ದೋಹಾ: ಫಿಫಾ ವಿಶ್ವ ಕಪ್(Fifa World Cup)ನ ಆರಂಭಿಕ ಪಂದ್ಯದಲ್ಲಿ ಅರ್ಜೆಂಟೀನಾ ತಂಡವನ್ನು 2-1 ಗೋಲುಗಳಿಂದ ಮಣಿಸಿದ ಸೌದಿ ಅರೇಬಿಯಾ ತಂಡಕ್ಕೆ ಸೌದಿಯ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಬಹುಮಾನವೊಂದನ್ನು ನೀಡುವುದಾಗಿ ಘೋಷಣೆ ಮಾಡಿದ್ದಾರೆ. ತಂಡದ ಎಲ್ಲ ಆಟಗಾರರಿಗೆ ರೋಲ್ಸ್ ರಾಯ್ಸ್ ಫ್ಯಾಂಟಮ್ ಕಾರನ್ನು ನೀಡಿ ಗೌರವಿಸಲಾಗುವುದು ಎಂದು ಹೇಳಿದ್ದಾರೆ.
ಕಳೆದ ಮಂಗಳವಾರ ನಡೆದ ಫಿಫಾ ವಿಶ್ವ ಕಪ್ ಫುಟ್ಬಾಲ್ ಪಂದ್ಯದಲ್ಲಿ ಬಲಿಷ್ಠ ಅರ್ಜೆಂಟೀನಾ ತಂಡದ ವಿರುದ್ಧದ ಸೌದಿ ಅರೇಬಿಯಾ ೨-೧ ಗೋಲ್‌ಗಳ ಭರ್ಜರಿ ಜಯ ದಾಖಲಿಸಿತ್ತು. ಈ ಅನಿರೀಕ್ಷಿತ ಹಾಗೂ ಅಚ್ಚರಿಯ ವಿಜಯದ ಸಂಭ್ರಮಾಚರಣೆಗೆ ಕಿಂಗ್ ಸಲ್ಮಾನ್ ಬುಧವಾರ ದೇಶಾದ್ಯಂತ ಸರ್ಕಾರಿ ರಜೆ ಘೋಷಿಸಿದ್ದರು. ಇದೀಗ ಆಟಗಾರರಿಗೆ ರೋಲ್ಸ್ ರಾಯ್ಸ್ ಫ್ಯಾಂಟಮ್ ಕಾರು ನೀಡುವುದಾಗಿ ಘೋಷಿಸಿದ್ದಾರೆ.
ಸೌದಿ ಅರೇಬಿಯಾ ತಂಡ ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಅರ್ಜೆಂಟೀನಾದ 36 ಪಂದ್ಯಗಳ ದಾಖಲೆಯ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿತ್ತು.
ಇದನ್ನೂ ಓದಿ | Fifa World Cup | ಫಿಫಾ ವಿಶ್ವ ಕಪ್ ಟೂರ್ನಿಯಿಂದ ಹೊರಬಿದ್ದ ಆತಿಥೇಯ ಕತಾರ್