ್ಲಿ ಬೌಲಿಂಗ್​ ಅಭ್ಯಾಸ ಆರಂಭಿಸಿದ್ದು, ಈ ವಿಡಿಯೊವನ್ನು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ವೈರಲ್​(Viral Video) ಆಗಿದೆ.

ಫೆಬ್ರವರಿಯಲ್ಲಿ ಶಮಿ ಅವರು ಲಂಡನ್​ನಲ್ಲಿ ತಮ್ಮ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕ ಶಮಿ ಯಾವುದೇ ಕ್ರಿಕೆಟ್​ ಸರಣಿ ಆಡಿಲ್ಲ. ಇದೀಗ ಕ್ರಿಕೆಟ್​ಗೆ ಮರಳುವ ನಿಟ್ಟಿನಲ್ಲಿ ಪುನರ್ವಸತಿ ಆರಂಭಿಸಿದ್ದಾರೆ. ಬೌಲಿಂಗ್​ ಅಭ್ಯಾಸ ಆರಂಭಿಸಿರುವ ಶಮಿ ‘ಹಿಟ್​ ದಿ ಟಾರ್ಗೆಟ್​’ ಎಂದು ಬರೆದುಕೊಂಡಿದ್ದಾರೆ. ಶಮಿ ಅವರು ಬೌಲಿಂಗ್​ನಲ್ಲಿ ವಿಕೆಟ್​ ಉರುಳಿಸಿದ್ದು ಈ ವಿಡಿಯೊದಲ್ಲಿ ಕಾಣಬಹುದಾಗಿದೆ.

2 ವಾರ ಹಿಂದೆ ಶಮಿ ಅವರು 2 ಸ್ಟಿಕ್​ ವಾಕರ್​ಗಳೊಂದಿಗೆ ಗಾರ್ಡನ್​ನಲ್ಲಿ ನಿಂತಿರುವ ಫೋಟೊವನ್ನು ಹಂಚಿಕೊಂಡು, ‘ಮತ್ತೆ ಟ್ರ್ಯಾಕ್‌ಗೆ ಮರಳುವ ಹಸಿದಿದೆ. ಈ ಹಾದಿ ಕಠಿಣವಾಗಿರಬಹುದು, ಆದರೆ ಇದನ್ನೇಲ್ಲ ಎದುರಿಸಿ ಶೀಘ್ರದಲ್ಲೇ ಕ್ರಿಕೆಟ್​ಗೆ ಮರಳುವ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದರು. ಇದಕ್ಕೂ ಮುನ್ನ ಶಮಿ ತಮ್ಮ ಮನೆಯಲ್ಲಿ ಪಾದಕ್ಕೆ ಎಲೆಕ್ಟ್ರಿಕ್​ ಮಸಾಜ್​ ಮಾಡುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದರು.

ಬಾಂಗ್ಲಾ ಸರಣಿಯಲ್ಲಿ ಕಣಕ್ಕೆ?

ಚೇತರಿಕೆಯ ಹಾದಿಯಲ್ಲಿರುವ ಶಮಿ  ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಗೆ ಪುನರಾಗಮನ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಗಾಯದಿಂದಾಗಿ ಶಮಿಗೆ ಈ ಬಾರಿ ಐಪಿಎಲ್​ ಸೇರಿ ಮಹತ್ವದ ಟಿ20 ವಿಶ್ವಕಪ್​ ಟೂರ್ನಿ ಕೈತಪ್ಪಿತ್ತು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡಿದ್ದ ಶಮಿ, ಈ ಗಾಯವನ್ನು ಮರೆಮಾಚಿ ವಿಶ್ವಕಪ್​ನಲ್ಲಿ ಅಮೋಘ ಬೌಲಿಂಗ್​ ಪ್ರದರ್ಶನ ತೋರಿದ್ದರು.

ಇದನ್ನು ಓದಿ Anushka Sharma: ಕೊಹ್ಲಿಯಂತೆ ತಾಳ್ಮೆ ಕಳೆದುಕೊಂಡ ಪತ್ನಿ ಅನುಷ್ಕಾ; ವಿಡಿಯೊ ವೈರಲ್​

ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಶಮಿ ಅವರು ತಮ್ಮ ಮೊನಚಾದ ಬೌಲಿಂಗ್​ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್‌ ಉರುಳಿಸಿದ್ದರು. ಅವರ ಈ ಸಾಧನೆಯನ್ನು ಪರಿಗಣಿಸಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದರು. ಮೊಹಮ್ಮದ್ ಶಮಿ ಭಾರತ ಪರ 64 ಟೆಸ್ಟ್ ಪಂದ್ಯಗಳಲ್ಲಿ 229 ವಿಕೆಟ್ ಪಡೆದಿದ್ದಾರೆ. 101 ಏಕದಿನ ಪಂದ್ಯಗಳಲ್ಲಿ 195 ವಿಕೆಟ್ ಪಡೆದಿದ್ದಾರೆ. 23 ಟಿ20 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದಾರೆ.

