ಮುಂಬಯಿ: ಟಿ20 ವಿಶ್ವಕಪ್(T20 World Cup) ಗೆದ್ದ ಭಾರತ ಕ್ರಿಕೆಟ್ ತಂಡದ ಆಟಗಾರರನ್ನು ಜುಲೈ 2, ಗುರುವಾರದಂದು ಮುಂಬೈಯಲ್ಲಿ ಭರ್ಜರಿಯಾಗಿ ಅಭಿನಂದಿಸಲಾಗಿತ್ತು. ತಂಡದ ಈ ವಿಜಯೋತ್ಸವದ(Team India’s Victory Parade) ವೇಳೆ ಸೇರಿದ್ದ ಭಾರಿ ಸಂಖ್ಯೆಯ ಅಭಿಮಾನಿಗಳ ಪೈಕಿ ಕೆಲವರು ಪಾಕಿಸ್ತಾನ(Fans chant Pakistan) ಹೆಸರು ಘೋಷಣೆ ಕೂಗಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ.
ಸಾಗರೋಪಾದಿಯಲ್ಲಿ ಸೇರಿದ್ದ ಅಭಿಮಾನಿಗಳ ಗುಂಪಿನಲ್ಲಿ ಕೆಲವರು ಜೋರಾಗಿ ಪಾಕಿಸ್ತಾನದ ಹೆಸರು ಕೋಗಿದ್ದಾರೆ. ಅಭಿಮಾನಿಗಳು ಪಾಕ್ ಹೆಸರು ಕೂಗಲೂ ಕೂಡ ಒಂದು ಕಾರಣವಿದೆ. ಹೌದು, ವಿಶ್ವಕಪ್ ವೇಳೆ ಭಾರತ ತಂಡದ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿದ್ದರು. ವಿಜಯಯಾತ್ರೆಯ ದಾರಿಯಲ್ಲಿ ಕಸದ ಗಾಡಿಯೊಂದು ಹಾದು ಹೋಯಿತು. ಇದನ್ನು ಗಮನಿಸಿದ ಅಭಿಮಾನಿಗಳು ಪಾಕಿಸ್ತಾನವನ್ನು ಕಸಕ್ಕೆ ಹೋಲಿಕೆ ಮಾಡಿ ಅಪಹಾಸ್ಯ ಮಾಡಿದ್ದಾರೆ. ಹೀಗಾಗಿ ಅಭಿಮಾನಿಗಳು ಪಾಕಿಸ್ತಾನದ ಹೆಸರು ಕೂಗಿದ್ದಾರೆ.
17 ವರ್ಷಗಳ ಬಳಿಕ 2ನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡದ ವಿಜಯೋತ್ಸವವನ್ನು ಗುರುವಾರ ಮುಂಬೈನಲ್ಲಿ ಏರ್ಪಡಿಸಲಾಗಿತ್ತು. ದಕ್ಷಿಣ ಮುಂಬೈನ ಮರೀನ್ ಡ್ರೈವ್ ಪ್ರದೇಶ ಸಾವಿರಾರು ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ತುಂಬಿ ಹೋಗಿತ್ತು.
ಬಾರ್ಬಡೋಸ್‌ನಿಂದ ಬುಧವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿದ್ದ ಭಾರತ ತಂಡವು ಗುರುವಾರ ಬೆಳಗ್ಗೆ ನವದೆಹಲಿಗೆ ಬಂದಿಳಿದಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಆತಿಥ್ಯ ಸ್ವೀಕರಿಸಿದ ನಂತರ ಮಧ್ಯಾಹ್ನ 3.42ಕ್ಕೆ ಮುಂಬೈಗೆ ಪ್ರಯಾಣ ಬೆಳೆಸಿತ್ತು. ಸಂಜೆ ಐದು ಗಂಟೆಯ ನಂತರ ವಿಮಾನವು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಆಟಗಾರರು ಬಂದೊಡನೆಯೇ ಕ್ರಿಕೆಟ್ ಪ್ರೇಮಿಗಳ ಜಯಘೋಷ ಮೊಳಗಿತ್ತು.
ಅಭಿಮಾನಿಗಳ ಅಬ್ಬರಕ್ಕೆ ಅರಬ್ಬಿ ಸಮುದ್ರ ಕೂಡ ಒಂದು ಕ್ಷಣ ಸ್ಥಬ್ಧವಾಗಿತ್ತು. ವಿಶೇಷ ವಿನ್ಯಾಸದ ತೆರೆದ ವಾಹನದಲ್ಲಿ ವಿಶ್ವಕಪ್ ಟ್ರೋಫಿ ಹಿಡಿದು ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಬೂಮ್ರಾ, ಪಾಂಡ್ಯ, ಕೋಚ್ ರಾಹುಲ್ ದ್ರಾವಿಡ್ ಸೇರಿದಂತೆ ಎಲ್ಲ ಆಟಗಾರರು ವಿಜಯಯಾತ್ರೆಯ ಮೆರವಣಿಗೆಯಲ್ಲಿ ಭಾಗಿಯಾಗಿ ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಘೋಷಣೆ ಕೂಗಿ ಅಭಿನಂದನೆಗಳನ್ನು ಸಲ್ಲಿಸಿದ್ದರು.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಉಪಾಧ್ಯಕ್ಷ ರಾಜೀವ್ ಶುಕ್ಲಾ, ಕಾರ್ಯದರ್ಶಿ ಜಯ್ ಶಾ ಹಸ್ತಾಂತರಿಸಿದ್ದರು.
ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್ 29ರಂದು ನಡೆದಿದ್ದ ಟಿ20 ವಿಶ್ವಕಪ್ ಫೈನಲ್(T20 World Cup 2024) ಪಂದ್ಯದಲ್ಲಿ ಭಾರತ ತಂಡ(Team India) ದಕ್ಷಿಣ ಆಫ್ರಿಕಾ(South Africa vs India) ವಿರುದ್ಧ 7 ರನ್ಗಳ ಸಾಧಿಸುವ ಮೂಲಕ 13 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರವೊಂದನ್ನು ನೀಗಿಸಿತ್ತು.