ಗುವಾಹಟಿ: ಶ್ರೀಲಂಕಾ ವಿರುದ್ಧದ ಏಕ ದಿನ ಸರಣಿಯ ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ಗೆ ಅವಕಾಶ ನೀಡದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ (Rohit Sharma) ವಿರುದ್ಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತಮ ಫಾರ್ಮ್ನಲ್ಲಿರುವ ಅವರನ್ನು ಯಾಕೆ ಬೆಂಚು ಕಾಯಿಸಬೇಕಿತ್ತು ಎಂದು ಅವರು ಪ್ರಶ್ನಿಸಿದ್ದಾರೆ.
ಇಶಾನ್ ಕಿಶನ್ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ದಾಖಲೆಯ ದ್ವಿ ಶತಕ ಬಾರಿಸಿದ್ದರು. ಅದೇ ರೀತಿ ಸೂರ್ಯಕುಮಾರ್ ಯಾದವ್ ಅವರು ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಕೊನೇ ಪಂದ್ಯದಲ್ಲಿ ಶತಕ ಬಾರಿಸಿದ್ದರು. ಹೀಗಾಗಿ ಅವರಿಬ್ಬರನ್ನೂ ತಂಡಕ್ಕೆ ಸೇರಿಕೊಳ್ಳಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಆದರೆ, ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ರಕಟಗೊಂಡಾಗ ಅವರಿಬ್ಬರ ಹೆಸರು ಇರಲಿಲ್ಲ. ಈ ವೇಳೆ ಕ್ರಿಕೆಟ್ ಅಭಿಮಾನಿಗಳ ಕೋಪ ಸ್ಫೋಟಗೊಂಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಯಿತು.
ಭಾರತ ತಂಡದ ಮಾಜಿ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಅವರು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ತೀರ್ಮಾನವನ್ನು ಟೀಕಿಸಿದ್ದಾರೆ. ದ್ವಿ ಶತಕ ಬಾರಿಸಿದ ಆಟಗಾರನನ್ನು ಮಂದಿನ ಸರಣಿಗೆ ಬೆಂಚು ಕಾಯಿಸಿದ್ದು ಸರಿಯಲ್ಲ ಎಂಬುದಾಗಿ ಅವರು ಹೇಳಿದ್ದಾರೆ.
ಇದನ್ನೂ ಓದಿ | INDvsSL ODI | ಮೊದಲ ಏಕ ದಿನ ಪಂದ್ಯ; ಟಾಸ್ ಗೆದ್ದ ಶ್ರೀಲಂಕಾ ತಂಡದಿಂದ ಫೀಲ್ಡಿಂಗ್ ಆಯ್ಕೆ, ಭಾರತಕ್ಕೆ ಮೊದಲು ಬ್ಯಾಟಿಂಗ್