Continue Reading

ಕ್ರೀಡೆ

INDW vs SAW: ಏಕದಿನ ಸರಣಿಗೆ ಅಭ್ಯಾಸ ಆರಂಭಿಸಿದ ಭಾರತ ಮಹಿಳಾ ತಂಡ; ಕನ್ನಡದಲ್ಲೇ ತಂಡದ ಸಿದ್ಧತೆ ವಿವರಿಸಿದ ಶ್ರೇಯಾಂಕಾ

INDW vs SAW: ಭಾನುವಾರದಂದು ಮೊದಲ ಏಕದಿನ ಪಂದ್ಯ ನಡೆಯಲಿದೆ. ಒಟ್ಟು ಮೂರು ಪಂದ್ಯಗಳ ಏಕದಿನ ಸರಣಿ ಇದಾಗಿದ್ದು ಎಲ್ಲ ಪಂದ್ಯಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಏಕೈಕ ಟೆಸ್ಟ್​ ಮತ್ತು 3 ಟಿ20 ಪಂದ್ಯಗಳು ಚೆನ್ನೈಯ ಚೆಪಾಕ್​ ಸ್ಟೇಡಿಯಂನಲ್ಲಿ ನಡೆಯಲಿದೆ.

VISTARANEWS.COM


on

INDW vs SAW
Koo

ಬೆಂಗಳೂರು: ಜೂನ್ 16ರಿಂದ ಆರಂಭಗೊಳ್ಳಲಿರುವ ದಕ್ಷಿಣ ಆಫ್ರಿಕಾ(India women’s vs South Africa women’s) ಮತ್ತು ಭಾರತ ಮಹಿಳಾ(INDW vs SAW) ಏಕದಿನ(INDW vs SAW 1st ODI) ಸರಣಿಗೆ ಉಭಯ ತಂಡಗಳ ಆಟಗಾರ್ತಿಯರು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿದ್ದಾರೆ. ತಂಡದ ಸಿದ್ಧತೆ ಬಗ್ಗೆ ಶ್ರೇಯಾಂಕಾ ಪಾಟೀಲ್(Shreyanka Patil) ಕನ್ನಡದಲ್ಲೇ ವಿವರಿಸಿದ್ದಾರೆ. ಈ ವಿಡಿಯೊವನ್ನು ಆರ್​ಸಿಬಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ. ಉದಯೋನ್ಮುಖ ಆಟಗಾರ್ತಿಯಾಗಿರುವ ಶ್ರೇಯಾಂಕಾ ಏಕದಿನ ಮತ್ತು ಟಿ20 ಸರಣಿಯಲ್ಲಿ ಸ್ಥಾನ ಪಡೆದಿದ್ದಾರೆ.


ಭಾನುವಾರದಂದು ಮೊದಲ ಏಕದಿನ ಪಂದ್ಯ ನಡೆಯಲಿದೆ. ಒಟ್ಟು ಮೂರು ಪಂದ್ಯಗಳ ಏಕದಿನ ಸರಣಿ ಇದಾಗಿದ್ದು ಎಲ್ಲ ಪಂದ್ಯಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಏಕೈಕ ಟೆಸ್ಟ್​ ಮತ್ತು 3 ಟಿ20 ಪಂದ್ಯಗಳು ಚೆನ್ನೈಯ ಚೆಪಾಕ್​ ಸ್ಟೇಡಿಯಂನಲ್ಲಿ ನಡೆಯಲಿದೆ.

ಪಂದ್ಯ ಸಿದ್ಧತೆ ಬಗ್ಗೆ ಮಾತನಾಡಿದ ಶ್ರೇಯಾಂಕ, ‘ಎಲ್ಲರಿಗೂ ನಮಸ್ಕಾರ, ನಾವು ಬೆಂಗಳೂರಿನಲ್ಲಿದ್ದೇವೆ. ಇಲ್ಲಿನ ವಾತಾವರಣ ತುಂಬಾ ಹಿತ ನೀಡಿದೆ. ಮೊದಲ ಅಭ್ಯಾಸ ಅವಧಿಯನ್ನು ಅತ್ಯಂತ ಯಶಸ್ವಿಯಾಗಿ ಮುಗಿಸಿದ್ದೇವೆ. ಎಲ್ಲರು ತುಂಬಾ ಎನರ್ಜಿಯಿಂದ ಅಭ್ಯಾಸ ನಡೆಸಿದೆವು. ಬಲಿಷ್ಠ ದಕ್ಷಿಣ ಆಫ್ರಿಕಾ ವಿರುದ್ಧ ಆಡಲು ಕಾತರಗೊಂಡಿದ್ದೇವೆ. ಇಲ್ಲಿ ನಡೆದ ಡಬ್ಲ್ಯುಪಿಎಲ್​ ಪಂದ್ಯಾವಳಿಯ ವೇಳೆ ಪ್ರೇಕ್ಷಕರು ದೊಡ್ಡ ಸಂಖ್ಯೆಯಲ್ಲಿ ಬಂದು ಸ್ಟೇಡಿಯಂ ತುಂಬಿ ಹೋಗಿತ್ತು. ಇದೀಗ ಏಕದಿನ ಸರಣಿಗೂ ಅದೇ ರೀತಿ ಸ್ಟೇಡಿಯಂಗೆ ಬಂದು ಟೀಮ್​ ಇಂಡಿಯಾಕ್ಕೆ ಸಪೋರ್ಟ್​ ಮಾಡಿ’ ಎಂದು ಕೇಳಿಕೊಂಡಿದ್ದಾರೆ. ಡ್ಯಾಶಿಂಗ್​ ಓಪನರ್​ ಶಫಾಲಿ ವರ್ಮಾ ಕೂಡ ಬಿಸಿಸಿಐ ವಿಶೇಷ ವಿಡಿಯೊದಲ್ಲಿ ಮಾತನಾಡಿ ಪಂದ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬಂದು ಬೆಂಬಲಿಸುವಂತೆ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ WPL 2024: ಶ್ರೇಯಾಂಕಾ ಪಾಟೀಲ್ ಅದ್ಭುತ ಫೀಲ್ಡಿಂಗ್​ ಕಂಡು ದಂಗಾದ ಆರ್​ಸಿಬಿ ಅಭಿಮಾನಿಗಳು

ಹರ್ಮನ್‌ಪ್ರೀತ್‌ ಕೌರ್‌ ಅವರು ಮೂರು ಮಾದರಿಯಲ್ಲೂ ಭಾರತ ತಂಡವನ್ನು ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಉಪನಾಯಕಿಯಾಗಿದ್ದಾರೆ. ಗಾಯದಿಂದ ವಿಶ್ರಾಂತಿ ಪಡೆದಿದ್ದ ಅನುಭವಿ ಆಟಗಾರ್ತಿ ಜೆಮಿಮಾ ರಾಡ್ರಿಗಸ್ ಈ ಸರಣಿ ಮೂಲಕ ಮತ್ತೆ ತಂಡಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ. ಕಳೆದ ಬಾಂಗ್ಲಾ ವಿರುದ್ಧದ ಸರಣಿಯಿಂದ ಅವರು ಹೊರಗುಳಿದಿದ್ದರು. ವೇಗಿ ಪೂಜಾ ವಸ್ತ್ರಕರ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ದೇಶೀಯ ಕ್ರಿಕೆಟ್​ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್​ ಪ್ರದರ್ಶನ ತೋರುತ್ತಿದ್ದ ಅಗ್ರ ಕ್ರಮಾಂಕದ ಬ್ಯಾಟರ್ ಪ್ರಿಯಾ ಪೂನಿಯಾ ಏಕದಿನ ಮತ್ತು ಟೆಸ್ಟ್‌ ತಂಡಕ್ಕೆ ಮರಳಿದ್ದಾರೆ.

ಏಕದಿನ ತಂಡ


ಹರ್ಮನ್‌ಪ್ರೀತ್‌ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್‌ ಕೀಪರ್‌), ಉಮಾ ಚೆಟ್ರಿ (ವಿಕೆಟ್ ಕೀಪರ್‌), ದಯಾಳನ್ ಹೇಮಲತಾ, ರಾಧಾ ಯಾದವ್, ಆಶಾ ಶೋಭನ, ಶ್ರೇಯಾಂಕಾ ಪಾಟೀಲ್​, ಸೈಕಾ ಇಶಾಕ್, ಪೂಜಾ ವಸ್ತ್ರಕರ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ಪ್ರಿಯಾ ಪೂನಿಯಾ

Continue Reading

ಕ್ರೀಡೆ

IND vs CAN: ಕೆನಡಾ ಪಂದ್ಯಕ್ಕೆ ಕೊಹ್ಲಿ,ಜಡೇಜಾ, ಅಕ್ಷರ್​ಗೆ ರೆಸ್ಟ್​​!​

IND vs CAN: ಈಗಾಗಲೇ ಭಾರತ(Team India) ಆಡಿದ ಎಲ್ಲ ಮೂರು ಪಂದ್ಯಗಳನ್ನು ಗೆದ್ದು ಸೂಪರ್​-8ಗೆ ಅರ್ಹತೆ ಪಡೆದಿದೆ. ಹೀಗಾಗಿ ಕೊಹ್ಲಿ ಅವರಿಗೆ ಅಂತಿಮ ಪಂದ್ಯದಲ್ಲಿ ಬಿಸಿಸಿಐ ವಿಶ್ರಾಂತಿ ನೀಡಲು ಬಯಸಿದೆ ಎಂದು ತಿಳಿದುಬಂದಿದೆ.

VISTARANEWS.COM


on

IND vs CAN
Koo

ನ್ಯೂಯಾರ್ಕ್​: ಕಳೆದ ಮೂರು ಪಂದ್ಯಗಳಲ್ಲಿ ಸತತವಾಗಿ ಬ್ಯಾಟಿಂಗ್​ ವೈಫಲ್ಯ ಕಂಡು ಒಂದಂಕಿಗೆ ಸೀಮಿತರಾದ ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿ(Virat Kohli) ಅವರನ್ನು ಕೆನಡಾ(IND vs CAN) ವಿರುದ್ಧದ ಪಂದ್ಯದಿಂದ ಕೈಬಿಡುವ ಸಾಧ್ಯತೆ ಇದೆ ಎಂದು ತಂಡದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಈಗಾಗಲೇ ಭಾರತ(Team India) ಆಡಿದ ಎಲ್ಲ ಮೂರು ಪಂದ್ಯಗಳನ್ನು ಗೆದ್ದು ಸೂಪರ್​-8ಗೆ ಅರ್ಹತೆ ಪಡೆದಿದೆ. ಹೀಗಾಗಿ ಕೊಹ್ಲಿ ಅವರಿಗೆ ಅಂತಿಮ ಪಂದ್ಯದಲ್ಲಿ ಬಿಸಿಸಿಐ ವಿಶ್ರಾಂತಿ ನೀಡಲು ಬಯಸಿದೆ ಎಂದು ತಿಳಿದುಬಂದಿದೆ. ಕೊಹ್ಲಿ ಮಾತ್ರವಲ್ಲದೆ ಅಕ್ಷರ್​ ಪಟೇಲ್, ರವೀಂದ್ರ ಜಡೇಜಾ ಅವರಿಗೂ ವಿಶ್ರಾಂತಿ ನೀಡಿ ಅವರ ಸ್ಥಾನದಲ್ಲಿ ಕುಲ್​ದೀಪ್​ ಮತ್ತು ಯಜುವೇಂದ್ರ ಚಹಲ್​ ಅವರನ್ನು ಆಡಿಸುವ ಸಾಧ್ಯತೆ ಕಂಡುಬಂದಿದೆ.

ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಐಪಿಎಲ್​ ಟೂರ್ನಿಯಲ್ಲಿ ಕೊಹ್ಲಿ 700ಕ್ಕೂ ಅಧಿಕ ರನ್​ ಗಳಿಸಿ ಟೂರ್ನಿಯಲ್ಲೇ ಗರಿಷ್ಠ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದರು. ಆದರೆ, ಈ ಯಶಸ್ಸು ಕೊಹ್ಲಿಗೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಕೈ ಹಿಡಿಯಲಿಲ್ಲ. 1, 4,0 ಇದು ಕೊಹ್ಲಿಯ ಈ ಬಾರಿಯ ಸ್ಕೋರ್​ ಆಗಿದೆ.

ಇದನ್ನೂ ಓದಿ IND vs USA: ಕೊಹ್ಲಿಯ ವಿಕೆಟ್​ ಪತನ ಕಂಡು ದಂಗಾದ ರೋಹಿತ್​ ಶರ್ಮ; ವಿಡಿಯೊ ವೈರಲ್​

ಕೊಹ್ಲಿ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಅಥವಾ ಸಂಜು ಸ್ಯಾಮ್ಸನ್ ಆಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬಂದಿವೆ. ಕೆನಡಾ ವಿರುದ್ಧದ ಪಂದ್ಯ ನಡೆಯುವುದು ಕೂಡ ಅನುಮಾನ ಎನ್ನುವಂತಿದೆ. ಪಂದ್ಯ ನಡೆಯುವ ಫ್ಲೊರಿಡಾದಲ್ಲಿ ಈಗಾಗಲೇ ಭಾರೀ ಮಳೆ ಸುರಿದು ರಸ್ತೆಗಳೆಲ್ಲ ಹೊಳೆಯಂತಾಗಿದೆ. ಸೂಪರ್ 8ರಲ್ಲಿ ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಭಾರತಕ್ಕೆ ಎದುರಾಗುವ ಸಾಧ್ಯತೆ ಕಂಡು ಬಂದಿದೆ.

ಕೆನಡಾ ವಿರುದ್ಧದ ಪಂದ್ಯ ಮುಕ್ತಾಯಗೊಂಡ ತಕ್ಷಣ ಶುಭಮನ್​ ಗಿಲ್(Shubman Gill)​ ಮತ್ತು ಅವೇಶ್​ ಖಾನ್(Avesh Khan)​ ತವರಿಗೆ ಮರಳಲಿದ್ದಾರೆ ಎಂದು ಕ್ರಿಕ್‌ಬಜ್‌ ವರದಿ ಮಾಡಿದೆ. ಜೂನ್​ 15ರಂದು ಉಭಯ ಆಟಗಾರರು ಭಾರತಕ್ಕೆ ವಾಪಸ್‌ ಆಗಲಿದ್ದಾರೆ ಎಂದು ತಿಳಿಸಿದೆ. ಶುಭಮನ್ ಗಿಲ್ ಮತ್ತು ಅವೇಶ್ ಖಾನ್ ತಂಡದಲ್ಲಿ ಪ್ರಯಾಣ ಮೀಸಲು ಭಾಗವಾಗಿ ಸ್ಥಾನ ಪಡೆದಿದ್ದರು.

ಕೊಹ್ಲಿ ವೈಫಲ್ಯಕ್ಕೆ ನಿಧಾನಗತಿ ಪಿಚ್ ಕಾರಣ!


ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸುವ ಮುನ್ನ ಅಮೆರಿಕ ಮತ್ತು ವಿಂಡೀಸ್​ ಪಿಚ್​ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಾಗಿಲ್ಲ ಹೀಗಾಗಿ ಅವರನ್ನು ಆಯ್ಕೆ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಸ್ಟಾರ್​ ಆಟಗಾರನನ್ನು ಕೈ ಬಿಟ್ಟರೆ ಬಿಸಿಸಿಐ ವಿರುದ್ಧ ಭಾರೀ ಟೀಕೆ ಮತ್ತು ವಿರೋಧ ವ್ಯಕ್ತವಾಗುವುದು ಎನ್ನುವ ನಿಟ್ಟಿನಲ್ಲಿ ಅವರಿಗೆ ಅವಕಾಶ ನೀಡಲಾಗಿತ್ತು. ಅಂದು ಊಹೆ ಮಾಡಿದಂತೆ ಇದೀಗ ಕೊಹ್ಲಿ ನಿಧಾನಗತಿಯ ಪಿಚ್​ನಲ್ಲಿ ರನ್​ ಗಳಿಸಲು ಪರದಾಡುತ್ತಿದ್ದಾರೆ.

ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದು ಕೂಡ ಅವರ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣವಿರಬಹುದು. ಕೆಲ ವರ್ಷಗಳಿಂದ ಐಪಿಎಲ್​ನಲ್ಲಿ ಕೊಹ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಯಲ್ಲಿ ಇದುವರೆಗೂ ಆಡಿರಲಿಲ್ಲ. ಶೈನಿಂಗ್​ ಬಾಲ್​ನಲ್ಲಿ ಅವರಿಗೆ ಆಡಿದ ಅನುಭವ ಕೂಡ ಅಷ್ಟಾಗಿ ಇಲ್ಲ. ಏನಿದ್ದರೂ ಮಧ್ಯಮ ಕ್ರಮಾಂಕದಲ್ಲಿಯೇ ಅವರು ಹೆಚ್ಚು ಸಕ್ಸನ್​ ಕಂಡಿರುವುದು. ಹೀಗಾಗಿ ಮುಂದಿನ ಪಂದ್ಯದಲ್ಲಿ ಅವರನ್ನು ಎಂದಿನಂತೆ ದ್ವಿತೀಯ ಕ್ರಮಾಂಕದಲ್ಲಿಯೇ ಆಡಿಸುವುದು ಸೂಕ್ತ ಎನ್ನುವಂತಿದೆ.

Continue Reading

ಕ್ರೀಡೆ

Yusuf Pathan: ಜಮೀನು ಒತ್ತುವರಿ ಆರೋಪ; ನೂತನ ಸಂಸದ ಯೂಸುಫ್ ಪಠಾಣ್​ಗೆ ನೋಟಿಸ್

Yusuf Pathan: ಜೂನ್‌ 6ರಂದು ಪಠಾಣ್‌ ಅವರಿಗೆ ನೋಟಿಸ್‌‍ ನೀಡಿ ಎಲ್ಲ ಅತಿಕ್ರಮಣಗಳನ್ನು ತೆರವುಗೊಳಿಸುವಂತೆ ಹೇಳಲಾಗಿದೆ. ಜತೆಗೆ ಒಂದೆರಡು ವಾರಗಳ ಕಾಲಾವಕಾಶ ನೀಡಲಾಗಿದೆ ಎಂದು ವಿಎಂಸಿಯ ಸ್ಥಾಯಿ ಸಮಿತಿ ಅಧ್ಯಕ್ಷ ಶೀತಲ್‌ ಮಿಸ್ತ್ರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

VISTARANEWS.COM


on

Yusuf Pathan
Koo

ವಡೋದರಾ: ಮೊನೆಯಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಬಹರಂಪುರ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್‌‍ (ಟಿಎಂಸಿ) ಪಕ್ಷದಿಂದ ಸ್ಪರ್ಧಿಸಿ ಸಂಸದರಾದ ಟೀಮ್​ ಇಂಡಿಯಾ ಮಾಜಿ ಕ್ರಿಕೆಟಿಗ ಯೂಸುಫ್‌ ಪಠಾಣ್‌(Yusuf Pathan) ಸಂಕಷ್ಟವೊಂದರಲ್ಲಿ ಸಿಲುಕಿದ್ದಾರೆ. ನಾಗರಿಕರ ಜಮೀನನ್ನು ಒತ್ತುವರಿ ಮಾಡಿದ ಆರೋಪದ ಮೇಲೆ ವಡೋದರಾ ಮುನ್ಸಿಪಲ್‌ ಕಾರ್ಪೊರೇಷನ್‌ (ವಿಎಂಸಿ) ಯೂಸುಫ್‌ ಅವರಿಗೆ ನೋಟಿಸ್‌‍ ಜಾರಿಗೊಳಿಸಿದೆ. ಜೂನ್‌ 6 ರಂದು ಪಠಾಣ್‌ ಅವರಿಗೆ ನೋಟಿಸ್‌‍ ನೀಡಲಾಗಿದೆ ಎಂದು ತಿಳಿದುಬಂದಿದೆ.

ಬಿಜೆಪಿಯ ಮಾಜಿ ಕಾರ್ಪೊರೇಟರ್‌ ವಿಜಯ್‌ ಪವಾರ್‌ ಅವರು ಯೂಸುಫ್‌ ವಿರುದ್ಧ ಜಮೀನು ಒತ್ತುವರಿ ಆರೋಪ ಮಾಡಿದ್ದರು. 2012ರಲ್ಲಿ ಪಠಾಣ್‌ಗೆ ನಿವೇಶನ ಮಾರಾಟ ಮಾಡುವ ವಿಎಂಸಿ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದರೂ, ಹೊಸದಾಗಿ ಆಯ್ಕೆಯಾದ ಸಂಸದರು ಕಾಂಪೌಂಡ್‌ ಗೋಡೆ ನಿರ್ಮಿಸಿ ನಿವೇಶನವನ್ನು ಒತ್ತುವರಿ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಯೂಸುಫ್‌ ಮೇಲೆ ನನಗೆ ಯಾವುದೇ ದ್ವೇಷವಿಲ್ಲ. ಟಿಪಿ 22ರ ಅಡಿಯಲ್ಲಿ ತನದಲ್ಜಾ ಪ್ರದೇಶದಲ್ಲಿನ ಪ್ಲಾಟ್‌ ವಿಎಂಸಿ ಒಡೆತನದ ವಸತಿ ಪ್ಲಾಟ್‌ ಆಗಿದೆ. 2012 ರಲ್ಲಿ ಪಠಾಣ್‌ ಅವರು ವಿಎಂಸಿಯಿಂದ ಈ ನಿವೇಶನವನ್ನು ಕೇಳಿದ್ದರು. ಆ ಸಮಯದಲ್ಲಿ ನಿರ್ಮಾಣ ಹಂತದಲ್ಲಿದ್ದ ಅವರ ಮನೆ, ಆ ಪ್ಲಾಟ್‌ನ ಪಕ್ಕದಲ್ಲಿ ಇತ್ತು. ಪಠಾಣ್‌ ಅವರು ನಿವೇಶನವನ್ನು ಒತ್ತುವರಿ ಮಾಡಿಕೊಂಡು ಸುತ್ತಲೂ ಕಾಂಪೌಂಡ್‌ ಗೋಡೆ ನಿರ್ಮಿಸಿದ್ದರು. ಹೀಗಾಗಿ ನಗರಸಭೆಗೆ ತನಿಖೆ ನಡೆಸುವಂತೆ ಕೋರಿದ್ದೇನೆ ಎಂದು ಪವಾರ್‌ ಹೇಳಿದ್ದಾರೆ.

ಅತಿಕ್ರಮಣಕ್ಕಾಗಿ ಅವರಿಗೆ ನೋಟಿಸ್‌‍ ನೀಡಲಾಗಿದೆ ಎಂದು ವಿಎಂಸಿಯ ಸ್ಥಾಯಿ ಸಮಿತಿ ಅಧ್ಯಕ್ಷ ಶೀತಲ್‌ ಮಿಸ್ತ್ರಿ ಹೇಳಿದ್ದಾರೆ. ಇತ್ತೀಚೆಗೆ, ಪಠಾಣ್​ ಕಾಂಪೌಂಡ್‌ ಗೋಡೆಯನ್ನು ನಿರ್ಮಿಸಿದ ಬಗ್ಗೆ ನಮಗೆ ಕೆಲವು ದೂರುಗಳು ಬಂದವು. ಹೀಗಾಗಿ ಜೂನ್‌ 6ರಂದು ಪಠಾಣ್‌ ಅವರಿಗೆ ನೋಟಿಸ್‌‍ ನೀಡಿ ಎಲ್ಲ ಅತಿಕ್ರಮಣಗಳನ್ನು ತೆರವುಗೊಳಿಸುವಂತೆ ಹೇಳಿದ್ದೆವೆ. ನಾವು ಒಂದೆರಡು ವಾರಗಳ ಕಾಲ ಕಾಯುತ್ತೇವೆ ಮತ್ತು ನಂತರ ನಾವು ಮುಂದಿನ ಕ್ರಮವನ್ನು ನಿರ್ಧರಿಸುತ್ತೇವೆ. ಈ ಭೂಮಿ ವಿಎಂಸಿಗೆ ಸೇರಿದ್ದು, ಅದನ್ನು ವಾಪಸ್‌‍ ಪಡೆಯುತ್ತೇವೆ ಎಂದು ಮಿಸ್ತ್ರಿ ಹೇಳಿದ್ದಾರೆ.

ಇದನ್ನೂ ಓದಿ Election Results 2024: 5 ಬಾರಿಯ ಸಂಸದನ ವಿರುದ್ಧ ಚೊಚ್ಚಲ ಪ್ರಯತ್ನದಲ್ಲೇ ಭರ್ಜರಿ ಗೆಲುವು ಸಾಧಿಸಿದ ಯೂಸುಫ್ ಪಠಾಣ್

ಟಿಎಂಸಿ(TMC) ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್, ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ 5 ಬಾರಿಯ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ(Adhir Chowdhury)ಯನ್ನು ಮಣಿಸಿದ್ದರು. ಯೂಸುಫ್ ಪಠಾಣ್ 5,18,066 ಮತಗಳನ್ನು ಪಡೆದರೆ, ತಮ್ಮ ಸಮೀಪದ ಪ್ರತಿಸ್ಪರ್ಧಿ ರಂಜನ್ ಚೌಧರಿ 4,32,340 ಮತಗಳನ್ನು ಮಾತ್ರ ಪಡೆದಿದ್ದರು. ಪಠಾಣ್ 85,726 ಮತಗಳ ಅಂತರದಿಂದ ಗೆದ್ದು ಬೀಗಿದ್ದರು.

ಮೂಲತಃ ಗುಜರಾತ್‌ನವರಾದ ಯೂಸುಫ್ ಪಠಾಣ್ ಐಪಿಎಲ್​ನಲ್ಲಿ ಕೆಕೆಆರ್​ ತಂಡದ ಪರ ಹಲವು ವರ್ಷಗಳ ಕಾಲ ಆಡಿದ್ದರು. ಅಲ್ಲದೆ ತಂಡದ ಪ್ರಧಾನ ಆಟಗಾರನಾಗಿ ಗುರುತಿಸಿಕೊಂಡಿದ್ದರು. ಹೀಗಾಗಿ ಅವರಿಗೆ ಬಂಗಾಳದಾದ್ಯಂತ ಯೂಸುಫ್​ಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಇದೇ ಕಾರಣದಿಂದ ಅವರಿಗೆ ಪಶ್ಚಿಮ ಬಂಗಾಳದಿಂದ ಟಿಎಂಸಿ ಟಿಕೆಟ್​ ನೀಡಲಾಗಿತ್ತು.

Continue Reading
Advertisement
Allergic Asthma
ಆರೋಗ್ಯ4 mins ago

Allergic Asthma: ಅಸ್ತಮಾ ಹೊಂದಿರುವ ವ್ಯಕ್ತಿಗಳು ಈ ಅಲರ್ಜಿಗಳಿಂದ ದೂರವಿರಬೇಕು

Due to heavy rain water entered the houses of Tharkas Pet village of Chittapur taluk
ಮಳೆ33 mins ago

Karnataka Rain: ಧಾರಾಕಾರ ಮಳೆ; ಚಿತ್ತಾಪುರ ತಾಲೂಕಿನ ತರ್ಕಸ್‌ಪೇಟೆ ಗ್ರಾಮ ತತ್ತರ

Pawan Kalyan
Latest40 mins ago

Akira Nandan: ಅಕಿರಾ ನಂದನ್‌; ಆರೂವರೆ ಅಡಿ ಎತ್ತರದ ಪವನ್ ಕಲ್ಯಾಣ್ ಪುತ್ರನಿಗೆ ಭಾರಿ ಡಿಮ್ಯಾಂಡ್‌!

Ram Mandir
ದೇಶ40 mins ago

Ram Mandir: ರಾಮಮಂದಿರ ಸ್ಫೋಟಿಸುವ ಉಗ್ರರ ಬೆದರಿಕೆ ಆಡಿಯೊ ವೈರಲ್; ಅಯೋಧ್ಯೆಯಲ್ಲಿ ಹೈ ಅಲರ್ಟ್‌

Celebrity Ethnic Fashion
ಫ್ಯಾಷನ್40 mins ago

Celebrity Ethnic Fashion: ನಟ ಧನುಷ್‌ ಗೌಡರ ಗ್ರ್ಯಾಂಡ್‌ ಎಥ್ನಿಕ್‌ ಜಾಕೆಟ್‌ ವಿಶೇಷತೆ ಏನು?

Actor Darshan
ಕರ್ನಾಟಕ51 mins ago

Actor Darshan: ಸಸ್ಯಾಹಾರಿ ಅಂದ್ರೂ ರೇಣುಕಾಸ್ವಾಮಿ ಬಾಯಿಗೆ ಬಿರಿಯಾನಿ ಮೂಳೆ ತುರುಕಿದ್ದ ಆರೋಪಿಗಳು!

Actor Darshan
ಬೆಂಗಳೂರು52 mins ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

Samarjit Lankesh Dhool Yebsava Video Song Out
ಸ್ಯಾಂಡಲ್ ವುಡ್1 hour ago

Samarjit Lankesh: ʻಗೌರಿʼ ಚಿತ್ರದ ಹುಬ್ಬಳ್ಳಿ ಜವಾರಿ ಶೈಲಿಯ `ಧೂಳ್ ಎಬ್ಬಿಸಾವ’ ಸಾಂಗ್ ರಿಲೀಸ್!

Viral Video
ಕ್ರಿಕೆಟ್1 hour ago

Viral Video: ‘ಹಿಟ್​ ದಿ ಟಾರ್ಗೆಟ್’​ ಎಂದು ಬೌಲಿಂಗ್​ ಅಭ್ಯಾಸ ಆರಂಭಿಸಿದ ಮೊಹಮ್ಮದ್ ಶಮಿ

BS Yediyurappa
ಪ್ರಮುಖ ಸುದ್ದಿ1 hour ago

BS Yediyurappa: ಪೋಕ್ಸೊ ಕೇಸ್‌ನಲ್ಲಿ ಯಡಿಯೂರಪ್ಪಗೆ ಬಿಗ್‌ ರಿಲೀಫ್‌; ಬಂಧಿಸದಂತೆ ಕೋರ್ಟ್‌ ಆದೇಶ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಬೆಂಗಳೂರು52 mins ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು1 hour ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ1 week ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

ಟ್ರೆಂಡಿಂಗ್‌